Horoscope: ದಿನ ಭವಿಷ್ಯ; ಈ ರಾಶಿಯವರು ವ್ಯವಹಾರದಲ್ಲಿ ಜಾಗರೂಕರಾಗಿರುವುದು ಒಳ್ಳೆಯದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 05, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 05 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಈ ರಾಶಿಯವರು ವ್ಯವಹಾರದಲ್ಲಿ ಜಾಗರೂಕರಾಗಿರುವುದು ಒಳ್ಳೆಯದು
ದಿನಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.​​​​​5ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಅತಿಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ 12:31 ರಿಂದ 14:08 ವರೆಗೆ, ಯಮಘಂಡ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಗುಳಿಕ ಕಾಲ 10:54 ರಿಂದ ಬೆಳಿಗ್ಗೆ 12:31ರ ವರೆಗೆ.

ಧನು ರಾಶಿ :ಇಂದು ಬಹಳ ದಿನಗಳ ಅನಂತರ ನಿಮ್ಮ ವ್ಯಾಪಾರದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುವುದು. ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ಕುಟುಂಬಕ್ಕೆ ಸ್ವಲ್ಪ ಸಮಯವನ್ನು ಕೊಡಿ. ಏನು ಮಾಡಬೇಕು ಎಂಬುದನ್ನು ಅರಿತು ಕಾರ್ಯಪ್ರವೃತ್ತರಾಗಿ. ಉದ್ಯಮಿಗಳು ತಮ್ಮ ತಾಳ್ಮೆ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಬದಲಿಗೆ ಆತ್ಮವಿಶ್ವಾಸದಿಂದ ಮುಂದುವರೆದರೆ ಯಶಸ್ಸು ನಿಮ್ಮದಾಗಲಿದೆ. ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸಮಯ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ.

ಮಕರ ರಾಶಿ :ನಿಮ್ಮಲ್ಲಿ ಹತಾಶೆಯ ಭಾವವು ಮೂಡುವುದು. ಅದನ್ನು ದೂರ ಮಾಡಿಕೊಳ್ಳಲು ಏನಾದರೂ ಇಷ್ಟವಾಗುವ ಚಟುವಟಿಕೆಯಲ್ಲಿ ಭಾಗವಹಿಸಿ. ಋಣಾತ್ಮಕ ಭಾವನೆಗಳೂ ದೂರವಾಗುವವು. ಮಾನಸಿಕ ನೆಮ್ಮದಿಯೂ ಸಿಗುವುದು. ನೀವು ಕೆಲಸ ಮಾಡುವಾಗ ಮೇಲಧಿಕಾರಿಗಳು ಮತ್ತು ಹಿರಿಯರಿಂದ ಮಾರ್ಗದರ್ಶನ ಪಡೆಯುತ್ತಿರಿ. ವ್ಯಾಪಾರಸ್ಥರು ವ್ಯವಹಾರದಲ್ಲಿ ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ನಿಮ್ಮ ಹಣ ಬೇರೆಡೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಅನಗತ್ಯವಾಗಿ ದುಬಾರಿ ವಸ್ತುಗಳನ್ನು ಖರೀದಿಸುವುದನ್ನು ತಪ್ಪಿಸಿ. ಏನನ್ನೂ ಮಾಡಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಬಾಕಿ ಇರುವ ಕೆಲಸದ ಕಡೆ ನಿಮ್ಮ ಗಮನ ಅವಶ್ಯಕ.

ಕುಂಭ ರಾಶಿ :ಇಂದು ಯಾರ ಮೇಲೋ ದ್ವೇಷವನ್ನು ಸಾಧಿಸುತ್ತ ಕೂರಬೇಡಿ. ಮನಸ್ಸು ಹಾಳಾಗುವುದು ಬಿಟ್ಟರೆ ಮತ್ತೇನೂ ಆಗದು. ಇಂದು ನಿಮ್ಮ ಉದ್ಯೋಗ ಸ್ಥಳದಲ್ಲಿ ಸುಧಾರಣೆ ತರಲು ಸಂವಹನ ಕೌಶಲ್ಯಗಳ ಮೇಲೆ ಗಮನಹರಿಸಿ. ವಿದೇಶಿ ಉತ್ಪನ್ನಗಳ ವ್ಯಾಪಾರ ಮಾಡುವವರು ಗುಣಮಟ್ಟದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಅಧ್ಯಯನ ಸಂಬಂಧಿತ ಸಮಸ್ಯೆಗಳು ಕಾಡಬಹುದು. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಉದ್ಯೋಗದಲ್ಲಿ ಕೆಲವು ಸವಾಲುಗಳು ಬರಬಹುದು. ಇಂದಿನ ಹಣದ ಅಗತ್ಯತೆಯನ್ನು ಸ್ನೇಹಿತರ ಮೂಲಕ ಪಡೆದುಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.

ಮೀನ ರಾಶಿ :ಇಂದು ನೀವು ಸುಮ್ಮನೇ ಕೆಲಸವಿಲ್ಲದೇ ಕುಳಿತಿರುವ ಬದಲು ಏನನ್ನಾದರೂ ಮಾಡಿ. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ಸ್ವಲ್ಪ ಕಾಲ ಕಳೆಯಿರಿ. ಮಾರ್ಕೆಟಿಂಗ್ ವಿಭಾಗಕ್ಕೆ ಸಂಬಂಧಿಸಿದ ಜನರಿಗೆ ಹೆಚ್ಚು ಪ್ರಯೋಜನಕಾರಿ ಆಗಲಿದೆ. ಉದ್ಯೋಗಸ್ಥರು ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಹೆಚ್ಚು ಗಮನಹರಿಸಬೇಕಾಗುತ್ತದೆ. ವ್ಯವಹಾರದಲ್ಲಿ ಜಾಗರೂಕರಾಗಿರುವುದು ಒಳ್ಳೆಯದು. ಮಕ್ಕಳ ವ್ಯವಹಾರಕ್ಕೆ ಬೇಕಾದ ಹಣಕಾಸು ನೆರವನ್ನು ನಿಜವು ನೀಡುವಿರಿ. ಹೂಡಿಕೆಯಲ್ಲಿ ಆದ ಲಾಭವನ್ನು ನೀವು ಪಡೆಯುವಿರಿ. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು.

-ಲೋಹಿತ ಹೆಬ್ಬಾರ್-8762924271 (what’s app only)