ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಶೋಭನ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ 15:45 ರಿಂದ 17:22 ವರೆಗೆ, ಯಮಘಂಡ ಕಾಲ ಬೆಳಗ್ಗೆ 09:18 ರಿಂದ 10:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 2:31 ರಿಂದ ಬೆಳಿಗ್ಗೆ 14:08ರ ವರೆಗೆ.
ಮೇಷ ರಾಶಿ :ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಒಳ್ಳೆಯ ಸುದ್ದಿಯನ್ನು ಇರುವುದು. ನಿಮ್ಮ ವೈವಾಹಿಕ ಜೀವನದಲ್ಲಿ ಯಾವುದೇ ಅಡೆತಡೆಗಳು ಕಂಡುಬಂದರೆ, ಅದು ಕೊನೆಗೊಳ್ಳುತ್ತದೆ. ಸಂಬಂಧಗಳಲ್ಲಿ ನಿಮ್ಮ ನಂಬಿಕೆ ಉಳಿಯುತ್ತದೆ. ಕೆಲಸದಲ್ಲಿ ನಿಯಮಗಳಿಗೆ ಸಂಪೂರ್ಣ ಗಮನವನ್ನು ನೀಡುವುದು ಅವಶ್ಯಕ. ನಿಮ್ಮ ಹಣಕಾಸಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ನೀವು ಒಂದು ಪ್ರಮುಖ ಹೆಜ್ಜೆಯನ್ನು ತೆಗೆದುಕೊಳ್ಳುವಿರಿ. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು. ತನ್ನವರ ಬಗ್ಗೆ ನಂಬಿಕೆ ಇರದು. ನಂಬಿಕೆಯಲ್ಲಿ ಪಕ್ವತೆ ಇರಲಿದೆ. ದೂರುವವರ ಬಗ್ಗೆ ಗಮನ ಮಾತ್ರ ಇರಲಿ. ಏನನ್ನೂ ಹೇಳುವುದು ಬೇಡ. ಕಾಲವೇ ಅದಕ್ಕೆ ಉತ್ತರಿಸುತ್ತದೆ.
ವೃಷಭ ರಾಶಿ :ಇಂದು ಯಾರದ್ದೋ ಮಾತನ್ನು ಕೇಳಿ ಕೆಲಸವನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಅದು ಒಪ್ಪಿಗೆಯಾಗಲಿ. ಇಂದು ನಿಮ್ಮ ಆರೋಗ್ಯ ಮತ್ತು ಸಂತೋಷಕ್ಕೆ ಸ್ವಲ್ಪ ಅಡ್ಡಿಯಾಗಬಹುದು. ಅವಿವೇಕದಿಂದ ಮಾಡಿದ ಕೆಲಸದಲ್ಲಿ ನಷ್ಟ ಮತ್ತು ಹತಾಶೆಯ ಸನ್ನಿವೇಶಗಳಿಂದ ನೀವು ಇಂದು ಸ್ವಲ್ಪ ದುಃಖಿಯಾಗುವಿರಿ. ನಿಮಗೆ ಅಪಾಯವನ್ನು ತೆಗೆದುಕೊಳ್ಳುವ ಅವಕಾಶ ಸಿಕ್ಕಿದರೆ, ಅದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುವಿರಿ. ನಿಮ್ಮನ್ನು ಆಡಿಕೊಳ್ಳುವರು. ನಿವೃತ್ತಿಯನ್ನು ಪಡೆದ ಕಾರಣ ಮನಸ್ಸಿನಲ್ಲಿ ನಾನಾ ಪ್ರಕಾರದ ಆಲೋಚನೆಗಳು ಬರುವುದು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಉದ್ಯೋಗದ ಕನಸನ್ನು ಕಾಣುತ್ತಾ ಇರುವಿರಿ. ಉತ್ತಮ ವಸ್ತುಗಳ ಖರೀದಿ ಮಾಡುವಿರಿ. ಹಳೆಯದರ ಬಗ್ಗೆ ತತ್ಸಾರ ಭಾವ ಮೂಡುವುದು.
ಮಿಥುನ ರಾಶಿ :ನಿಮ್ಮಲ್ಲಿವರ ಅವಗುಣಗಳನ್ನು ನೀವೇ ಅರ್ಥ ಮಾಡಿಕೊಂಡು ಸರಿ ಮಾಡಿಕೊಳ್ಳುವಿರಿ. ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವ ಆಶ್ವಾಸನೆ ನೀಡಿ. ಇಂದು ನೀವು ನಿಮ್ಮ ಹೆತ್ತವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಂದು ನೀವು ಕುಟುಂಬ ಮತ್ತು ಆರ್ಥಿಕ ವಿಷಯಗಳಲ್ಲಿ ಯಶಸ್ಸನ್ನು ಕಾಣುತ್ತೀರಿ. ಜೀವನೋಪಾಯದ ಕ್ಷೇತ್ರದಲ್ಲಿ ನೀವು ಯಾವುದೇ ಹೊಸ ಪ್ರಯತ್ನವನ್ನು ಮಾಡುತ್ತಿದ್ದರೆ, ಅದು ಇಂದು ಫಲ ನೀಡುತ್ತದೆ. ನೀವು ಅಧಿಕಾರದ ದುರುಪಯೋಗ ಮಾಡಿಕೊಳ್ಳುವಿರಿ. ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆಯೇ ಹೆಚ್ಚಾಗುವುದು. ನಿಮ್ಮ ಗುರಿಯನ್ನು ಸರಿಯಾಗಿ ನಿರ್ಧರಿಸಿಕೊಳ್ಳಿ. ರಾಜಕೀಯದಲ್ಲಿ ಕೆಲಸ ಮಾಡುವ ಸ್ಥಳೀಯರು ಎಚ್ಚರಿಕೆಯಿಂದ ಇರಬೇಕು. ಭವಿಷ್ಯದ ಬಗ್ಗೆ ನಿಮಗೆ ಏನೇನೋ ಆಲೋಚನೆಗಳನ್ನು ಇಟ್ಟುಕೊಳ್ಳುವಿರಿ. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ.
ಕರ್ಕ ರಾಶಿ :ಇಂದ ನಿಮಗೆ ಯಾರೋ ಮಾಡಿದ ತಪ್ಪಿಗೆ ನೀವು ತಲೆತಗ್ಗಿಸುವಂತೆ ಆಗುತ್ತದೆ. ಮಕ್ಕಳು ನಿಮ್ಮನ್ನು ಬಹಳ ಹಚ್ಚಿಕೊಳ್ಳುತ್ತಾರೆ. ಎಲ್ಲವನ್ನೂ ಕಾಲವೇ ತಿಳಿಸುತ್ತದೆ. ಗಣನೀಯ ಆರ್ಥಿಕ ಪ್ರಯೋಜನಗಳನ್ನು ನೀವು ಪಡೆಯಬಹುದು. ಇಂದು ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶಗಳು ಸಿಗುತ್ತವೆ. ನೀವು ಈ ಹಿಂದೆ ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ನೀವು ಅದನ್ನು ಪಡೆಯಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವರು. ಕಿರಿಯರಿಂದ ನೀವು ಸಲ್ಲದ ಮಾತುಗಳನ್ನು ಕೇಳುವಿರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಹೋಗಬಹುದು. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎಂದು ಅನ್ನಿಸಬಹುದು. ವ್ಯವಸ್ಥೆಯ ಕಾರಣಕ್ಕೆ ವ್ಯಕ್ತಿಯನ್ನು ದ್ವೇಷಿಸುವಿರಿ. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸುವಿರಿ.