Horoscope: ಇಂದು ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 11, 2024 | 12:45 AM

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 11 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಇಂದು ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು
ದಿನಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ:
ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಪ್ರೀತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:55 ರ ವರೆಗೆ, ಗುಳಿಕ ಕಾಲ 09:28 ರಿಂದ ಬೆಳಿಗ್ಗೆ 11:01ರ ವರೆಗೆ.

ಧನು ರಾಶಿ : ನೀವು ಪ್ರಯಾಣವನ್ನು ಅನಿವಾರ್ಯ ಕಾರಣಕ್ಕೆ ಮಾಡಬೇಕಾಗಬಹುದು. ಅನಿರೀಕ್ಷಿತ ಎದುರಾದ ಖರ್ಚಿನಿಂದಾಗಿ ಸ್ನೇಹಿತರಲ್ಲಿ ಹಣವನ್ನು ಕೇಳುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ಮುಂದಿನ ಕಾರ್ಯದಲ್ಲಿ ಆಗುವ ಖರ್ಚುಗಳ ಬಗ್ಗೆ ತಲೆಕೆಡಿಕೊಳ್ಳಬಹುದು. ಎಲ್ಲರ ಮೇಲೂ ನಂಬಿಕೆ ಇಟ್ಟುಕೊಳ್ಳುವುದು ಸಾಧ್ಯವಾಗದು. ಅದೃಷ್ಟವು ನಿಮ್ಮನ್ನು ಕಾಪಾಡಬಹುದು. ಇಂದು ನಿಮಗೆ ಅನಗತ್ಯ ಎನಿಸದರೂ ಕೆಲವು ಖರ್ಚನ್ನು ನಿಮ್ಮ ಸಂತೋಷ, ಪ್ರತಿಷ್ಠೆಗಾಗಿ ಮಾಡುವಿರಿ. ಇಂದು ಯಾವುದೋ ಆಲೋಚನೆಯಲ್ಲಿ ಮಗ್ನರಾದಂತೆ ತೋರುತ್ತದೆ. ಯಾರಾದರೂ ನಿಮ್ಮನ್ನು ಚೇಡಿಸಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಧಾರ್ಮಿಕ ಆಚರಣೆಯು ನಿಮ್ಮ ಮನಸ್ಸಿಗೆ ಹಿತವೆನಿಸುವುದು.‌ ಉದ್ಯೋಗದಲ್ಲಿ ಒತ್ತಡವು ಅಧಿಕವಾಗಿ ಇರಲಿದೆ.

ಮಕರ ರಾಶಿ : ನೀವು ಹಿರಿಯರ ಜೊತೆ ಗೌರವಯುತವಾಗಿ ವರ್ತಿಸುವ ಅವಶ್ಯಕತೆ ಇರುವುದು. ಕಾರ್ಯಗಳು ಶೀಘ್ರವಾಗಿ ಫಲಿಸದೇ ಇರುವುದು ನಿಮಗೆ ಬೇಸರ ತಂದೀತು. ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ವ್ಯವಹಾರದಲ್ಲಿ ಎಚ್ಚರವಿರಲಿ. ಒಮ್ಮುಖ ನಿರ್ಧಾರಗಳನ್ನು ಮಾಡುವುದನ್ನು ಬಿಡಿ. ಅನಾಹುತಕ್ಕೆ ಕಾರಣವಾಗಲಿದೆ. ಆರಕ್ಕೇರದ ಮೂರಕ್ಕಿಳಿಯದ ದಿನವಿಂದು ನಿಮಗೆ. ವೈದ್ಯಕೀಯ ಕ್ಷೇತ್ರದಲ್ಲಿ ಒತ್ತಡವು ಅಧಿಕಾಗಿರುವುದು. ನಿಮ್ಮ ಸ್ವಭಾವವನ್ನು ತಿದ್ದಿಕೊಳ್ಳಬೇಕಾಗುವುದು. ದುಸ್ಸ್ವಭಾವವನ್ನು ಹೆಚ್ಚಿಸಿಕೊಳ್ಳುವಿರಿ. ಹಿತಶತ್ರುಗಳು ಲಾಭವನ್ನು ತಪ್ಪಿಸುವರು. ಯಾರದ್ದಾದರೂ ಜೊತೆ ನೀವು ನಿಮ್ಮನ್ನು ಹೋಲಿಸಿಕೊಳ್ಳುವಿರಿ. ಸಮಾಜದಿಂದ ಸಿಗುವ ಗೌರವವು ನಿಮಗೆ ಬಂಧನದಂತೆ ಅನ್ನಿಸಬಹುದು. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು.

ಕುಂಭ ರಾಶಿ : ಇಂದು ನಿಮಗೆ ಅಧಿಕ ಸಂಪತ್ತಿನ ವ್ಯಯವು ಇರಲಿದೆ. ಕಾರ್ಯ ಮಾಡುವ ಧೈರ್ಯವಿದ್ದರೂ ಕಾರ್ಯದಲ್ಲಿ ನಿರಾಸಕ್ತಿಯೂ ಕಾಣಿಸಬಹುದು. ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯವಾಗುತ್ತವೆ. ಆಲಸ್ಯದಿಂದ ಸಿಗುವ ಸಂಪತ್ತು ವ್ಯರ್ಥವಾಗುತ್ತದೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಬೇಕು. ಭೂಮಿಯ ವ್ಯವಹಾರದಲ್ಲಿ ಮಾತುಕತೆಗಳು ಆಗಲಿವೆ. ಮಾತಿನಿಂದ ಹಲವರಿಗೆ ಖುಷಿಯಾಗಲಿದೆ.‌ ಸ್ತ್ರೀಯರಿಗೆ ಹೊಸತನ್ನು ಏನಾದರೂ ಮಾಡುವ ಬಗ್ಗೆ ಆಸಕ್ತಿ ಬರಬಹುದು. ಸಂಗಾತಿಯ ಮನೋಭಾವವನ್ನು ಅರಿತುಕೊಳ್ಳಲು ಕಷ್ಟವಾದೀತು. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡಬಹುದು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು. ಇಂದಿನ ಆದಾಯದಿಂದ ನಿಮ್ಮ ಪಡೆಯಬೇಕಾದುದನ್ನು ಪಡೆಯುವಿರಿ.

ಮೀನ ರಾಶಿ : ಇಂದು ನೀವು ಮನಸ್ಸಿನ ಕಿರಿಕಿರಿಯನ್ನು ಅನುಭವಿದೇ ಅನ್ಯ ಮಾರ್ಗವಿರದು. ಸ್ವಬುದ್ಧಿಯಿಂದ ಕಾರ್ಯಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರೇಮವು ಸನ್ಮಾರ್ಗದಲ್ಲಿ ಕರೆದುಕೊಂಡು ಹೋಗುವುದಿಲ್ಲ. ಸಂಗಾತಿಯೊಂದಿಗೆ ಕಲಹವಾಗಲಿದೆ. ಜಾಗರೂಕರಾಗಿ ಕಾಲಿಡಿ. ಕಲಾವಿದರಿಗೆ ಹೆಚ್ಚಿನ ಸ್ಥಾನಗಳು ಸಿಗಬಹುದು. ನಂಬಿಕೆಯನ್ನು ಕಳೆದುಕೊಳ್ಳಬೇಕಾದ ದಿನವೂ ಇದಾಗಿರುತ್ತದೆ‌. ದುಡುಕಿ ಯಾವದೋ ಅಪರಿಹಾರ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಏಕಾಂತವನ್ನು ಹೆಚ್ಚು ಇಷ್ಟಪಡುವಿರಿ. ನಿಮ್ಮದಾದ ಸ್ವತಂತ್ರ ಆದಾಯವನ್ನು ಬೆಳೆಸಿಕೊಳ್ಳುವ ಬಗ್ಗೆ ಸೂಕ್ತ ನಿರ್ಧಾರವನ್ನು ಮಾಡುವಿರಿ. ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು.

-ಲೋಹಿತ ಹೆಬ್ಬಾರ್ – 8762924271 (what’s app only)