Astrology: ಈ ರಾಶಿಯವರು ಹೆಚ್ಚಿನ ಆದಾಯಕ್ಕಾಗಿ ಅನ್ಯಮಾರ್ಗ ಹಿಡಿಯುವಿರಿ

ರಾಶಿ ಭವಿಷ್ಯ ಗುರುವಾರ(ಸೆ. 5): ಸ್ವಂತ ಉದ್ಯೋಗವಿದ್ದರೆ ಜನರು ವಂಚಿಸಬಹುದು. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಲಾರದು. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗುವುದು. ಹಾಗಾದರೆ ಸೆಪ್ಟೆಂಬರ್​ 5ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರು ಹೆಚ್ಚಿನ ಆದಾಯಕ್ಕಾಗಿ ಅನ್ಯಮಾರ್ಗ ಹಿಡಿಯುವಿರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 05, 2024 | 12:10 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶುಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:40 ಗಂಟೆ, ರಾಹು ಕಾಲ ಮಧ್ಯಾಹ್ನ 02:03 ರಿಂದ ಸಂಜೆ 03:36, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:27 ರಿಂದ 10:59ರ ವರೆಗೆ.

ಧನು ರಾಶಿ: ಹಿರಿಯರಿಗೆ ನಿಮ್ಮ‌ ಮೇಲೆ ಸದಭಿಪ್ರಾಯ ಮೂಡದೇ ಇರಬಹುದು. ನಿಮ್ಮ ಸಹೋದರರಿಂದ ನಿಮಗೆ ಆಕಸ್ಮಿಕವಾಗಿ ಸಹಾಯ ಸಿಗಬಹುದು. ಮಕ್ಕಳ‌‌ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು. ಹೆಚ್ಚಿನ ಆದಾಯಕ್ಕಾಗಿ ಸುಳ್ಳುಹೇಳಬೇಕಾದೀತು ಅಥವಾ ನಷ್ಟವನ್ನು ತುಂಬಿಕೊಳ್ಳಲು ಅನ್ಯಮಾರ್ಗವನ್ನು ಪ್ರವೇಶಮಾಡಬಹುದು. ಮನೆಯ ವಾತಾವರಣವು ನಿಮಗೆ ಹಿತವಾಗಲಿದೆ. ಸುಳ್ಳಿನಿಂದ‌ ಇಂದು ನಿಮ್ಮ ವ್ಯಕ್ತಿತ್ವಕ್ಕೆ ತೊಂದರೆ ಆದೀತು. ವಿಶೇಷವಾದ ವಸ್ತುವನ್ನು ಕೊಳ್ಳುವ ವಿಚಾರದಲ್ಲಿ ಮೋಸ ಹೋಗುವಿರಿ. ವಾಹನದಿಂದ ಲಾಭವನ್ನು ಪಡಯುವಿರಿ. ಅತಿಯಾದ ವೇಗ ಬೇಡ. ಯಾರಮೇಲೂ ಒತ್ತಡಬೇಡ. ಭೂಮಿಯ ಬಗ್ಗೆ ಜಾಗರೂಕತೆ ಅವಶ್ಯಕ. ಸಣ್ಣ ಪಾಲು ಕೈತಪ್ಪಬಹುದು. ಸಂಗಾತಿಯ ಮಾತುಗಳು ನಿಮಗೆ ಅನಿರೀಕ್ಷಿತ ಆದೀತು. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ.

ಮಕರ ರಾಶಿ: ಯಾರದ್ದಾರೂ ಮಾತು ನಿಮಗೆ ಖುಷಿಕೊಡುವುದಾದರೆ ಅಂತಹುದನ್ನು ಕೇಳಿ. ಇಂದು ನೀವು ಬೇರೆಯವರ ಕಷ್ಟಕ್ಕೆ ನೆರವಾಗುವಿರಿ. ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ದೈವದತ್ತವಾದ ಆರೋಗ್ಯವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಸ್ವಂತ ಉದ್ಯೋಗವಿದ್ದರೆ ಜನರು ವಂಚಿಸಬಹುದು. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಲಾರದು. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗುವುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ, ನಿಷ್ಠೆಗೆ ಮೆಚ್ಚುಗೆ ಸಿಗಲಿದೆ. ನಿಮ್ಮ ಕೆಲಸದಲ್ಲಿ ನೀವು ಪ್ರಾಮಾಣಿಕರಾಗಿ ಇರುವಿರಿ. ಸಾಧನೆಯ ರುಚಿ ನಿಮಗೆ ಸಿಗಲಿದೆ. ಇದೇ ನಿಮಗೆ ಇಷ್ಟದ ವಿಚಾರವಾಗಿದೆ. ನೂತನ ವಸ್ತುಗಳ ಖರೀದಿಗೆ ಹಣವು ಖರ್ಚಾದೀತು. ಸ್ನೇಹದಿಂದ ಪ್ರೇಮವು ಉಂಟಾಗಲಿದೆ. ಸಂಬಂಧದ ಮಹತ್ವವನ್ನು ತಿಳಿಯುವುದು. ಕಷ್ಟವೆಂದುಕೊಂಡ ಕಾರ್ಯವು ಗೊತ್ತಾಗದೇ ಮುಗಿದುಹೋದೀತು. ಬೇಕಾದಷ್ಟು ಕೆಲಸಗಳಿದ್ದರೂ ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ.

ಕುಂಭ ರಾಶಿ: ಸಾಲಕೂಪವೂ ದಿನದಿಂದ ದಿನಕ್ಕೆ ಹೆಚ್ಚಾದಂತೆ ತೋರುತ್ತದೆ. ನೀವು ಧಾರ್ಮಿಕ ಕಾರ್ಯಗಳಲ್ಲಿ ತೊಡಗುವ ಆಸಕ್ತಿ ಇರುವುದು. ಅನಿರೀಕ್ಷಿತ ಧನಾಗಮನವು ನಿಮಗೆ ಸಂತಸವನ್ನು ತರಲಿದೆ. ಅನವಶ್ಯಕ ವಸ್ತುಗಳನ್ನು ಖರೀದಿಸುವ ಚಪಲತೆ ಬರುವುದು. ಮನೆಗೆ ಬಂದರನ್ನು ಬರಿ ಕೈಯಲ್ಲಿ ಏನನ್ನಾದರೂ ಕೊಡಿಸುವುದು ಉಚಿತ. ಮಕ್ಕಳ ಮೇಲಿನ ಮೋಹವು ನಿಮ್ಮನ್ನು ಕುರುಡು ಮಾಡಬಹುದು. ವಿವಾಹದ ಮಾತುಕತೆ ವಿಳಂಬವಾಗಿ‌ ನಿಮಗೆ ಬೇಸರ ತರಿಸಬಹುದು. ಲೆಕ್ಕಪತ್ರ ವಿಷಯದಲ್ಲಿ ನೀವು ಹಿಂದುಳಿಯುವಿರಿ. ಸಭೆಯಲ್ಲಿ ನಿಮ್ಮನ್ನು ಗೌರವಿಸಬಹುದು. ವಾಹನದಲ್ಲಿ ನೀವು ಪ್ರಯಾಣ ಮಾಡಲು ನಿಮಗೆ ಕಷ್ಟವಾದೀತು. ಸಿಗದುದರ ಬಗ್ಗೆ ಬಹಳ ಆಲೋಚನೆ ಬೇಡ. ಯಾರ ಮೆಚ್ಚುಗೆಯೂ ನಿಮಗೆ ಸಮಾಧಾನ ತರದು. ವಿನಾಕಾರಣ ಕಾಲಹರಣ ಮಾಡಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಕಳೆದುಕೊಂಡಿದ್ದರ ಬಗ್ಗೆ ನಿಮಗೆ ಬೇಸರವಿರದು.

ಮೀನ ರಾಶಿ; ನಿಮ್ಮ ಹಣವು ಒಳ್ಳೆಯ ಕಾರ್ಯಕ್ಕೆ ಉಪಯೋಗವಾದರೆ ಖುಷಿಪಡಿ. ಸಂಕಟಪಟ್ಟುಕೊಂಡು ಬರುವ ಪುಣ್ಯವನ್ನೂ ಕಳೆದುಕೊಳ್ಳಬೇಡಿ. ಇಂದು ನಿಮ್ಮ ಸ್ವಂತ ಕಾರ್ಯದಲ್ಲಿ ಹೆಚ್ಚಿನ ಪ್ರಗತಿ ಇರುವುದು. ನೀವು ಇಂದು ಸಂಪನ್ಮೂಲ‌ ವ್ಯಕ್ತಿಳಾಗಿ ನೀವು ಇರುವಿರಿ. ನಿಮ್ಮ ಗುಣಗಳನ್ನು ಇತರರು ಹೇಳಿಯಾರು. ಸಮಯಕ್ಕೆ ನೀವು ಹೆಚ್ಚು ಮಹತ್ತ್ವವನ್ನು ಕೊಡಬಹುದು. ಗೃಹೋತ್ಪನ್ನಗಳ ಮಾರಟ ಮಾಡಲು ನಿಮಗೆ ದಾರಿ ಸಿಗುವುದು. ನಿಮ್ಮನ್ನು ಕೆರಳಿಸಲಿ ಯಾರಾದರೂ ಬರಬಹುದು. ನಿಮ್ಮ ಅಹಂಕಾರಕ್ಕೆ ಕಡಿವಾಣ ಹಾಕಿಕೊಳ್ಳಿ. ಸುಖದುಃಖಗಳು ಎರಡೂ ನಿಮಗೆ ಸಮವಾಗಿ ಸಿಗಬಹುದು. ಹೆಚ್ಚು ಶ್ರವಹಿಸಿ ಕೆಲಸ ಮಾಡುವುದನ್ನು ನಿಲ್ಲಿಸಬಹುದು. ಸಹೋದ್ಯೋಗಿಗಳು ತಪ್ಪಿಗೆ ನಿಮ್ಮ ಕಡೆ ಬೊಟ್ಟು ಮಾಡಿ ತೋರಿಸಿಯಾರು‌. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ಬಹಳ ದಿನಗಳ ಅನಂತರ ಚಿಕ್ಕ ಕುಟುಂಬದ ಜೊತೆ ಪ್ರಯಾಣ ಮಾಡುವಿರಿ.‌ ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ. ನೀವು ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು.

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ