Horoscope: ರಾಶಿಭವಿಷ್ಯ, ಹೂಡಿಕೆಯ ಮುಖಾಂತರ ಆರ್ಥಿಕ ಸಬಲತೆ, ಖರ್ಚು ಮಾಡುವ ಅನಿವಾರ್ಯತೆ ಬರಬಹುದು
ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಡಿಸೆಂಬರ್ 01) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಡಿಸೆಂಬರ್ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣರಾಜ, ವಾರ: ಶುಕ್ರ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:57 ರಿಂದ 12:22 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:11 ಗಂಟೆ 04:36 ನಿಮಿಷಕ್ಕೆ, ಗುಳಿಕ ಕಾಲ ಬೆಳಗ್ಗೆ 08:07 ರಿಂದ 09:32ರ ವರೆಗೆ.
ಮೇಷ ರಾಶಿ: ಶತ್ರುಗಳ ದಾರುಣ ಸ್ಥಿತಿಯನ್ನು ಕೇಳಿ ಒಳಗೇ ಸಂತಸಪಡುವಿರಿ. ಸ್ವಾಲಂಬಿಯಾಗುವ ಕಡೆಗೆ ಗಮನವು ಹೆಚ್ಚಿರುವುದು. ಹಿರಿಯರ ಆರೋಗ್ಯದ ಬಗ್ಗೆ ಸಮಸ್ಯೆಗಾಗಿ ಹೆಚ್ಚು ಓಡಾಟವನ್ನು ಮಾಡಬೇಕಾದೀತು. ಜಾಣ್ಮೆಯ ವ್ಯವಹಾರದಿಂದ ಇಂದು ವ್ಯಾಪಾರದಲ್ಲಿ ಲಾಭ ಪಡೆಯುವಿರಿ. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ದುರ್ವ್ಯಸನವು ನಿಮ್ಮನ್ನು ಅಂಟಿಕೊಳ್ಳಬಹುದು. ಬಹಳಷ್ಟು ಕಾರ್ಯಗಳಿದ್ದರೂ ಎಲ್ಲವನ್ನೂ ಬಿಟ್ಟು ಆರಾಮಾಗಿ ಇರುವಿರಿ. ಕಳೆದ ಸಮಯವನ್ನು ನೀವು ಮೆಲುಕು ಹಾಕಿಕೊಂಡು ಸಂತೋಷಪಡುವಿರಿ. ನೀವು ತೆಗೆದುಕೊಳ್ಳುವ ನಿರ್ಧಾರವು ಸ್ಪಷ್ಟವಾಗಿ ಇರಲಿದೆ. ಸಮಯಸ್ಫೂರ್ತಿಯಿಂದ ಕೆಲಸವನ್ನು ಮಾಡುವಿರಿ. ಬೇಕಾದಷ್ಟನ್ನೇ ಮಾತನಾಡಿ. ಸಂಪತ್ತಿನ ಬಗ್ಗೆ ತಾತ್ಸಾರಭಾವವು ಬೇಡ. ಇಂದಿನ ಲೆಕ್ಕಾಚಾರದಿಂದ ಧನವ್ಯಯದ ಮಾಹಿತಿಯು ಸಿಗುವುದು. ಆತ್ಮಗೌರವಕ್ಕೆ ಚ್ಯುತಿ ಬರಬಹುದು.
ವೃಷಭ ರಾಶಿ: ಒಂದೇ ವಿಷಯಕ್ಕೆ ಹತ್ತಾರು ಯೋಚಿಸಿ ಕಾರ್ಯವನ್ನು ಮಾಡುವಿರಿ. ಮಕ್ಕಳ ಆರೋಗ್ಯವು ಹದ ತಪ್ಪಬಹುದು. ಉಸಿರಾಟದ ತೊಂದರೆಯು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ಇಂದು ಕುಟುಂಬದವರ ಮಾತುಗಳು ನಿಮ್ಮ ಮನಸ್ಸಿಗೆ ನಾಟಬಹುದು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ. ಪೂರ್ವಪುಣ್ಯವು ನಿಮ್ಮನ್ನು ಕಾಪಾಡಲಿದೆ. ಕೆಲವು ಅಪರಿಪೂರ್ಣವಾದ ಕಾರ್ಯವನ್ನು ಮಾಡಿ ಮುಗಿಸುವಿರಿ. ನಿಮ್ಮನ್ನು ಅಪಹಾಸ್ಯ ಮಾಡಲಿದ್ದು ನಿಮಗೆ ಕೋಪ ಬರುವುದು. ಕೋಪವನ್ನು ಕೋಪದಿಂದಲೇ ತೆಗೆಯಲು ಪ್ರಯತ್ನಿಸುವಿರಿ. ಏನಾದರೂ ನೆಪ ಹೇಳಿ ಇಂದಿನ ಪ್ರಯಾಣವನ್ನು ಮಾಡಲಾರಿರಿ. ಅಸಾಧ್ಯವನ್ನು ನೀವು ಸಾಧಿಸಲು ಅಧಿಕಶ್ರಮವನ್ನು ಹಾಕಬೇಕಾದೀತು. ಉಪಕಾರದ ಸ್ಮರಣೆಯು ನೆನಪಿರದು.
ಮಿಥುನ ರಾಶಿ: ಮಾನಸಿಕ ನೆಮ್ಮದಿಯಿಂದ ಕೆಲಸದಲ್ಲಿ ಉತ್ಸಾಹವು ಹೆಚ್ಚಾಗುವುದು. ಯಾರನ್ನೋ ದೂರುತ್ತ ನಿಮ್ಮ ಕೆಲಸದ ಅವಧಿಯನ್ನು ವ್ಯರ್ಥ ಮಾಡುವುದು ಬೇಡ. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ. ನಿಮ್ಮ ಪ್ರೇಮಪ್ರಕರಣವು ದುಃಖಾಂತವಾಗಲಿದೆ. ಸೃಜನಾತ್ಮಕ ಕೆಲಸದಿಂದ ಹೆಚ್ಚಿನ ಯಶಸ್ಸನ್ನು ಸಾಧಿಸುವಿರಿ. ಸಂಗಾತಿಗಳಿಬ್ಬರೂ ದೂರಾಗುವ ಯೋಚನೆ ಮಾಡಬಹುದು. ನಿಮ್ಮ ಮಾತು ನಿಷ್ಪಕ್ಷಪಾತದಿಂದ ಇರಲಿ. ನಿಮ್ಮ ವಸ್ತುವನ್ನು ಕಳೆದುಕೊಂಡು ಯಾರದೋ ಮೇಲೆ ಅನುಮಾನಪಡುವಿರಿ. ಕುಳಿತುಕೊಳ್ಳುವ ವ್ಯತ್ಯಾಸದಿಂದ ದೇಹಕ್ಕೆ ಬಾಧೆಯುಂಟಾಗುವುದು. ಸಾಮಾಜಿಕ ಗೌರವವನ್ನು ನೀವು ತಿರಸ್ಕರಿಸುವಿರಿ.
ಕಟಕ ರಾಶಿ: ಪವಿತ್ರ ಕ್ಷೇತ್ರಗಳ ದರ್ಶನದ ಬಗ್ಗೆ ಆಸಕ್ತಿಯು ಉಂಟಾಗುವುದು. ಖರೀದಿಗೆ ಬೇಕಾದ ಹಣವನ್ನು ಮಾತ್ರ ಒಯ್ಯುವುದು ಉತ್ತಮ. ಇಂದು ನೀವು ಹೂಡಿಕೆಯ ಮುಖಾಂತರ ಆರ್ಥಿಕ ಸಬಲತೆಯನ್ನು ಪಡೆಯಲು ಯೋಚಿಸುವಿರಿ. ನಿಮ್ಮ ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಬಹಳ ಉತ್ಸಾಹದಿಂದ ಇರುವಿರಿ. ಯಾರಾದರೂ ತಪ್ಪು ತಿಳಿದಾರು ಎಂಬ ಭಾವವು ನಿಮ್ಮನ್ನು ಕಾಡಬಹುದು. ನೀವು ಹೊಸ ವಾಹನವನ್ನು ಒತ್ತಾಯಕ್ಕೆ ಖರೀದಿ ಮಾಡುವಿರಿ. ಒಂದೇ ತರದ ಜೀವನವು ನಿಮಗೆ ಬೇಸರವಾಗುವುದು. ಇಂದು ಹೆಚ್ಚು ಖರ್ಚು ಮಾಡುವ ಅನಿವಾರ್ಯತೆ ಬರಬಹುದು. ನಿಮ್ಮ ಕಾರ್ಯಗಳನ್ನು ವೇಗವಾಗಿ ಮುಗಿಸಿಕೊಂಡು ನಿಶ್ಚಿಂತೆಯಿಂದ ಇರುವಿರಿ. ಸಾಲವನ್ನು ಮಾಡಿ ವಾಹನವನ್ನು ಖರೀದಿಸುವಿರಿ. ಆದಾಯವನ್ನು ಹೆಚ್ಚಿಸಲು ಮತ್ತೊಂದು ಉದ್ಯೋಗವನ್ನು ಬದಲಾಯಿಸುವ ಆಲೋಚನೆ ಬರುವುದು.