Horoscope: ಈ ರಾಶಿಯವರು ತಮ್ಮ ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಇನ್ನಷ್ಟು ಸಮಸ್ಯೆ ಮಾಡಿಕೊಳ್ಳುವಿರಿ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 14 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ಈ ರಾಶಿಯವರು ತಮ್ಮ ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಇನ್ನಷ್ಟು ಸಮಸ್ಯೆ ಮಾಡಿಕೊಳ್ಳುವಿರಿ
ಈ ರಾಶಿಯವರು ತಮ್ಮ ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಇನ್ನಷ್ಟು ಸಮಸ್ಯೆ ಮಾಡಿಕೊಳ್ಳುವಿರಿ

Updated on: Jun 14, 2024 | 12:02 AM

ದಾವಣಗೆರೆಯಲ್ಲಿ ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜೂನ್. 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ವಜ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:56 ರಿಂದ 12:33ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:47 ರಿಂದ 05:24ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:42 ರಿಂದ 09:19ರ ವರೆಗೆ.

ಮೇಷ ರಾಶಿ: ಇಂದು ಸಮಾಜ ಗುರುತಿಸುತ್ತಿಲ್ಲ‌ ಎಂಬ ಕೊರಗು ಕಾಡಬಹುದು. ಬರಬೇಕಾದ ಸಂಪತ್ತು ನಿಮ್ಮ ಕೈಸೇರುವ ನಿರೀಕ್ಷೆ ಇರಲಿದೆ. ನಿಮ್ಮ ಕಾರ್ಯಕೌಶಲಕ್ಕೆ ನಿಬ್ಬರಗಾಗುವರು. ಒಂದೇ ವಿಚಾರವನ್ನು ಕೇಳಿ ಮನಸ್ಸು ಭಾರವಗಲಿದೆ. ಸ್ವಂತ ಉದ್ಯೋಗವನ್ನು ನಡೆಸಲು ಕಷ್ಟವೆಂದು ಅನ್ನಿಸಬಹುದು. ಭೋಗಜೀವನಕ್ಕೆ ಇಂದು ಹೆಚ್ಚು ಒತ್ತು ನೀಡುವಿರಿ. ಅಪರಿಚಿತ ಕರೆಗಳು ಅಧಿಕವಾಗುವುದು. ಇನ್ನೊಬ್ಬರಿಗೆ ಬೋರೆನಿಸುವಷ್ಟು ಮಾತನಾಡುವಿರಿ. ಹಿಂದಿನ ಆಚರಣೆಯ ಬಗ್ಗೆ ನಿಮಗೆ ಪ್ರೀತಿ ಬಂದು ಅದನ್ನು ಆಚರಿಸುವ ಮನಃಸ್ಥಿತಿ ಇರಲಿದೆ. ಪರಿಶ್ರಮದಿಂದ ಸ್ವಲ್ಪ ಸಂಪತ್ತು ಬರಬಹುದು. ನಿಮ್ಮಿಂದ ಹಣದ ಸಹಾಯವನ್ನು ಬಯಸುವವರು ವಂಚಿಸಲೂ ಸಾಧ್ಯವಿದೆ. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ.

ವೃಷಭ ರಾಶಿ: ನೀವು ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಇನ್ನಷ್ಟು ಸಮಸ್ಯೆಯನ್ನು ಮಾಡಿಕೊಳ್ಳುವಿರಿ. ಆದರೆ ನಿಮ್ಮ ನಿರ್ಧಾರವು ಅಚಲವಾಗಿರಲಿ. ರಾಜಕಾರಣಿಗಳ ಭೇಟಿಯಾಗಿ ಜೀವನದಲ್ಲಿ ಹೊಸ ಮಾರ್ಗವನ್ನು ತುಳಿಯುವ ಅವಕಾಶ ನಿಮಗೆ ಸಿಗಲಿದೆ. ನಿಮ್ಮ ಇಂದಿನ ಕೆಲಸದಿಂದ ಅಧಿಕಾರಿಗಳು ಸಂತೋಷಪಡುವಿರಿ. ನಿಮಗೆ ಹೆಚ್ಚಿನ ಸ್ಥಾನವೂ ಸಿಗಬಹುದು. ಪ್ರಾಮಾಣಿಕ ವ್ಯವಹಾರಕ್ಕೆ ಇಂದು ಫಲವು ಸಿಗಬಹುದು. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವು ದೂರಾಗುವುದು. ಯಾರನ್ನೋ ನಂಬಿ ಮೋಸ ಹೋಗಬಹುದು. ಅಧ್ಯಾತ್ಮವು ನಿಮಗೆ ಇಷ್ಟವಾಗುವುದು. ಫಲಾಪೇಕ್ಷೆಯಿಲ್ಲದೇ ಕರ್ತವ್ಯಗಳನ್ನು ಮಾಡಿರಿ. ಹೆಚ್ಚು ಸಮಯವನ್ನು ಕುಟುಂಬದೊಂದಿಗೆ ಕಳೆಯುವಿರಿ. ಆಲೋಚನೆ ಮಾಡುವಷ್ಟರಲ್ಲಿ ಕೆಲಸವೇ ಮುಗಿಯಬಹುದು. ಯಾರ ಮಾತುಗಳೂ ನಿಮಗೆ ಸಹ್ಯವಾಗದು. ದ್ವಂದ್ವ ನಿಲುವನ್ನು ನೀವು ಸರಿ ಮಾಡಿಕೊಳ್ಳುವ ಅವಶ್ಯಕತೆ ಇರುವುದು.

ಮಿಥುನ ರಾಶಿ: ಇಂದು ಇನ್ನೊಬ್ಬರ ತಂಟೆಗೆ ಹೋಗದೇ ನಿಮ್ಮ ಶಿಸ್ತಿನಲ್ಲಿ ನೀವಿರಿ. ನಕಾರಾತ್ಮಕ ಆಲೋಚನೆಯನ್ನು ಬಲವಂತವಾಗಿ ಕಡಿಮೆ ಮಾಡುವುದು ಉತ್ತಮ. ಇಲ್ಲವಾದರೆ ನಿಮಗೆ ಸಂತೋಷವೇ ಇರದಾಗುತ್ತದೆ. ನಿಮ್ಮ ಉದ್ಯೋಗಕ್ಕೆ ಬಂಧುಗಳ ಬೆಂಬಲವನ್ನು ಇರಬಹುದು. ಆರ್ಥಿಕ ಸಂಕಷ್ಟವೆಂದು ಚಿಂತೆಗೆ ಒಳಗಾದರೆ ತೊಂದರೆಯಾದೀತು. ವಿದೇಶದ ಕಂಪೆನಿಯಿಂದ ಉದ್ಯೋಗಕ್ಕೆ ಕರೆ ಬರಬಹುದು. ನಿಮ್ಮ ಇಷ್ಟಪಟ್ಟವರು ಇಂದು ವೈಯಕ್ತಿಕ ಕಾರಣಕ್ಕೆ ದೂರಾಗುವರು. ನೀವು ಹಳೆಯ ಸ್ನೇಹವು ಪುನಃ ನವೀಕರಣವಾಗುಉದು. ಮನೆಯಲ್ಲಿ ಸಂತೋಷಕೂಟವು ನಿರ್ಮಾಣವಾಗುವುದು. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ. ಮಿತ್ರರ ನಡುವೆ ವೈಮನಸ್ಯ ಬರಬಹುದು.

ಕರ್ಕ ರಾಶಿ: ಇಂದು ಯಾರ ಜೊತೆ ಎಷ್ಟು ಮಾತನ್ನು ಆಡಬೇಕು ಎಂಬ ಎಚ್ಚರವಿರಲಿ. ಬೇರೆಯವರಿಗೆ ಅಪಕೀರ್ತಿ ತರಲು ಹೋಗಿ ನಿಮ್ಮ ಯಶಸ್ಸನ್ನೇ ಹಾಳುಮಾಡಿಕೊಳ್ಳಬೇಕಾಗುವುದು. ಯಾವುದನ್ನೂ ಕಷ್ಟ ಎಂದುಕೊಂಡರೆ ಯಾವಾಗಲೂ ಕಷ್ಟವೇ. ಅದನ್ನು ಸರಳವಾಗಿಸುವ ವಿಧಾನವನ್ನು ಕಂಡುಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ. ಪಿರ್ತಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಕಲಹವಾಗಬಹುದುಗಬಹುದು. ನೀವು ನಡೆದುಕೊಳ್ಳುವ ರೀತಿಯು ಕೆಲವರಿಗೆ ಆದರ್ಶವಾಗಬಹುದು. ಸ್ವಲ್ಪ ಅಂತರದಲ್ಲಿ ನಿಮಗೆ ದೊಡ್ಡ ಅಪಾಯವು ತಪ್ಪಿಹೋಗಬಹುದು. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಬಹುದು. ಆಕಸ್ಮಿಕ ವಿಚಾರಕ್ಕೆ ಗಲಿಬಿಲಿಯಾಗುವಿರಿ. ಕೈಯಲ್ಲಿ ಸಾಕಷ್ಟು ಸಂಪತ್ತು ಇದ್ದರೂ, ಕುಟುಂಬದಲ್ಲಿ ಸ್ವಲ್ಪ ಅಶಾಂತಿ ಇರುತ್ತದೆ. ಸ್ವಂತಕ್ಕೆ ಪ್ರಯೋಜನವಿಲ್ಲದ ಯಾವ ಕಾರ್ಯವನ್ನೂ ನೀವು ಮಾಡಲಾರಿರಿ. ಕೋಪಗೊಂಡು ಇಡೀ ದಿನವನ್ನು ಹಾಳುಮಾಡಿಕೊಳ್ಳುವಿರಿ.