AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಕೆಟ್ಟ ನಿರ್ಧಾರಗಳು ಇಂದು ದುಃಖಕ್ಕೆ ಕಾರಣವಾಗಬಹುದು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 20 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಕೆಟ್ಟ ನಿರ್ಧಾರಗಳು ಇಂದು ದುಃಖಕ್ಕೆ ಕಾರಣವಾಗಬಹುದು
ರಾಶಿ ಭವಿಷ್ಯ
TV9 Web
| Edited By: |

Updated on: May 20, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17ರ ವರೆಗೆ, ಯಮಘಂಡ ಕಾಲ 10:53 ರಿಂದ ಮಧ್ಯಾಹ್ನ12:29ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:41ರ ವರೆಗೆ.

ಸಿಂಹ ರಾಶಿ: ಕೆಲಸ ಹಾಗು ಕುಟುಂಬವನ್ನು ನೀವು ಸಮಾನವಾಗಿ ತೂಗಿಸಿಕೊಂಡು ಹೋಗುವುದು ಸಾಧ್ಯವಾಗದು. ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿ ಇರಲಿ. ನಿರ್ಧಾರಗಳ ಬಗ್ಗೆ ನಿಮ್ಮವರಿಗೆ ಅಸಮಾಧಾನ ಇರುವುದು. ಇಂದು ನೀವು ಕೆಲಸವನ್ನು ಹೆಚ್ಚು ಪ್ರಯತ್ನದಿಂದ ಪೂರ್ಣ ಮಾಡುವಿರಿ. ಇಂದು ನಿಮಗೆ ಅತ್ಯಂತ ಪ್ರಿಯವಾದ ಕೆಲಸವನ್ನು ಮಾಡುವುದು ಬೇಡ. ಮಕ್ಕಳಿಂದ ನೀವು ದೂರಾಗುವ ಸಾಧ್ಯತೆ ಇದೆ. ಭೂ ವ್ಯವಹಾರದಲ್ಲಿ ಮನಸ್ತಾಪ ಬರಬಹುದು. ಯಾವುದೇ ನಿಬಂಧನೆಗಳನ್ನು ಇಟ್ಟುಕೊಳ್ಳದೇ ಒಪ್ಪಿಕೊಳ್ಳಿ. ನಿಮ್ಮ ಸಮಯ ಬಂದಾಗ ಅದನ್ನು ಚರ್ಚಿಸಲು ಅವಕಾಶ ಬರುವುದು. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಪಕ್ಷಪಾತ ಧೋರಣೆ ಬೇಡ. ಉದ್ಯೋಗದಲ್ಲಿ ಸಹವರ್ತಿಗಳ ಸಹಕಾರ ಸಿಗಲಿದೆ.

ಕನ್ಯಾ ರಾಶಿ: ಈ ದಿನ ಹೆಚ್ಚಿನ ಸಮಯವನ್ನು ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳಿಗೆ ಕೊಡುವಿರಿ. ನಿಮ್ಮ ಹಾಸ್ಯದ ಸ್ವಭಾವವು ಮನೆಯಲ್ಲಿ ಸಂತೋಷದ ವಾತಾವರಣವನ್ನು ಇರಿಸುತ್ತದೆ. ಯುವಕರು ಕೆಟ್ಟ ಅಭ್ಯಾಸಗಳತ್ತ ಗಮನ ಹರಿಸುವರು. ಕೆಟ್ಟ ನಿರ್ಧಾರಗಳು ಇಂದು ದುಃಖಕ್ಕೆ ಕಾರಣವಾಗಬಹುದು. ವ್ಯಾಪಾರ ಯೋಜನೆಗಳು ಯಶಸ್ವಿಯಾಗಲಿವೆ. ಮಾನಸಿಕವಾಗಿ ಚೌಕಟ್ಟನ್ನು ನಿರ್ಮಿಸಿಕೊಂಡು ಅದನ್ನು ದಾಟಲು ಭಯವಾಗುವುದು. ಸಂಗಾತಿಯ ಜೊತೆಗಿನ ಸಂಬಂಧದಲ್ಲಿ ಮಾಧುರ್ಯವನ್ನು ಕಾಪಾಡಿಕೊಳ್ಳಿ. ಆಹಾರದ ವ್ಯತ್ಯಾಸದಿಂದ ತೊಂದರೆಗಳು ಬಂದಾವು. ಲೆಕ್ಕಶೋಧಕರು ಇಂದು ಒತ್ತಡದಲ್ಲಿ ಇರುವರು. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಇಷ್ಟಪಡಲಾರಿರಿ. ರಕ್ಷಣೆಯ ಜವಾಬ್ದಾರಿಯವರಿಗೆ ಆರೋಗ್ಯದ ಕೆಡಬಹುದು. ಕುಚೋದ್ಯ ಮಾಡಲು ಹೋಗಿ ಕೆಂಗಣ್ಣಿಗೆ ಗುರಿಯಾಗುವಿರಿ. ಯಾವುದನ್ನೂ ಸುಲಭಕ್ಕೆ ಇಂದು ನೀವು ಒಪ್ಪಲಾರಿರಿ.

ತುಲಾ ರಾಶಿ: ಇಂದು ಜಾಣತನದಿಂದ ಕೆಲಸ ಮಾಡಿಕೊಂಡು ನಿಶ್ಚಿಂತರಾಗುವಿರಿ. ಇದರಿಂದ ನೀವು ಜಟಿಲವಾದ ಸಮಸ್ಯೆಯನ್ನು ಸರಾಗವಾಗಿ ಪರಿಹರಿಸಿಕೊಳ್ಳುವಿರಿ. ಪುತ್ರೋತ್ಸವವಿರಲಿದೆ. ಧಾರ್ಮಿಕಯೋಜನೆಗಳನ್ನು ರೂಪಿಸಿಕೊಳ್ಳುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಅನುಭವಿಗಳ ಸಲಹೆಯನ್ನು ಅವಶ್ಯವಾಗಿ ಪಡೆದುಕೊಳ್ಳಿ. ನಿಮ್ಮ ದೌರ್ಬಲ್ಯವನ್ನು ದುರುಪಯೋಗ ಪಡಿಸಿಕೊಂಡಾರು. ವ್ಯಾಪಾರದಲ್ಲಿ ಲಾಭವು ಅಧಿಕವಾಗಲಿದೆ. ಅನ್ಯರ ಕಾರಣದಿಂದ ವಿದೇಶದ ವ್ಯಾಮೋಹವು ಹೆಚ್ಚಾದೀತು. ಒಮ್ಮೆ ನಂಬಿಕೆಯನ್ನು ಇಟ್ಟುಕೊಂಡ ಅನಂತರ ಅನುಮಾನ ಬೇಡ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಸ್ವಪ್ನದ ಚಿಂತೆಯಲ್ಲಿಯೇ ಇರಬಹುದು. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ. ಅಂತಃಕರಣವು ಶುದ್ಧವಿದ್ದರೆ ನಿಮಗೆ ಸಿಗದು ಸಿಕ್ಕಿಯೇ ಸಿಗುವುದು.

ವೃಶ್ಚಿಕ ರಾಶಿ: ನಿಮ್ಮ ಪಿತ್ರಾರ್ಜಿತ ಆಸ್ತಿಯ ಸಮಸ್ಯೆಯು ಅನ್ಯರಿಂದ ಸರಿಯಾಗುವುದು. ಅತಿಯಾಗಿ ಭಾವನಾತ್ಮಕವಾಗುವುದು ಮತ್ತು ನಿಮ್ಮವರಿಂದ ಹೆಚ್ಚಿನದನ್ನು ನಿರೀಕ್ಷಿಸದಿರುವುದು ಒಳ್ಳೆಯದು. ತಂದೆ-ತಾಯಿ ಅಥವಾ ಹಿರಿಯರ ಗೌರವಕ್ಕೆ ಚ್ಯುತಿ ತರುವ ಕೆಲಸವನ್ನು ಮಾಡುವಿರಿ. ಜಾಗರೂಕರಾಗಿರಿ. ವಿವಾಹವು ವಿಳಂಬವಾದರೆ ಬೇಸರಿಸಬೇಡಿ. ಉತ್ತಮವಾದುದನ್ನು ನಿರೀಕ್ಷಿಸಿ. ವ್ಯವಹಾರ ಅಭಿವೃದ್ಧಿಗಾಗಿ ಹೊಸ ಯೋಜನೆಯನ್ನು ಪ್ರಯೋಗಕ್ಕೆ ತರುವಿರಿ. ನಿಮಗೆ ಇಷ್ಟವಾದವರ ಬಗ್ಗೆ ನಿಮಗೆ ಅನುಕಂಪ ಬರಬಹುದು. ಆರ್ಥಿಕ ವಿಚಾರವನ್ನು ಬಹಿರಂಗಪಡಿಸುವುದು ಬೇಡ. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು. ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸವನ್ನು ಮಾಡುವಿರಿ.