Horoscope Today: ದೃಢ ಸಂಕಲ್ಪವೇ ಈ ರಾಶಿಯವರ ಯಶಸ್ಸಿನ ಗುಟ್ಟು, ಉದ್ಯೋಗದಲ್ಲಿ ಪ್ರಗತಿ
07 ಜುಲೈ 2024ರ ನಿಮ್ಮ ರಾಶಿಭವಿಷ್ಯ: ಅನೇಕ ಜನರು ಮನರಂಜನೆ, ಮಾರ್ಗದರ್ಶನ ಅಥವಾ ತಮ್ಮ ಜೀವನದಲ್ಲಿ ಘಟಿಸುವ ಬೆಳವಣಿಗೆಗಳನ್ನು ತಿಳಿದುಕೊಳ್ಳಲು ತಮ್ಮ ಜಾತಕವನ್ನು ಓದುತ್ತಾರೆ. ಹಾಗಾದರೆ ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೇಗಿದೆ ತಿಳಿಯಿರಿ. ಯಾವ ರಾಶಿಯವರಿಗೆ ಶುಭ ಅಥವಾ ಅಶುಭ ಕಾದಿದೆ ಎಂದು ತಿಳಿಯಿರಿ.
ಜಾತಕವು ಒಬ್ಬ ವ್ಯಕ್ತಿಯ ಹುಟ್ಟಿನ ಸಮಯದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನಗಳ ಆಧಾರದ ಮೇಲೆ ಭವಿಷ್ಯದ ಮುನ್ಸೂಚನೆ ನೀಡಲಾಗುತ್ತದೆ. ಇದು ಸಾಮಾನ್ಯವಾಗಿ ಜ್ಯೋತಿಷ್ಯಶಾಸ್ತ್ರದೊಂದಿಗೆ ಸಂಬಂಧಿಸಿದೆ. ಜ್ಯೋತಿಷ್ಯವು ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ಚಿಹ್ನೆಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಧ್ರುವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 05:00ರಿಂದ 07:05ರ ವರೆಗೆ, ಯಮಘಂಡ ಕಾಲ 12:38 ರಿಂದ 02:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ 05:28ರ ವರೆಗೆ.
ಮೇಷ ರಾಶಿ: ಇಂದು ನಿಮಗೆ ಬೇರೆ ಬೇರೆ ಕಾರಣಗಳಿಂದ ಜೀವನ ಬಹಳ ಸುಂದರ ಎನಿಸುವುದು. ತೆರೆದರೆ ಬೆಳಕು, ತೆರೆಯದಿದ್ದರೆ ಕತ್ತಲು ಇರುತ್ತದೆ ಎನ್ನುವುದನ್ನು ಅರಿತುಕೊಳ್ಳಿ. ಸಂಗಾತಿಯ ಆಯ್ಕೆಯನ್ನು ನೀವೇ ಮಾಡಿ. ಪರಿಶ್ರಮವು ಎಂದಿಗಿಂತ ಅಧಿಕವಾಗಿದ್ದು, ಅದಕ್ಕೆ ಯೋಗ್ಯವಾದ ಫಲವು ಸಿಗುವುದು. ವಾಹನ ಖರೀದಿಗೆ ಓಡಾಟ ಮಾಡಬೇಕಾದೀತು. ನಿಮಗೆ ಅನೇಕ ಗೊಂದಲಗಳು ಹುಟ್ಟಿಕೊಳ್ಳಬಹುದು. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು. ಮಕ್ಕಳ ಸಂತೋಷಕ್ಕಾಗಿ ಹಣವನ್ನು ಖಾಲಿ ಮಾಡುವಿರಿ. ಅದೃಷ್ಟವನ್ನು ನಂಬಿ ಕೆಲಸವನ್ನು ಮಾಡುವಿರಿ. ಯಾವ ಸಂತೋಷವೂ ಸುಮ್ಮನೇ ಸಿಕ್ಕದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ. ಚುರುಕುತನದ ಅಗತ್ಯತೆ ಬಹಳ ಇದೆ. ಸುಮ್ನನಿದ್ದರೆ ಎಲ್ಲ ನಿಮ್ಮ ದಾಟಿ ಹೋಗುವರು.
ವೃಷಭ ರಾಶಿ: ನಿಮ್ಮ ದೃಢ ಸಂಕಲ್ಪವು ಯಶಸ್ಸಿನ ಗುಟ್ಟು ಆಗುವುದು. ಹಣವನ್ನು ಗಳಿಸುವ ಆಸೆಯು ತೀರ್ವವಾಗಿದ್ದರೂ ಸಫಲವಾಗುವುದಿಲ್ಲ. ನಿಮ್ಮ ಪ್ರಾಮಾಣಿಕ ಕೆಲಸಕ್ಕೆ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಮಿತ್ರರೆಂದು ಬಂದವರ ವಿಚಾರದಲ್ಲಿ ಜಾಗರೂಕತೆ ಇರಲಿ. ಮಾನಸಿಕವಾಗಿ ನಿಮಗೆ ಇಂದು ಅವರು ತೊಂದರೆ ಕೊಡಬಹುದು. ಪ್ರಭಾವಿಗಳ ಸಂಪರ್ಕವು ಅನಾಯಾಸವಾಗಿ ಲಭ್ಯವಾಗುವುದು. ಕುಟುಂಬ ಆಸ್ತಿಯನ್ನು ನಯವಾಗಿ ಪಡೆಯಲು ಯತ್ನಿಸುವಿರಿ. ಬರಬೇಕಾದ ಹಣವು ಬಾರದೇ ಸಾಲವನ್ನು ಮಾಡಬೇಕಾಗಬಹುದು. ಯಾರ ಒತ್ತಾಯಕ್ಕೂ ಮಣಿಯದೇ ನಿಮ್ಮದೇ ದಾರಿಯಲ್ಲಿ ಇರುವಿರಿ. ಕುಟುಂಬ ನಿರ್ವಹಣೆಯ ವಿಚಾರದಲ್ಲಿ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಬರಬಹುದು. ಕಛೇರಿಗೆ ಒಲ್ಲದ ಮನಸ್ಸಿನಿಂದ ಹೋಗುವಿರಿ. ವಿನೀತಭಾವವು ನಿಮ್ಮನ್ನು ಇಷ್ಟಪಡುವಂತೆ ಮಾಡಬಹುದು. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ.
ಮಿಥುನ ರಾಶಿ: ಇಂದು ಅಪರೂಪಕ್ಕೆ ಸಿಕ್ಕ ಸ್ನೇಹಿತರು ನಿಮ್ಮ ಬಳಿ ಹಣವನ್ನು ಖಾಲಿಮಾಡಿಸಬಹುದು. ದಾಂಪತ್ಯ ಜೀವನವು ಜೀವನ್ಮರಣದ ಮಧ್ಯದಲ್ಲಿ ಒದ್ದಾಗುತ್ತಿದ್ದು ಬದುಕಿಸಿಕೊಳ್ಳಿ. ಸ್ತ್ರೀಯರು ಮನೆಯಲ್ಲಿ ಆದ ಘಟನೆಯಿಂದ ತಾಳ್ಮೆಯನ್ನು ಕಳೆದುಕೊಳ್ಳಬಾರದು. ಸಾಹಸೊ ಪ್ರವೃತ್ತಿಯಿಂದ ನಿನಗೆ ಯಶಸ್ಸು ಸಿಗಬಹುದು. ನಿಮ್ಮವರ ಆರೋಗ್ಯವನ್ನು ನೀವು ನೋಡಿಕೊಳ್ಳುವಿರಿ. ಸಂಗಾತಿಯ ಬಗ್ಗೆ ನೀವೇ ಇಲ್ಲದ ಮಾತನಾಡುವಿರಿ. ಪೂರ್ವ ಆಲೋಚನೆಗಳು ದಿಕ್ಕು ತಪ್ಪಬಹುದು. ದ್ವೇಷವನ್ನು ಮುಂದುವರಿಸದೇ ಮುಕ್ತಾಯ ಮಾಡಿಕೊಳ್ಳಿ. ಬಂಧುಗಳ ಆಗಮನವು ನಿಮಗೆ ಕಿರಿಕಿರಿಯನ್ನು ತಂದೀತು. ಭೂಮಿಯ ಖರೀದಿಗೆ ಹಿರಿಯರ ಮಾರ್ಗದರ್ಶನವೂ ಇರಲಿ. ಮೋಜಿನ ಆಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು. ಅರಾಮಾಗಿ ಇರೋಣವೆಂದರೂ ಒತ್ತಡವು ಅಧಿಕವಾಗಿ ಇರಲಿದೆ.
ಕಟಕ ರಾಶಿ: ಇಂದು ಅನವಶ್ಯಕ ಖರ್ಚಿನ ಕಡೆ ಗಮನವಿರದು. ಹೆಚ್ಚು ಕೋಪವನ್ನು ತೋರಿಸಲಿದ್ದೀರಿ. ಯಾರ ಒತ್ತಾಯಕ್ಕೋ ಮಣಿದು ನಿಮ್ಮ ನಿರ್ಧಾರಗಳನ್ನು ಬದಲಿಸಿಕೊಳ್ಳಬೇಡಿ. ಕಛೇರಿಯಲ್ಲಿ ಉದ್ಯೋಗದ ಕಾರಣ ನಿಮ್ಮನ್ನು ದೂರದ ಊರಿಗೆ ಕಳುಹಿಸಬಹುದು. ಆಹಾರವನ್ನು ಮಿತಿವಾಗಿ ಬಳಸಿ. ಪರಿಚಯವಿಲ್ಲದವರ ಜೊತೆ ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಇಚ್ಛಿಸುವಿರಿ. ನಿಮ್ಮ ಗುರಿಯನ್ನು ತಪ್ಪಿಸಲು ಬೇಕಾದ ಪಿತೂರಿಯು ನಡೆಯಬಹುದು. ಬಾಂಧವ್ಯವನ್ನು ಗಟ್ಟಿಯಾಗಿಸಲು ಇಷ್ಟಪಡುವಿರಿ. ನಿಮ್ಮ ಮಾತಿನ ವೇಗವನ್ನು ಅರ್ಥಮಾಡಿಕೊಳ್ಳಲು ಕಷ್ಟವಾದೀತು. ಕಛೇರಿಯಲ್ಲಿ ಸ್ತ್ರೀಯರಿಂದ ಸಹಕಾರವನ್ನು ಪಡೆಯುವಿರಿ. ಭಯದಲ್ಲಿ ನೀವು ಬಹಳ ಇಂದಿನ ದಿನವನ್ನು ಕಳೆಯಬೇಕಾದೀತು. ಖಾಸಗಿ ಉದ್ಯೋಗದಲ್ಲಿ ಇರುವವರಿಗೆ ಆತಂಕವಿರಲಿದೆ. ನಿಮ್ಮಿಂದ ಉಪಕಾರವನ್ನು ಕೇಳಿ ಬರಬಹುದು.