
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶಿವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 05:13 ರಿಂದ 06:48 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:05 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ ಸಂಜೆ 05:13 ರ ವರೆಗೆ.
ಮೇಷ ರಾಶಿ: ನಿಮ್ಮ ವಿವಾಹಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ. ಬೇಡದ ವಿಚಾರಕ್ಕೆ ಮೂಗು ತೂರಿಸುವುದು ಬೇಡ. ಸಾಮಾಜಿಕ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಎಲ್ಲ ಬೇಸರಕ್ಕೂ ಅನ್ಯರೇ ಕಾರಣವಾಗಿರಲು ಸಾಧ್ಯವಿಲ್ಲ. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ. ಹೂಡಿಕೆಯಲ್ಲಿ ನಿಮಗೆ ನಷ್ಟವಾಗಲಿದೆ. ಹೊಸ ವಸ್ತುಗಳನ್ನು ಖರೀದಸಲು ಹೋಗಿ ಸಮಯ ವ್ಯರ್ಥವಾಗುವುದು. ಆರೋಗ್ಯವನ್ನು ಆಹಾರದಿಂದ ಹಾಳು ಮಾಡಿಕೊಳ್ಳುವಿರಿ.
ವೃಷಭ ರಾಶಿ: ಎಲ್ಲದಕ್ಕೂ ವಿರೋಧ ಮಾಡುವುದು ನಿಮಗೇ ಸರಿ ಕಾಣದು. ಮಾತನ್ನು ನಿಯಂತ್ರಿಸುವುದು ನಿಮಗೆ ಕಷ್ಟವಾಗುವುದು. ನಿಮ್ಮ ಬುದ್ಧಿವಂತಿಕೆ ಹಾಗೂ ಪ್ರಬುದ್ಧತೆಯ ಕಾರಣಕ್ಕೆ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೀರಿ. ವ್ಯಥೆಗಳನ್ನು ಕಳೆಯಲು ಹೊಸ ಮಾರ್ಗವನ್ನು ಅನ್ವೇಷಿಸುವಿರಿ. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ನಿಮಗೆ ನಿಮ್ಮ ಸ್ವಭಾವವು ಬದಲಾದಂತೆ ಅನ್ನಿಸೀತು. ಅನೇಕ ಲಾಭದ ಅವಕಾಶಗಳು ಸಿಗುತ್ತವೆ. ನಿಮ್ಮ ರಹಸ್ಯವನ್ನು ಬಿಟ್ಟುಕೊಡಲಾರಿರಿ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಸೌಂದರ್ಯ ಪ್ರಜ್ಞೆ ಅತಿಯಾಗಿರುವುದು.
ಮಿಥುನ ರಾಶಿ: ಇಂದು ಸಂಗಾತಿಯ ಜೊತೆ ಸಂತೋಷದ ಸಮಯವನ್ನು ಕಳೆಯುವಿರಿ. ಆಪ್ತರ ಜೊತೆ ವಿವಾದ ಆಗಲಿದೆ. ನಾನು ಮಾಡಿದ್ದೇ ಸರಿ ಎಂಬ ಹುಂಬುತನ ಇರಲಿದೆ. ಸ್ವಂತ ವಿಮರ್ಶೆ ಮಾಡಿಕೊಂಡು, ಅಂತಿಮ ನಿರ್ಧಾರಕ್ಕೆ ಬನ್ನಿ. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ಇನ್ನೊಬ್ಬರ ಭಾವಕ್ಕೆ ಸ್ಪಂದಿಸುವ ಗುಣವಿರುವುದು. ಮನಸ್ತಾಪದ ಕಾರಣ ದೂರ ಉಳಿಯಲು ಇಷ್ಟಪಡುವಿರಿ. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಮಕ್ಕಳನ್ನು ಹಿಡೆತಕ್ಕೆ ತರಲು ಪ್ರಯತ್ನಿಸುವಿರಿ. ಪ್ರಮುಖ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದು ಬೇಡ. ನಿಮ್ಮನ್ನು ಯಾರಾದರೂ ಬಂಧುಗಳು ಮಾತನಾಡಸಲು ಬರಬಹುದು.
ಕಟಕ ರಾಶಿ: ಇಂದು ಹೆಚ್ಚಿನ ಸಮಯವನ್ನು ದೇವತಾರಾಧನೆಗೆ ಕಳೆಯುವಿರಿ. ಅಧ್ಯಾತ್ಮ ಚಿಂತನೆಗೆ ಇನ್ನೊಬ್ಬರ ಜೊತೆಯಾಗುವರು. ಯಾವುದಾದರೂ ಮುಖ್ಯ ದಾಖಲೆಯನ್ನು ಎತ್ತಿಟ್ಟು, ಅದಕ್ಕಾಗಿ ವಿಪರೀತ ಹುಡುಕುವಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳಲು ಸ್ನೇಹಿತರಿಗೆ ಕಷ್ಟವಾದೀತು. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಉದ್ಯಮದಲ್ಲಿ ಹಿನ್ನಡೆ ಇರಲಿದೆ. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ಅಪರಿಚಿತರ ವ್ಯವಹಾರವನ್ನು ಕಡಿಮೆ ಮಾಡಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ಏಕಾಂತದಲ್ಲಿ ಇರಲು ಇಷ್ಟವಾಗುವುದು.