Horoscope 20 Nov: ದಿನಭವಿಷ್ಯ,ಈ ರಾಶಿಯವರು ಮಾಡುವ ವ್ಯವಹಾರದಲ್ಲಿ ಪೈಪೋಟಿ ಅಧಿಕವಾಗಿರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 20 Nov: ದಿನಭವಿಷ್ಯ,ಈ ರಾಶಿಯವರು ಮಾಡುವ ವ್ಯವಹಾರದಲ್ಲಿ ಪೈಪೋಟಿ ಅಧಿಕವಾಗಿರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು
ಇಂದಿನ ರಾಶಿಭವಿಷ್ಯImage Credit source: iStock Photo
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Nov 20, 2023 | 12:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 20 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಧ್ರುವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:02 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:18ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ.

ಮೇಷ ರಾಶಿ: ಕಾರ್ಮಿಕರ‌ ಮೇಲೆ‌ ನಂಬಿಕೆ ಕಡಿಮೆ‌ ಆದೀತು. ಪಾಲುದಾರಿಕೆಯಲ್ಲಿ ಐಕಮತ್ಯದ ಕೊರತೆ ಕಾಣಿಸುವುದು. ನಿಮಗೆ ಸಂಬಂಧಿಸದ ವಿಚಾರಕ್ಕೆ ನೀವು ಮಧ್ಯ ಪ್ರವೇಶ ಮಾಡುವಿರಿ. ಪ್ರೀತಿಯಲ್ಲಿ ಅಂತರವು ಬಂದಂತೆ ತೋರಿದ್ದು ಮಾತುಕತೆಯಿಂದ ಅದನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ಇಂದಿನ ಕೆಲವು ಸಮಯವನ್ನು ಇನ್ನೊಬ್ಬರಿಗೆ ಮೀಸಲಿಡಬೇಕಾದೀತು. ಸಂಗಾತಿಯ ನೋವಿಗೂ ಸ್ಪಂದಿಸಲು ಕಷ್ಟವಾದೀತು. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮಗೆ ಆತಂಕವಾಗಬಹುದು. ಮಕ್ಕಳ ತಿರುಗಾಟವನ್ನು ಕಡಿಮೆ ಮಾಡಲು ಹೇಳುವಿರಿ. ಸರಿಯಾದ ಸಮಯಕ್ಕೆ ಆಹಾರವನ್ನು ಸ್ವೀಕರಿಸಿ. ಪ್ರಯಾಣದ ಆಯಾಸವು ವಿಶ್ರಾಂತಿಯಿಂದ ದೂರಾಗುವುದು.

ವೃಷಭ ರಾಶಿ: ಹೊಸ ಮನೆಯ ಪ್ರವೇಶದಲ್ಲಿ‌ ನೀವು ಭಾಗಿಯಾಗುವಿರಿ. ಕೆಲವು ಸಮಸ್ಯೆಗಳನ್ನು ನೀವು ಪರಿಹಾರ ಮಾಡಿಕೊಳ್ಳುವಿರಿ. ರಾಜಕಾರಣಿಗಳು ಅಸ್ಥಿರ ಮನಸ್ಸಿನಲ್ಲಿ ಇರುವರು. ಅಧಿಕವಾಗಿರುವುದು. ಇಂದಿನ ಸೋಲು ನಿಮಗೆ ಪಾಠವಾಗುವುದು. ಪ್ರಪಂಚಜ್ಞಾನದ ಅಗತ್ಯತೆ ಹೆಚ್ಚಿವಿರುವಂತೆ ತೋರುತ್ತದೆ. ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ. ಕುಟುಂಬದ ನೇರ ಮಾತುಗಳು ನಿಮಗೆ ಸಹಿಸಲು ಶಕ್ಯವಾಗದೇ ಬೇಸರಿಸುವಿರಿ. ಊಹಿಸಿದಷ್ಟು ಮಾರ್ದವವು ಸಂಗಾತಿಯ ಸ್ವಭಾವದಲ್ಲಿ ಇರದು. ಕುಟುಂಬದ ವಿಚಾರದಲ್ಲಿ ಏಕಪಕ್ಷೀಯವಾಗಿ ನಿರ್ಧಾರವನ್ನು ತೆಗೆದುಕೊಳ್ಳದೇ ಎಲ್ಲರ ಅಭಿಪ್ರಾಯವನ್ನು ಪಡೆದು ಮುಂದುವರಿಯಿರಿ.

ಮಿಥುನ ರಾಶಿ: ಅಧಿಕಾರದ ಬಗ್ಗೆ ಹೆಚ್ಚು ಆಸೆ ಇರುವುದು. ಶತ್ರುಗಳ ಬಗ್ಗೆ ಗಮನವಿರಲಿ. ನಿಮಗೆ ಗೊತ್ತಿಲ್ಲದೇ ನಿಮ್ಮ ಕಾರ್ಯವನ್ನು ನಾಶ ಮಾಡಬಹುದು. ನಿಮ್ಮ ವ್ಯವಹಾರದಲ್ಲಿ ಪೈಪೋಟಿಯು ಅಧಿಕವಾಗಿ ಇರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು. ಹಣಕಾಸಿನ ವ್ಯವಹಾರದಲ್ಲಿ ಇಂದು ಎಲ್ಲರಿಂದ ಗೌಪ್ಯತೆಯನ್ನು ಕಾಪಾಡಿಕೊಳ್ಳುವಿರಿ. ಸಂಗಾತಿಯ ಜೊತೆ ಒಡನಾಟವು ಹೆಚ್ಚಿರಲಿದೆ. ತಂದೆಯ ಶ್ರಮವನ್ನು ಕಂಡು ಮಕ್ಕಳಿಗೆ ನೋವಾಗಬಹುದು. ನಿಮ್ಮವರ ಪ್ರೀತಿಯಿಂದ ನೀವು ಮನಸೋಲುವಿರಿ. ನೀವು ಎಲ್ಲರ‌ ನಡುವೆ ಅಂತರವನ್ನು ಕಾಯ್ದುಕೊಂಡು ವ್ಯವಹಾರ ಮಾಡುವಿರಿ. ಬಂಧುಗಳ ಭೇಟಿಯಿಂದ ಸಂತೋಷ ಸಿಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರದಿದ್ದರೆ ಚಿಕಿತ್ಸೆಯವರೆಗೂ ಹೋಗಬಹುದು. ಆಪ್ತರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಕಟಕ ರಾಶಿ: ಖಾಸಗೀ ಉದ್ಯೋಗದಲ್ಲಿ ಹೆಚ್ಚು ಒತ್ತಡವು ಬರುವುದು. ನಿಮ್ಮ ವರ್ತನೆಯು ಇತರರಿಗೆ ಇಷ್ಟವಾಗದು. ಅಪ್ರಾಮಾಣಿಕತೆಯು ಮೇಲಧಿಕಾರಿಗಳಿಗೆ ಗೊತ್ತಾಗುವುದು. ಇಂದು ನಿಮ್ಮ ಸಂಗಾತಿಗೆ ಅಪರೂಪದ ಉಡುಗೊರೆಯನ್ನು ಕೊಡಿಸುವಿರಿ. ಇಂದು ನಿಮ್ಮ ಮನೆಗೆ ಅತಿಥಿ ಆಗಮಿಸುವ ಸಾಧ್ಯತೆ ಇದೆ. ನೀವು ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ಕೆಲವು ಮಾಹಿತಿಯನ್ನು ಪಡೆದುಕೊಳ್ಳುವಿರಿ.‌ ಏನನ್ನಾದರೂ ಸಾಧಿಸಬೇಕು ಎಂಬ ಹಂಬಲವು ಹುಟ್ಟಿಕೊಂಡೀತು. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ. ನಿಮ್ಮ ವೃತ್ತಿಯು ನಿಮಗೆ ಸಂತೋಷವನ್ನು ಕೊಡದೇ ಇರುವುದು. ಕೆಲವನ್ನು ನೀವು ಸರಳವಾಗಿ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಮಾತು ಅಹಂಕಾರದಂತೆ ಕೇಳಿಸುವುದು. ಸಂಯಮವನ್ನು ಬೆಳೆಸಿಕೊಳ್ಳುವ ಅಗತ್ಯ.

ಸಿಂಹ ರಾಶಿ: ಮನಸ್ಸಿನ ಚಾಂಚಲ್ಯದಿಂದ‌ ನಿಮಗೆ ಕಷ್ಟವಾದೀತು. ನೆರೆಹೊರೆಯವರ ಜೊತೆ ಹರಟೆಯು ಅಧಿಕವಾಗಿರುವುದು. ಇಂದು ನೀವು ಕೆಲಸವನ್ನು ಹೆಚ್ಚು ಪ್ರಯತ್ನದಿಂದ ಪೂರ್ಣ ಮಾಡುವಿರಿ. ಇಂದು ನಿಮಗೆ ಅತ್ಯಂತ ಪ್ರಿಯವಾದ ಕೆಲಸವನ್ನು ಮಾಡುವುದು ಬೇಡ. ನೀವು ಇತರರಿಂದ ಗೌರವಕ್ಕೆ ಪಾತ್ರರಾಗುವಿರಿ. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು. ನಿಯಮ ಪಾಲನೆಯಲ್ಲಿ ತಪ್ಪಬಹುದು. ನಿಮ್ಮ ಆಕ್ಷೇಪಗಳು ಹಲವು ಸುಳ್ಳಿನಿಂದ ಇರಲಿದೆ. ನಿಮ್ಮ ಸಂಶೋಧನೆಗೆ ನಿರ್ದಿಷ್ಟ ಗುರಿಯ ಅವಶ್ಯಕತೆ ಇರಲಿದೆ. ಆಸ್ತಿಯ ವಿಚಾರವಾಗಿ ತಂದೆಯ ಕಡೆಯಿಂದ ನಿಮಗೆ ಸಿಂಹಪಾಲು ಸಿಗುವುದು. ಗಂಭೀರ ಚರ್ಚೆಯಲ್ಲಿ ನಿಮ್ಮ ತಮಾಷೆಯು ಸಭೆಯ ಗಾಂಭೀರ್ಯವನ್ನು ಕೆಡಿಸುವುದು.

ಕನ್ಯಾ ರಾಶಿ: ಯಾರನ್ನೂ ವಿನಾಕಾರಣ ದೂರುವುದು ಬೇಡ.‌ ನಿಮ್ಮ ಮೇಲೆ‌ ದ್ವೇಷಭಾವವು ಬರಬಹುದು. ವ್ಯವಹಾರದಲ್ಲಿ ಬೇರೆ ಸಂಬಂಧವನ್ನು ತರುವುದು ಬೇಡ. ಅವಶ್ಯಕ ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಿ. ಆರ್ಥಿಕತೆಯಲ್ಲಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿ ಮಾಡೀತು. ಇಂದು ನೀವು ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಿಟ್ಟನ್ನು ಕಡಿಮೆ‌ ಮಾಡಿಸುವಿರಿ. ಶತ್ರುಗಳು ನಿಮ್ಮ ಮಿತ್ರರಾಗಲು ಬಯಸಿ ಸಂಧಾನಕ್ಕೆ ಬರಬಹುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ರಕ್ಷಣೆಯ ಜವಾಬ್ದಾರಿಯವರಿಗೆ ಆರೋಗ್ಯದ ಕೆಡಬಹುದು. ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಆಸಕ್ತಿಯು ಹೆಚ್ಚಾಗಿ ಅಭ್ಯಾಸವು ನಿಲ್ಲುವುದು. ಬಂಧುಗಳ ಮನೆಯ ಸಮಾರಂಭಕ್ಕೆ ಹೋಗಲಿದ್ದೀರಿ. ದಾಂಪತ್ಯದಲ್ಲಿ ವಾಗ್ವಾದವೇ ಇಂದಿನ ಕಾರ್ಯಗಳಿಗೆ ತೊಂದರೆಯಾದೀತು. ಕಬ್ಬಿಣದ ವ್ಯಾಪಾರದಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸಬಹುದು.

ತುಲಾ ರಾಶಿ: ವ್ಯಾಪಾರದಲ್ಲಿ ಹಣದ ಆಗಮನವು ಇದ್ದರೂ ಉಳಿಸಿಕೊಳ್ಳುವುದು ಕಷ್ಟವಾದೀತು. ಮನಸ್ಸಿನ ನೆಮ್ಮದಿಗೆ ಎಲ್ಲಿಗಾದರೂ ಒಂಟಿಯಾಗಿ ಹೋಗುವಿರಿ. ಇಂದು ಕೌಶಲ್ಯದ ಕಾರ್ಯಕ್ಕೆ ಹೆಚ್ಚು ಆಸಕ್ತಿಯನ್ನು ತೋರಿಸುವಿರಿ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ. ದಾಂಪತ್ಯದ ಗುಟ್ಟನ್ನು ಹೊರಗೆ ಹಾಕುವುದು ಬೇಡ. ಇಂದು ನೀವು ನಿಮ್ಮ ಸುತ್ತಲಿನ ವಾತಾವರಣವನ್ನು ಆಹ್ಲಾದವೆನಿಸುವುದು. ನಿಮ್ಮ ವ್ಯವಹಾರದಲ್ಲಿ ಹೊಸ ಬದಲಾವಣೆಯನ್ನು ಮಾಡಲು ನೀವು ಯೋಚಿಸುತ್ತಿದ್ದರೆ ಯಶಸ್ವಿಯಾಗುವಿರಿ. ನೀವು ಅಂದುಕೊಂಡಿದ್ದು ಆಗುತ್ತಿದ್ದರೂ ಮನಸ್ಸು ಸ್ವಸ್ಥವಾಗಿ ಇರದು. ಮಕ್ಕಳ ಕಾರಣದಿಂದ‌ ನಿಮಗೆ ಕೆಟ್ಟ ಮಾತನ್ನು ಕೇಳಬೇಕಾದೀತು.

ವೃಶ್ಚಿಕ ರಾಶಿ: ಪೂರ್ಣ‌ ಮನಸ್ಸಿನಿಂದ ನಿಮ್ಮ‌ ಎಲ್ಲ ಶಕ್ತಿಯನ್ನು ಹಾಕಿ ಕೆಲಸ ಮಾಡಿದರೂ ಅಂದುಕೊಂಡಷ್ಟು ಜಯವು ಸಿಗದು. ಒಡಹುಟ್ಟಿದವರ ಜೊತೆಗಿನ ನಿಮ್ಮ ವ್ಯವಹಾರಕ್ಕೆ ಮತ್ತೊಬ್ಬರು ಪ್ರವೇಶಿಸಬಹುದು. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು. ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸವನ್ನು ಮಾಡುವಿರಿ. ಆಸ್ತಿಗೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಿಂದ ಒಪ್ಪಿಗೆಯನ್ನು ಪಡೆಯುವಿರಿ. ಸಹೋದರಿಯರ ಜೊತೆ ವಾಗ್ವಾದವನ್ನು ಮಾಡುವಿರಿ. ಸುಧಾರಿಸಿದ ಆರೋಗ್ಯವು ನಿಮಗೆ ಉತ್ಸಾಹವನ್ನು ಕಡಲ ಸಮಯವನ್ನು ತೆಗೆದುಕೊಂಡಿತು. ಜೀವನದ ಆಕಸ್ಮಿಕ ತಿರುವುಗಳಿಗೆ ನೀವು ಚಿಂತೆಗೆಡುವುದಿಲ್ಲ. ಹಣದ ಉಳಿತಾಯಕ್ಕೆ ಉಪಾಯದ ಅಗತ್ಯವು ಕಾಣಿಸಿಕೊಳ್ಳುವುದು. ಉದ್ಯೋಗದ ಕೆಲವು ರಹಸ್ಯಗಳನ್ನು ನೀವು ಇಂದು ತಿಳಿದುಕೊಳ್ಳುವಿರಿ.

ಧನು ರಾಶಿ: ವಿವಾಹಕ್ಕೆ ಕೆಲವು ತಡೆಗಳು ಬರಬಹುದು. ವಿದೇಶ ಪ್ರಯಾಣದ ಸಿದ್ಧತೆಯಲ್ಲಿ ಇರುವಿರಿ.‌ ರಾಜಕೀಯವು ನಿಮ್ಮ ದಿಕ್ಕನ್ನೇ ಬದಲಿಸುವ ಸಾಧ್ಯತೆ ಇದೆ. ಇಂದು ಸಾರ್ವಜನಿಕ ಸಭೆಗಳನ್ನು ನಡೆಸಲು ಯೋಜಿಸುವಿರಿ‌. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಯಾರ ಜೊತೆಯಾದರೂ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ಆಭರಣ ಮುಂತಾದ ಬಹು ಮೌಲ್ಯದ ವಸ್ತುವನ್ನು ಖರೀದಿಸುವಿರಿ. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ಕಳೆದ ಮೇಲೆ ತಂದೆಯ ಜೊತೆ ಮಾತನಾಡಿ ನೆಮ್ಮದಿಯು ಪಡೆಯುವಿರಿ. ನಿಮ್ಮ ದೂರ ಪ್ರಯಾಣಕ್ಕೆ ಕುಟುಂಬದಿಂದ ಒಪ್ಪಿಗೆ ಸಿಗದು. ಇನ್ನೊಬ್ಬರ‌ ನೋವಿಗೆ ಸ್ಪಂದಿಸುವ ನಿಮ್ಮ ಗುಣದಿಂದ ಪ್ರೀತಿ ಹುಟ್ಟಿಕೊಳ್ಳಬಹುದು.

ಮಕರ ರಾಶಿ: ಅನ್ಯರ ಮಾತಿನಿಂದ ನಿಮ್ಮ ಸಂಬಂಧವನ್ನು ಕೆಡಿಸಿಕೊಳ್ಳಬೇಡಿ. ಸುಖಕ್ಕೆ ನಾನಾ ಮಾರ್ಗಗಳು ತೆರೆಯಬಹುದು. ಇಂದು ನೀವು ಮನೆಯ ಹಿರಿಯರಿಗೆ ಗೌರವ ತರುವ ಕಾರ್ಯವನ್ನು ಮಾಡುವಿರಿ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಕಾನೂನಿನ ಪಾಠವನ್ನು ಹಿರಿಯರು ಮಾಡುವರು. ಉದ್ಯೋಗಕ್ಕಾಗಿ ಬಂದ ಬಂಧುವಿಗೆ ಮಾರ್ಗದರ್ಶನ ಮಾಡುವಿರಿ. ಸಹೋದರನ ಸಹಕಾರವು ಅನುಕೂಲವೇ ಆಗುವುದು. ನೂತನ ವಾಹನದ‌ ಖರೀದಿಯನ್ನು ಮಾಡುವ ಇಚ್ಛೆಯು ಇಂದು ಪೂರ್ಣವಾಗುವುದು. ಹಿತಶತ್ರು ನಿಮ್ಮ‌ ಪತನವನ್ನೇ ನಿರೀಕ್ಷಿಸುತ್ತ ಕುಳಿತಿರುವರು.‌ ವೈವಾಹಿಕ ಜೀವನ ಆರಂಭದ ದಿನಗಳಲ್ಲಿ ಸಂತೋಷವೇ ಇರುವುದು. ಎಲ್ಲ ಸಂದರ್ಭವು ಒಂದೇ ರೀತಿಯಲ್ಲಿ ಇರದು. ನಕಾರಾತ್ಮಕತೆ ಹೆಚ್ಚು ಕೆಲಸ ಮಾಡೀತು.

ಕುಂಭ ರಾಶಿ: ನೆಮ್ಮದಿಯಿಂದ ಇರಲಿದ್ದು ಏನನ್ನಾದರೂ ಅಸಂಗತವಾದುದನ್ನು ಆಲೋಚಿಸುವಿರಿ. ಇಂದು ನಿಮ್ಮ ದೇಹವು ಆಯಾಸದಿಂದ ದುರ್ಬಲವಾಗಬಹುದು. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇರುವುದು. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ಕಾರ್ಯದ ನಿಮಿತ್ತ ನಿಮ್ಮ ಓಡಾಟವು ವ್ಯರ್ಥವಾಗಬಹುದು. ದುಷ್ಕೃತ್ಯಕ್ಕೆ ಪ್ರೇರಣೆ ಸಿಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ. ಎಲ್ಲರೆದುರು ಮುಖಭಂಗವನ್ನು ಎದುರಿಸಿಬೇಕಾದೀತು. ವೈವಾಹಿಕ ಜೀವನದ ಕನಸು ಕಾಣುವಿರಿ. ಮಾತನ್ನು ಕಡಿಮೆ ಮಾಡುವಿರಿ. ನಿಮ್ಮ‌ ದೂರಾಲೋಚನೆಯು ವಾಸ್ತವಕ್ಕೆ ಹತ್ತಿರವಾಗಿ ಇರದು.

ಮೀನ ರಾಶಿ: ಅತಿಯಾದ ಕೋಪವು ಇಂದು ಸಹಜವಾಗಿ ಬರುವುದು. ಆದಷ್ಟು ಸುಮ್ಮನೆ ಇರುವುದು ಒಳ್ಳೆಯದು. ಕೋಪ ಎಂದು ಬಂದಾಗ ಎದ್ದು ಹೋಗಿ. ಇಂದು ನಿಮ್ಮ ವ್ಯಾಪಾರದಲ್ಲಿ ಕಠಿಣ ಶ್ರಮವಿದ್ದೂ ಕಡಿಮೆ ಲಾಭವನ್ನು ಪಡೆಯುವಿರಿ. ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ.‌ ಜವಾಬ್ದಾರಿಯು ಬಂದು ಹೊರೆಯು ಹೆಚ್ಚಾಗುವುದು. ಬಹಳ ಹುಡುಕಾಟದ ಅನಂತರದ ಉತ್ತಮ‌ ವಿವಾಹ ಸಂಬಂಧವು ಬರುವುದು. ಪಾಲುದಾರಿಕೆಯಲ್ಲಿ ಅಧಿಕಾರದ ಬಗ್ಗೆ ಅಸಮಾಧಾನ ಹೆಚ್ಚಾಗುವುದು. ಬಂಧುಗಳಿಂದ ಬೇಗ ಹಣವನ್ನು ಕೊಡುವುದಾಗಿ ಪಡೆಯುವಿರಿ. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ. ನಿಮಗೆ ಸಾಕಷ್ಟು ಸಮಯವುವ ಇಂದು ಇರಲಿದ್ದು ಏನು ಮಾಡಬೇಕೆಂದು ತಿಳಿಯದೇ ಕಾಲವನ್ನು ಕಳೆಯುವಿರಿ. ಉತ್ತಮ ಹವ್ಯಾಸವನ್ನು ಬೆಳೆಸಿಕೊಳ್ಳುವುದು ಉತ್ತಮ.

-ಲೋಹಿತಶರ್ಮಾ – 8762924271 (what’s app only)

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ