Horoscope: ರಾಶಿಭವಿಷ್ಯ; ಈ ರಾಶಿಯವರಿಗೆ ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವುದು
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 30 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್ 30) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಅನೂರಾಧಾ, ಯೋಗ : ಸಿದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:34 ರಿಂದ 11:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:09 ರಿಂದ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:31 ರಿಂದ 08:02
ಸಿಂಹ ರಾಶಿ : ಮನೆಯಲ್ಲಿ ಎಲ್ಲರೂ ಸೇರಿಕೊಂಡು ಬಹಳ ಸಂತೋಷದಿಂದ ದಿನವನ್ನು ಕಳೆಯುವಿರಿ. ನಕಾರಾತ್ಮಕ ಮಾತುಗಳಿದ್ದರೂ ನಿಮ್ಮ ಮನೋಬಲವು ಅದನ್ನು ಕಾಪಾಡುತ್ತದೆ. ಹೊಸಬರಿಗೆ ತಕ್ಕಂತೆ ನೀವು ಬದಲಾಗಿ ವಿರಿ. ನಿಮ್ಮ ಸೌಕರ್ಯಗಳಿಗೆ ನೀವು ಸಂಪೂರ್ಣ ಒತ್ತು ನೀಡುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗಬಹುದು. ನೀವು ಕೆಲಸಕ್ಕೆ ಯೋಗ್ಯವಾದ ಗೌರವವನ್ನೂ ಪಡೆಯಬಹುದು. ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವುದು. ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಸೋಲಿಸಲು ಸಾಧ್ಯವಾಗುತ್ತದೆ. ದೊಡ್ಡ ಮೊತ್ತದ ವ್ಯವಹಾರವನ್ನು ಮಾಡುವಾಗ ಭಯವಿರುವುದು. ನಿಮ್ಮ ಶಾಂತವಾದ ಮನಸ್ಸೇ ಹಲವು ಸಮಸ್ಯೆಗಳನ್ನು ದೂರ ಮಾಡುವುದು. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರೂಪದ ವ್ಯಕ್ತಿಗಳ ಭೇಟಿಯಾಗಲಿದೆ. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಶಗಳನ್ನು ತಂದುಕೊಡುವುದು.
ಕನ್ಯಾ ರಾಶಿ : ಮೋಜಿನ ಕಾರಣದಿಂದ ಹಣವನ್ನು ಕಳೆದುಕೊಳ್ಳುವಿರಿ. ಮನೆಯ ಬಗ್ಗೆ ನಿಮಗೆ ಒಲವು ಕಡಮೆಯಾದೀತು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ನಿಮ್ಮ ಹೆಚ್ಚಿನ ವಿಷಯಗಳ ಮೇಲೆ ನೀವು ಹಿಡಿತ ಸಾಧಿಸಲು ಸಾಧ್ಯವಿದೆ. ಸಂಗಾತಿಯ ಒತ್ತಡದಿಂದ ಕೆಲವು ತೀರ್ಮಾನವನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗುವುದು. ಕೆಲಸದ ವೇಗವು ನಿರೀಕ್ಷೆಯಂತೆ ಇರುತ್ತದೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಪ್ರಗತಿ ಇರುತ್ತದೆ. ನೀವು ಚಿಂತನಶೀಲವಾಗಿ ಕೆಲಸ ಮಾಡಿದರೆ, ಅದು ನಿಮಗೆ ಉತ್ತಮ. ಕಾನೂನಾತ್ಮಕ ವಿಷಯಕ್ಕೆ ಸರಿಯಾದ ಸಲಹೆಯನ್ನು ಪಡೆಯುವಿರಿ. ನೀವು ಸ್ನೇಹಿತನೊಂದಿಗೆ ಯಾವುದೇ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು. ಹಳೆಯ ತಪ್ಪಿನಿಂದ ಪಾಠ ಕಲಿಯಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆಯು ಕಡಿಮೆ ಆಗುವುದು. ಕಳೆದುಹೋದ ವಿಚಾರಕ್ಕೆ ಸಂಗಾತಿಯ ಜೊತೆ ಪುನಃ ಜಗಳವಾಡುವಿರಿ. ಒಬ್ಬರಾದರೂ ಸುಮ್ಮನಿದ್ದರೆ ಕಲಹವು ಶಾಂತವಾಗುವುದು.
ತುಲಾ ರಾಶಿ : ವೃತ್ತಿಯನ್ನೂ ಅಧ್ಯಯನವನ್ನೂ ಮಾಡುವವರಿಗೆ ಗೊಂದಲವಿರುವುದು. ವಿದೇಶಕ್ಕೆ ಹೋಗಲು ಬಯಸುವವರಿಗೆ ಅವಕಾಶಗಳು ಸಿಗಲಿವೆ. ಸಣ್ಣ ವಿಷಯಗಳಿಗೆ ವಿಚಲಿತರಾಗುವುದು ಸೂಕ್ತವಲ್ಲ. ಇದು ನಿಮ್ಮ ದಕ್ಷತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ದೈನಂದಿನ ದಿನಚರಿಯನ್ನು ವ್ಯವಸ್ಥಿತವಾಗಿರಿಸುವುದು ಮುಖ್ಯ. ನಿಮ್ಮ ಮನಸ್ಸನ್ನು ಸಹ ನಿಯಂತ್ರಿಸಿ. ಯಾರಿಗಾದರೂ ದಾನ ಮಾಡುವುದು ನಿಮಗೆ ಇಷ್ಟವಾಗುವುದು. ಎಲ್ಲ ಸನ್ನಿವೇಶಗಳನ್ನು ನಿಭಾಯಿಸಲು ಪ್ರಯತ್ನಿಸಬೇಕಾಗುತ್ತದೆ. ಕುಟುಂಬದ ಸದಸ್ಯರಿಂದ ನೀವು ಆಶ್ಚರ್ಯಕರ ಉಡುಗೊರೆಯನ್ನು ಪಡೆಯಬಹುದು. ಇದರಿಂದ ನಿಮ್ಮ ಮೇಲಿರುವ ಭಾವನೆಯು ಬದಲಾಗುವುದು. ನಿಮಗೆ ನಿರೀಕ್ಷೆಗೆ ತಕ್ಕ ಗೌರವ ಸಿಗದೇ ಬೇಸರವಾಗುವುದು. ಇಂದು ಕೆಲಸಕ್ಕಾಗಿ ಓಡಾಡುವುದು ವ್ಯರ್ಥವೇ ಆಗುವುದು. ನಿಮ್ಮ ಅಧ್ಯಯನವು ಕಡಿಮೆಯಾಗಲಿದೆ. ನಿಮ್ಮ ನಿರ್ಧಾರವನ್ನು ಮತ್ತೊಬ್ಬರಿಗೆ ಹೇರುವುದು ಬೇಡ.
ವೃಶ್ಚಿಕ ರಾಶಿ : ನಿಮ್ಮನ್ನು ದಾರಿತಪ್ಪಿಸುವ ಸಾಧ್ಯತೆ ಇದೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಪಾರದಲ್ಲಿ ಚಟುವಟಿಕೆಗಳನ್ನು ಯೋಜಿಸಿ. ಗೃಹ ಬಳಕೆಯ ವಸ್ತುಗಳನ್ನು ಮಾರಾ ಮಾಡುವವರಿಗೆ ಲಾಭವು ಸಿಗುವುದು. ನಿಮ್ಮ ವೃತ್ತಿಜೀವನದಲ್ಲಿ ಮುಂದುವರಿಯಲು, ನೀವು ಕೆಲವು ವಿಷಯಗಳಲ್ಲಿ ಚಾಣಾಕ್ಷರಾಗಬೇಕು. ಇಂದು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ನ್ಯಾಯಾಲಯದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನೀವು ಯಾವುದೇ ಕೆಲಸವನ್ನು ಕೈಗೊಂಡರೂ, ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ನೀವು ವ್ಯವಹಾರದಲ್ಲಿ ಪಾಲುದಾರರಾಗುವುದು ಉತ್ತಮ, ಇದು ನಿಮ್ಮ ವ್ಯವಹಾರವನ್ನು ಇನ್ನಷ್ಟು ವಿಸ್ತರಿಸುತ್ತದೆ. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ. ಹೊರದೇಶಕ್ಕೆ ನೀವು ಹೋಗಬೇಕಾದ ಸ್ಥಿತಿಯು ಬರಬಹುದು. ನಿಮ್ಮ ಉದ್ಯಮದ ಅಭಿವೃದ್ಧಿಗೆ ತುರ್ತು ಸಭೆಯನ್ನು ಮಾಡಬೇಕಾದೀತು. ಹೊಸ ವಾಹನ ಖರೀದಿಯ ಪ್ರಸ್ತಾಪವನ್ನು ಸದ್ಯ ತಳ್ಳಿಹಾಕುವಿರಿ.




