Horoscope: ದಿನಭವಿಷ್ಯ, ಈ ರಾಶಿಯವರು ಹೊಸ ಕಾರ್ಯಗಳ ಅನ್ವೇಷಣೆಯಲ್ಲಿ ಇರುವಿರಿ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 18 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ದಿನಭವಿಷ್ಯ, ಈ ರಾಶಿಯವರು ಹೊಸ ಕಾರ್ಯಗಳ ಅನ್ವೇಷಣೆಯಲ್ಲಿ ಇರುವಿರಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 18, 2024 | 12:15 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 18) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಸಿದ್ಧ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:33ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:03 ರಿಂದ 08:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:53 ರಿಂದ 11:18ರ ವರೆಗೆ.

ಧನು ರಾಶಿ: ಹಳೆಯ ವಸ್ತುಗಳ ದುರಸ್ತಿಯ ಕೆಲಸವನ್ನು ಮಾಡುವಿರಿ. ಅಧಿಕ ಖರ್ಚೂ ಆಗಬಹುದು. ಹೊಸದಾಗಿ ಆರಂಭಿಸಿದ ಉದ್ಯಮದ ಫಲವು ಒಂದೊಂದಾಗಿಯೇ ಸಿಗುವುದು ನಿಮಗೆ ಸಂತೋಷವನ್ನು ಕೊಡುವುದು. ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ‌ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ‌ ಮನಸ್ಸಿನಿಂದ ಮಾತನಾಡುವಿರಿ.‌ ನೀವು ಮಾಡುವ ಕಾರ್ಯದಲ್ಲಿ ಧೈರ್ಯವು ಹೆಚ್ಚಿರುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ.

ಮಕರ ರಾಶಿ: ನೀವು ಸರ್ಕಾರದ‌ ಕಡೆಯಿಂದ ಆಗಬೇಕಾದ ಕಾರ್ಯವನ್ನು ಮಾಡಲು ಓಡಾಟ ಮಾಡುವಿರಿ. ಯಾರದೋ ಅಪರಿಚಿತರ ಸಂಪರ್ಕವನ್ನು ಮಾಡಬೇಕಾದೀತು. ಸ್ನೇಹಿತರಿಂದ ಆರ್ಥಿಕತೆಗೆ ಸಹಾಯವು ಸಿಗುವುದು. ಚಿಕಿತ್ಸೆಯಿಂದ ಆರೋಗ್ಯದಲ್ಲಿ ಸುಧಾರಣೆ ಇರಲಿದೆ. ನೂತನ ಗೃಹಕ್ಕೆ ಹೋಗುವ ಸಂಕಲ್ಪವನ್ನು ಮಾಡುವಿರಿ. ಹಿತಶತ್ರುಗಳಿಂದ ತೊಂದರೆ ಎದುರಾದೀತು. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ‌. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು.‌ ವ್ಯವಹಾರವು ಸರಿಯಾಗಿ ಇರಲಿ. ಅತಿಯಾದ ಕೋಪದಿಂದ ಎಲ್ಲ ಕೆಲಸವು ವ್ಯತ್ಯಾಸವಾಗಬಹುದು.

ಕುಂಭ ರಾಶಿ: ಮಂಗಲ ಕಾರ್ಯಕ್ಕೆ ಹೊರಟ ನೀವು ಶುಭ ಕಾಲವನ್ನು ನೋಡಿ ಹೊರಡಿ. ದೀರ್ಘಪ್ರಯಾಣವಾದರೂ ಆಯಾಸವನ್ನು ದೂರಮಾಡೀತು. ಉದ್ಯಮದಲ್ಲಿ ಅಧಿಕ ಚಿಂತೆಯು ಇರಲಿದ್ದು ಪ್ರಯತ್ನವು ಅಧಿಕವಾಗಿ ಇರುವುದು. ಸಂಗಾತಿಯ ಮಾತನ್ನು ಇಂದು ಅನುಸರಿಸುವಿರಿ. ಮನೆಯಲ್ಲಿ ಹಿಂದಿನ ಘಟನೆಯೇ ಮರುಕಳಿಸಲಿದ್ದು ಸಣ್ಣ ವಾಗ್ವಾದವೂ ನಡೆಯಬಹುದು. ತಂತ್ರಜ್ಞರು ವಹಿಸಿಕೊಂಡ ಕಾರ್ಯದ ಗಡುವುದು ಸಮೀಪಿಸಿದ್ದು, ತುರ್ತು ಕಾರ್ಯವನ್ನು ಮಾಡಬೇಕಿದೆ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ‌ ಜೊತೆ ಸಂಘರ್ಷ ಬೇಡ. ಆತುರದಲ್ಲಿ ವಾಹನ ಚಾಲನೆಯಿಂದ ತೊಂದರೆಯಾದೀತು. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ.

ಮೀನ ರಾಶಿ: ಇಂದು ಹೊಸ ಕಾರ್ಯಗಳ ಅನ್ವೇಷಣೆಯಲ್ಲಿ ಇರುವಿರಿ. ನಿಮ್ಮ ವಿರುದ್ಧವಾಗಿ ಮಾತನಾಡುವುದು ನಿಮಗೆ ಇಷ್ಟವಾಗದು. ಸಿಟ್ಟಾಗುವ ಸಾಧ್ಯತೆ ಇದೆ. ದೂರದಲ್ಲಿ ಇದ್ದ ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರುವುದು. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಯಾವದೇ ಸಂದರ್ಭದಲ್ಲಿಯೂ ಗಾಬರಿಯಾಗದೇ ಸಮಯಪ್ರಜ್ಞೆಯಿಂದ ಮುನ್ನಡೆಯಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಉಗುಳಲಾಗದ, ನುಂಗಲಾಗದ ತುತ್ತನ್ನು ಬಾಯಲ್ಲಿ ಇಟ್ಟುಕೊಳ್ಳಬೇಕಾಗುವುದು.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ