AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯಭವಿಷ್ಯ; ಈ ರಾಶಿಯವರು ಇಂದು ಪ್ರೇಮದ ವಿಚಾರದಲ್ಲಿ ಜಾಗರೂಕರಾಗಿರಿ, ಅನಂತರ ದುಃಖಪಡಬೇಕಾಗುವುದು

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 25 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ನಿತ್ಯಭವಿಷ್ಯ; ಈ ರಾಶಿಯವರು ಇಂದು ಪ್ರೇಮದ ವಿಚಾರದಲ್ಲಿ ಜಾಗರೂಕರಾಗಿರಿ, ಅನಂತರ ದುಃಖಪಡಬೇಕಾಗುವುದು
ರಾಶಿಭವಿಷ್ಯImage Credit source: freepik
Rakesh Nayak Manchi
|

Updated on: Mar 25, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 25) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ :ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ವೃದ್ಧಿ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:05 ರಿಂದ 09:36ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:07 ರಿಂದ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ02:10 ರಿಂದ 03:41 ರ ವರೆಗೆ.

​ಧನು ರಾಶಿ : ಇನ್ನೊಬ್ಬರನ್ನು ನೋಡಿ ನೀವು ಸಂಕಟಪಟ್ಟುಕೊಳ್ಳುವಿರಿ. ನಿಮ್ಮನ್ನು ಯಾರಾದರೂ ನಿಂದಿಸಲೂಬಹುದು. ಸ್ತ್ರೀಯರ ವಿಚಾರದಲ್ಲಿ ನೀವು ಸಿಟ್ಟಾಗುವ ಸಾಧ್ಯತೆ ಇದೆ. ಹೊಸ ವಸ್ತುಗಳ ಖರೀದಯ ಬಗ್ಗೆ ನಿಮಗೆ ಆಸಕ್ತಿ ಹೆಚ್ಚಿರುವುದು. ಹೊಸ ಉದ್ಯಮಿಗಳು ಪ್ರಯೋಜನ ಪಡೆಯಲಿದ್ದಾರೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ನಾಯಕತ್ವದಲ್ಲಿ ನಡೆಯುತ್ತಿರುವ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ನಿಮ್ಮ ಪಾಲಿನ ಕೆಲಸ ಕಾರ್ಯಗಳಲ್ಲಿ ಚುರುಕುತನ ಕಂಡುಬಂದು ಮುನ್ನಡೆ ಸಾಧಿಸಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಲಾಭದಾಯಕ ವಾತಾವರಣ ಕಂಡುಬರಲಿದೆ. ನಿಮ್ಮ ಖರೀದಿಯಲ್ಲಿ ಸಮಯವನ್ನು ಕಳೆಯುವಿರಿ. ಲೌಕಿಕ ಆನಂದದ ವಿಧಾನಗಳು ಹೆಚ್ಚಾಗುತ್ತವೆ. ಹೇಳಿಕೊಂಡಷ್ಟು ಸುಲಭವಾಗಿ ಯಾವ ಕಾರ್ಯವನ್ನೂ ನಿರ್ವಹಿಸಲಾಗದು.

​ಮಕರ ರಾಶಿ : ನೀವು ಇಂದು ಪ್ರೇಮದ ವಿಚಾರದಲ್ಲಿ ಜಾಗರೂಕರಾಗಬೇಕು. ಅನಂತರ ದುಃಖಪಡಬೇಕಾಗುವುದು. ಎಲ್ಲರಿಂದ ದೂರವಾಗುವ ಆಲೋಚನೆ ಬೇಡ. ನಿಮ್ಮ ಗುಪ್ತ ವಿಚಾರಗಳನ್ನು ಯಾರಾದರೂ ಆಡಿಕೊಂಡಾರು. ಆರ್ಥಿಕ ಪರಿಸ್ಥಿತಿ ಬಲಗೊಳಿಸುವತ್ತ ನಿಮ್ಮ ಶ್ರಮವಿರುತ್ತದೆ. ಸ್ಪರ್ಧೆಯಲ್ಲಿ ಮಗುವಿನ ಯಶಸ್ಸಿನ ಸುದ್ದಿಯನ್ನು ಪಡೆಯುವುದು ಸಂತಸಗೊಳ್ಳುವಿರಿ. ವ್ಯಾಪಾರದಲ್ಲಿನ ಹೊಸ ಒಪ್ಪಂದಗಳು ಲಾಭದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತವೆ. ಅಮೂಲ್ಯವಾದದ್ದನ್ನು ಕಳೆದುಕೊಳ್ಳುವಿರಿ. ಕೌಟುಂಬಿಕ ವಿಚಾರಗಳಲ್ಲಿ ಒತ್ತಡಗಳು ದೂರವಾಗಿ ನೆಮ್ಮದಿ ಕಂಡುಬರಲಿದೆ. ಉದ್ಯೋಗ, ವ್ಯವಹಾರಗಳಲ್ಲಿ ಏರುಗತಿಯನ್ನು ಕಂಡು ಸಮಾಧಾನವಾಗಲಿದೆ. ನಕಾರಾತ್ಮಕ ವಿಚಾರಗಳ ಗಮನ ಕೊಟ್ಟು ನಿಮ್ಮ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಉದ್ಯೋಗಿಗಳು ಕ್ಷೇತ್ರದಲ್ಲಿ ಬಡ್ತಿ ಸುದ್ದಿಗಳನ್ನು ಕೇಳಬಹುದು. ಆದ್ದರಿಂದ ವ್ಯಾಪಾರಿಗಳು ಸಹ ಲಾಭ ಪಡೆಯಬಹುದು.

​ಕುಂಭ ರಾಶಿ : ಇಂದು ಕಾರ್ಯದಲ್ಲಿ ಆದ ಹಿನ್ನಡೆಯು ನಿಮ್ಮ ಮನಸ್ಸಿನ ಮೇಲೆ ಅಗಾಧವಾದ ಪರಿಣಾಮವನ್ನು ಬೀರಬಹುದು‌. ಹೊಸ ವ್ಯವಹಾರವನ್ನು ಕುದುರಿಸಲು ನೀವು ಸಮರ್ಥರಾಗುವಿರಿ. ರಾಜಕೀಯದಲ್ಲಿ ನಿಮ್ಮ ಪ್ರಯತ್ನಗಳು ಯಶಸ್ವಿಯಾಗಲಿದ್ದು, ಸಾರ್ವಜನಿಕ ಸಂಪರ್ಕಕ್ಕೂ ಅನುಕೂಲವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅರ್ಹತೆಯನ್ನು ಹೆಚ್ಚಿಸುವಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಅತಿಯಾದ ಪ್ರಯಾಣವನ್ನು ನೀವು ನಿಲ್ಲಿಸುವುದು ಉತ್ತಮ. ಇಲ್ಲವಾದರೆ ಅದರ ಪರಿಣಾಮವನ್ನು ಅನುಭವಿಸಬೇಕಾಗುವುದು. ಕೆಲವು ಅಹಿತಕರ ಜನರನ್ನು ಭೇಟಿಯಾಗುವುದರಿಂದ ಅನಗತ್ಯ ತೊಂದರೆಗಳನ್ನು ಎದುರಿಸಬೇಕಾಗಬಹುದು. ಉದ್ಯೋಗ, ವ್ಯಾಪಾರ, ವ್ಯವಹಾರಗಳಲ್ಲಿ ಉಲ್ಲಾಸಕರ ವಾತಾವರಣ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ನೆಮ್ಮದಿ ತರಲಿದೆ. ಆರೋಗ್ಯದ ಬಗ್ಗೆ ಚಿಂತೆ ಕಡಿಮೆಯಾಗಲಿದೆ. ಆಸ್ತಿಯ ವಿಚಾರದಲ್ಲಿ ಅಧಿಕ ಲಾಭ ಸಿಗಲಿದೆ. ಇಂದು ನಿಮಗೆ ಕೆಲವು ತೊಂದರೆಗಳಾಗುವ ಸಾಧ್ಯತೆಯಿದೆ.

​ಮೀನ ರಾಶಿ : ಇಂದು ನಿಮ್ಮ ಮಂದಗತಿಯ ವ್ಯಾಪಾರದಲ್ಲಿ ವೇಗವಿರುವುದು. ಸಂಗಾತಿಯಿಂದ ಆದ ಬೇಸರವನ್ನು ಹೆಚ್ಚು ಕಾಲ ಉಳಿಸಿಕೊಳ್ಳುವುದು ಬೇಡ. ನಿಮ್ಮನ್ನು ಯಾವುದಾದರೂ ಶಕ್ತಿಯು ನಿಮ್ಮನ್ನು ನಿಯಂತ್ರಿಸಿದಂತೆ ಅನ್ನಿಸಬಹುದು. ಸಾಮಾಜಿಕ ಖ್ಯಾತಿಯನ್ನು ಶತ್ರು ಹಾನಿ ಮಾಡಬಹುದು. ಕುಟುಂಬ ಜೀವನವು ಒತ್ತಡವನ್ನುಂಟು ಮಾಡುತ್ತದೆ. ಆದರೆ ಪ್ರೀತಿಪಾತ್ರರ ಜೊತೆ ಸಮಯ ಕಳೆಯಲಾಗುತ್ತದೆ. ಸಂಗಾತಿಯ ಬೆಂಬಲ ಮತ್ತು ಒಡನಾಟವನ್ನು ಪಡೆಯುವಿರಿ. ನೀವು ಯಾವುದೇ ನಿರ್ಧಾರಕ್ಕೆ ಕಟ್ಟುಬೀಳದೇ ಸ್ವತಂತ್ರವಾಗಿ ಇರಲು ಬಯಸುವಿರಿ. ಸ್ವಂತ ವ್ಯಾಪಾರ, ವ್ಯವಹಾರ ಹಾಗೂ ಕೌಟುಂಬಿಕ ವಿಚಾರಗಳಲಿದ್ದ ಒತ್ತಡಗಳು ನಿವಾರಣೆಯಾಗಲಿವೆ. ಶುಭ ಕಾರ್ಯದ ನಿರ್ಧಾರವು ಪ್ರಯತ್ನ ಬಲದಿಂದ ಫಲ ನೀಡಲಿದೆ. ಇಂದು ನಿಮ್ಮ ವೈವಾಹಿಕ ಜೀವನವು ಸಂತೋಷಕರವಾಗಿರುತ್ತದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ