Horoscope: ಈ ರಾಶಿಯವರ ಶ್ರಮವು ದುರುಪಯೋಗವಾಗುವುದು
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 19 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜೂನ್. 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸಿದ್ಧಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ 12:34 ರಿಂದ 02:11ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:43 ರಿಂದ ಬೆಳಿಗ್ಗೆ 09:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:57 ರಿಂದ 12:34ರ ವರೆಗೆ.
ಧನು ರಾಶಿ : ಇಂದು ದುಸ್ಸಾಧ್ಯವಾದ ಕಾರ್ಯವನ್ನೇ ಮಾಡಲು ಮುಂದಾಗುವಿರಿ. ಮನೆಗೆ ಖರ್ಚು ಮಾಡುವಾಗ ನಿಮ್ಮ ಆರ್ಥಿಕಸ್ಥಿತಿಯನ್ನೂ ಗಮನಿಸಿ. ಇಂದು ನಿಮ್ಮ ಪರೀಕ್ಷೆಗೆಂದು ಕೆಲವು ಘಟನೆಗಳು ನಡೆಯಬಹುದು. ಅದನ್ನು ಸರಿಯಾಗಿ ನಿಭಾಯಿಸಿ. ಕಛೇರಿಯಲ್ಲಿ ನಿಮಗೆ ಉತ್ಸಾಹದ ಸ್ವಾಗತ ಸಿಗಲಿದೆ. ನಿಮ್ಮಿಂದ ದೂರಹೋದವರ ಬಗ್ಗೆ ಅತಿಯಾದ ಆಸಕ್ತಿ ಬೇಡ. ಮಕ್ಕಳು ನಿಮಗೆ ಸಂತೋಷವನ್ನು ಕೊಡುವರು. ಅವರ ಜೊತೆ ಸಮಯವನ್ನು ಕಳೆಯಿರಿ. ಅತಿಯಾದ ಆಸೆಬುರುಕುತನ ಒಳ್ಳೆಯದಲ್ಲ. ಮನಸ್ಸು ಹೇಳಿದಂತೆ ಕೇಳಬೇಡಿ, ಸಮಾಧಾನದಿಂದ ಇರಿ. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ. ಖರ್ಚಿನ ಬಗ್ಗೆ ಅಂದಾಜು ಇಲ್ಲದೇ ಕಾರ್ಯವನ್ನು ಒಪ್ಪಿಕೊಳ್ಳುವಿರಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು. ನಿಮ್ಮ ಶ್ರಮವು ದುರುಪಯೋಗವಾಗುವುದು.
ಮಕರ ರಾಶಿ : ಇಂದು ನಿಮಗೆ ನ್ಯಾಯಾಲಯದ ವಿಚಾರದಲ್ಲಿ ಬೇಸರವೆನಿಸಬಹುದು. ಇನ್ನೊಬ್ಬರನ್ನು ನಿಂದಿಸುವುದು ಬೇಡ. ಅವರೇ ಕರ್ಮದ ಫಲವನ್ನು ಉಣ್ಣುವರು. ನೀವಾಡುವ ಮಾತುಗಳು ನಿಮಗೆ ಖುಷಿ ಕೊಡಬಹುದು. ಅದರೆ ಅದರಿಂದ ಇನ್ನೊಬ್ಬರಿಗೆ ನೋವಾಗುತ್ತದೆ ಎಂಬುದನ್ನೂ ಮರೆಯಬೇಡಿ. ಮನದಲ್ಲಿ ಅವ್ಯಕ್ತವಾದ ಭಯವು ಕಾಡವುದು. ದೇವರ ಸ್ತೋತ್ರಾದಿಗಳನ್ನು ಮಾಡಿ. ವಿದೇಶಕ್ಕೆ ಹೋಗುವ ಅವಕಾಶವು ತಪ್ಪಿಹೋಗುವುಸು. ಅಗತ್ಯವಿದ್ದಷ್ಟೇ ಖರ್ಚು ಮಾಡಿ. ಎಲ್ಲವೂ ಬೇಕೆನಿಸಬಹುದು. ಮನಸ್ಸನ್ನು ಕಡಿಮಾಣ ಹಾಕಿ ನಿಲ್ಲಿಸುವುದು ಉತ್ತಮ. ಮಕ್ಕಳು ಉತ್ಸಾಹದಿಂದ ದಿನವನ್ನು ಪ್ರಾರಂಭಿಸಲಿದ್ದು ಅವರಿಗೆ ಕೊಡಬೇಕಾದ ತಿಳಿವಳಿಕೆಯನ್ನು ಆಗಲೇ ಕೊಡುವುದು ಉತ್ತಮ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ.
ಕುಂಭ ರಾಶಿ : ನಿಮ್ಮ ಗುರಿಯನ್ನು ಇಂದು ಯಾರಾದರೂ ಬದಲಿಸಬಹುದು. ನಿಮ್ಮಲ್ಲಿ ದೃಢತೆ ಇದ್ದರೆ ಅದು ಸಾಧ್ಯವಿಲ್ಲ. ಹಿರಿಯರ ಆದೇಶದಂತೆ ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಪುಣ್ಯ ಸ್ಥಳಗಳಿಗೆ ನೀವು ಹೋಗುವಿರಿ. ಇನ್ನೊಬ್ಬರು ನಿಮ್ಮ ಶ್ರೇಯಸ್ಸನ್ನು ಸಹಿಸದೇ ಅಸೂಯೆಪಡುವರು. ಮನಸ್ಸಿನಲ್ಲಿಯೇ ಸಂಕಟಪಡುವ ಬದಲು ಅದನ್ನು ಆಪ್ತರಿಗೆ ಹೇಳಿ ಹಗುರಾಗಿ. ಕೃಷಿಕರಿಗೆ ಲಾಭವಾಗುವ ಸಾಧ್ಯತೆ ಇದೆ. ಇಂದು ಸಹಾಯವನ್ನು ಕೇಳಿದವರಿಗೆ ಇಲ್ಲವೆನ್ನದೇ ಮಾಡಿ. ಆಯಾಸವಾದರೆ ವಿಶ್ರಾಂತಿಯ ಜೊತೆ ಕೆಲಸವನ್ನು ಮಾಡಿ. ಗುರಿಯೆಡಗೆ ಪ್ರಯತ್ನವು ನಿರಂತರವಾಗಿರಲಿ. ಧಾರ್ಮಿಕ ಕಾರ್ಯದಲ್ಲಿ ತೊಡಗಿರುವವರಿಗೆ ಆದಾಯವು ಹೆಚ್ಚು ಇರಲಿದೆ. ಕುಟುಂಬದ ಪೋಷಣೆಯಲ್ಲಿ ಇಂದು ಸಹಭಾಗಿತ್ವ ಇರುವುದು.
ಮೀನ ರಾಶಿ : ಚಿಂತಿಸಿದ ಕೆಲಸವನ್ನು ಪೂರ್ಣಗೊಳಿಸುವ ಸಂತೋಷವು ನಿಮ್ಮದಾಗಲಿದೆ. ಅನ್ಯರಿಗೆ ಕೊಡಬೇಕಾದ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಸ್ವಾಭಿಮಾನಿಗಳಾಗಿ ಇರುವಿರಿ. ತಾನು ಹೇಳಿದಂತೆ ನಡೆಯಬೇಕು ಎನ್ನುವ ಮಾನಸಿಕ ಸ್ಥಿತಿಯಿಂದ ಹೊರ ಬನ್ನಿ. ಯಾವುದನ್ನೂ ಹಠದ ಮೂಲಕ ಪಡೆದುಕೊಳ್ಳುವುದು ಬೇಡ. ಹೊಸದಾಗಿ ಸೇರಿದ ಕೆಲಸದಲ್ಲಿ ಗೊಂದಲಗಳಿದ್ದು ಅದನ್ನು ಸರಿಮಾಡಿಕೊಳ್ಳುವಿರಿ. ಇಂದು ನಿಮ್ಮ ಮಹತ್ತ್ವದ ಕಾರ್ಯವು ಕೈಗೂಡಬಹುದು. ಹಳೆಯ ಸಮಾಚಾರವನ್ನು ಪುನಃ ನೆನಪಿಸಿಕೊಳ್ಳುವಿರಿ. ಮಾತನ್ನು ಕಡಿಮೆ ಮಾಡಿ. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಶತ್ರುಗಳು ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ.
-ಲೋಹಿತ ಹೆಬ್ಬಾರ್ – 8762924271 (what’s app only)