Horoscope: ದಿನಭವಿಷ್ಯ, ಈ ರಾಶಿಯವರು ಇಂದು ಅತಿಯಾದ ಆತ್ಮವಿಶ್ವಾಸದಿಂದ ಆಗುವ ತೊಂದರೆಯನ್ನು ನೋಡಲಿದ್ದಾರೆ
ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 21) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 21) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಏಕಾದಾಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶುಕ್ಲ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 24 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:59 ರಿಂದ ಸಂಜೆ 06:25ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:44 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:34 ರಿಂದ 04:59ರ ವರೆಗೆ.
ಸಿಂಹ ರಾಶಿ: ಇಂದು ಅವಿವಾಹಿತರಿಗೆ ವಿವಾಹ ಪ್ರಸ್ತಾಪದ ಸಾಧ್ಯತೆಯಿದೆ. ಬುದ್ಧಿವಂತಿಕೆಯಿಂದ ಇಂದು ಉತ್ತಮ ಯಶಸ್ಸನ್ನು ಸಾಧಿಸಬಹುದು. ಶತ್ರುಗಳಿಗೆ ನೀವು ಸೂಕ್ತವಾದ ಉತ್ತರವನ್ನು ನೀಡುತ್ತೀರಿ. ಇಂದು ಸಂಪತ್ತಿನ ಹೆಚ್ಚಳವಾಗಲಿದೆ ಮತ್ತು ಇತ್ತೀಚಿನ ಹೂಡಿಕೆಯಿಂದ ದೊಡ್ಡ ಲಾಭವನ್ನು ಪಡೆಯಬಹುದು. ಇಂದು ನೀವು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ನಿಮ್ಮ ಸ್ವಂತಿಕೆಯನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇರಲಿದೆ. ದೂರದ ಬಂಧುಗಳ ಆಗಮನವು ಆಗಲಿದೆ. ನಿಮ್ಮ ಆರ್ಥಿಕ ದೌರ್ಬಲ್ಯವನ್ನು ಆಡುಕೊಳ್ಳಬಹುದು. ನಿಮಗೆ ಗೊತ್ತಿಲ್ಲದೇ ಚರಾಸ್ತಿಯು ಇಲ್ಲವಾಗಬಹುದು. ಇಷ್ಟವಿಲ್ಲದಿದ್ದರೂ ಕೆಲಸವನ್ನು ಮಾಡಬೇಕಾದೀತು. ಉದ್ವಿಗ್ನತೆಗೆ ದಾರಿ ಮಾಡಿಕೊಡದೇ ಸಮಚಿತ್ತದಲ್ಲಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಇರುವಿಕೆಯನ್ನು ತೋರಿಸುವ ಪ್ರಯತ್ನ ಮಾಡುವಿರಿ.
ಕನ್ಯಾ ರಾಶಿ: ಇಂದು ಅತಿಯಾದ ಆತ್ಮವಿಶ್ವಾಸದಿಂದ ಆಗುವ ತೊಂದರೆಯನ್ನು ನೀವೇ ನೋಡುವಿರಿ. ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಂಡರೆ ಉತ್ತಮ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಲಿದೆ. ಕುಟುಂಬ ಜೀವನ ಸಾಮಾನ್ಯವಾಗಿರಲಿದೆ. ಕುಟುಂಬ ಸದಸ್ಯರೊಂದಿಗಿನ ಸಂಬಂಧವು ಸಾಮರಸ್ಯದಿಂದ ಉಳಿಯುತ್ತದೆ. ಮಕ್ಕಳಲ್ಲಿ ಪಕ್ಷಪಾತದಿಂದ ಕಲಹವಾಗುವುದು. ನೌಕರರ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾಗಿರಲಿ. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ. ಒಂದೇ ರೀತಿಯಲ್ಲಿ ಜೀವನ ಸಾಗುವುದು ನಿಮಗೆ ಇಷ್ಟವಾಗದು. ಯಾವುದಕ್ಕೆ ಎಷ್ಟು ಸಮಯವನ್ನು ಕೊಡಬೇಕು ಎನ್ನುವುದನ್ನು ಪರೀಕ್ಷೆಯ ವಿದ್ಯಾರ್ಥಿಗಳು ನಿರ್ಧರಿಸಿ. ಭೂಮಿಯ ವ್ಯವಹಾರವು ಗೊಂದಲಮಯ ಆಗಬಹುದು.
ತುಲಾ ರಾಶಿ: ಇಂದು ಸಂಗಾತಿಯನ್ನು ಹುಡುಕುತ್ತಿದ್ದರೆ ನಿಮಗೆ ನಿರಾಶೆಯಾಗುತ್ತದೆ. ವಿವಾಹಿತರಾಗಿದ್ದರೆ ಇಂದು ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ. ಕೆಲಸದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನೀವು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಸಂಗಾತಿಯ ಮಾತಿನಿಂದ ಬೇಸರವಾಗಲಿದೆ. ನಿಮಗೆ ಯಾವ ಸಂಬಂಧವೇ ಇಲ್ಲದಿದ್ದರೂ ಅಪವಾದವು ಬರಲಿದೆ. ಸಮಯಪಾಲನೆಯಿಂದ ನಿಮ್ಮ ಕೆಲಸಗಳು ಸರಿಯಾಗುವುದು. ನೀರಿನಿಂದ ಭೀತಿಯು ಉಂಟಾಗುವುದು. ವಾಹನದ ಮೇಲಿನ ಪ್ರೀತಿ ವ್ಯಾಮೋಹವಾದೀತು. ನಿಮ್ಮ ಮಾತುಗಳಲ್ಲಿ ನಂಬಿಕೆ ಇಲ್ಲವಾದೀತು. ವೃತ್ತಿಯನ್ನು ಉತ್ಸಾಹದಿಂದ ಮಾಡುವಿರಿ. ಸಂಗಾತಿಯು ನಿಮಗೆ ಕೆಲವು ಉಪಯುಕ್ತ ಮಾತುಗಳನ್ನು ಹೇಳಬಹುದು.
ವೃಶ್ಚಿಕ ರಾಶಿ: ಇಂದು ಸ್ವಲ್ಪ ಸಮಯದವರೆಗೆ, ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಸರಿಯಾಗಿ ಆಗುತ್ತಿಲ್ಲ. ಅವರ ಆಕ್ರಮಣಕಾರಿ ಸ್ವಭಾವದಿಂದಾಗಿ ನಿಮ್ಮಿಬ್ಬರ ನಡುವಿನ ಅಂತರವು ಗಣನೀಯವಾಗಿ ಹೆಚ್ಚಾಗಿದೆ. ಆದರೆ ಇಂದು ಅವರ ಮನಸ್ಥಿತಿ ಸ್ವಲ್ಪಮಟ್ಟಿಗೆ ಬದಲಾಗಿದೆ. ನೀವು ಇಂದು ಹಣಕ್ಕೆ ಸಂಬಂಧಿಸಿದ ಕಾಳಜಿಗಳನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ. ಏಕೆಂದರೆ ನಿಮ್ಮ ಪ್ರಯತ್ನದಿಂದಾಗಿ ಹೊಸ ಆದಾಯದ ಮೂಲವಿರುತ್ತದೆ. ಮಹಿಳೆಯ ಕಾರಣದಿಂದ ನಿಮಗೆ ಧನನಷ್ಟವು ಆಗಬಹುದು. ಭೂಮಿಯನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನವು ಸಫಲವಾಗುವುದು. ನಿಮಗೆ ಸಪ್ಪೆ ಎನಿಸಿದ ವಿಷಯವನ್ನು ಮುಂದುವರಿಸುವುದಿಲ್ಲ. ಉದ್ಯೋಗದ ಒತ್ತಡದಿಂದ ನಿಮಗೆ ಅನಾರೋಗ್ಯದಿಂದ ಬಳಲುವಿರಿ. ಆದಾಯವನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾದೀತು. ಆಸ್ತಿಯ ಕಲಹವನ್ನು ಮನೆಯಲ್ಲಿಯೇ ಇತ್ಯರ್ಥ ಮಾಡಿಕೊಳ್ಳಿ. ಕಲಾವಿದರಿಗೆ ಅವಕಾಶವು ಬರುವುದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ