AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಮಕ್ಕಳನ್ನು ದೂರವಾಗಿ ಬೇಸರಗೊಳ್ಳುವಿರಿ, ಸರ್ಕಾರಿ ಕೆಲಸ ಮಾಡುವವರಿಗೆ ಶುಭ ದಿನ

ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರಾಗಿದ್ದರೇ, 22 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಮಕ್ಕಳನ್ನು ದೂರವಾಗಿ ಬೇಸರಗೊಳ್ಳುವಿರಿ, ಸರ್ಕಾರಿ ಕೆಲಸ ಮಾಡುವವರಿಗೆ ಶುಭ ದಿನ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 22, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:50 ರಿಂದ 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:31 ರಿಂದ ಮಧ್ಯಾಹ್ನ 12:31 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ.

ಮೇಷ ರಾಶಿ: ನಿಮ್ಮ ಉತ್ತಮ‌ವಾದ ನಡವಳಿಕೆಯೇ ಸಮೀಪಕ್ಕೆ ಜನರು ಬರುವಂತೆ ಮಾಡಿದೆ. ಸ್ನೇಹಿತರೊಂದಿಗೆ ಇದ್ದು ಅವರಿಗೆ ಮೃಷ್ಟಾನ್ನ ಭೋಜನವನ್ನು ಕೊಟ್ಟು ಆನಂದಿಸುವಿರಿ. ಇಚ್ಛೆಗೆ ಅನುಸಾರವಾಗಿ ಕುಟುಂಬದಲ್ಲಿ ನಡೆದುಕೊಳ್ಳುವರು. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಭೇಟಿಯಾಗಿ ಕೃತಜ್ಞತೆಯ ಭಾವವನ್ನು ಅರ್ಪಿಸುವರು.‌ ಉದ್ಯೋಗವು ನಿಮ್ಮ ಹಿಡಿತಕ್ಕೆ ಬರಲು ಪ್ರಯತ್ನಿಸುವಿರಿ. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು.

ವೃಷಭ ರಾಶಿ: ಇಂದು ಮನೆಯಲ್ಲಿ ಧಾರ್ಮಿಕವಾದ ಕರ್ಮಗಳು ನಿಮ್ಮಿಂದ ಆಗಲಿದೆ. ಒಂದಾದಮೇಲೊಂದರಂತೆ ಬರುವ ಕೆಲಸಗಳು ನಿಮಗೆ ಒತ್ತಡವೆನಿಸಬಹುದು. ಕ್ಷಣಕಾಲ ಏನನ್ನೂ ಯೋಚಿಸದೇ ಇರಿ.‌ ಮನಸ್ಸು ಶಾಂತವಾದ ಬಳಿಕ ನಿಮ್ಮ ಕಾರ್ಯಗಳನ್ನು ಆರಂಭಿಸಿ.‌ ವೇಗವಾಗಿ ಅದು ಮುಕ್ತಾಯಗೊಳ್ಳುವುದು. ಅಪಮಾನದ ಘಟನೆಗಳು ನಡೆಯಬಹುದು. ಅದಕ್ಕೆ ಉತ್ತರಿಸಲು ಹೋಗಿ ಇನ್ನೊಂದಿಷ್ಟು ಕೆಸರಿನ್ನು ಮೈಗೆ ಹಚ್ಚಿಕೊಳ್ಳುವ ಕೆಲಸವಾದೀತು. ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ಉತ್ತಮ ಉದ್ಯೋಗವು ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಕೆಲವಾರು ಸಂಗತಿಗಳನ್ನು ಅರ್ಥಮಾಡಿಕೊಳ್ಳಬೇಕಿದೆ. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶ ಸಿಗದು. ಕೆಲವು ಸನ್ನಿವೇಶವು ನಿಮಗೆ ಇಷ್ಟವಾಗದು. ಅದರೂ ಅನಿವಾರ್ಯ ಎನಿಸೀತು. ಕೋಪವನ್ನು ಬಿಟ್ಟರೂ ಬಿಡಲಾಗದು. ನಕಾರಾತ್ಮಕ ಸೂಚನೆ ನಿಮಗೆ ಸಿಗಲಿದ್ದು, ಅದನ್ನು ನಿರ್ಲಕ್ಷ್ಯ ಮಾಡುವಿರಿ. ಸಮಾಧಾನದ ಚಿತ್ತವು ಅನೇಕ ವಿಚಾರಕ್ಕೆ ಪೂರಕ.

ಮಿಥುನ ರಾಶಿ: ನಿಮ್ಮ ಆಲೋಚನೆಗಳಿಂದ ನಿಮಗೆ ಉನ್ನತಸ್ಥಾನ ಲಭಿಸುವುದು. ನಿರ್ಲಕ್ಷ್ಯವನ್ನು ಮಾಡದೇ ಕೆಲಸಗಳನ್ನು ಮಾಡಿ ಮುಗಿಸಿ. ಹಣವನ್ನು ಹೂಡಿಕೆ ಮಾಡಲು ಮುಂದಾಲೋಚನೆಯನ್ನು ಇಟ್ಟುಕೊಂಡು ಮಾಡಿ. ಮಕ್ಕಳಿಂದ‌ ಸಂತೋಷವನ್ನು ಪಡೆಯುವಿರಿ. ಶುಭ ಸುದ್ದಿಯು ನಿಮ್ಮ ಕೆಲಸಕ್ಕೆ ಉತ್ತೇಜನವನ್ನು ನೀಡುತ್ತದೆ. ವ್ಯಾಪಾರದಲ್ಲಿ ತೊಡಗಿರುವವರು ಅಪರಿಚಿತರನ್ನು ಪೂರ್ಣವಾಗಿ ನಂಬುವುದು ಬೇಡ. ಉದ್ಯೋಗಸ್ಥರಿಗೆ ಇಂದು ಬಿಡುವಿಲ್ಲದ ದಿನವಾಗಿರುತ್ತದೆ. ನಿಮಗೆ ಕೆಲವು ಹೆಚ್ಚುವರಿ ಜವಾಬ್ದಾರಿಗಳನ್ನು ಕೊಡಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಬದಲಾವಣೆ ಇರಲಿದೆ. ವ್ಯವಹಾರದಲ್ಲಿ ನಿಮ್ಮ ನಿರ್ಧಾರಗಳೇ ಅಂತಿಮವಾಗುವುದು. ಯಶಸ್ಸಿನ ಗುಟ್ಟನ್ನು ನೀವು ಯಾರಿಗೂ ಹೇಳಲಾರಿರಿ. ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವರು. ಸರಳವಾದ ನಿಮ್ಮ ವ್ಯಕ್ತಿತ್ವಕ್ಕೆ ಯಾರೂ ಮನಸೋಲುವರು.

ಕರ್ಕ ರಾಶಿ: ನಿಮ್ಮ ಅಗತ್ಯದ ಹಣವನ್ನು ಪೂರೈಸಲು ಶ್ರಮಪಡುವಿರಿ. ನಾಳಿನ ಬಗ್ಗೆ ಚಿಂತೆ ನಿಮಗಿರಲಿದೆ. ಪಾಪಪ್ರಜ್ಞೆಯು ನಿಮ್ಮನ್ನು ಕಾಡಿ ಮನಸ್ಸು ದುರ್ಬಲವಾಗಬಹುದು. ಹೊಸ ಮನೆಯನ್ನು ಖರೀದಿಸುವ ಯೋಚನೆ ಮಾಡುವಿರಿ. ನಿಮಗೆ ವಿರುದ್ಧವಾದ ಅಭಿಪ್ರಾಯಗಳು ಬರಬಹುದು. ನೆಮ್ಮದಿಗೆ ಭಂಗವನ್ನು ತರುವ ಘಟನೆಗಳು ನಡೆಯಲಿವೆ. ನಿಮ್ಮ ಸ್ವಂತ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಲು ಕಷ್ಟವಾದೀತು. ಸಹೋದರರ ಜೊತೆ ಮನಸ್ತಾಪ ಬರಬಹುದು. ಕೊಡಬೇಕಾದವರ ಹಣವನ್ನು ಹಾಗೆಯೇ ಇಟ್ಟುಕೊಳ್ಳುವಿರಿ. ನಿಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಂಕೋಚವಾಗಬಹುದು. ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದ್ದರೆ ಲಾಭವು ಇರುವುದು. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ಯಾರಿಂದಲೋ ನಿಮಗೆ ಸಂಕಟವಾಗುವುದು. ಆಕಸ್ಮಿಕವಾಗಿ ವಿವಾಹ ಮಾತುಕತೆಗೆ ತಯಾರಿಯಾಗಬಹುದು.

ಸಿಂಹ ರಾಶಿ: ಯಾರನ್ನೋ ಮೆಚ್ಚಿಸಲು ನಿಮ್ಮ ಸಮಯವನ್ನು ವ್ಯಯಿಸುವಿರಿ. ಅದರಿಂದ ಯಾವ ಲಾಭವೂ ಆಗದು. ಭೂವ್ಯವಹಾರದಲ್ಲಿ ಅನುಕೂಲಕರವಾದ ಸನ್ನಿವೇಶಗಳನ್ನು ಸೃಷ್ಟಿ ಮಾಡಿಕೊಳ್ಳುವಿರಿ. ಹಳೆಯ ನೆನಪಿನ ಜೊತೆ ದಿನವನ್ನು ಕಳೆಯಬೇಡಿ. ನಿಮ್ಮ ಕಾರ್ಯಗಳನ್ನು ಸಹೋದ್ಯೋಗಿಗಳು ಮೆಚ್ಚಬಹುದು. ನಿಮ್ಮ ಮಾತು ಖುಷಿಯನ್ನು ನೀಡುತ್ತದೆ. ವಿಶ್ವಾಸವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿ. ನೀವು ಇಂದು ಮಾನಸಿಕವಾಗಿ ಕುಗ್ಗಿದ ಕಾರಣ ಕಾರ್ಯದಲ್ಲಿ ಪ್ರಗತಿಯ ಕುಂಠಿತವಾಗುವುದು. ನಿಮ್ಮ ಮೇಲೆ ತಪ್ಪಾದ ಆರೋಪವು ಬರಬಹುದು. ಕಾನೂನನ್ನು ಪಾಲಿಸಬೇಕಾಗುವುದು. ನಿಮ್ಮ ಗಮನಾಗಮನವನ್ನು ಯಾರಾದರೂ ತಿಳಿದುಕೊಳ್ಳುತ್ತಿರಬಹುದು. ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಜೀವನಕ್ಕೆ ಕೆಲವು ಮಾರ್ಪಾಡುಗಳು ಅನಿವಾರ್ಯವಾದೀತು. ಅನಿಶ್ಚಿತತೆಯು ನಿಮ್ಮ ಮೇಲೆ ದಟ್ಟವಾದ ಪ್ರಭಾವವನ್ನು ಬೀರಬಹುದು.

ಕನ್ಯಾ ರಾಶಿ: ದುಶ್ಚಟಗಳು ನಿಮ್ಮ ವ್ಯಕ್ತಿತ್ವವನ್ನು ಘಾಸಿಗೊಳಿಸಲಿವೆ. ಹಣದ ಆಮಿಷವನ್ನು ತೋರಿಸಿ ನಿಮ್ಮನ್ನು ವಂಚಿಸಬಹುದಾಗಿದೆ. ನಿಮ್ಮ ಮಾತುಗಳು ದುರುದ್ದೇಶದಿಂದ ಕೂಡಿದೆ ಎಂದು ನಿಮಗಾಗದವರು ಗುಲ್ಲೆಬ್ಬಿಸಬಹುದು. ಇಂದು ನಿಮ್ಮ ಹಳೆಯ ವಸ್ತುಗಳನ್ನು ಮಾರಾಟ ಮಾಡುವಿರಿ. ಹಿತಶತ್ರುಗಳು ನಿಮಗೆ ಮಾಡಿದ ಕೆಡುಕು ನಿಮಗೆ ಒಳ್ಳೆಯದೇ ಆಗಲಿದೆ. ಸರ್ಕಾರಿ ಕೆಲಸ ಮಾಡುವವರಿಗೆ ಉನ್ನತ ಸ್ಥಾನದ ವಾರ್ತೆ ಬರುವುದು. ದೇವಾಲಯದಲ್ಲಿ ನಿಮ್ಮ ಹೆಚ್ಚಿನ ಸಮಯವು ಕಳೆದುಹೋಗುವುದು. ನೀವು ಉದ್ಯೋಗ ಬದಲಾವಣೆಯ ನಿರೀಕ್ಷೆಯಲ್ಲಿದ್ದರೆ, ನೀವು ಬಹಳ ದಿನಗಳ ಅನಂತರ ವಿವಿಧ ಅವಕಾಶಗಳನ್ನು ಪಡೆದುಕೊಳ್ಳುವಿರಿ. ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಓಡಾಟದಿಂದ ಸಮಯ ವ್ಯರ್ಥ ಮಾಡುವಿರಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!