Astrology: ಸ್ನೇಹಿತರ ವರ್ತನೆಯು ನಿಮಗೆ ವಿಚಿತ್ರವೆನಿಸಬಹುದು, ಕೆಲ ವಿಚಾರದಲ್ಲಿ ಸಂಕಟಪಡುವಿರಿ
ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 21 ಜೂನ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜೂನ್. 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶುಕ್ಲ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:58 ರಿಂದ 12:35ರ ವರೆಗೆ, ಯಮಘಂಡ ಕಾಲ 15:49ರಿಂದ 17:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:43ರಿಂದ ಬೆಳಗ್ಗೆ 09:20ರ ವರೆಗೆ.
ಮೇಷ ರಾಶಿ :ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಅಪರಿಚಿತರು ನಿಮ್ಮನ್ನು ಕಾಣಬೇಕೆಂದು ಬಂದು ಉದ್ಯೋಗದಲ್ಲಿ ಪಾಲುದಾರಿಕೆಯ ಪ್ರಸ್ತಾಪ ಮಾಡುವರು. ತಾಯಿಯ ಕಡೆಯ ಬಂಧುಗಳು ನಿಮಗೆ ಆಪ್ತರಾಗುವರು. ಇಂದು ನೀವು ಸುಳ್ಳು ಹೇಳಿ ಸಿಕ್ಕಿಬೀಳುವಿರಿ. ಸದಾ ಉದ್ವೇಗದಲ್ಲಿಯೇ ಇರುವ ನಿಮಗೆ ಇನ್ನೊಂದಿಷ್ಟು ಕೆಲಸಗಳು ಬಂದಾವು. ಯಾವುದನ್ನೂ ಅತಿಯಾಗಿ ಮನಸ್ಸಿಗೆ ಹಚ್ಚಿಕೊಳ್ಳುವುದು ಬೇಡ. ಬೇಡವೆಂದರೂ ನಿಮಗೇ ಬರಲಿದೆ. ಮನೆಯಲ್ಲಿ ಕಛೇರಿಯ ವಿಷಯವಾಗಿ ಜಗಳವೂ ನಡೆಯಬಹುದು. ದಾಂಪತ್ಯದಲ್ಲಿ ಸುಖವಿದ್ದರೂ ಒಳಗೊಳಗೇ ಸಂಶಯಗಳು ಇಬ್ಬರನ್ನೂ ಸಂತೋಷವಾಗಿ ಇಡಲು ಬಿಡುವುದಿಲ್ಲ. ಸರಿಯಾಗುವ ತನಕ ತಾಳ್ಮೆ ಇರಲಿ. ಮನಸ್ಸಿನ ಭಾರವನ್ನು ಕಳೆಯುವ ದಾರಿಗಳು ನಿಮ್ಮ ಮುಂದೆ ಇರುವುದು.
ವೃಷಭ ರಾಶಿ :ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಆರ್ಥಿಕಸ್ಥಿತಿಯು ಅಭಿವೃದ್ಧಿ ಹೊಂದಿದರೂ ಯಾವುದೋ ಕಾರಣಕ್ಕೆ ಅದು ಖಾಲಿಯಾಗುವುದು. ಅಮೂಲ್ಯವಾದ ವಸ್ತುವನ್ನು ಜೋಪಾನವಾಗಿಸಿರಿಕೊಳ್ಳಿ. ನಂಬಿಕೆಯನ್ನು ಉಳಿಸಿಕೊಳ್ಳುವುದು ನಿಮ್ಮ ಜವಾಬ್ದಾರಿಯೂ ಆಗಲಿದೆ. ಕೋಪದಿಂದ ಏನನ್ನಾದರೂ ಹೇಳಿ ಅನಂತರ ಮುಜುಗರವನ್ನು ಅನುಭವಿಸುವಿರಿ. ತಾಳ್ಮೆ ನಿಮಗೆ ಬಹಳ ಮುಖ್ಯವಾಗಲಿದೆ. ಸರ್ಕಾರದ ಕೆಲಸವು ಮುಂದಿನವಾರಕ್ಕೆ ಹೋಗಲಿದೆ. ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಪಕ್ಷಪಾತದಿಂದ ನಿಮ್ಮ ಸಂಬಂಧಗಳು ಹಾಳಾಗಬಹುದು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ.
ಮಿಥುನ ರಾಶಿ :ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನವು ಬದಲಾಗುವುದು. ಸ್ನೇಹಿತರ ವರ್ತನೆಯು ನಿಮಗೆ ವಿಚಿತ್ರವೆನಿಸಬಹುದು. ಹೇಳಿದ್ದನ್ನೇ ಮತ್ತೆ ಮತ್ತೆ ಹೇಳಿದರೆ ನಿಮ್ಮ ಬೆಲೆಯೇ ಕಡಿಮೆಯಾಗುವುದು. ಒಮ್ಮೆ ಹೇಳಿ ಸುಮ್ಮನಾಗಿ. ಹೂಡಿಕೆ ಮಾಡಿದ ಹಣದಿಂದ ಜೀವನ ನಡೆಸುವ ಸ್ಥಿತಿ ಬಂದಿದೆ ಎಂದು ಸಂಕಟಪಡುವಿರಿ. ಕೆಲವು ದಿನ ಹೀಗೆ ಇರಲಿದೆ. ದೈವದಲ್ಲಿ ಭಕ್ತಿಯಿಡಿ. ಯಾರ ಮೇಲೇ ಕುತಂತ್ರ ಮಾಡುವ ಅವಶ್ಯಕತೆ ಇಲ್ಲ. ನಿಮಗೆ ಸಿಗಬೇಕಾದುದು ಸಿಕ್ಕೇ ಸಿಗುತ್ತದೆ. ಸಿಗಲಿಲ್ಲವೆಂದರೆ ನಿಮ್ಮದಲ್ಲ ಅದು ಎಂದರ್ಥ. ಅಧಿಕಾರವನ್ನು ಸಂತೋಷಪಡಿಸಲು ಏನನ್ನಾದರೂ ಮಾಡುವಿರಿ. ಭೂಮಿಯ ವ್ಯವಹಾರ ಸದ್ಯ ಬೇಡ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಶಿಸ್ತನ್ನು ಕಾಪಾಡಿಕೊಂಡು ಕೆಲಸ ಮಾಡಿಕೊಳ್ಳುವಿರಿ. ಮೂರ್ತಿಯಾಗಲು ಪೆಟ್ಟು ತಿನ್ನಬೇಕಾಗುವುದು.
ಕರ್ಕ ರಾಶಿ :ಏನೇ ಮಾಡಿದರೂ ಚಾಂಚಲ್ಯವನ್ನು ನಿಯಂತ್ರಿಸಲಾಗದೇ ಕಷ್ಟವಾಗುವುದು. ಉದ್ಯೋಗದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರಲಿದೆ. ಬೇಸರಿಸಬೇಕಿಲ್ಲ. ಮುಂಬರುವ ದಿನಗಳು ಅವನ್ನೆಲ್ಲ ಸರಿದೂಗಿಸುವುದು ಅಧಿಕಾರಿಗಳು ನಿಮ್ಮ ಕಾರ್ಯವನ್ನು ಕಂಡು ಪ್ರಶಂಸಿಸುವರು. ಸಮಾರಂಭಗಳಿಗೆ ಅಹ್ವಾನ ಬರಬಹುದು. ರಾಜಕೀಯಕ್ಷೇತ್ರದವರು ಉತ್ತಮ ತಂತ್ರವನ್ನು ಈಗಿನಿಂದಲೇ ರೂಪಿಸಿಕೊಳ್ಳುವುದು ಉತ್ತಮ. ಕೊನೆಯ ಕ್ಷಣದವರೆಗೆ ಕಾಯಬೇಕಿಲ್ಲ. ಕಲಾವಿದರು ಕಲಾಪ್ರದರ್ಶನಕ್ಕೆ ವಿದೇಶಕ್ಕೆ ತೆರಳಬಹುದು. ಬೇಕಾದ ವ್ಯವಸ್ಥೆಯ ಜೊತೆ ಹೋಗಿ. ನಿಮ್ಮನ್ನು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳಬಹುದು. ಹಣವೂ ಗೊತ್ತಾಗದಂತೆ ಖಾಲಿಯಾದೀತು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು.
Published On - 12:02 am, Fri, 21 June 24