Horoscope: ದಿನಭವಿಷ್ಯ: ಈ ರಾಶಿಯವರು ಇಂದು ಬರುವ ಅಶುಭ ವಾರ್ತೆಯಿಂದ ತಲ್ಲಣಿಸಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 16ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಈ ರಾಶಿಯವರು ಇಂದು ಬರುವ ಅಶುಭ ವಾರ್ತೆಯಿಂದ ತಲ್ಲಣಿಸಬಹುದು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 16, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 16) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವಿಷ್ಕಂಭ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:41 ರಿಂದ ಮಧ್ಯಾಹ್ನ 11:11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ ಸಂಜೆ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:41 ರಿಂದ 08:11 ರ ವರೆಗೆ.

ಸಿಂಹ ರಾಶಿ : ಇಂದು ಸಕಾರಾತ್ಮಕ ಆಲೋಚನೆಯಿದ್ದರೂ ಬೇಸರವು ಎಲ್ಲಿಂದಲಾದರೂ ಬರಬಹುದು. ನೀವು ಅಪರೂಪವಾಗಿ ಭೇಟಿಯಾಗುವ ಜನರೊಂದಿಗೆ ಪ್ರೀತಿಯಿಂದ ಮಾತನಾಡುವಿರಿ. ಸಮಯಕ್ಕೆ ಸರಿಯಾಗಿ ಕೆಲಸ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಯಾರನ್ನೂ ದೂಷಿಸುವುದು ನಿಮಗೆ ಹೇಳಿಸಿದ್ದಲ್ಲ. ಕೃಷಿಗೆ ಸಂಬಂಧಿಸಿದ ಕಾರ್ಯವನ್ನು ವೇಗವಾಗಿ ಮಾಡಿಕೊಳ್ಳಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸಾಮಾಜಿಕವಾಗಿ ಏನನ್ನಾದರೂ ಮಾಡಬೇಕು ಎಂದೆನಿಸಬಹುದು. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ.

ಕನ್ಯಾ ರಾಶಿ : ಇಂದು ನಿಮಗೆ ಎಲ್ಲವೂ ನಿಮ್ಮ ಕೈಯಲ್ಲೆ ಇದೆ ಎಂಬ ಭಾವವು ಬರಬಹುದು. ಅಹಂಕಾರದ ಕಾರಣ ಖರೀದಿಯಲ್ಲಿ ಹೆಚ್ಚು ಹಣವನ್ನು ಕಳೆದುಕೊಳ್ಳುವಿರಿ. ವಿವಾಹಕ್ಕೆ ಮಾತುಕತೆಗಳು ಆಗಲಿದ್ದು ನಿಮಗೆ ಇಷ್ಟು ದಿನದ ಬೇಸರವು ಮಾಯವಾಗುವುದು. ಯಾವುದೇ ದ್ವಂದ್ವಗಳು ಬಂದರು ನಿರ್ಧಾರಕ್ಕೆ ಹೋಗದೇ ಸ್ವಲ್ಪ ಕಾಲ ಸುಮ್ಮನಿರಿ. ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವೈದ್ಯಕೀಯ ಕ್ಷೇತ್ರದ ಕಲಿಕೆ ಬಹಳ ಕಷ್ಟವೆನಿಸಬಹುದು. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಣ್ಣ ಉದ್ಯೋಗವಾದರೂ ಯೋಜನಾಬದ್ಧವಾಗಿರಲಿ.

ತುಲಾ ರಾಶಿ : ನಿಮ್ಮ ಚಂಚಲ ಸ್ವಭಾವವು ವೈವಾಹಿಕ ಜೀವನದಲ್ಲಿ ಒಡಕು ತರಬಹುದು. ನಿಮ್ಮ ಪ್ರೀತಿಪಾತ್ರರ ಜೊತೆ ಸಭ್ಯವಾಗಿ ನಡೆದುಕೊಳ್ಳಿ. ಕುಟುಂಬದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಯಾವುದಾದರೂ ಮಾರ್ಗವನ್ನು ಅನುಸರಿಸುವಿರಿ. ಎಲ್ಲ ಶ್ರಮದ ಅನಂತರವೂ ಮತ್ತೇನೋ ಉಳಿದುಕೊಳ್ಳುವುದು. ಅದು ಶೇಷವಾಗಿಯೇ ಉಳಿಯುತ್ತ ಹೋಗಬಹುದು. ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಹಣಕ್ಕಾಗಿ ಕಿರಿಕಿರಗಳು ಅಧಿಕವಾದಂತೆ ತೋರುವುದು. ವಿದ್ಯಾರ್ಥಿಗಳು ಮನೋಭಾವವನ್ನು ಬದಲಿಸಿಕೊಳ್ಳುವ ಅಗತ್ಯವಿದೆ. ವರ್ತನೆಯು ಹಾದಿ ತಪ್ಪಿದಂತೆ ಹೆಚ್ಚಿನವರಿಗೆ ತೋರುವುದು. ನಿಮಗೆ ಇಂದು ಬರುವ ಅಶುಭವಾರ್ತೆಯಿಂದ ತಲ್ಲಣಿಸಬಹುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗವಾಗುವಂತೆ ನೋಡಿ. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ.

ವೃಶ್ಚಿಕ ರಾಶಿ : ಇಂದು ನೀವು ಒಂಟಿಯಾಗಿ ವಾಹನದಲ್ಲಿ ದೂರಪ್ರಯಾಣ ಮಾಡುವಿರಿ. ಯಾವುದನ್ನೂ ನಿರ್ಲಕ್ಷ್ಯ ಭಾವದಿಂದ ನೋಡದೇ ಸರಿಯಾದ ಕ್ರಮವನ್ನು ಅನುಸರಿಸಬೇಕಾಗುವುದು. ಆರ್ಥಿಕತೆಯ ವಿಚಾರದಲ್ಲಿ ನೀವು ಕೆಲವರ ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ಸೃಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ. ನಿಮ್ಮ ಮೇಲಿನ ಗೌರವು ಈ ಕಾರಣಕ್ಕೆ ಕಡಿಮೆ ಆಗಬಹುದು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಸಹೋದ್ಯೋಗಿಗಳು ಉದ್ಯೋಗಕ್ಕೆ ಸಂಬಂಧಿಸಿದ ಗೊಂದಲವನ್ನು ಪಹಿಹರಿಸಲು ಸಹಕಾರ ನೀಡಬಹುದು. ಪಾವತಿಸಲು ಕಷ್ಟವಾಗುವಷ್ಟು ಸಾಲವನ್ನು ನೀವು ಮಾಡುವುದು ಬೇಡ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರು ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್