Horoscope: ರಾಶಿಭವಿಷ್ಯ; ಈ ರಾಶಿಯ ವ್ಯಾಪಾರಿಗಳಿಗೆ ಇಂದು ದೊಡ್ಡ ವ್ಯವಹಾರ ವಹಿವಾಟು ಸಿಗಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 21ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಈ ರಾಶಿಯ ವ್ಯಾಪಾರಿಗಳಿಗೆ ಇಂದು ದೊಡ್ಡ ವ್ಯವಹಾರ ವಹಿವಾಟು ಸಿಗಲಿದೆ
ರಾಶಿಭವಿಷ್ಯ
Image Credit source: freepik

Updated on: Mar 21, 2024 | 6:43 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 21) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಗುರು, ತಿಥಿ :ದ್ಚಾದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಸುಕರ್ಮ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:10 ರಿಂದ ಸಂಜೆ 03:41ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:37 ರಿಂದ 08:08ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:38 ರಿಂದ 11:09 ರ ವರೆಗೆ.

ಧನು ರಾಶಿ : ಸ್ವಾರ್ಥದ ಕಾರಣದಿಂದ ನೀವು ಜನರನ್ನು ಕಳೆದುಕೊಳ್ಳುವಿರಿ. ದುಷ್ಟರ ಸಹವಾಸವು ನಿಮ್ಮನ್ನು ಬದಲಾವಣೆ ಮಾಡುವುದು. ಸಂಸಾರದ ಸುಖವು ನಿಮ್ಮ ಎಲ್ಲ ನೋವನ್ನೂ ನಾಶ ಮಾಡುವುದು. ಇಂದು ನೀವು ಸಕ್ರಿಯರಾಗಿ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಉದ್ಯೋಗಿಗಳಿಗೆ ಇದು ಶುಭ ದಿನವಾಗಿರುತ್ತದೆ. ನೀವು ದೀರ್ಘಕಾಲ ಆಶಿಸುತ್ತಿದ್ದ ಬಡ್ತಿಯು ನಿಮ್ಮ ಹಾದಿಗೆ ಬರಬಹುದು. ವ್ಯಾಪಾರಿಗಳಿಗೆ ಅಧಿಕ ಲಾಭವನ್ನು ಪಡೆಯಬಹುದು. ಹೇಗಾದರೂ, ಇಂದು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಂಗಾತಿಯ ಕಡೆಯನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಯಾರದೋ ಕಾರಣಕ್ಕೆ ನೀವು ಓಡಾಟ ಮಾಡಬೇಕಾಗುವುದು. ಅಂದುಕೊಂಡ ಕೆಲಸವನ್ನು ಪೂರೈಸಲು ನಿಮಗೆ ಸಮಸ್ಯೆಯು ಬರಬಹುದು. ಸ್ವಲ್ಪ ನಿಮ್ಮ ಧೈರ್ಯವು ಕುಂದಬಹುದು. ಸ್ವಂತ ಉದ್ಯಮದ ಕಾರಣಕ್ಕೆ ಹೊರಗೆ ಹೋಗಬೇಕಾಗುವುದು. ಸುಮ್ಮನೆ ಆಗದ ಕೆಲಸಕ್ಕೆ ಕೈಸುಟ್ಟುಕೊಳ್ಳುವಿರಿ.

ಮಕರ ರಾಶಿ : ಅನೇಕ ಒತ್ತಡಗಳಿಂದ ನಿಮ್ಮ ಉದ್ಯಮವನ್ನು ಬದಲಿಸಿಕೊಳ್ಳುವಿರಿ. ಸಂಗಾತಿಯ ನಡುವಿ ಭಿನ್ನಾಭಿಪ್ರಾಯಕ್ಕೆ ಸರಿಯಾದ ಕಾರಣವೇ ಇರದು. ನೀವು ಕೆಲವು ಸಂದರ್ಭದಲ್ಲಿ ಇಂದು ಎಡವುವ ಸಾಧನೆ ಇದೆ. ವಿಶೇಷವಾಗಿ ವ್ಯಾಪಾರಸ್ಥರು ಇಂದು ತಮ್ಮ ಸಂಪರ್ಕಗಳನ್ನು ಹೆಚ್ಚಿಸಲು ಅವಕಾಶವನ್ನು ಪಡೆಯಬಹುದು. ಕೆಲಸದಲ್ಲಿ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯಲ್ಲಿ ಹಬ್ಬದ ವಾತಾವರಣವು ಇರಲಿದೆ. ಇಂದು ನಿಮಗೆ ಕೇಳುವ ಪ್ರಶ್ನೆಗಳಿಗೆ ಉತ್ತರವನ್ನು ಕೊಡಲಾರಿರಿ. ಧನವು ನಷ್ಟವಾದ ವಿಚಾರಗಳನ್ನು ಯಾರ ಬಳಿಯೂ ಹೇಳಲಾರಿರಿ. ತಂದೆಯ ಜೊತೆ ವಾಗ್ವಾದ ಮಾಡಿಕೊಳ್ಳುವಿರಿ. ವ್ಯವಹಾರದಲ್ಲಿ ಪಾರದರ್ಶಕತೆಯನ್ನು ತೋರಿಸಬೇಕಾಗುವುದು. ಪರೀಕ್ಷೆಯ ಆತಂಕವು ನಿಮ್ಮನ್ನು ಕಾಡುವುದು.

ಕುಂಭ ರಾಶಿ :ಯಾವ ವ್ಯಾಪಾರದ ವಿಚಾರಕ್ಕೂ ಪ್ರಾಮಾಣಿಕತೆ ಇರಲಿ. ಅದೇ ನಿಮ್ಮನ್ನು ಕಾಪಾಡಬಹುದು. ಬಂಧುಗಳು ಮನೆಗೆ ಕುಟುಂಬ ಸಮೇತರಾಗಿ ಭೇಟಿ ನೀಡಬಹುದು. ಪರೀಕ್ಷೆಯನ್ನು ಏಕಾಗ್ರತೆಯಿಂದ ಎದುರಿಸಿ ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ. ಇಂದು ನೀವು ತುಂಬಾ ಭಾವನಾತ್ಮಕತೆಯನ್ನು ಅನುಭವಿಸುವಿರಿ. ಸಣ್ಣ ವಿಷಯವೂ ನೋಯಿಸಬಹುದು. ನೀವು ತುಂಬಾ ಅಸಮಾಧಾನಗೊಂಡಿದ್ದರೂ ಕೆಲವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಇಂದಿನ ದುಡಿಮೆಯು ಕಷ್ಟವೆನಿಸಬಹುದು. ನೋವಿಗೆ ಸ್ಪಂದಿಸುವ ಸ್ವಭಾವವು ನಿಮಗೆ ಇಷ್ಟವಾಗುವುದು. ಬಂಧುಗಳ ಮಾತು ನಿಮಗೆ ಕಿರಿಕಿರಿ ತರಿಸಬಹುದು. ನಿಮ್ಮ ಸೌಂದರ್ಯಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ. ಕುಟುಂಬದ ಜವಾಬ್ದಾರಿಯು ನಿಮಗೆ ಸಿಗಬಹುದು. ಚಂಚಲವಾದ ಮನಸ್ಸನ್ನು ನಿಶ್ಚಲಗೊಳಿಸಲು ಪ್ರಯತ್ನಿಸುವಿರಿ.

ಮೀನ ರಾಶಿ : ಇಂದು ನಿಮಗೆ ನ್ಯಾಯಾಲಯದ ವಿಚಾರಕ್ಕೆ ಬಂಧುಗಳ ಬೆಂಬಲವು ಇರುವುದು. ಸಹಾಯ ಮಾಡುವ ಸ್ಥಿತಿಯು ನಿಮಗೆ ಇರಲಿದೆ. ಸಂಸ್ಥೆಯ ಮುಖ್ಯಸ್ಥರಾಗಿ ಅಧಿಕಾರದ ಚುಕ್ಕಾಣಿ ಹಿಡಿಯುವಿರಿ. ಇಂದು ನಿಮ್ಮ ಮನಃಸ್ಥಿತಿ ಚೆನ್ನಾಗಿರುತ್ತದೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ಇಂದಿನ ಪ್ರಮುಖ ಕೆಲಸವನ್ನು ನಾಳೆ ಮುಂದೂಡುವುದು ನಿಮಗೆ ಸರಿಹೊಂದದು. ವ್ಯಾಪಾರಿಯಾಗಿದ್ದರೆ ಇಂದು ನೀವು ದೊಡ್ಡ ವ್ಯವಹಾರ ವಹಿವಾಟು ಸಿಗಲಿದೆ. ಪ್ರೀತಿಪಾತ್ರರ ಜೊತೆ ಸಂಬಂಧ ಉತ್ತಮವಾಗಿರುತ್ತದೆ. ಇಂದು ಕುಟುಂಬ ಸದಸ್ಯರ ಜೊತೆ ಹೆಚ್ಚು ಸಮಯ ಕಳೆಯಬಹುದು. ಆಕಸ್ಮಿಕ ಧನಪ್ರಾಪ್ತಿಯಿಂದ ಸಂತೋಷವು ಇರುವುದು. ಯಾವುದಾದರೂ ಉಪಕರಣದಿಂದ ನಿಮಗೆ ಲಾಭವಾಗಬಹುದು. ಉದ್ಯೋಗದ ಸ್ಥಳದಲ್ಲಿ ಒತ್ತಡ ಅನಿರೀಕ್ಷಿತವಾಗಿ ಹೆಚ್ಚುವುದು. ಗೊಂದಲದ ತೀರ್ಮಾನವು ಬೇಡ. ನಿಮ್ಮ ಏಕಾಂತದ ವಿಚಾರವು ಬಹಿರಂಗವಾಗಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ