Horoscope: ದಿನಭವಿಷ್ಯ: ಇಂದು ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 17 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಧ್ರುವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ, ಯಮಘಂಡ ಕಾಲ 15:41 ರಿಂದ 17:17ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:42ರಿಂದ 09:17ರ ವರೆಗೆ.
ಧನು ರಾಶಿ :ನಿಮಗೆ ಯಾವುದಾದರೂ ಒಂದು ರೀತಿಯಲ್ಲಿ ಭಯದ ವಾತಾವರಣ ಇರುವುದು. ನಿಮ್ಮ ಕೆಲಸವನ್ನು ಬದಿಗಿರಿಸಿ ನಿಮಗೆ ಸಿಕ್ಕ ಯಶಸ್ಸನ್ನು ಅನುಭವಿಸಿ. ಹಣದ ವಿಷಯದಲ್ಲಿ ಏರಿಳಿತಗಳು ಆಗಬಹುದು. ನಿಮ್ಮ ಮತ್ತು ಪ್ರೇಮಿಯ ನಡುವೆ ಇಗೋ ಉಂಟಾಗಿ ಘರ್ಷಣೆಯಾಗಲಿದೆ. ನಿಮ್ಮ ಹೆತ್ತವರ ಆಲೋಚನೆಗಳು ನಿಮ್ಮ ಪ್ರೀತಿಯ ಜೀವನದಲ್ಲಿ ಪ್ರಾಬಲ್ಯ ಸಾಧಿಸುತ್ತವೆ. ಯಾವುದೇ ಹೊಸ ಹೆಜ್ಜೆಯನ್ನು ಇಡುವಾಗಲೂ ಆಲೋಚನೆ ದೃಢವಾಗಿರಲಿ. ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ಪ್ರಪಂಚದಿಂದ ಮರೆ ಮಾಡುವ ಅಗತ್ಯವಿಲ್ಲ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು. ಆಕಸ್ಮಿಕವಗಿ ಉದ್ಯೋಗವು ನಿಮಗೆ ಸಿಗಲಿದೆ.
ಮಕರ ರಾಶಿ :ನೀವು ನಿಮ್ಮ ಆಸ್ತಿಯನ್ನು ಮಾರಾಟ ಮಾಡುವ ಯೋಚನೆಯಲ್ಲಿ ಇರುವಿರಿ. ಮಾನಸಿಕ ಒತ್ತಡದಿಂದ ಹೊರಬರಲು ಪ್ರಯತ್ನಿಸಿ. ನಿಮ್ಮ ಉದ್ಯೋಗದ ಕಡೆಗೆ ಹೆಚ್ಚು ಗಮನವಿರಲಿ, ಲಾಭವಾದೀತು. ನಿಮ್ಮ ವರದತೆಯಿಂದ ನಿಮ್ಮ ಸ್ನೇಹಿತರು ಬೇಸರಗೊಂಡಾರು. ಶರೀರಕ್ಕೆ ಅತಿಯಾಗಿ ಆಯಾಸವಾಗುವ ಕೆಲಸಗಳನ್ನು ಮಾಡಬೇಡಿ, ಅಶಕ್ತತೆಯು ಉಂಟಾಗಬಹುದು. ಕಛೇರಿಯಲ್ಲಿ ಕೆಲಸವು ನಿಧಾನವಾಗಿ ಸಾಗಬಹುದು. ಆಲಸ್ಯವನ್ನು ಬಿಟ್ಟು ಕೆಲಸ ಮಾಡಿ. ಹೊಸ ಪ್ರೇಮವು ಅಂಕುರಿಸು ಸಾಧ್ಯತೆ. ಪ್ರೇಮಿಸುವ ವ್ಯಕ್ತಿಗಳ ಬಗ್ಗೆ ಮಾಹಿತಿ ಇರಲಿ. ನಿಮ್ಮ ಆಯ್ಕೆಯು ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರಬಹುದು. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಆಗುವ ಸಾಧ್ಯತೆ ಇದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು.
ಕುಂಭ ರಾಶಿ :ಇಂದು ನಿಮ್ಮ ಮನಸ್ಸು ಬಹಳ ಚಂಚಲವಾಗಿರಲಿದೆ. ಅನಗತ್ಯ ಖರ್ಚುಗಳು ಆಗಬಹುದಾಗಿದೆ. ಸಿಕ್ಕ ಸೌಕರ್ಯಗಳಿಂದ ಕೆಲವು ತೊಂದರೆಗಳನ್ನು ಅನುಭವಿಸಬೇಕಾಗಬಹುದು. ನಿಮ್ಮ ರಹಸ್ಯವು ಇಂದು ಬಯಲಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ಕಲಹವಿದ್ದರೂ ದಿನಾಂತ್ಯದಲ್ಲಿ ಎಲ್ಲವೂ ಮರೆಯಾಗಿ ಸುಂದರವಾಗಿರಲಿದೆ. ಸಂಗಾತಿಗಳು ಪರಸ್ಪರ ಅನ್ಯೋನ್ಯವಾಗಿ ಇರಲಿದ್ದೀರಿ. ಹೊಂದಾಣಿಕೆಯ ಬದುಕು ನಿಮ್ಮದಾಗಲಿದೆ. ದೂರದ ಪ್ರಯಾಣವು ಸುಖದಾಯಕವಲ್ಲ. ನಿಮ್ಮ ಇಷ್ಟದ ವಸ್ತುಗಳು ಕಣ್ಮರೆಯಾಗಬಹುದು. ಅಗತ್ಯದ ಕಾರ್ಯವನ್ನು ಇತರರ ಸಹಾಯವನ್ನು ಪಡೆದು ಮುಗಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಸಂಗಾತಿಯ ಜೊತೆ ಕುಳಿತು ದುಃಖದಿಂದ ಸಮಾಧಾನ ಮಾಡುವಿರಿ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದಲೂ ದೂರವಿರಬೇಕು.
ಮೀನ ರಾಶಿ :ಇಂದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪ್ರೊತ್ಸಾಹ ಸಿಗಲಿದೆ. ನಿಮ್ಮ ಪ್ರಯತ್ನಕ್ಕೆ ಅದೃಷ್ಟವು ಜೊತೆಗಿರಲಿದೆ. ನೀವಿಂದು ಅಲ್ಪ ಪ್ರಯತ್ನದಿಂದ ಕೆಲಸವನ್ನು ಸಾಧಿಸಿಕೊಳ್ಳಬಹುದು. ಇಂದು ಬಂದಿರುವ ಕೆಲಸಗಳನ್ನು ಒಂದೊಂದಾಗಿಯೇ ಮುಗಿಸುತ್ತ ಬನ್ನಿ. ಒತ್ತಡದ ಕೆಲಸಗಳನ್ನು ನಿರ್ವಹಿಸಬೇಕಾಗಬಹುದು. ಮೆಚ್ಚುಗೆಯು ನಿಮ್ಮ ಕೆಲಸಕ್ಕೆ ಪ್ರಾಪ್ತವಾಗುವುದು. ಮೇಲಧಿಕಾರಿಗಳಿಂದ ಪ್ರೋತ್ಸಾಹ ಮತ್ತು ಪ್ರಶಂಸೆಯು ಸಿಗಲಿದೆ. ಉದ್ವಿಗ್ನತೆಗೆ ಒಳಗಾಗದೇ ಎಚ್ಚರಿಕೆಯಿಂದ ಕೆಲಸವನ್ನು ಮಾಡಿ ಮುಗಿಸಿ. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ.
-ಲೋಹಿತ ಹೆಬ್ಬಾರ್-8762924271 (what’s app only)