Horoscope: ಈ ರಾಶಿಯವರಿಗೆ ಇಂದು ಪ್ರೇಮದಿಂದ ವಂಚನೆಯಾಗಬಹುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 10 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಇಂದು ಪ್ರೇಮದಿಂದ ವಂಚನೆಯಾಗಬಹುದು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 10, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ. ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅಶ್ವಿನಿ, ಯೋಗ: ವಿಷ್ಕಂಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:56 ರಿಂದ 09:29 ರ ವರೆಗೆ, ಗುಳಿಕ ಕಾಲ 11:01 ರಿಂದ ಮಧ್ಯಾಹ್ನ 12:34ರ ವರೆಗೆ.

ಧನು ರಾಶಿ : ನೀವು ಇನ್ನೊಬ್ಬರ ತಪ್ಪಿನಿಂದ ಕಲಿಯುವಿರಿ. ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ಮನಸ್ಸಿನೊಳಗೆ ಹಲವು ಗೊಂದಲಗಳನ್ನು ಇಟ್ಟುಕೊಂಡು ಚಡಪಡಿಸುವಿರಿ. ಇಂದು ನಿಮಗೆ ಏನಾದರೂ ವಿಶೇಷವಾದ ವಸ್ತುವು ಸಿಗಬಹುದು. ಪ್ರೇಮದಿಂದ ವಂಚನೆಯಾಗಬಹುದು. ಹಣವನ್ನು ಸಾಲವಾಗಿ ಯಾರಿಂದಲೂ ಪಡೆಯಲು ಹೋಗುವುದು ಬೇಡ. ನಿಮ್ಮ ಮನೆಯನ್ನು ನವೀಕರಿಸಲು ಬೇಕಾದ ತಯಾರಿಯಲ್ಲಿ ಇರುವಿರಿ. ಚಂಚಲವಾದ ಮನಸ್ಸನ್ನು ನೀವು ಒಂದೇ ಕಡೆ ನಿಲ್ಲಿಸುವುದು ಕಷ್ಡವಾದೀತು. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಪೂರ್ವ ತಯಾರಿ ಇಲ್ಲದೇ ಯಾವ ಕಾರ್ಯವನ್ನೂ ಮಾಡುವುದು ಸರಿಯಾಗದು.

ಮಕರ ರಾಶಿ : ಹಳೆಯ ದಾಯಾದಿ ಕಲಹವು ಪುನಃ ಆರಂಭವಾಗಬಹುದು. ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ಕಳ್ಳರ ಭೀತಿಯಿಂದ ನಿಮಗೆ ಚಿಂತೆಯಾಗಬಹುದು. ಕ್ಷಣಕಾಲದ ಕೋಪವನ್ನು ನೀವು ನಿಯಂತ್ರಣವನ್ನು ಇಟ್ಟುಕೊಳ್ಳುವುದು ಅನಿವಾರ್ಯ. ನೀವು ನಿಮ್ಮದೇ ಕಲ್ಪನಾ ಲೋಕದಲ್ಲಿ ಹೆಚ್ಚು ಇರುವಿರಿ. ವ್ಯಾಪಾರದಲ್ಲಿ ಹೊಸ ಹೂಡಿಕೆ ಮಾಡಲು ಮನಸ್ಸಿರುವುದು. ಸ್ಥಿರಾಸ್ತಿಯನ್ನು ಹೆಚ್ಚು ಮಾಡಿಕೊಳ್ಳುವ ಬಯಕೆ ಅತಿಯಾದೀತು. ಹಿರಿಯರ ಮಾತನ್ನು ಧಿಕ್ಕರಿಸಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು. ಅನಾರೋಗ್ಯದಿಂದ ಇಂದಿನ ಕಾರ್ಯಕ್ಕೆ ತಡೆಯುಂಟಾದೀತು. ಅತಿಯಾದ ಮಾತಿನಿಂದ ನಿಮ್ಮನ್ನು ಅಳೆಯಬಹುದು.

ಕುಂಭ ರಾಶಿ : ಇಂದು ಅಧಿಕಾರಗಳ ಜೊತೆ ವಾಗ್ವಾದ ಮಾಡುವ ಸ್ಥಿತಿ ಬರಬಹುದು. ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ನೀವು ಭಾವೋದ್ವೇಗದಲ್ಲಿ ನಿರ್ಧಾರ ತೆಗೆದುಕೊಂಡು ಅನಂತರ ಪಶ್ಚಾತ್ತಾಪಪಡುವಿರಿ. ನಿಮ್ಮ ಸಂಗಾತಿಯಿಂದ ಇಂದು ಹಲವು ವಿಚಾರಕ್ಕೆ ಬೆಂಬಲವನ್ನು ಪಡೆಯುವಿರಿ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಪ್ರಗತಿಯು ಆಗಬೇಕಾಗಿದೆ. ಸಹೋದ್ಯೋಗಿಗಳ ಜೊತೆ ನಿಮ್ಮ ಅಸಹಜ ಪ್ರವೃತ್ತಿಯನ್ನು ತೋರಿಸುವಿರಿ. ಪ್ರಯೋಜನವಿಲ್ಲದೇ ನೀವು ಯಾರನ್ನೂ ಇಂದು ಮಾತನಾಡಿಸಲಾರಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ತಂದೆಯ ಜೊತೆ ಸಂಬಂಧವು ಚೆನ್ನಾಗಿ ಇರುವವಂತೆ ನೋಡಿಕೊಳ್ಳಿ.

ಮೀನ ರಾಶಿ : ಇಂದು ನೀವೊಬ್ಬರೇ ಯತ್ನಿಸುವ ಕಾರ್ಯಗಳಲ್ಲಿ ಜಯವು ಪೂರ್ಣ ಪ್ರಮಾಣದಲ್ಲಿ ಸಿಗದು. ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಇಂದು ನೀವು ನಿಮ್ಮವರಿಗೆ ಹೆಚ್ಚು ಖರ್ಚನ್ನು ಮಾಡಬೇಕಾದೀತು. ನಿಮ್ಮ ಅನಗತ್ಯ ಖರ್ಚುಗಳನ್ನು ನೀವು ನಿಗ್ರಹಿಸಬೇಕು. ವ್ಯಾಪಾರ ಮಾಡುವವರು ಬಯಸಿದ ಅನುಕೂಲಗಳು ಸಿಗದಿದ್ದರೆ ಸ್ವಲ್ಪ ಕಸಿವಿಸಿಗೊಳ್ಳಬಹುದು. ಕುಟುಂಬದ ಯಾವುದಾದರೂ ಸದಸ್ಯರಿಂದ ನೀವು ಮನ ನೋಯುವ ಸಾಧ್ಯತೆ ಇದೆ. ಯಾರದೋ ಕಾರ್ಯಕ್ಕೆ ನೀವು ಶ್ರಮಿಸಬೇಕಾದೀತು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ಬಂಧುಗಳ ಒಡನಾಟದಿಂದ ನೋವನ್ನು ಕಳೆಯುವಿರಿ. ದೇಹದಂಡನೆಯಲ್ಲಿ ಜಾಗರೂಕತೆ ಇರಲಿ.

-ಲೋಹಿತ ಹೆಬ್ಬಾರ್-8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ