Horoscope: ದಿನಭವಿಷ್ಯ: ಸಾಲಬಾಧೆಯು ನಿಮ್ಮನ್ನು ಅತಿಯಾಗಿ ಕಾಡಲಿದೆ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 27 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ 27ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:30ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:06 ರಿಂದ 03:43ರ ವರೆಗೆ.
ಮೇಷ ರಾಶಿ: ಬೇರೆ ಹೂಡಿಕೆಯಲ್ಲಿ ನಿಮಗೆ ಆಸಕ್ತಿ ಹೆಚ್ಚಿರುವುದು. ನೀವು ಅಂದುಕೊಂಡ ರೀತಿಯಲ್ಲಿ ನಡೆಯದೇ ವಿರುದ್ಧವಾಗಿ ನಡೆಯುವುದನ್ನು ಕಂಡು ನಿರಾಸೆಗೊಳ್ಳುವಿರಿ. ಆರೋಗ್ಯವು ಕೈ ಕೊಡಬಹುದು. ತುರ್ತು ಆಹಬೇಕಾದ ಕೆಲಸಗಳಿಗೆ ತೊಂದರೆಯಾಗಬಹುದು. ಧನಪ್ರಾಪ್ತಿಯು ಆಗುವಂತೆ ಇದ್ದರೂ ಆಗದೇ ಕೈತಪ್ಪಿ ಹೋಗಬಹುದು. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ವಿಶ್ವಾಸಘಾತದಿಂದ ನೋವಾಗಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಯಾವುದರಲ್ಲಿಯಾದರೂ ರಿಸ್ಕ್ ತೆಗೆದುಕೊಳ್ಳಲು ಬಯಸುವಿರಿ.
ವೃಷಭ ರಾಶಿ: ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು. ಒಮ್ಮೆಲೆ ಹತ್ತಾರು ವಿಚಾರಗಳಲ್ಲಿ ಆಸಕ್ತಿಯನ್ನು ಹೊಂದುವಿರಿ. ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಇಂದು ನೀವು ಬಯಸಿದ್ದನ್ನು ಪಡೆದುಕೊಳ್ಳುವ ತವಕದಲ್ಲಿ ಇರುವಿರಿ. ಅತಿಯಾದ ಆತುರದಲ್ಲಿ ಅನಾಹುತವನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಎಂದೂ ಆಗದ ವಿಚಾರದಲ್ಲಿ ನಿಮಗೆ ಆಸಕ್ತಿ ಇರುವುದು. ಹೊರಗಡೆಗೆ ಊಟಕ್ಕೆ ಹೋಗಲಿದ್ದೀರಿ. ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ಕುಟುಂಬದವರ ಜೊತೆ ಸಮಯವನ್ನು ಕಳೆಯುವಿರಿ. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ. ಬೇಕೆಂದೇ ನಿಮ್ಮನ್ನು ಕೆಣಕುವರು.
ಮಿಥುನ ರಾಶಿ: ನಿಮ್ಮ ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಇಂದು ವಾಹನದ ಸಮಯವು ವ್ಯತ್ಯಾಸವಾದ್ದರಿಂದ ನಡೆಯಬೇಕಾಗ ಸ್ಥಿತಿ ಬರಬಹುದು. ತಂದೆಯ ಜೊತೆ ಉಂಟಾದ ಮನಸ್ತಾಪದಿಂದ ಕಂಗೆಡಲಿದ್ದೀರಿ. ಮಾತುಗಾರರಾಗಿದ್ದರೆ ಒಳ್ಳೆಯ ಅವಕಾಶಗಳು ಸಿಗಲಿವೆ. ನಂಬಿಕೆಯು ಬರುವಂತೆ ಕೆಲಸ ಮಾಡಿ. ಮೋಸದಿಂದ ನಿಮ್ಮ ಹಣವು ಕಳೆದುಹೋಗುವುದು. ನಿಮ್ಮ ಪ್ರೇಮಪ್ರಕರಣವು ಗಂಭೀರಸ್ಥಿತಿಯನ್ನು ತಲುಪಲಿದೆ. ತಾಳ್ಮೆಯಿಂದ ವ್ಯವಹರಿಸಿ, ಸರಿ ಮಾಡಿಕೊಳ್ಳಿ. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು.
ಕಟಕ ರಾಶಿ: ಸಾಲಬಾಧೆಯು ನಿಮ್ಮನ್ನು ಅತಿಯಾಗಿ ಕಾಡಲಿದೆ. ಅಷ್ಟೇ ಅಲ್ಲದೇ ಸಾಲ ಕೊಟ್ಟವರೂ ನಿಮ್ಮನ್ನು ದಿನವೂ ಕೇಳುವರು. ಮಾತನ್ನು ಆಡುವಾಗ ಪದಗಳ ಮೇಲೆ ಗಮನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಪತ್ನಿಯಿಂದ ಅವಮಾನಕ್ಕೆ ಒಳಗಾಗಬೇಕಾಗಿಬರಬಹುದು. ಭವಿಷ್ಯದ ಕುರಿತು ಆಲೋಚನೆಯಲ್ಲಿ ಮಗ್ನರಾಗಿರುತ್ತೀರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟಂತೆ ನಿಮ್ಮಲ್ಲಿ ಒಂದಿಷ್ಟು ಗೊಂದಲಗಳು ಇರಬಹುದು. ವಿವಾಹವಾಗಲು ಬಹಳ ಆತುರಪಡುವಿರಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು.




