AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ವಿವಾದಗಳಿಂದ ಆತಂಕಕ್ಕೊಳಗಾಗುವಿರಿ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 06 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರು ವಿವಾದಗಳಿಂದ ಆತಂಕಕ್ಕೊಳಗಾಗುವಿರಿ
ದಿನಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: May 06, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:44 ರಿಂದ 09:19ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:29 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:40ರ ವರೆಗೆ.

ಮೇಷ ರಾಶಿ : ವಿವಾದಗಳಿಂದ ನೀವು ಆತಂಕದಲ್ಲಿ ಇರುವಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪಾಲುದಾರರ ಕೈಜೋಡಿಸುವ ಮುನ್ನ ಯೋಚಿಸಿ. ದೇವಿಯನ್ನು ಆರಾಧಿಸಿ ಇಷ್ಟಾರ್ಥವನ್ನು ನೀಡುವಳು. ಕಛೇರಿಯಲ್ಲಿ ನಿಮಗೆ ಸಹೋದ್ಯೋಗಿಗಳಿಂದ ಕಿರಿಕಿರಿ ಆಗುವುದು. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವಿರಿ. ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಎಷ್ಟೇ ತೊಂದರೆಯಾದರೂ ಇನ್ನೊಬ್ಬರಿಗೆ ನೋವನ್ನು ಕೊಡುವುದು ಇಷ್ಟವಾಗದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಹೆಚ್ಚಿನ ಆದಾಯದ ಬಗದಗೆ ಚಿಂತನೆ ಮಾಡುವಿರಿ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು ನೆನಪಿಸಿಕೊಳ್ಳುವಿರಿ.

ವೃಷಭ ರಾಶಿ : ಆಪ್ತರ ಜೊತೆ ಹೊಸ ಉದ್ಯೋಗವನ್ನು ಆರಂಭಿಸುವ ಪ್ರಯತ್ನದಲ್ಲಿ ಇರುವಿರಿ. ಗೃಹ ಕೃತ್ಯಗಳನ್ನು ಪೂರೈಸಲು ಇಂದು ಅನುಕೂಲ ದಿನ. ಮಕ್ಕಳಿಗೆ ಯೋಗ್ಯವಾದ ಮಾರ್ಗದರ್ಶನದ ಸಾಧ್ಯತೆ. ನಿಮ್ಮ ಸಾಮರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಸಮಾಧಾನದಿಂದ ಇರಬೇಕಾದ ಅವಶ್ಯಕತೆ ಇದೆ. ಸಮಾಜಮುಖಿಯಾಗಿ ನಿಮ್ಮ ಕಾರ್ಯಗಳು ಹೆಚ್ಚು ಪ್ರಬಲವಾಗಬಹುದು. ಉದ್ಯೋಗದಲ್ಲಿ ಆಗುವ ಬದಲಾವಣೆಗಳನ್ನು ನೀವು ಸಹಿಸುವುದು ಕಷ್ಟವಾದೀತು. ಕಾನೂನಾತ್ಮಕ ವಿಚಾರದಲ್ಲಿ ಹಿನ್ನಡೆಯಾಗುವುದು. ಮಿತ್ರರ ಕೋಪಕ್ಕೆ ಕ್ಷಮೆಯನ್ನು ಕೇಳುವಿರಿ. ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ.

ಮಿಥುನ ರಾಶಿ : ನಿಮಗೆ ಮಕ್ಕಳ ವಿದ್ಯಾಭ್ಯಾಸದ ಚಿಂತೆ ಹೆಚ್ಚಾಗುವುದು. ಸರ್ಕಾರಿ ಅಧಿಕಾರಿಗಳಿಗೆ ಹೆಚ್ಚಿನ ಆದಾಯ ಸಿಗಲಿದೆ. ಸಂಗಾತಿಯ ಜೊತೆ ತಾಳ್ಮೆಂದಿರಿ. ಆರ್ಥಿಕ ವಿಚಾರದಲ್ಲಿ ನಿಮ್ಮ ಗಟ್ಟಿತನವೇ ನಿಮಗೆ ಧೈರ್ಯ ಕೊಡಲಿದೆ. ಅತಿಥಿಗಳ ಆಗಮನದಿಂದ ಮನೆಯ ವಾತಾವರಣ ಆಹ್ಲಾದಕರವಾಗಿರುತ್ತದೆ. ಉದ್ಯೋಗಿಗಳು ಹಣ ಹೂಡಿಕೆ ಮಾಡಿದರೆ ನಷ್ಟವನ್ನು ಅನುಭವಿಸಬೇಕಾದೀತು. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ. ಸ್ವತಂತ್ರವಾಗಿ ಇರಲು ಬಿಡಿ. ಭೂಮಿಯ ಖರೀದಿಯಲ್ಲಿ ಎಡವುವಿರಿ. ಯಂತ್ರಜ್ಞರು ಇಂದು ಬಹಳ ಒತ್ತಡದಿಂದ ಇರುವರು. ಸ್ವಲ್ಪ ಮಾನಸಿಕ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ನಿಮ್ಮ ಮಾತನ್ನು ಸಂಗಾತಿಯು ತಳ್ಳಿಹಾಕಿದ್ದು ನಿಮಗೆ ಬೇಸರ ತಂದೀತು. ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಜಾಣ್ಮೆಯಿಂದ ನಿಮ್ಮ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಗಳಿಸಬಹುದು.

ಕಟಕ ರಾಶಿ : ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದು ಸಾಧಿಸುವಿರಿ. ದ್ವಿಚಕ್ರ ಸವಾರರು ಜಾಗರೂಕತೆಯಿಂದ ಇರಬೇಕು. ಉದ್ಯೋಗದಲ್ಲಿ ಸ್ವಲ್ಪ ಏರಳಿತಗಳನ್ನು ಎದುರಿಸಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಕೃಷಿ ಕ್ಷೇತ್ರದಲ್ಲಿ ಕೊಂಚ ನಷ್ಟ ಅನುಭವಿಸಬೇಕಾದೀತು. ದಾಂಪತ್ಯ ಜೀವನದಲ್ಲಿ ಬಿಸಿಲು ನೆರಳಿನ ವಾತಾವರಣವಿರುತ್ತದೆ. ಸಂಗಾತಿಯ ಬಂಧುಗಳು ಮನೆಗೆ ಆಗಮಿಸಬಹುದು. ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಶುಭ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ಹೊಸ ಜನ, ಹೊಸ ಸ್ಥಳ ಹಾಗೂ ಹೊಸ ವಿಚಾರದ ಕಡೆ ಗಮನವು ಬೇಕೆನಿಸುವುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು.

ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ