Astrology: ದಿನಭವಿಷ್ಯ: ಸಾಲಬಾಧೆಯಿಂದ ಮುಕ್ತರಾಗುವ ತವಕ, ಆಸ್ತಿ ವಿಚಾರದಲ್ಲಿ ನಿರಾಸೆ

|

Updated on: May 31, 2024 | 12:02 AM

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 31 ಮೇ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ದಿನಭವಿಷ್ಯ: ಸಾಲಬಾಧೆಯಿಂದ ಮುಕ್ತರಾಗುವ ತವಕ, ಆಸ್ತಿ ವಿಚಾರದಲ್ಲಿ ನಿರಾಸೆ
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ​​​​​ 31ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ವಿಷ್ಕಂಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:54ರಿಂದ ಮಧ್ಯಾಹ್ನ 12:31ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:44 ರಿಂದ ಸಂಜೆ 05:21ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:41 ರಿಂದ 09:17ರ ವರೆಗೆ.

ಮೇಷ ರಾಶಿ: ಸಿಕ್ಕಿದಷ್ಟನ್ನೇ ಸ್ವೀಕರಿಸಿ ತೃಪ್ತಿಪಡಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎಲ್ಲರನ್ನೂ ಶಪಿಸುವ ಅವಶ್ಯಕತೆ ಇಲ್ಲ ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ಏಕಾಗ್ರತೆಗೆ ನಾನಾ ಪ್ರಕಾರದಲ್ಲಿ ಪರೀಕ್ಷೆಗಳು ಆಗಬಹುದು. ಆರ್ಥಿಕವಾಗಿ ಇಂದು ಸ್ವಲ್ಪ ದುರ್ಬಲರಾಗುವಿರಿ. ಸಮೀಪದಲ್ಲಿದ್ದು ದೂರುವವರನ್ನು ದೂರ ಮಾಡಿಕೊಳ್ಳುವಿರಿ. ಆಗಿದ್ದನ್ನು ನೆನಪಿಸಿಕೊಳ್ಳುತ್ತ ಕುಳಿತುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಆಗಬೇಕಿರುವುದರ ಕಡೆ ಗಮನವಿರಲಿ. ನಿಮ್ಮನ್ನು ಸರಿದಾರಿಯಲ್ಲಿ ನಡೆಸುವನು. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ಬಹಳಷ್ಟು ಕಾರ್ಯಗಳಿದ್ದರೂ ಎಲ್ಲವನ್ನೂ ಬಿಟ್ಟು ಆರಾಮಾಗಿ ಇರುವಿರಿ. ಕಳೆದ ಸಮಯವನ್ನು ನೀವು ಮೆಲುಕು ಹಾಕಿ ಸಮಯ ವ್ಯರ್ಥವಾಗಬಹುದು. ಕಲಾವಿದರು ಉತ್ತಮ‌ ಅವಕಾಶವನ್ನು ಅನಿರೀಕ್ಷಿತವಾಗಿ ಪಡೆಯುವಿರಿ.

ವೃಷಭ ರಾಶಿ: ಇಂದಿನ ಕೆಲಸಗಳ ಯೋಜನೆ ಬಗ್ಗೆ ಸರಿಯಾದ ದೃಷ್ಟಿ ಇರಲಿ. ದೂರಪ್ರಯಾಣ ಸುಖಕರವಾಗಿ ಇರುವುದು.‌ ಧಾರ್ಮಿಕವಾದ ನಂಬಿಕೆ ಉಳ್ಳ ನೀವು ತೀರ್ಥಕ್ಷೇತ್ರಗಳೋ ದೇವಾಲಯಕ್ಕೋ ಭೇಟಿ ಕೊಡುವಿರಿ. ಕೆಲಸವಾಗಲಿಲ್ಲವೆಂದು ಹತಾಶವಾಗಬೇಡಿ. ಆಗುವ ಕಾಲಕ್ಕೆ ಆಗಿಯೇ ಆಗುವುದು ಎನ್ನುವ ದೃಢವಾದ ನಂಬಿಕೆಯನ್ನು ಇಟ್ಟಿರಿ. ಯಾರನ್ನೂ ಪರೋಕ್ಷವಾಗಿಯೂ ಟೀಕಿಸಬೇಡಿ. ಯಾರ ಮೇಲೂ ಅಸೂಯೆ ಬೇಡ. ಆರೋಪಗಳಿಂದ ಮುಕ್ತರಾಗುವುದು ಕಷ್ಟವಾಗುವುದು. ಇಂದು ಕುಟುಂಬದವರ ಮಾತುಗಳು ನಿಮ್ಮ ಮನಸ್ಸಿಗೆ ನಾಟಬಹುದು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು. ಸ್ಪರ್ಧಾತ್ಮಕ ವಿಚಾರದಲ್ಲಿ ಹಿಂದುಳಿಯಬೇಕಾಗುವುದು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ. ಪೂರ್ವಪುಣ್ಯವು‌ ನಿಮ್ಮನ್ನು ಕಾಪಾಡುವುದು. ಧೈರ್ಯವಾಗಿರುವಿರಿ.

ಮಿಥುನ ರಾಶಿ: ಎಲ್ಲ ಕೆಲಸವನ್ನೂ ಬೇರೆಯವರೇ ಮಾಡಲಿ ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಸ್ವಂತ ಭೂಮಿಯನ್ನು ಮಾರುವ ಸ್ಥಿತಿಯು ಎದುರಾದೀತು. ಅತ್ಯಮೂಲ್ಯವಾದ ಸಂಪತ್ತುಗಳನ್ನು ರಕ್ಷಿಸಿಕೊಳ್ಳವುದು ಉತ್ತಮ. ಯಾರೂ ತನ್ನನ್ನು ರಕ್ಷಿಸರು, ಜೊತೆಗಾರರು ಇಲ್ಲ ಎಂದುಕೊಳ್ಳುವುದು ಬೇಡ. ದೈವವು ಇರುವುದು. ಹಗುರವಾದ ಮಾತುಗಳು ನಿಮ್ಮನ್ನು ಹಗುರ ಮಾಡುವುದು. ಅತಿಯಾದ ಹಸಿವು ನಿಮ್ಮನ್ನು ಬಾಧಿಸಬಹುದು. ಜವಾಬ್ದಾರಿಯುತ ಸ್ಥಾನದಲ್ಲಿದ್ದರೆ ನಿಮ್ಮ ಕೆಲಸಗಳು ಅಚ್ಚುಕಟ್ಟಾಗಿ ಇರಬೇಕಿದೆ. ನಿಮಗೆ ಬರುವ ಆಪತ್ತುಗಳು ನಿಮ್ಮನ್ನು ಗಟ್ಟಿಯಾಗಿಸುತ್ತವೆ. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ. ಸಂಗಾತಿಯ ಮನೋರಥವನ್ನು ಈಡೇರಿಸುವುದು ಕಷ್ಟವಾಗುವುದು. ನಿಮ್ಮ ಪ್ರೇಮಪ್ರಕರಣವು ದುಃಖದಲ್ಲಿ ಕೊನೆಯಾಗಬಹುದು.

ಕಟಕ ರಾಶಿ: ತಪ್ಪನ್ನು ಒಪ್ಪಿಕೊಂಡು ಮುನ್ನಡೆದರೆ ಎಲ್ಲವೂ ಸುಖವಾಗುವುದು. ದಾಂಪತ್ಯದಲ್ಲಿ ಉಂಟಾದ ವೈಮನಸ್ಯವನ್ನು ಪ್ರಕಟಗೊಳಿಸಿದೇ ಅಲ್ಲಿಯೇ ಸರಿಮಾಡಿಕೊಳ್ಳಿ. ವಿದೇಶಕ್ಕೆ ಹೋಗಬೇಕಾಗಿಬರುವ ಸಾಧ್ಯತೆ ಇದೆ. ಯಂತ್ರಗಳ ಉದ್ಯಮವನ್ನು ಮಾಡುತ್ತಿದ್ದರೆ ಅಧಿಕಲಾಭವು ಆಗಬಹುದು‌ ಒತ್ತಡವು ನಿಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡುವುದು. ಸಾಲಬಾಧೆಯಿಂದ ಮುಕ್ತರಾಗುವ ತವಕದಲ್ಲಿರುವಿರಿ. ಯಾರಿಂದಲೂ ಅತಿಯಾದ ನಿರೀಕ್ಷಿಸದೇ ಕರ್ತವ್ಯ ಎಂದು ತಿಳಿದು ಕೆಲಸ ಮಾಡಿ. ಪ್ರಯಾಣವು ಆಯಾಸ ತರಿಸಬಹುದು. ಎಲ್ಲರ ಜೊತೆ ಜಗಳವಾಡುತ್ತ ಇರುವುದು ನಿಮಗೆ ಇಷ್ಟವಾಗಬಹುದು. ಆಸ್ತಿಯ ವಿಚಾರದಲ್ಲಿ ಆಸೆಯನ್ನು ಅತಿಯಾಗಿ ಇಟ್ಟುಕೊಳ್ಳುವಿರಿ. ಇದರಿಂದ‌ ನಿಮ್ಮ ಜೊತೆಗಾರ ಸ್ಥಿತಿಯೂ ಹದ ತಪ್ಪಬಹುದು. ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಯಾರಾದರೂ ತಪ್ಪು ತಿಳಿದಾರು ಎಂಬ ಭಾವವು ನಿಮ್ಮನ್ನು ಕಾಡಬಹುದು. ನೀವು ಹೊಸ ವಾಹನವನ್ನು ಸ್ನೇಹಿತರ ಸಹಾಯದಿಂದ ಖರೀದಿಸುವಿರಿ.