Horoscope: ರಾಶಿಭವಿಷ್ಯ; ಈ ರಾಶಿಯವರು ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ-ಎಚ್ಚರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 28, 2024 | 12:30 AM

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 28 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಈ ರಾಶಿಯವರು ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ-ಎಚ್ಚರ
ದಿನ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 28) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ತೃತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:09 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:32 ರಿಂದ 08:03ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:35 ರಿಂದ 11:06

ಸಿಂಹ ರಾಶಿ : ಇಂದಿನ ನಿಮ್ಮ ಮಾತುಗಳು ವಿವಾದಕ್ಕಾಗಿಯೇ ಆಡಿದಂತೆ ಕಾಣಿಸುವುದು. ಇನ್ನೊಬ್ಬರ ಹಣದ ಮೂಲದ ಬಗ್ಗೆ ಅಧಿಕ ಆಸಕ್ತಿ ಇರಲಿದೆ. ಕೆಲವನ್ನು ನೀವೇ ಮಾಡಿಕೊಳ್ಳುವ ತೊಡಕುಗಳಾಗಿವೆ. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಯಶಸ್ಸನ್ನು ಪಡೆಯುವ ಸುಲಭವಾದ ದಾರಿ ಸಿಗಬಹುದು. ಆದಷ್ಟು ಬೇಗ ಪ್ರೇಮಿಯನ್ನು ನೋಡುವ ತವಕದಲ್ಲಿ ಇರುವಿರಿ. ಸಂಗಾತಿಯಾಗುವವರ ಬಗ್ಗೆ ವಿವರಗಳನ್ನು ಪಡೆದುಕೊಳ್ಳುವಿರಿ. ಮೇಲಧಿಕಾರಿಗಳ ನಿಮ್ಮ ಬಗ್ಗೆ ಋಣಾತ್ಮಕವಾಗಿ ನೀಡಿದ ಹೇಳಿಕೆಯು ನಿಮಗೆ ನೋವುಂಟು ಮಾಡಬಹುದು. ಈ ದಿನ ನೀವು ಆಲಸ್ಯದಿಂದ ಇರುವಿರಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ.

ಕನ್ಯಾ ರಾಶಿ : ನಿಮ್ಮ ಇಂದು ಸ್ಥಿತಿಯು ಭವಿಷ್ಯಕ್ಕೆ ಸಂಬಂಧಿಸಿದ ಗಟ್ಟಿಯಾದ ನಿರ್ಧಾರವನ್ನು ಪಡೆಯಲಾರಿರಿ. ನಿಮ್ಮ ಕಟ್ಟುಪಾಡುಗಳು ನಿಮ್ಮನ್ನೇ ಬಂಧಿಸಬಹುದು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಅಸಭ್ಯ ವರ್ತನೆ ಇಂದು ನಿಮ್ಮ ಒತ್ತಡವನ್ನು ಹೆಚ್ಚಿಸಬಹುದು. ವ್ಯಾಪಾರಸ್ಥರು ಆರ್ಥಿಕವಾಗಿ ಲಾಭ ಪಡೆಯಬಹುದು. ವಿಶೇಷವಾಗಿ ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ಸರಾಸರಿ ದಿನವಾಗಿರುತ್ತದೆ. ಇನ್ನೊಬ್ಬರ ಬಗ್ಗೆ ತೋರುವ ಸಹಾನುಭೂತಿಯು ಬೇರೆಯವರಿಗೆ ಇಷ್ಟವಾಗುವುದು. ನಿಮ್ಮ ಸಂಗಾತಿಗೆ ಒತ್ತಡಕ್ಕೆ ಇಂದಿನ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು.

ತುಲಾ ರಾಶಿ : ಇಂದು ನಿಮ್ಮ ದಾಂಪತ್ಯದಲ್ಲಿ ಎಂದಿಗಿಂತ ಹೆಚ್ಚಿನ ಶಾಂತಿ ಇರಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿಸಲು ಎಲ್ಲರ ಪಾತ್ರ ಇರುವುದು. ಉದ್ಯಮ‌ಕ್ಷೇತ್ರದಲ್ಲಿ ಬದಲಾವಣೆಯ ಅವಶ್ಯಕತೆ ಇರಲಿದೆ. ಕಚೇರಿಯಲ್ಲಿ, ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಲು ಆಗದು. ಹೊಸ ಯೋಜನೆಯನ್ನು ಸಣ್ಣ ಅಂತರದಲ್ಲಿ ಕೈ ತಪ್ಪಬಹುದು. ಅಧಿಕ ಖರ್ಚಿನ ಕಾರಣ ಹೆಚ್ಚಿನ ಆದಾಯದ ಕಡೆ ನಿಮಗೆ ಆಸಕ್ತಿ ಬರುವುದು. ನಿಮ್ಮ ಬಗ್ಗೆ ನೀವೇ ಆಡಿಕೊಳ್ಳುವುದು ಸರಿಯಾಗದು. ಎಲ್ಲವನ್ನೂ ಲಘುವಾಗಿ ತೆಗೆದುಕೊಂಡರೆ ಕಷ್ಟವಾಗಬಹುದು. ಹೆಚ್ಚಿನ ಹೂಡಿಕೆಗೆ ಒತ್ತು ನೀಡುವಿರಿ. ಇಂದು ಮಹಿಳೆಯ ಪಾತ್ರ ನಿಮ್ಮ ಜೀವನದಲ್ಲಿ ಪ್ರಮುಖಗಬಹುದು. ಮಕ್ಕಳಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು.

ವೃಶ್ಚಿಕ ರಾಶಿ : ಇಂದು ನಿಮಗೆ ಕುಟುಂಬದ ಹಿರಿಯ ಲ ಸದಸ್ಯರ ಆರೋಗ್ಯವು ಉತ್ತಮವಾಗಿಲ್ಲದ ಕಾರಣ ಇಂದು ನೀವು ಅವರಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುಬುದು. ಸಂಗಾತಿಯ ಜೊತೆಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ವ್ಯಾಪಾರದಲ್ಲಿ ಆರ್ಥಿಕ ವಹಿವಾಟು ಚನ್ನಾಗಿರಲಿದೆ. ದೊಡ್ಡ ಪ್ರಯೋಜನಗಳನ್ನು ಪಡೆಯಲು ಸಣ್ಣ ದಾರಿ ಬೇಡ. ಯಾವುದೋ ಕಾರಣಕ್ಕೆ ದೂರ ಇಟ್ಟವರು ಇಂದು ನಿಮ್ಮ ಬಳಿ ಬರಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಅನ್ಯರಿಂದ ಪ್ರೋತ್ಸಾಹ ಸಿಗುವುದು. ಆಕಾಂಕ್ಷೆಗಳನ್ನು ಪೂರೈಸುವ ಅವರ ಸಾಧನೆಗಳಿಗೆ ಸಾಕ್ಷಿಯಾಗುತ್ತದೆ. ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌ ಭಯದಿಂದ ಕೆಲಸ ಮಾಡಿಸಿಕೊಳ್ಳುವಿರಿ.