Horoscope: ದಿನಭವಿಷ್ಯ: ತಾಯಿಯ ಪ್ರೀತಿಯಿಂದ ನಿಮಗೆ ನೆಮ್ಮದಿ ಸಿಗಲಿದೆ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 23 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಪರಿಘ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ 14:06ರಿಂದ 15:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:05ರಿಂದ ಬೆಳಗ್ಗೆ 07:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ.
ಧನು ರಾಶಿ :ನಿಮಗೆ ಇಂದು ತುರ್ತು ಕಾರ್ಯಗಳು ಹೆಚ್ಚಾಗುವುದು. ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ನೀವೇ ಸಮಸ್ಯೆಯಲ್ಲಿ ಸಿಕ್ಕಿಹಾಕಿಕೊಳ್ಳುವಿರಿ. ನಿಮಗಾಗದವರು ನಿರ್ಮಿಸಿದ ಜಾಲಕ್ಕೆ ಬೀಳುವಿರಿ. ಸ್ನೇಹಿತರ ಸಹಕಾರದಿಂದ ನೀವು ಸ್ವಲ್ಪ ಸಮಯದಲ್ಲಿಯೇ ಪಾರಾಗುವಿರಿ. ನೀವಿಂದು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿದರೆ ಉತ್ತಮವಾಗಲಿದೆ. ಇನ್ನೊಬ್ಬರ ಕೆಲಸದಲ್ಲಿ ಮೂಗು ತೂರಿಸಲು ಹೋಗಬೇಡಿ. ಇಂದು ಮನೆಯಿಂದ ದೂರದಲ್ಲಿ ನಿಮ್ಮ ವಾಸವು ಇರುವುದು. ನಿಧಾನಗತಿಯಲ್ಲಿ ಸಾಗುವ ಕೆಲಸದಿಂದ ಬೇಸರಗೊಳ್ಳುವಿರಿ. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ಆಗುತ್ತಿರುವ ಕೆಲಸಕ್ಕೆ ಅಡ್ಡಗಾಲು ಹಾಕಿ ದಿಕ್ಕು ತಪ್ಪಿಸುವುದು ಬೇಡ. ತಪ್ಪಾದಾಗ ಮಾತ್ರ ಸರಿ ಮಾಡಿ.
ಮಕರ ರಾಶಿ :ನೀವು ಭವಿಷ್ಯಕ್ಕೆ ಬೇಕಾದ ಆರ್ಥಿಕ ವ್ಯವಸ್ಥೆಯನ್ನು ಮಾಡಿಕೊಳ್ಳಲು ಚಿಂತನೆ ಮಾಡುವಿರಿ. ನಿಮ್ಮ ಮಕ್ಕಳು ನಿರೀಕ್ಷೆಗಳನ್ನು ಹುಸಿಗೊಳಿಸದೇ ಸಮಾಧಾನ ಮಾಡಿ. ದೊಡ್ಡ ವ್ಯಕ್ತಿಗಳೆಂದು ಯಾರಾದರೂ ಹೇಳಿ ನಿಮಗೆ ವಂಚಿಸಬಹುದು. ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯುವಿರಿ. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬಾರದೇ ಬೆರಸರವಾದೀತು. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ನಂಬಿಕೆಗೆ ಮೋಸವಾಗಬಹುದು. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಉತ್ತಮ ಉದ್ಯೋಗವನ್ನು ಕಳೆದುಕೊಳ್ಳಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು. ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮ ಪ್ರತಿಭೆಗೆ ಸೂಕ್ತ ಸ್ಥಳವನ್ನು ಕಂಡುಕೊಳ್ಳಿ.
ಕುಂಭ ರಾಶಿ :ಎಲ್ಲವನ್ನೂ ಅರ್ಧ ಕೆಲಸ ಮಾಡಿ ಇಡುವಿರಿ. ಏಕಾಗ್ರತೆ ಕೊರತೆ ಅತಿಯಾಗಿ ಕಾಡುವುದು. ನೀವು ಹೇಳದೇ ಇರುವ ರಹಸ್ಯವನ್ನು ಇಂದು ನಿಮ್ಮಿಂದ ತಿಳಿಯಲಿದೆ. ಕೊಟ್ಟ ಹಣವು ಮತ್ತೆ ಬರುವ ನಿರೀಕ್ಷೆಯಲ್ಲಿ ಇರುವಿರಿ. ವಿದ್ಯಾಭ್ಯಾಸವು ಕಷ್ಟದಿಂದ ಸಾಗಲಿದೆ. ಉನ್ನತವಾದ ಧ್ಯೇಯವೇ ನಿಮ್ಮ ಯಶಸ್ಸಿನ ಮೊದಲು ಮೆಟ್ಟಿಲು ಎನ್ನುವುದನ್ನು ತಿಳಿದಿದ್ದೀರಿ. ಯಾರ ಬಗ್ಗೆಯೂ ಕೇಳುವ ಸಮಾಧಾನ ಇರದು. ನೀವು ನಿಮ್ಮದೇ ಲೋಕದಲ್ಲಿ ಇರುವಿರಿ. ನಿಮ್ಮವರಿಗೆ ಸಮಯವನ್ನು ಕೊಡಲು ಮರೆತಿದ್ದು ಇಂದು ತಿಳಿಯುತ್ತದೆ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಹಳೆಯ ಪರಿಚಯವು ನಿಮಗೆ ಹೊಸತಾಗಿ ಕಾಣಿಸುವುಸುದು. ಯಾರದ್ದಾರೂ ಸಲಹೆಯನ್ನು ಪಡೆದು ನಿಮ್ಮ ನಿರ್ಧಾರವನ್ನು ಬದಲಿಸಿ. ನಿಮ್ಮ ಹೂಡಿಕೆಯು ಸರಿಯಾದ ಸ್ಥಳದಲ್ಲಿ ಇಲ್ಲದೇ ಇರಬಹುದು.
ಮೀನ ರಾಶಿ :ಇಂದು ನೀವು ಅನಾರೋಗ್ಯದಿಂದ ದಿನದ ಹೆಚ್ಚು ಭಾಗವನ್ನು ಕಳೆಯಬೇಕಾಗಬಹುದು. ತಾಯಿಯ ಪ್ರೀತಿಯಿಂದ ನಿಮಗೆ ನೆಮ್ಮದಿ ಸಿಗಲಿದೆ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಗೊಂದಲಗಳು ಬರಬಹುದು. ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸುವಿರಿ. ಪರಾಕ್ರಮದಿಂದ ಭೂಮಿಯ ಲಾಭವು ಆಗಲಿದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುವಿರಿ. ಬುದ್ಧಿವಂತಿಕೆಯನ್ನು ಬಳಸಿಕೊಂಡು ಲಾಭ ಪಡೆಯುವಿರಿ. ದಿನದ ಕೊನೆಯಲ್ಲಿ ಬಹಳ ಕೆಲಸವಿರುವಂತೆ ತೋರುವುದು. ಬಿಡುವಿಲ್ಲದ ದುಡಿಮೆಯು ನಿಮಗೆ ಕಷ್ಟವಾಗಬಹುದು. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವಿರಿ.
-ಲೋಹಿತ ಹೆಬ್ಬಾರ್-8762924271 (what’s app only)




