AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಹಿತಶತ್ರುಗಳಿಂದ ಏನಾದರೂ ತೊಂದರೆ ಬರಬಹುದು-ಎಚ್ಚರ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 10 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಹಿತಶತ್ರುಗಳಿಂದ ಏನಾದರೂ ತೊಂದರೆ ಬರಬಹುದು-ಎಚ್ಚರ
ರಾಶಿ ಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 10, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅಶ್ವಿನಿ, ಯೋಗ: ವಿಷ್ಕಂಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:56 ರಿಂದ 09:29 ರ ವರೆಗೆ, ಗುಳಿಕ ಕಾಲ 11:01 ರಿಂದ ಮಧ್ಯಾಹ್ನ 12:34ರ ವರೆಗೆ.

ಸಿಂಹ ರಾಶಿ : ಭೂಮಿಯ ಲಾಭವು ಆಗುವುದಾದರೂ ಅದನ್ನು ಪರಿಶೀಲಿಸಿ ಒಪ್ಪಿಕೊಳ್ಳಿ. ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ವಿದ್ಯಾರ್ಥಿಗಳು ಯಾವುದಾದರೂ ಸ್ಪರ್ಧೆಯಲ್ಲಿ ಭಾಗವಹಿಸಿದರೂ ಸ್ಥಾನವು ಸಿಗಲಿದೆ. ನಿಮ್ಮ ಆರೋಗ್ಯದಲ್ಲಿ ಸಮಸ್ಯೆಗಳನ್ನು ನೀವು ಅಲಕ್ಷ್ಯ ಮಾಡುವುದು ಸರಿಯಾಗದು. ಕೆಟ್ಟ ಕನಸನ್ನು ನೀವು ನೆನಪಿನಲ್ಲಿ ಇಡುವಿರಿ. ಕೆಲವರ ಮೇಲೆ ನಂಬಿಕೆಯನ್ನು ಇಡಲಾರಿರಿ. ಕೆಲವು ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಲು ಸಾಧ್ಯವಾಗದೇ ಹೋಗಬಹುದು. ನಿಮ್ಮ ಬಹುದಿನದ ವಿದೇಶ ಪ್ರಯಾಣದ ಕನಸು ಇಂದು ನನಸಾಗುವುದು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ಯಾರ‌ನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ.

ಕನ್ಯಾ ರಾಶಿ : ನಿಮಗೆ ಯೋಗ್ಯ ಸಂಗಾತಿಯ ಮಾಹಿತಿಗಳು ಸಿಗಲಿದೆ. ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವುದನ್ನು ತಪ್ಪಿಸಿ. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಗೆಲುವನ್ನು ಕಾಣಲು ಸೂಕ್ತ ಮಾಹಿತಿಯ ಕೊರತೆ ಕಾಣಿಸುವುದು. ಕುಟುಂಬದ ಇಂದಿನ ಜೀವನವು ಅನೂಹ್ಯ ತಿರುವುಗಳಿಂದ ಇರಬಹುದು. ಏಕಾಂತದಲ್ಲಿ ಇಂದು ನೆಮ್ಮದಿಯನ್ನು ಕಾಣಬಯಸುವಿರಿ. ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಇರುವುದು. ಮಕ್ಕಳ ವಿವಾಹದ ಕುರಿತು ಅತಿಯಾದ ಚಿಂತೆ ಇರುವುದು. ನಿರುದ್ಯೋಗಿಗಳಿಗೆ ಎಲ್ಲರಿಂದ ಮಾನಸಿಕ ಹಿಂಸೆ ಆಗಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ಸಂತೋಷವಾಗುವುದು. ಕಳೆದುಕೊಂಡ ವಸ್ತುವಿನ ಬಗ್ಗೆ ಮೋಹವು ಹೆಚ್ಚಾಗುವುದು. ಹೊಸತನ್ನು ಏನನ್ನಾದರೂ ಮಾಡಬೇಕೆಂಬ ಬಯಕೆ ಬರುವುದು. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು.

ತುಲಾ ರಾಶಿ : ಇಂದು ನೀವು ಮಾಡುವ ಕಾರ್ಯವನ್ನು ಬಹಳ ಗೊಂದಲದಿಂದ ಅಲಕ್ಷ್ಯದಿಂದ ಮಾಡುವಿರಿ.‌ ಎಲ್ಲದೂ ಗೊತ್ತು ಎಂಬ ಗತ್ತು ಎದ್ದು ತೋರುತ್ತದೆ. ಆರೋಗ್ಯದಲ್ಲಿ ಆಗುವ ವ್ಯತ್ಯಾಸವನ್ನು ನೀವು ಸಹಿಸಲಾರಿರಿ. ಇಂದು ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಉತ್ತಮ ಕಾರ್ಯವು ಸಿಗಲಿದೆ. ನಿಮ್ಮ ಬಹುಕಾಲ ಬಾಕಿಯಿರುವ ಕೆಲಸಗಳ ಬಗ್ಗೆ ನೆಮ್ಮದಿ ಇರದು. ಸಣ್ಣ ವಿಚಾರಕ್ಕೆ ಯಾರದ್ದಾದರೂ ವಿರೋಧ ಮಾಡುವಿರಿ. ಸ್ವಾಭಿಮಾನಕ್ಕೆ ತೊಂದರೆಯಾಗಬಹುದು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣ ಬಂದರೂ ಸಂತೋಷ ಇರುವುದಿಲ್ಲ. ಬಹಳ ಕಾರ್ಯವೂ ಇದರಿಂದ ಅನಾಯಸವೆನಿಸಬಹುದು. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಎಲ್ಲರದ್ದೂ ಒಂದಾದರೆ ನಿಮ್ಮದೇ ಒಂದು ದಾರಿಯಾಗಲಿದೆ. ಬಿಟ್ಟು ಬಿಟ್ಟು ಬರುವ ಅನಾರೋಗ್ಯದಿಂದ ನಿಮಗೆ ಮಾನಸಿಕ ಹಿಂಸೆ ಆಗುವುದು. ಸಂಶೋಧನೆಗೆ ಮಾರ್ಗದರ್ಶನ ಸಿಗಲಿದೆ. ಯಾವ ಒಪ್ಪಂದಕ್ಕೂ ನಿಮ್ಮ ಸಹಮತ ಇರದು.

ವೃಶ್ಚಿಕ ರಾಶಿ : ನಿಮ್ಮ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ಬಗ್ಗೆ ಆಪ್ತರ ಸಲಹೆಗಳು ಅವಶ್ಯವಾಗಿ ಬೇಕಾಗವುದು. ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಇಂದಿನ ನಿಮ್ಮ ಘಟನೆಯು ಯಾರನ್ನೂ ಇಷ್ಟಪಡಲು ಆಗದು. ನಿಮ್ಮ ಸ್ವಭಾವವು ಇತರರಿಗೆ ಕಿರಿಕಿರಿಯನ್ನು ತಂದೀತು. ಯಾರಾದರೂ ಹಣವನ್ನು ಹೂಡಿಕೆ ಮಾಡುವುದನ್ನು ತಡೆಯುತ್ತೀರಿ. ಸಂಸಾರದಲ್ಲಿ ಯಾವುದೋ ವಿಚಾರಕ್ಕೆ ಜಗಳಕ್ಕೆ ಇಳಿಯಬೇಡಿ. ದೃಢವಾದ ಮನಸ್ಸಿನಿಂದ ಮುಂದುವರಿಯಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳೇ ಹೆಚ್ಚು ಕೇಳಿಬರಬಹುದು. ವಿದ್ಯಾರ್ಥಿಗಳು ಮನೆಯಿಂದ ದೂರ ಇರಬೇಕಾದ ಸ್ಥಿತಿ ಬರಬಹುದು. ಶ್ರಮ ವಹಿಸಿ ಮಾಡಿದ ಕಾರ್ಯಕ್ಕೆ ಉತ್ತಮ ಫಲವು ಸಿಗಲಿದೆ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಹಿತಶತ್ರುಗಳಿಂದ ಏನಾದರೂ ತೊಂದರೆ ಬರಬಹುದು.