AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರು ಇಂದು ಎಚ್ಚರದಿಂದ ವಾಹನ ಚಲಾಯಿಸಿಬೇಕು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಫೆಬ್ರವರಿ​​​​ 17 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Rashi Bhavishya: ಈ ರಾಶಿಯವರು ಇಂದು ಎಚ್ಚರದಿಂದ ವಾಹನ ಚಲಾಯಿಸಿಬೇಕು
ರಾಶಿ ಭವಿಷ್ಯ
TV9 Web
| Edited By: |

Updated on: Feb 17, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 57 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 36 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:52 ರಿಂದ 11:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:57 ರಿಂದ 08:25ರ ವರೆಗೆ.

ಧನು ರಾಶಿ : ಹಲವು ವರ್ಷಗಳ ಹೂಡಿಕೆಯ ಹಣವನ್ನು ನೀವು ಪಡೆಯುವಿರಿ. ಸ್ನೇಹಿತರ ಜೊತೆ ಇಂದಿನ‌ ಸಮಯವನ್ನು ಕಳಡಯುವಿರಿ. ಆತ್ಮಪ್ರಶಂಸೆಯು ಸರಿಯಾಗಿ ಕಾಣದು. ನಿಮ್ಮ ಸಾಮರ್ಥ್ಯದ ಮೇಲಿನ ವಿಶ್ವಾಸ ಕಡಿಮೆ ಆಗಲಿದೆ. ಹಿತಶತ್ರುಗಳ ಚಾಡಿ ಮಾತಿನಿಂದ ಒಳ್ಳೆಯ ಅವಕಾಶಗಳು ಕೈ ತಪ್ಪಬಹುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ನೀವು ಬಂಧುಗಳ ಸಹಾಯವನ್ನು ಕೇಳುವಿರಿ. ಕೊಟ್ಟ ಹಣಕ್ಕೆ ಸರಿಯಾದ ಕೆಲಸವನ್ನು ಮಾಡಿಕೊಡುವಿರಿ.‌ ಗ್ರಾಹಕರಲ್ಲಿ ಸಂತುಷ್ಟಿ ಇರುವುದು. ಆಸ್ತಿಯನ್ನು ಸ್ವಂತಕ್ಕೆ ಮಾಡಿಕೊಳ್ಳುವ ಉಪಾಯವು ಹೊಳೆಯಬಹುದು. ಅಧ್ಯಾತ್ಮದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಪ್ರೇಮ ವಿವಾಹವು ನಿಮಗೆ ಖಷಿಕೊಡದು. ಯಾರನ್ನಾದರೂ ಪ್ರೀತಿಸುವ ಮನಸ್ಸಾಗುವುದು. ನಿಮ್ಮ ಅಸ್ಮಿತೆಯನ್ನು ನೀವು ಬಿಟ್ಟಕೊಡಲಾರಿರಿ.‌ ಮನ ಬಂದಂತೆ ಮಾತನಾಡುವುದು ಸರಿಯಾಗದು.

ಮಕರ ರಾಶಿ : ನಿಮ್ಮ ಕೆಲಸದಿಂದ ಮನೆಯ ಹಿರಿಯರು ಕೋಪಗೊಳ್ಳುವರು. ಯಾರದೋ ಕಾರಣಕ್ಕೆ ನಿಮ್ಮ ಅವಕಾಶವನ್ನು ಬಿಟ್ಟುಕೊಡಬೇಕಾದೀತು. ಹಿರಿಯ ಅಧಿಕಾರಿಗಳ ಆದೇಶ ಪಾಲನೆಯಲ್ಲಿ ವ್ಯತ್ಯಾಸವಾಗಿ, ಕೆಲ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ತಾಳ್ಮೆ ಹಾಗೂ ಏಕಾಗ್ರತೆಯಿಂದ ದಿನವನ್ನು ಮುನ್ನಡೆಸುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸೂಕ್ತ ವ್ಯಕ್ತಿಗಳ ಕೊರತೆ ಕಾಣಿಸುವುದು. ವಿದೇಶೀಯ ವ್ಯವಹಾರದ ಮಾರ್ಗವು ನಿಮಗೆ ತೆರೆದುಕೊಳ್ಳುವುದು. ಹೂಡಿಕೆಗೆ ಒತ್ತಡವು ಇರುವುದು. ನಿಮ್ಮ‌ ಬಗ್ಗೆ ನಿಮ್ಮ ಶ್ರಮದಿಂದ ಎಣಿಸಿದಷ್ಟು ಲಾಭವು ಆಗುವುದು. ಲಾಭದ ಮುಂದೆ ಆಯಾಸವು ನಗಣ್ಯವಾಗಲಿದೆ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ. ಕಳೆದ ಸಮಯವನ್ನು ಚಿಂತಿಸಿ ಪ್ರಯೋಜನವಾಗದು. ನಿಮ್ಮ ಕಡೆಯಿಂದ ಆದ ತಪ್ಪಿಗೆ ಕ್ಷಮೆಯನ್ನು ಕೇಳಿ ಸರಿ ಮಾಡಿಕೊಳ್ಳಿ. ಹಳೆಯ ನೆನಪು ನಿಮಗೆ ಹಿತವೆನಿಸುವುದು.

ಕುಂಭ ರಾಶಿ : ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಶ್ರಮಿಸಬೇಕಾಗುವುದು. ಎಲ್ಲವನ್ನೂ ನಿಮ್ಮಷ್ಟಕ್ಕೇ ಅಂದುಕೊಂಡು ಮನಸ್ಸನ್ನು ಕುಗ್ಗಿಸಿಕೊಳ್ಳುವಿರಿ. ವಿದೇಶದ ಪ್ರವಾಸಕ್ಕೆ ಯೋಜನೆ ಮಾಡಿಕೊಳ್ಳುವಿರಿ. ಸಂಗಾತಿಯ ಮಾತಿನಿಂದ ಉದ್ವೇಗಕ್ಕೆ ಒಳಗಾಗುವಿರಿ. ಮನೋರಂಜನೆಯ ಅವಧಿಯಲ್ಲಿ ಸ್ನೇಹಿತರ ಜೊತೆ ಸಮಯವನ್ನು ಕಳೆಯುವಿರಿ. ಸ್ನೇಹಿತರು ಕೊಟ್ಟ ಹಣವನ್ನು ಪುನಃ ಕೇಳಿದ್ದು ನಿಮಗೆ ಅಪಮಾನವಾಗುವುದು. ಅಪಘಾತಗಳು ಸಂಭವಿಸಬಹುದು. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು. ಏನನ್ನಾದರೂ ಮಾಡಬೇಕು ಎಂಬ ಮಹತ್ತರವಾದ ಯೋಜನೆಯನ್ನು ತಯಾರಿಸುವಿರಿ. ಉದ್ಯೋಗದ ಬಗ್ಗೆ ಅನೇಕ ಸಲಹೆಗಳು ಬರಬಹುದು. ಎಲ್ಲವನ್ನೂ ಸಮಾಧಾನ ಚಿತ್ತದಿಂದ ಆಲಿಸಿ. ಸಿಕ್ಕಷ್ಟಲ್ಲಿ ಸಂತೃಪ್ತಿ ಪಡುವ ಅವಶ್ಯಕತೆ ಇದೆ.

ಮೀನ ರಾಶಿ : ಇಂದು ನಿಮ್ಮ ಉಳಿತಾಯದ ಹಣವು ಯಾವುದೋ ಸಣ್ಣ ತಪ್ಪಿನಿಂದ ಖಾಲಿಯಾಗಬಹುದು. ಆದಾಯ ವೃದ್ಧಿಗೊಳಿಸಲು ಕಾನೂನಿಗೆ ವಿರುದ್ಧವಾದ ಕಾರ್ಯಗಳ‌ ಕಡೆ ಗಮನವಿರುವುದು. ಬಂಧುಗಳಿಂದ ನಿರ್ಲಕ್ಷ್ಯಕ್ಕೆ ಒಳಗಾದಂತೆ ಅನ್ನಿಸಬಹುದು. ನಿಮ್ಮ‌ ಅರೋಗ್ಯದ ಬಗ್ಗೆ ಮಕ್ಕಳು ಹೆಚ್ಚಿನ ಕಾಳಜಿ ವಹಿಸುವರು. ನಿಮ್ಮ ಒತ್ತಡಗಳು ಎಂದಿಗಿಂತ ಕಡಿಮೆ ಇರುವ ಕಾರಣ ಮನಸ್ಸು ‌ಸಮಾಧಾನದಿಂದ ಇರುವುದು. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ. ಉನ್ನತವಾದ ಸ್ಥಾನಕ್ಕೆ ಏರಲು ನಿಮ್ಮೆದುರು ಅವಕಾಶವು ತೆರೆದುಕೊಳ್ಳುವುದು. ಆಪ್ತರನ್ನು ಅನುಮಾನಿಸುವುದು ಬೇಡ. ನಿಮ್ಮ ಸಂಬಂಧಿಸದ ವಿಚಾರದಲ್ಲಿ ಮಧ್ಯಪ್ರವೇಶವನ್ನು ಮಾಡುವುದು ಬೇಡ. ಸ್ವಂತ ಸ್ಥಳದ ಅಗತ್ಯವು ನಿಮಗೆ ಅರ್ಥವಾದೀತು.

-ಲೋಹಿತ ಹೆಬ್ಬಾರ್ – 8762924271 (what’s app only)