
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವ್ಯಾಘಾತ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ ಬೆಳಗ್ಗೆ10:53ರ ವರೆಗೆ, ಯಮಘಂಡ ಕಾಲ 14:05 ರಿಂದ 15:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05ರಿಂದ ಬೆಳಗ್ಗೆ 07:41ರ ವರೆಗೆ.
ಸಿಂಹ ರಾಶಿ :ಇಂದು ಜಗಲಕವಾಡಿಯಾದರೂ ಪಡೆಯುವಿರಿ. ಆಸ್ತಿಗೆ ಸಂಬಂಧಿಸಿದಂತೆ ಪ್ರಕರಣವಿಂದು ಹಲವು ವರ್ಷಗಳಿಂದ ನಡೆಯುತ್ತಿದ್ದು, ಇಂದು ಅದರ ಫಲವು ಗೊತ್ತಾಗಲಿದೆ. ಭವಿಷ್ಯದ ಕುರಿತು ಹತ್ತಾರು ಯೋಜನೆಗಳನ್ನು ಹಾಕಿಕೊಳ್ಳುವಿರಿ. ಸಾಲದಿಂದ ಬೆಂದ ನಿಮಗೆ ಇಂದು ಅದು ಮುಕ್ತಾಯಗೊಳ್ಳಲಿದೆ. ಸಂತೃಪ್ತಿಯಿಂದ ಇರಲಿದ್ದೀರಿ. ಬೇಕಾದವರ ಸಂಪರನಮ್ಮ ಇಷ್ಟದ ಕೆಲಸದತ್ತ ಹೆಚ್ಚು ಗಮನ ಹರಿಸುವಿರಿ. ದಾಖಲೆಗಳನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ವೃತ್ತಿಪರರು ಗೌರವವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವರು. ಉದ್ಯೋಗದ ಅವಕಾಶಗಳ ನಿರೀಕ್ಷೆಯಲ್ಲಿ ಇರುವಿರಿ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ. ಇಂದು ನಿಮ್ಮ ಬಳಿ ಸಾಮಾಜಿಕ ಕಳಕಳಿಯಿಂದವ ಜನರು ಬರುವರು.
ಕನ್ಯಾ ರಾಶಿ :ನೀವು ಇಂದು ಆಪ್ತರಿಂದ ಹಲವು ದಿನಗಳ ಅನಂತರ ಹಣವನ್ನು ಪಡೆಯುವಿರಿ. ಪರಸ್ಪರ ಸಂವಹನದ ಮೂಲಕ ವ್ಯಾಪಾರದಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ಮನೆಕೆಲಸದಲ್ಲಿ ಭಾಗಿಯಾಗುವಿರಿ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುವಿರಿ. ಯಾರೊಂದಿಗಾದರೂ ವಿವಾದವನ್ನು ಮಾಡುವ ಪರಿಸ್ಥಿತಿ ಇರಬಹುದು, ಗಮನವಿರಲಿ. ಯಶಸ್ಸು ತಾನಾಗಿಯೇ ಬರಲಿದೆ. ವ್ಯವಹಾರದಲ್ಲಿ ಬಂಧುಗಳನ್ನು ಇಟ್ಟುಕೊಳ್ಳುವ ಮನಸ್ಸು ಬೇಡ. ಕರಕುಶಲತೆಗಳಿಗೆ ಹೆಚ್ಚು ಸಮಯ ಕೊಡುವಿರಿ. ಕುಟುಂಬದ ಜೊತೆ ಸೌಹಾರ್ದತೆ ಉಂಟಾಗುವುದು. ಇತರರ ಜೊತೆ ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು.
ತುಲಾ ರಾಶಿ :ಇಂದು ನೀವು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಶ್ರದ್ದೆ ವಹಿಸುವಿರಿ. ಸಮಾಜದಿಂದ ಗೌರವ ಸಮ್ಮಾನಗಳು ಸಿಗಲಿವೆ. ಆಸ್ತಿ ಖರೀದಿಸುವ ಯೋಚನೆ ಇದ್ದರೆ ಖರೀದಿಸಿ. ಇಂದು ಕಾಲ ಚೆನ್ನಾಗಿದೆ. ಕೋಪವನ್ನು ತೋರಿಸಲು ಹೋಗಬೇಡಿ. ಪ್ರಭಾವಿ ವ್ಯಕ್ತಿಗಳ ಸಂಪರ್ಕವಾಗಲಿದೆ. ನಿಮ್ಮ ಜೀವನಕ್ಕೆ ದಿಕ್ಕು ಸಿಗುವ ಸಾಧ್ಯತೆ ಇದೆ. ದಿನವನ್ನು ಸರಿಯಾಗಿ ಬಳಸುವ ಕುರಿತು ಸಮಯವನ್ನು ಹಾಕಿಕೊಳ್ಳಿ. ಕಟ್ಟಿಕೊಟ್ಟ ಬುತ್ತಿ ಎಲ್ಲಿಯವರೆಗೆ ಬಂದೀತು? ವ್ಯರ್ಥವಾಗುವ ಸಮಯದಲ್ಲಿ ಸದುಪಯೋಗವನ್ನು ಮಾಡಿಕೊಳ್ಳಿ. ಪರಿಚಿತರು ಆಪ್ತರಾಗಬಹುದು. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ತಯಾರಿ ನಡೆಸುವಿರಿ. ನಿಮ್ಮ ಹೆಸರಿನಿಂದ ಬೇರೆಯವರು ಕೆಲಸ ಮಾಡಿಕೊಳ್ಳಬಹುದು. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಇನ್ನೊಬ್ಬರ ಬಗ್ಗೆ ಪ್ರೀತಿ ಇರಲಿ. ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರಿ. ಕಳೆದು ಹೋದ ಪ್ರೇಮವನ್ನು ಮತ್ತೆ ಯಾರಾದರೂ ನೆನಪಿಸುವರು.
ವೃಶ್ಚಿಕ ರಾಶಿ :ನೀವು ಇಂದು ಅನೇಕ ದಿನಗಳಿಂದ ಬಾಕಿ ಇದ್ದ ಕೆಲಸಗಳನ್ನು ಪೂರ್ಣಗೊಳ್ಳುವುದು ಸೂಕ್ತ. ಆತ್ಮವಿಶ್ವಾಸವು ಋಣಾತ್ಮಕ ಸಂದರ್ಭದಲ್ಲಿಯೂ ಧೈರ್ಯದಿಂದ ಇರುವಂತೆ ಮಾಡುತ್ತದೆ. ಒಂದು ಪ್ರಮುಖ ವಿಚಾರವನ್ನು ಆಪ್ತರ ಜೊತೆ ಹಂಚಿಕೊಳ್ಳುವಿರಿ. ತಪ್ಪಾಗುವ ಚಟುವಟಿಕೆಗಳಿಗೆ ಬಗ್ಗೆ ಗಮನ ಕೊಡಬೇಡಿ. ರಾಜಕೀಯವಾಗಿ ತೊಡಗಿಕೊಳ್ಳುವ ಇಚ್ಛೆ ಇರುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಇರಲಿ. ಇಂದಿನ ಸೋಲಿನಿಂದ ಪಾಠ ಕಲಿಯಬೇಕಾದೀತು. ಸಂಪತ್ತೇ ನಿಮಗೆ ಹೊರೆಯಾಗಬಹುದು. ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ಸಿಟ್ಟನ್ನು ತಾಳ್ಮೆಯ ಅಸ್ತ್ರದಿಂದ ಎದುರಿಸಿ, ಕಾರ್ಯವನ್ನು ಸಫಲಗೊಳಿಸಿಕೊಳ್ಳಿ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ.