ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಶೂಲ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ 15:40 ರಿಂದ 17:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:18 ರಿಂದ 10:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 14:05ರ ವರೆಗೆ.
ಸಿಂಹ ರಾಶಿ: ಇಂದು ನಿಮಗೆ ಪ್ರಮುಖ ಕೆಲಸವನ್ನು ನಿಭಾಯಿಸುವ ಜವಾಬ್ದಾರಿಯನ್ನು ಕೊಡಬಹುದು. ಇಂತಹ ವಿಷಯಗಳನ್ನು ನಿಭಾಯಿಸುವಲ್ಲಿ ನೀವು ನಿಜವಾಗಿಯೂ ಪ್ರವೀಣರಾಗಿರುತ್ತೀರಿ. ನಿಮ್ಮ ಸಂಗಾತಿಯು ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಾರೆ. ನೀವಾಡುವ ಸುಳ್ಳೇ ಕಾಕತಾಳೀಯದಂತೆ ಸತ್ಯವಾಗಬಹುದು. ಇದು ನಿಮಗೆ ಸ್ವಲ್ಪ ಕಿರಿಕಿರಿಯನ್ನೂ ಉಂಟುಮಾಡುತ್ತದೆ. ಆದರೆ ಅವರ ಸಲಹೆಯನ್ನು ಅನುಸರಿಸುವುದು ನಿಮಗೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಪ್ರಯತ್ನಿಸುವ ಕಾರ್ಯವು ಯಶಸ್ಸಿನ ಕಡೆಗೆ ಸಾಗುತ್ತಿದೆಯೇ ಎನ್ನುವುದು ಗಮನಿಸಿ. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ಸುಳ್ಳು ಮಾತಿನಿಂದಾಗಿ ನಂಬಿಕೆಯನ್ನು ಕಳೆದುಕೊಳ್ಳಬಹುದು. ಅಪರಿಚಿತರಿಗೆ ಮಾಡಿದ ಸಹಾಯವನ್ನು ದುರುಪಯೋಗ ಮಾಡಿಕೊಳ್ಳುವಿರಿ.
ಕನ್ಯಾ ರಾಶಿ: ಇಂದು ತುಂಬಾ ದಿನದಿಂದ ಮಾಡುತ್ತಿದ್ದ ಕಾರ್ಯ ಯೋಜನೆಗಳನ್ನು ಪೂರ್ಣಮಾಡುವಿರಿ. ಆರ್ಥಿಕತೆಯಲ್ಲಿ ಸ್ಪಷ್ಟತೆ ಅವಶ್ಯವಾಗಿ ಬೇಕು. ನಿಮ್ಮ ಪ್ರಯತ್ನದ ಫಲವಾಗಿ ಇತರರು ನಿಮ್ಮನ್ನು ಗೌರವಿಸುತ್ತಾರೆ. ಅಸ್ಥಿರ ಮನಸ್ಸು ನಿಮ್ಮ ಸಂಬಂಧಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಿಂದ ನಿಮ್ಮ ಪ್ರೇಮ ಸಂಬಂಧಕ್ಕೆ ಸ್ವಲ್ಪ ತೊಂದರೆಯಾಗಲಿದೆ. ಇನ್ನೊಬ್ಬರ ಹೊಟ್ಟೆ ಕಿಚ್ಚಿನಿಂದ ನಿಮ್ಮ ಕಾರ್ಯದಲ್ಲಿ ವ್ಯತ್ಯಾಸವಾಗಬಹುದು. ಅಗತ್ಯವಿರುವುದರಿಂದ ನೀವು ಅವರಿಗೆ ಹೆಚ್ಚು ಭರವಸೆ ನೀಡಬೇಕು. ಸಹೋದ್ಯೋಗಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ಯಾರ ಬಲವಂತಕ್ಕೂ ಮಣಿಯುವುದಿಲ್ಲ. ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು ಎನ್ನುವುದು ನಿಜವಾದರೂ, ಅದಕ್ಕೂ ವಿಧಾನವಿದೆ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ಇಂದಿನ ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ.
ತುಲಾ ರಾಶಿ: ಇಂದು ನೀವು ನಿರೀಕ್ಷಿಸಿದ್ದು ನಿಮಗೆ ಸಿಗಲಿದೆ. ನಿಮಗೆ ಆಶ್ಚರ್ಯಗಳಿಂದ ಕೂಡಿದ ಕೆಲವು ಸಂಗತಿಗಳು ಗೊತ್ತಾಗಬಹುದು. ನಿಮ್ಮನ್ನು ಭೇಟಿ ಮಾಡಲು ಆಪ್ತರು ಬರಬಹುದು. ಕೆಲಸದ ಕ್ಷೇತ್ರದಲ್ಲಿ ನೀವಂದುಕೊಂಡಂತೆ ಆಗಲಿದೆ. ಗುಡ್ಡ ಬೆಟ್ಟಗಳನ್ಬು ಏರುವ ಸಾಹಸವನ್ನು ಮಾಡಲಿದ್ದೀರಿ. ಕೃಷಿಕರು ಉತ್ತಮ ಲಾಭವನ್ನು ಪಡೆಯಲಿದ್ದಾರೆ. ಯಾರ ಮೇಲು ಆಪಾದನೆಯನ್ನು ಮಾಡಬೇಡಿ. ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಪೋಷಕರ ಸೇವೆಗೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಿ. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಕೆಲವರ ಮಾತು ನಿಮ್ಮನ್ನು ಕಾಡಬಹುದು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸುವುದು.
ವೃಶ್ಚಿಕ ರಾಶಿ: ರಾಜಕೀಯ ಜನರನ್ನು ಭೇಟಿಯಾಗಿ ಆಗಬೇಕಾದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ನಿಮಗೆ ಉದ್ಯೋಗಕ್ಕೆ ಬೇಕಾದ ಉಪಯುಕ್ತ ಮಾಹಿತಿಯನ್ನು ಪಡೆಯುವಿರಿ. ಈ ದಿನ ನೀವು ಎಂದಿನಂತೆ ಇರದೇ ಶಾಂತಿಯುತವಾಗಿ ನಡೆದುಕೊಳ್ಳುವಿರಿ. ತಮ್ಮ ಜೀವನದಲ್ಲಿ ಬಹಳಷ್ಟು ಸಾಧಿಸಿದ ಜನರನ್ನು ಕಂಡು ನೀವು ಅಸೂಯೆ ಪಡಬಹುದು. ನೀವು ಗುರಿಯ ಸಾಧನೆಗೆ ಬೇಕಾದ ಮಾರ್ಗವನ್ನು ಅನುಸರಿಸಿ. ಉದ್ಯೋಗದ ಸ್ಥಳದಲ್ಲಿ ಪ್ರೇಮವಾಗಬಹುದು. ಏಕಾಗ್ರವಾಗಿ ನಿಮ್ಮ ಕಾರ್ಯಗಳು ಮುಂದುವರಿಯಲಿ. ಅನಿರೀಕ್ಷತ ಅನಾರೋಗ್ಯದಿಂದ ಹಣವು ಖರ್ಚಾಗಬಹುದು. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ನಿಮಗೆ ಇಷ್ಟವಾಗದ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ.