AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಸಲ್ಲದ ಆಸೆಗಳನ್ನು ಬೆಳಿಸಿಕೊಳ್ಳುವಿರಿ, ಆರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 19 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ದಿನಭವಿಷ್ಯ, ಸಲ್ಲದ ಆಸೆಗಳನ್ನು ಬೆಳಿಸಿಕೊಳ್ಳುವಿರಿ, ಆರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 19, 2024 | 12:15 AM

Share

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಜನವರಿ 19) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಪೂರ್ವಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಸಾಧ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ 11:18 ರಿಂದ 12:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:34 ರಿಂದ 04:59ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:28ರಿಂದ 09:53ರ ವರೆಗೆ.

ಧನು ರಾಶಿ: ನಿಮ್ಮ ಕುಶಲ ಕರ್ಮಕ್ಕೆ ಪ್ರಶಂಸೆ ಸಿಗಲಿದೆ. ಹಣ ವ್ಯಯವನ್ನು ಅಧಿಕ ಮಾಡುವುದು ಬೇಡ. ದೇವರ ಕಾರ್ಯದಲ್ಲಿ ಮಗ್ನರಾಗುವಿರಿ. ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಅಪರಿಚಿತರ ಬಗ್ಗೆ ಭಯವಿರುವುದು. ಆಮದು ವ್ಯವಹಾರವನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಕೆಲವು ಮಾರ್ಪಾಡಿನ ಅವಶ್ಯಕತೆ ಇರಲಿದೆ. ಪ್ರಶಂಸೆಯಿಂದ ಅಹಂಕಾರವು ಬರುವುದು. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ನಿಮ್ಮ ದೌರ್ಬಲ್ಯಗಳನ್ನು ಎಲ್ಲರೆದುರು ಪ್ರಕಟಪಡಿಸುವುದು ಬೇಡ.

ಮಕರ ರಾಶಿ: ನಿಮ್ಮ ಮಾತಿಗೆ ಆಕರ್ಷಿತರಾಗಬಹುದು. ತಂತ್ರದಿಂದ ಶತ್ರುವನ್ನು ಗೆಲ್ಲುವಿರಿ. ವ್ಯವಹಾರವನ್ನು ಮಾಡಲು ಓಡಾಟ ಹೆಚ್ಚಾಗಬಹುದು. ಅನಿರೀಕ್ಷಿತ ಧನವ್ಯಯದಿಂದ ಆತಂಕವು ಆಗಲಿದೆ. ರಾಜಕೀಯದಿಂದ ನಿಮಗೆ ಪ್ರೇರಣೆ ಸಿಗುವುದು. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ವಿದ್ಯಾರ್ಥಿಗಳು ಓದಿನ ಸಮಯವನ್ನು ಬದಲಿಸಿಕೊಳ್ಳುವುದು ಸೂಕ್ತ. ಸಾಲ ಮಾಡುವಾಗ ನಿಮ್ಮ ಆದಾಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಪ್ರಭಾವೀ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವು ಆಗಲಿದೆ. ಅನಪೇಕ್ಷಿತ ಮಾತುಗಳನ್ನು ಹೆಚ್ಚಾಗ ಆಡುವಿರಿ. ಶ್ರೀಮನ್ನಾರಾಯಣನ ಉಪಾಸನೆಯನ್ನು ಮಾಡಿ.

ಕುಂಭ ರಾಶಿ: ಇಂದು ನೀವು ವಿವಾದಗಳಿಗೆ ಸಮಯವನ್ನು ಹೆಚ್ಚು ಕೊಡುವಿರಿ. ಸಲ್ಲದ ಆಸೆಗಳನ್ನು ಬೆಳಿಸಿಕೊಳ್ಳುವಿರಿ. ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಸಾಹಸ ಮಾಡಬೇಕಾಗುವುದು. ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಆರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ಹಸಿವು ಹೆಚ್ಚಾಗಿ ಸಂಕಟಪಡುವಿರಿ. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ನೆಚ್ಚಿನ ವ್ಯಕ್ತಿಗಳ ಬಗ್ಗೆ ಪ್ರೀತಿ ಅಧಿಕವಾಗಬಹುದು. ಹನುಮಾನ್ ಸ್ತೋತ್ರವನ್ನು ಪಠಿಸಿ.

ಮೀನ ರಾಶಿ: ಇಂದು ಮಾಡುವ ಕಾರ್ಯದಲ್ಲಿ ಪ್ರಾಮಾಣಿಕತೆ ಇರಲಿ. ಇಷ್ಟ ಬಂದ ಕಡೆ ನೀವು ಸುತ್ತಾಡುವಿರಿ. ಹೊಸ ಅನ್ವೇಷಣೆಯನ್ನು ನೀವು ಇಷ್ಟಪಡುವಿರಿ. ಆರ್ಥಿಕ ಸಂಕಟವನ್ನು ಸ್ನೇಹಿತರ ಸಹಾಯವನ್ನು ಪಡೆದು ಸರಿಮಾಡಿಕೊಳ್ಳುವಿರಿ. ನಿಮ್ಮ‌ ಮಾತಿನ ಮೇಲೆ‌ ನಿಯಂತ್ರಣವಿರಲಿ. ನಿಮ್ಮ ವೃತ್ತಿಯು ನಿಮಗೆ ಗೌರವವನ್ನು ಕೊಡಿಸುವುದು. ಸರಳತೆಯನ್ನು ರೂಢಿಸಿಕೊಳ್ಳುವುದು ಉತ್ತಮ ಸ್ವಭಾವವೆನಿಸಬಹುದು. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು. ಕೃಷಿಯಲ್ಲಿ ಆದ ಪ್ರಗತಿಯಿಂದ ಸಂತೋಷವಾಗುವುದು. ಉತ್ಸಾಹವು ಹೆಚ್ಚಾಗುದು.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು