Horoscope Today May 02 2024: ಗುರುವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

2024 ಮೇ 02 ರ ದಿನ ಭವಿಷ್ಯ: ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಮಂಗಳವಾರದ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today May 02 2024: ಗುರುವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Digi Tech Desk

Updated on:May 28, 2024 | 11:54 AM

ರಾಶಿ ಭವಿಷ್ಯ (Horoscope) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ​​​​​ 02 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶುಕ್ಲ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ02:04 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:11 ರಿಂದ 07:45 ರ ವರೆಗೆ, ಗುಳಿಕ ಕಾಲ 09:20 ರಿಂದ 10:55ರ ವರೆಗೆ

ಮೇಷ ರಾಶಿ : ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ದುಡುಕಿನ ನಿರ್ಧಾರಗಳನ್ನು ತಗೆದುಕೊಂಡು ಸಂಕಟಪಡಬೇಕಾದೀತು. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಗಂಡನಿಗೆ ವಿರುದ್ಧವಾದ ಕೆಲಸವನ್ನು ಮಾಡಿ ಮಾತಿಗೆ ಗುರಿಯಾಗುವಿರಿ. ನಿಮ್ಮನ್ನು ನಿಂದಿಸಲು ಕೆಲವು ಹೊಂಚು ಹಾಕಿದ್ದು ತಿಳಿದು ಅದನ್ನು ಸರಿ ಮಾಡಿಕೊಳ್ಳುವಿರಿ. ಧನಾಭಾವದಿಂದ ಸಾಲವನ್ನು ಮಾಡುವ ಸಾಧ್ಯತೆಯಿದೆ. ವಾಹನ ಖರೀದಿಯ ವಿಚಾರದಲ್ಲಿ ಗೊಂದಲಗಳು ಇರಬಹುದು. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡಸಲಾಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ಆಪ್ತರ ಸಲಹೆಯನ್ನು ಪಡೆಯಿರಿ. ಉದ್ಯೋಗದ ನಿಮಿತ್ತ ಪರದೇಶಕ್ಕೆ ಪ್ರಯಾಣವನ್ನು ಮಾಡಲಿದ್ದೀರಿ.

ವೃಷಭ ರಾಶಿ : ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಜಾಹೀರಾತಿಗೆ ಮನಸೋತು ಹಣವನ್ನು ಕಳೆದುಕೊಳ್ಳಬೇಕಾಗುವುದು. ಅಪರಿಚಿತ ದೂರವಾಣಿಯು ನಿಮ್ಮನ್ನು ದಿಗಿಲುಗೊಳಿಸಬಹುದು. ಸುಳ್ಳಾಡಿ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಒತ್ತಡದಿಂದ ನಿಮಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಕೆಲವರ ಮಾತು ಉತ್ಸಾಹವನ್ನು ಹಾಳು ಮಾಡುವುದು. ನೀವು ಮಾಡುವ ಕೆಲಸವು ಅಶಿಸ್ತಿನಿಂದ ಇರಬಹುದು. ದೂರದ ಬಂಧುಗಳು ನಿಮ್ಮ ಪರಿಚಯವನ್ನು ಮಾಡಿಕೊಂಡಾರು. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

ಮಿಥುನ ರಾಶಿ : ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ತಂದೆಯ ಜೊತೆ ವ್ಯವಹಾರದ ವಿಚಾರಕ್ಕೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ದೈವದ ಸಹಾಯವನ್ನು ನೀವು ಪಡೆಯಬೇಕಾಗಿರುವುದು ಅನಿವಾರ್ಯ. ಆಪ್ತರ ಸಲಹೆಗಳು ನಿಮಗೆ ಅನುಕೂಲಕರವಾಗಿರಲಿವೆ. ಪುಣ್ಯಕ್ಷೇತ್ರಗಳ ಭೇಟಿಯಿಂದ ನಿಮಗೆ ಸಂತಸ ಸಿಗಲಿದೆ‌. ನಿಮ್ಮವರಿಂದಲೇ ವಂಚಿತರಾಗುವಿರಿ. ಆಪ್ತರೆಂದು ನಿಮ್ಮ ಎಲ್ಲ ವಿಚಾರಗಳನ್ನು ಯಾರ ಜೊತೆಯೂ ಹಂಚಿಕೊಳ್ಳಬೇಡಿ. ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ.

ಕಟಕ ರಾಶಿ : ನೀವು ದುಶ್ಚಟದಿಂದ ದೂರವಿರಲು ಮನಸ್ಸು ಮಾಡುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ. ಅಪರಿಚಿತ ವ್ಯಕ್ತಿಗಳ ಸಹವಾಸದಿಂದ ನಿಮಗೆ ವಂಚನೆಯಾಗಬಹುದು. ಕೃಷಿಯಲ್ಲಿ ನೀವು ಮಾಡಿದ ಕೆಲಸವು ಪ್ರಶಂಸೆಗೆ ಒಳಗಾಗುವುದು. ಉತ್ತಮ ಇಳುವರಿಯನ್ನು ಪಡೆಯುವಿರಿ. ವಾಹನದಲ್ಲಿ ಸಂಚಾರ ಮಾಡಿ ಖುಷಿ ಪಡುವಿರಿ. ಬಂಧುಗಳ ಮನೆಯಲ್ಲಿ ಇಂದು ನಿಮ್ಮ ವಾಸವಿರಲಿದೆ. ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ತೋರಿಸದೇ ಇರುವುದರಿಂದ ಬೈಯ್ಯುವಿರಿ. ಆಲಸ್ಯದಿಂದ ಹೊರಬರಬೇಕಾದ ಸ್ಥಿತಿಯು ಇದೆ. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ. ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು. ನಿಮಗಿರುವ ಖಾಯಿಲೆಯು ದೇಹಕ್ಕಿಂತ‌ ಮನಸ್ಸಿಗೇ ತೊಂದರೆ‌ಮಾಡುವುದು.

ಸಿಂಹ ರಾಶಿ : ನೀಬಲವು ಸಾಮಾಜಿಕ ಕಾರ್ಯದಿಂದ ಟೀಕೆಗೆ ಗುರಿಯಾಗುವಿರಿ. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಸ್ಥಿರಾಸ್ತಿಯ ಖರೀದಿಯನ್ನು ಮಾಡುವಿರಿ. ಸಮಾಜಸೇವೆಯಿಂದ ನಿಮಗೆ ಕೀರ್ತಿಯು ಲಭಿಸುವುದು. ಇಷ್ಟು ದಿನ ಕಷ್ಟಪಟ್ಟು ಕಟ್ಟುತ್ತಿದ್ದ ಸಾಲವು ಇಂದಿಗೆ ಮುಕ್ತಾಯವಾಗಿ ನೆಮ್ಮದಿಯನ್ನು ಕಾಣುವಿರಿ. ಅಶಕ್ತರಿಗೆ ಕೈಲಾದುದನ್ನು ಕೊಡುವಿರಿ. ಬಟ್ಟೆ ಉದ್ಯಮ ಕ್ಷೇತ್ರದವರಿಗೆ ಲಾಭವು ಅಧಿಕವಾಗಲಿದೆ. ಆರ್ಥಿಕವಾಗಿ ಇಂದು ಸಬಲರಾಗುವಿರಿ. ವಾತಾವರಣದ ಕಾರಣದಿಂದ ಅನಾರೋಗ್ಯವು ಉಂಟಾಗಬಹುದು. ಜೋಪಾನವಾಗಿ ಇರಿಸಿಕೊಂಡಿರುವ ನಿಮ್ಮ ಅಮೂಲ್ಯವಾದ ವಸ್ತುಗಳು ಕಣ್ಮರೆಯಾಗಿದ್ದು ಇಂದು ತಿಳಿಯಲಿದೆ. ಏಕಾಂತವನ್ನು ಇಷ್ಟಪಡುವವರಿದ್ದೀರಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂದು ಅನ್ನಿಸಿದರೂ ಅದನ್ನು ಪರಿವರ್ತಿಸಲು ಅಸಾಧ್ಯವಾಗುವುದು.

ಕನ್ಯಾ ರಾಶಿ : ನಿಮ್ಮದಲ್ಲದ‌ ವಸ್ತುವನ್ನು ಪಡೆದಾಗ ಜೋಪಾನ‌ ಮಾಡುವುದು ಅವಶ್ಯಕ. ಇಂದು ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಇಂದು ನೀವು ನಿಶ್ಚಿಂತರು. ಅಲಂಕಾರದ ವಸ್ತುಗಳನ್ನು ಇಷ್ಟಪಟ್ಟು ಖರೀದಿಸುವಿರಿ. ಏಕಾಗ್ರತೆಗಾಗಿ ಮಾಡಿದ ಪ್ರಯತ್ನಗಳು ಇಂದು ನಿಮಗೆ ಫಲವನ್ನು ಕೊಡುವುದು. ನಿಮಗೆ ಕುಟುಂಬವು ಬೆಂಬಲವನ್ನು ನೀಡುತ್ತದೆ. ನಿಮ್ಮ ವೃತ್ತಿಯಲ್ಲಿ ಪ್ರಸಿದ್ಧರಾಗುತ್ತೀರಿ. ದುಬಾರಿ ವಸ್ತುವನ್ನು ಖರೀದಿಸಲಿದ್ದೀರಿ. ಭೂಮಿಯ ವ್ಯವಹಾರವನ್ನು ಸದ್ಯಕ್ಕೆ ನಿಲ್ಲಿಸುವುದು ಅಥವಾ ಕೆಲವು ದಿನಗಳ ಅನಂತರ ನಡೆಸುವುದು ಯೋಗ್ಯವಿದೆ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿದ್ದು ಅದು ಸಾಕಾರಗೊಳ್ಳುವುದೋ ಇಲ್ಲವೋ ಎನ್ನುವ ಭಯವು ಕಾಡಲಿದೆ. ಧಾರ್ಮಿಕ‌ ನಂಬಿಕೆಗಳು ಬಲವಾಗುವುದು.

ತುಲಾ ರಾಶಿ : ಇಂದು ಮನಸ್ಸನ್ನು ಕಾರ್ಯದಲ್ಲಿ ನಿಲ್ಲಿಸಲಾಗದು. ನೀವೇ ಆಯ್ಕೆ ಮಾಡಿಕೊಂಡ ಕ್ಷೇತ್ರವು ನಿಮಗೆ ಯಶಸ್ಸನ್ನು ಕೊಡಲಿದೆ. ಶ್ರಮದ ಅವಶ್ಯಕತೆ ಬಹಳ ಇರಲಿದೆ. ಸ್ನೇಹವು ಬಲಗೊಳ್ಳಬಹುದು. ಪ್ರಸಿದ್ಧ ತೀರ್ಥಕ್ಷೇತ್ರಕ್ಕೆ ಹೋಗುವ ನಿಮ್ಮ ಕನಸು ನನಸಾಗಲಿದೆ. ಕುಟುಂಬದಲ್ಲಿ ವಿವಾಹವಾರ್ತೆ ಕೇಳಿಬರಲಿದೆ. ವ್ಯಾಪಾರವು ನಿಮಗೆ ಲಾಭವನ್ನು ತರಿಸುವುದು. ಓಡಾಟವೂ ವ್ಯರ್ಥವಾದೀತು. ಇಂದಿನ ನಿಮ್ಮ ಕೆಲಸವು ಶಿಸ್ತಿನಿಂದ ಇದ್ದರೂ ನಿಮ್ಮ ಜೊತೆಗಾರರು ಅದನ್ನು ಮೂದಲಿಸಲಿದ್ದಾರೆ. ವೈದ್ಯರನ್ನು ಬೇಟಿಯಾಗಿ ನಿಮಗೆ ಆಗುತ್ತಿರುವ ಶಾರೀರಿಕ ಸಮಸ್ಯೆಗಳನ್ನು ಅವರಲ್ಲಿ ಹೇಳಿಕೊಳ್ಳಿ. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆಯನ್ನು ಮಾಡಿದ್ದಿರಿ. ಅದಕ್ಕೆ ಇಂದು ಪಶ್ಚಾತ್ತಾಪವನ್ನು ಅನುಭವಿಸುವಿರಿ. ಇನ್ನೊಬ್ಬರ ನೋವಿಗೆ ಸ್ಪಂದನೆ ಇರಲಿ. ದೂರದ ಪ್ರಯಾಣವನ್ನು ಮಾಡುವ ನಿರ್ಧಾರವನ್ನು ಕೈ ಬಿಡುವಿರಿ.

ವೃಶ್ಚಿಕ ರಾಶಿ : ನಿಮ್ಮ ಬಳಿ ಇರುವ ಸಂಸತ್ತನ್ನು ಸಹಾಯಕ್ಕಾಗಿ ನೀಡಬಹುದು. ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ನಿಮ್ಮ ನಾಯಕತ್ವವು ಎಲ್ಲರಿಗೂ ತಿಳಿಯುವುದು. ಅಧಿಕಾರಿಗಳಿಂದ ಮೆಚ್ಚುಗೆಯು ಸಿಗಲಿದೆ. ನೂತನ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಮುಂದಿನ ದಿನಕ್ಕೆ ಲಾಭವೂ ಆಗಲಿದೆ. ಕುಟುಂಬದ ಕೀರ್ತಿಯನ್ನು ಬೆಳೆಸುವವರಿದ್ದೀರಿ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಬಿದ್ದು ಗಾಯ ಮಾಡಿಕೊಳ್ಳುವ ಸಂಭವವಿದೆ. ಅನಿರೀಕ್ಷಿತ ಧನವ್ಯಯವು ಆಗಬಹುದು. ವಿದ್ಯಾರ್ಥಿಗಳು ನಿಮ್ಮ ಮುಂದಿನ ವಿಷಯಗಳ ಕುರಿತು ಚರ್ವೆಗಳನ್ನು ಮಾಡಿ ಮುಂದುವರಿಯಿರಿ. ದಾಂಪತ್ಯದಲ್ಲಿ ಉಂಟಾದ ಕಲಹವು ಮಕ್ಕಳ‌ ಮೇಲೆ ಪ್ರಭಾವವನ್ನು ಬೀರಲಿದೆ. ಉದ್ಯೋಗಸ್ಥಾನದಲ್ಲಿ ಕೆಲವು ಮಾತುಗಳು ನಿಮಗೆ ಹಿಡಿಸದು.

ಧನು ರಾಶಿ : ನೀವು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಣವನ್ನು ಕೊಡಬೇಕಾಗಿ ಬರಬಹುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ಮನೆಯ ರಿಪೇರಿ ಮಾಡಿಸಲಿದ್ದೀರಿ. ಒಳ್ಳೆಯ ಕೆಲಸವನ್ನು ಮಾಡುವ ಚಿಂತನೆಯನ್ನು ಮಾಡುವಿರಿ. ಎಲ್ಲವೂ ಕ್ಷಣದಲ್ಲಿ ಆಗಬೇಕು ಎನ್ನುವ ಉದ್ವೇಗವವನ್ನು ಬಿಟ್ಟು ಬಿಡಿ. ಭವಿಷ್ಯಕ್ಕೋಸ್ಕರ ಹಣವನ್ನು ಕೂಡಿಡುವ ಯೋಚನೆಯನ್ನು ಮಾಡುವಿರಿ. ಸಮಾಜದಲ್ಲಿ ನಿಮ್ಮ ಹೆಸರು ಕೇಳಿಬರಲಿದೆ. ಅನಾರೋಗ್ಯದಿಂದ ಕಂಗೆಡಬಹುದು. ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಹವಣಿಸುವಿರಿ. ಕಛೇರಿಯ ಆಪ್ತತೆಯು ಮುಳುವಾಗಬಹುದು. ನಿಮಗೆ ಬೆಲೆ ಕೊಡದೇ ಇರುವುದು ನಿಮಗೆ ಬೇಸರವಾಗುವುದು. ಖುಷಿಪಡುವ ಸಂಗತಿಗಳಿದ್ದರೂ ದುಃಖಿಗಳಾಗುವ ಸಾದ್ಯತೆ ಇದೆ. ಶತ್ರುಗಳು ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬರಬಹುದು.

ಮಕರ ರಾಶಿ : ಇಂದು ಸಹೋದರರ ಜೊತೆ ಪ್ರೀತಿಯಿಂದ ಇರುವಿರಿ. ಬದಲಾಗಬೇಕು ಎನ್ನುವ ಹಂಬಲವು ನಿಮ್ಮಲ್ಲಿ ಅತಿಯಾಗಿರಬಹುದು. ಸರಿಯಾದ ಬದಲಾವಣೆಯನ್ನು ಹೊಂದಿರಿ. ಉದ್ಯೋಗದಲ್ಲಿ ನಷ್ಟವಾಗಬಹುದು ಅಥವಾ ಉದ್ಯೋಗವು ನಷ್ಟವಾಗುವ ಭೀತಿಯೂ ಇರಲಿದೆ. ನೌಕರರ ಅಲಕ್ಷ್ಯದಿಂದ ನಿಮ್ಮ ಉದ್ಯಮದಲ್ಲಿ ನಷ್ಟವಾಗಬಹುದು. ಮನಸ್ಸನ್ನು ಏಕಾಗ್ರಗೊಳಿಸಲು ಬೇಕಾದ ಧ್ಯಾನ, ಯೋಗವನ್ನು ಮಾಡಿ. ವಿದ್ಯಾಭ್ಯಾಸದ ಕುರಿತು ಮಕ್ಕಳಿಗೆ ಪಾಠವನ್ನು ಮನೆಯಲ್ಲಿ ಮಾಡುವರು. ತಂದೆ ಮತ್ತು ಮಕ್ಕಳಲ್ಲಿ ಸ್ವಲ್ಪಮಟ್ಟಿಗೆ ಕಲಹವಿರುವುದು. ಇಂದಿನ ನಿಮ್ಮ ಕೆಲಸಗಳು ಆಯಾಸವನ್ನು ತರಿಸುವುದು. ಕಲಾವಿದರು ಅವಕಾಶಗಳನ್ನು ಸೃಷ್ಟಿಕೊಳ್ಳಲಿದ್ದಾರೆ. ಗೃಹನಿರ್ಮಾಣದ ಪ್ರಸ್ತಾಪವು ಇರಲಿದೆ. ವಾಹನವನ್ನು ನಿಧಾನವಾಗಿ ಚಲಾಯಿಸಿ. ಬೇರೆಯವರ ತಪ್ಪಿನಿಂದ ನಿಮಗೆ ತೊಂದರೆಗಳು ಆಗಬಹುದು. ಸಾಲ ಹೊರೆಯ ಸ್ವಲ್ಪ ಕಡಿಮೆ ಆಗುವುದು.

ಕುಂಭ ರಾಶಿ : ನಿಮ್ಮ ಏಳ್ಗೆಯನ್ನು ಕಂಡು ನಿಮ್ಮವರೇ ಸಂಕಟ ಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದೂರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ರಾಜಕೀಯ ನಾಯಕರ ಭೇಟಿಯಾಗಿ, ನಿಮಗೊಂದು ಮಾರ್ಗವು ಸಿಗಲಿದೆ. ಅಚ್ಚರಿಯ ಕೆಲವು ಸಂಗತಿಗಳು ನಿಮಗೆ ಕಾದಿರಬಹುದು. ಅಪರಿಚಿತರ ಭೇಟಿಯಿಂದ ಸ್ವಲ್ಪ ಹಿಂದುಳಿಯಿರಿ. ನಿಮ್ಮ ಕೆಲಸಗಳು ಅಚ್ಚುಕಟ್ಟಾಗಿ ಇದ್ದು ಪ್ರಂಶಸೆಯೂ ಸಿಗಬಹುದು. ನಿಯಮಗಳನ್ನು ಮುರಿಯಬೇಕು ಎನ್ನುವ ಮನಃಸ್ಥಿತಿಯು ಇರಲಿದೆ. ದಾಂಪತ್ಯದಲ್ಲಿ ಸಣ್ಣ ಕಿರಿಯಾಗಬಹುದು. ನಿಮ್ಮ ಹಳೆಯ ಪ್ರೇಮಪುರಾಣವು ಮತ್ತೆ ಹೊರಬರಬಹುದು. ಯಾರನ್ನೂ ನಿರ್ಲಕ್ಷ್ಯದಿಂದ ನೋಡುವುದು ಬೇಡ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ಪಿತ್ತಕ್ಕೆ ಸಂಬಂಧಿಸಿದ ಖಾಯಿಲೆಗಳು ಬರಬಹುದು. ವ್ಯಾಪರದಲ್ಲಿ ಸ್ವಲ್ಪ ನಷ್ಟವನ್ನು ಕಾಣುವಿರಿ. ಕೃಷಿಕರು ತಮ್ಮ ಮುಂದಿನ ಯೋಚನೆಗಳನ್ನು ಮಾಡುವರು.

ಮೀನ ರಾಶಿ : ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವದಿಂದ ಕಾಣುವುದು ಬೇಡ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದನ್ನು ಸಾಕಾರ ಮಾಡಿಕೊಳ್ಳುವಿರಿ. ಬಂಧುಗಳ ವಿಯೋಗವಾರ್ತೆಯು ಬರಬಹುದು. ನೀವಂದು ಅಶಕ್ತರಿಗೆ ಸಹಾಯ ಮಾಡುವಿರಿ. ಅವರ ದೃಷ್ಟಿಯಲ್ಲಿ ನೀವೇ ದೇವರಾಗುವಿರಿ.ಆಲಸ್ಯದಿಂದ ಬಂದಿರುವ ಅವಕಾಶವನ್ನು ಕೈಚೆಲ್ಲಿ ಕುಳಿತುಕೊಳ್ಳಬೇಡಿ. ನಿಮ್ಮ ನಿರ್ಧಾರಕ್ಕೆ ಹಿಂದಿನ ಅನುಭವಗಳೇ ನಿಮಗೆ ಸಹಾಯವಾಗಲಿವೆ. ಇರುವವರನ್ನು ಬಿಟ್ಟು ಇನ್ನೊಬ್ಬರ ನಂಬಿ ಮೋಸಹೋಗಬೇಡಿ. ಆಪ್ತರ ಸಹಕಾರವು ಸಿಗಲಿದೆ. ದಾಯಾದಿ ಕಲಹವು ನ್ಯಾಯಾಲಯದ ವರಗೂ ಹೋಗಬಹುದು. ಪುಣ್ಯಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ. ಅಪರಿಚಿತಸ್ಥಳವು ಆಪ್ತವೂ ಆಗಲಿದೆ. ಮನೆಯಿಂದ ದೂರದಲ್ಲಿ ಇರುವವರಿಗೆ ಮನೆಯ ಹಂಬಲವಾಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

Published On - 8:13 pm, Wed, 1 May 24