AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಎಲ್ಲದಕ್ಕೂ ವಿಧಿಯನ್ನು ದೂರಬೇಡಿ, ಪ್ರಯತ್ನವು ಇರಲಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 11, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ದಿನಭವಿಷ್ಯ, ಎಲ್ಲದಕ್ಕೂ ವಿಧಿಯನ್ನು ದೂರಬೇಡಿ, ಪ್ರಯತ್ನವು ಇರಲಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 11, 2023 | 12:10 AM

Share

ಮುಂಜಾನೆ ಎದ್ದ ಕೂಡಲೇ ಮಕ್ಕಳಿಂದ ಪ್ರಾರಂಭಿಸಿ ಹಿರಿಯರವರೆಗೂ ದಿನಭವಿಷ್ಯ ನೋಡುತ್ತಾರೆ. ಹಿರಿಯಾದರೆ ನಿತ್ಯ ಪಂಚಾಂಗವನ್ನೂ ಗಮನಿಸುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 11) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಸುಕರ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:13 ರಿಂದ 09:37ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:01 ರಿಂದ ಮಧ್ಯಾಹ್ನ 12:26ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:50 ರಿಂದ 03:14ರ ವರೆಗೆ.

ಮೇಷ ರಾಶಿ: ಎಲ್ಲದಕ್ಕೂ ವಿಧಿಯನ್ನು ದೂರುವುದರಲ್ಲಿ ಅರ್ಥವಿರದು. ಪುರುಷಪ್ರಯತ್ನವೂ ನೂರಕ್ಕೆ ನೂರಿರಲಿ. ನಿಮ್ಮ ನಿರೀಕ್ಷಿತ ಸಮಯವು ಸಮೀಪಿಸುತ್ತಿರುವಂತೆ ನಿಮಗೆ ಅನ್ನಿಸುವುದು. ಆತುರದಲ್ಲಿ ಏನನ್ನಾದರೂ ಮಾಡಿಕೊಂಡೀರ. ನಿಮ್ಮ ಮಾತಿನಲ್ಲಿ ತಾರ್ಕಿಕತೆ ಹೆಚ್ಚು ಕಾಣುವುದು. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ವಿವಾಹಯೋಗವು ಬಂದರೂ ಅದನ್ನು ನೀವು ಸ್ವೀಕರಿಸುವ ರೀತಿ ಭಿನ್ನವಾಗಿ ಇರಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುಉ. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ಸಂಗಾತಿಗೆ ಸುಳ್ಳು ಹೇಳಿ ನಿಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಪಕ್ಷಪಾತದಿಂದ ನಿಮಗೇ ತೊಂದರೆ ಎದುರಾದೀತು. ಯಾವ ಸೋಲನ್ನೂ ಒಪ್ಪಿಕೊಳ್ಳುವ ಸ್ಥಿತಿ ಇಂದು ಇರದು.

ವೃಷಭ ರಾಶಿ: ವಿನೋದವನ್ನು ಮಾಡಲು ಹೋಗಿ ವಿಷಾದವಾದೀತು. ವಿಚಿತ್ರ ಸಂಗತಿಗಳು ನಿಮ್ಮನ್ನು ಬದಲಾಯಿಸಬಹುದು. ನಿಮ್ಮ ಬಗ್ಗೆಯೇ ನೀವು ಕೊರಗುತ್ತ ಇರುವಿರಿ. ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ಸಭ್ಯರಂತೆ ಇಂದು ನೀವು ತೋರುವಿರಿ. ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಸಮಯವು ಸಿಗದೇ ಹೋದೀತು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು. ವೃತ್ತಿಗಾಗಿ ನೀವು ಮಾಡುವ ಪ್ರಯತ್ನವು ಫಲಿಸುವುದು. ಸಿಗದಿರುವುದರ ಬಗ್ಗೆ ಆಸೆಯನ್ನು ಬಿಡುವಿರಿ. ಯಾರಾದರೂ ಬಂದು ನಿಮ್ಮ ಬಳಿ ಕೆಲಸ ಮಾಡಿಕೊಡಲು ಕೇಳಬಹುದು. ಗೊತ್ತಿರುವ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳಿ. ಬೇರೆಯವರು ನಿಮ್ಮನ್ನು ಅಳೆಯುವ ಮೊದಲು ನೀವೇ ನಿಮ್ಮನ್ನು ಅಳೆದುಕೊಳ್ಳಿ.

ಮಿಥುನ ರಾಶಿ: ನೀರಿನಿಂದ ಭಯಗೊಳ್ಳುವ ಸಾಧ್ಯತೆ ಇದೆ. ನಿದ್ರೆಯಲ್ಲಿ ಕಂಡ ಸ್ವಪ್ನವು ನಿಮಗೆ ಸಂತೋಷವನ್ನು ಕೊಡುವುದು. ಸಂಗಾತಿಯ ನಡೆಯು ನಿಮಗೆ ಮೆಚ್ಚುಗೆಯಾಗದು. ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗವಾಗುವ ಸಾಧ್ಯತೆ ಇದೆ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು. ಅನವಶ್ಯಕ ಹರಟೆಯಿಂದ ಅಧಿಕಾರಿಗಳು ನಿಮ್ಮ ಮೇಲೆ ಸಿಟ್ಟಾಗಬಹುದು. ಬೆನ್ನು ನೋವಿನ ಸಮಸ್ಯೆಗೆ ಸೂಕ್ತ ಪರಿಹಾರವು ಸಿಕ್ಕೀತು. ಸಂಗಾತಿಗೆ ಇಂದು ಸಂತೋಷವನ್ನು ಕೊಡುವಿರಿ. ಕಾರ್ಯದ ಒತ್ತಡವಿರುವ ಕಾರಣ ಸಮಯದ ಅಭಾವ ಎನಿಸಬಹುದು. ನೀವು ಹಿರಿಯರ ಜೊತೆ ಸಣ್ಣ ವಿಚಾರಕ್ಕೂ ವಾಗ್ವಾದಕ್ಕೆ ಇಳಿಯುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಎಲ್ಲರ ಬಳಿ ಹೇಳಿಕೊಳ್ಳುವಿರಿ. ಮನಸ್ಸನ್ನು ಖಾಲಿ ಬಿಡದೇ ಏನಾದರೊಂದು ಕಾರ್ಯದಲ್ಲಿ ತೊಡಗಿಸಿ.

ಕಟಕ ರಾಶಿ: ನಿಮಗೆ ಸರಳವಾದ ಯಾವ ಮಾರ್ಗವೂ ಮೆಚ್ಚುಗೆಯಾಗದು. ನಿಮ್ಮ ಮಾತುಗಳು ಸ್ವಾರ್ಥದಿಂದ ಕೂಡಿರುವುದು. ಆಪ್ತರಿಗೆ ಬೇಸರವನ್ನು ನೀಡುವಿರಿ. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ. ಸಮಯಪ್ರಜ್ಞೆಯು ಇಂದು ಕೆಲಸ ಮಾಡದು. ನಿಮ್ಮನ್ನು ಇಷ್ಟವಿಲ್ಲದ ಕಡೆ ವರ್ಗಾವಣೆ ಮಾಡುವ ತೀರ್ಮಾನವಾಗಬಹುದು. ಉದ್ಯೋಗದ ಸ್ಥಳದಲ್ಲಿ ಕಹಿ ಅನುಭವವಾದೀತು. ಇನ್ನೊಬ್ಬರ ಮಾತುಗಳನ್ನು ಕೇಳುವ ಸಹನೆಯು ಬೇಕು. ಯಾರದೋ ತಪ್ಪಿನಿಂದ ನಿಮಗೆ ದೋಷವು ಅಂಟಿಕೊಂಡಿದ್ದು ತಿಳಿದುಬರುವುದು. ದುರಭ್ಯಾಸದಿಂದ ಆರ್ಥಿಕ ನಷ್ಟವಾಗುತ್ತದೆ. ಅವಕಾಶಗಳಿಂದ ನೀವು ವಂಚಿತರಾಗುವಿರಿ. ಕುಟುಂಬದ ನಡವಳಿಕೆಯು ನಿಮಗೆ ಅರ್ಥವಾಗದೇ ಹೋದೀತು. ದುರಭ್ಯಾಸದ ಕಡೆ ನಿಮ್ಮ ಗಮನವು ಇರಲಿದೆ. ನಿಮ್ಮ ಚಿಂತನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್