Horoscope: ರಾಶಿಭವಿಷ್ಯ, ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವ ಈ ರಾಶಿಯವರು ತಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿಟ್ಟುಕೊಳ್ಳಿ

| Updated By: Rakesh Nayak Manchi

Updated on: Nov 15, 2023 | 12:15 AM

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವ ಈ ರಾಶಿಯವರು ತಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿಟ್ಟುಕೊಳ್ಳಿ
ದಿನಭವಿಷ್ಯ
Image Credit source: iStock Photo
Follow us on

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಮಧ್ಯಾಹ್ನ 12:17 ರಿಂದ 01:43ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:00 ರಿಂದ 09:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:17ರ ವರೆಗೆ.

ಮೇಷ ರಾಶಿ: ಸಾಲ ಮಾಡುವ ಸ್ಥಿತಿಯನ್ನು ನೀವೇ ತಂದುಕೊಳ್ಳುವಿರಿ. ಪ್ರಯಾಣದಿಂದ ನಿಮಗೆ ಪ್ರಯಾಸವಾಗುವುದು. ದುಃಖವನ್ನು ಒಬ್ಬರೇ ಅನುಭವಿಸುವಿರಿ. ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುತಿಸಬೇಕಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಕೃಷಿಯಲ್ಲಿ ಚಂಚಲವಾದ ಮನಸ್ಸನ್ನು ಇಟ್ಟುಕೊಳ್ಳುವಿರಿ. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ನೀವು ಇರುವಿರಿ. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಯಾರ ಮಾತನ್ನೂ ಕೇಳದ ಚಿತ್ತಚಾಂಚಲ್ಯವು ಇರಲಿದೆ. ನಿಮ್ಮ ವಿದ್ಯಾಭ್ಯಾಸದ ಬಗ್ಗೆ ಆಡಿಕೊಳ್ಳುವರು.

ವೃಷಭ ರಾಶಿ: ಇಂದಿನ ಆಯಾಸದ ಕೆಲಸವು ನಿಮ್ಮನ್ನು‌ ನಿಷ್ಕ್ರಿಯಗೊಳಿಸಬಹುದು. ಅಸಹಜ ವರ್ತನೆಯು ನಿಮ್ಮನ್ನು ಮಿತ್ರರಿಂದ ದೂರವಾಗಿಸುವುದು. ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಆದರೆ ಅವರಿಂದ ಅದು ಸಿಗದು. ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡೀತು. ನಿಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿರಲಿ. ಸ್ನೇಹಿತರಿಂದ ಉಡುಗೊರೆ ಸಿಗಬಹುದು. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಒಂಟಿಯಾದಂತೆ ನಿಮಗೆ ಅನ್ನಿಸೀತು. ಅತಿಯಾದ ಕೋಪವನ್ನು ಮಾಡಿಕೊಳ್ಳುವುದು ಬೇಡ. ಆಲಸ್ಯದಿಂದ ಉತ್ತಮ ವಿಚಾರಗಳನ್ನು ಕಳೆದುಕೊಳ್ಳಬೇಕಾದೀತು. ಅಸಂಬದ್ಧ ಚರ್ಚೆಗಳಿಂದ ದೂರ ಇರುವಿರಿ. ಸಿಕ್ಕಿದ್ದನ್ನು ಜತನ ಮಾಡಿಕೊಳ್ಳುವ ಹೊಣೆಗಾರಿಕೆ ಇರಲಿದೆ‌.

ಮಿಥುನ ರಾಶಿ: ನೂತನದ ವಾಹನದಿಂದ ನಿಮಗೆ ಸಂತೋಷವಾಗಲಿದೆ‌. ದಾಂಪತ್ಯದ ತೊಡಕುಗಳನ್ನು ನೀವೇ ಕುಳಿತು ಸರಿಮಾಡಿಕೊಳ್ಳುವುದು ಉತ್ತಮ. ಸೇವಾಮನೋಭಾವವು ನಮ್ಮಲ್ಲಿ ಜಾಗರೂಕವಾಗಬಹುದು. ಜನರ ಜೊತೆ ಬೆರೆಯಲು ಹಿಂದೇಟು ಹಾಕುವಿರಿ. ಅನಿರೀಕ್ಷಿತ ನಿಧಿಯ ನಿರೀಕ್ಷೆಯಲ್ಲಿ ಇರುವಿರಿ. ಅಂದುಕೊಂಡಿದ್ದರ ವಿರುದ್ಧ ನಡೆಯುವುದು ನಿಮಗೆ ಬೇಸರ ತರಿಸಬಹುದು. ನಿಮ್ಮ ವ್ಯಕ್ತಿತ್ವದ ಬಗ್ಗೆ ಇತರರು ಹೆಮ್ಮೆಪಡುವರು. ಉದ್ಯೋಗ ವೃದ್ಧಿಯ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ. ಅನಾರೋಗ್ಯವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡುವುದು. ಸಂಗಾತಿಗೆ ನಿಮ್ಮ ಪ್ರೀತಿಯು ಕಡಿಮೆಯಾಗಿರುವುದು. ಪ್ರಶಂಸೆಯಿಂದ ಅಹಂಕಾರವು ಬರುವ ಸಾಧ್ಯತೆ ಇದೆ. ಕುಟುಂಬಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ. ವಿಶ್ವಾಸವನ್ನು ಉಳಿಸಿಕೊಳ್ಳಲು ಕಷ್ಟವಾದೀತು.

ಕಟಕ ರಾಶಿ: ಯಾರದೋ ಮಾತಿಗೆ ವೃತ್ತಿಯನ್ನು ಬಿಡಬೇಕಾಗುವುದು.‌ ಅತಂತ್ರ ಸ್ಥಿತಿಯು ನಿಮಗೆ ಕಷ್ಟವಾಗುವುದು. ಬೇಕೆಂದುಕೊಂಡಿದ್ದನ್ನು ಪಡೆಯುವುದು ಕಷ್ಟವಾಗುವುದು. ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ನಿಮ್ಮ ಅಂತಸ್ತು ಕಡಿಮೆ ಎಂಬ ಭಾವನೆಯು ನಿಮ್ಮ ತಲೆಯಲ್ಲಿ ಇರುವುರು. ಗುಣಾತ್ಮಕ ಚಿಂತನೆಯನ್ನು ಮಾಡಿ. ಏನೇ ಬಂದರೂ ಎಲ್ಲವೂ ವಿಧಿ ನಿಯಮ ಎಂಬ ನಿರ್ಧಾರಕ್ಕೆ‌ ಬರುವಿರಿ. ಅಧಿಕ ಚಿತ್ತಚಾಂಚ್ಯಲ್ಯವು ಜೊತೆಗಾರರಿಗೆ ಕಷ್ಟವಾದೀತು. ವಿರುದ್ಧಾಹರ ಸೇವಯು ನಿಮ್ಮ ಆರೋಗ್ಯವನ್ನು ಕೆಡಿಸುವುದು. ಇನ್ನೊಬ್ಬರ ವಸ್ತುವಿನ ಬಗ್ಗೆ ಮೋಹವು ಇರುವುದು‌. ಆತ್ಮಪ್ರಶಂಸೆಯು ಅಧಿಕಾವಾಗಿ ತೋರುವುದು. ಸಾಧಿಸಬೇಕು ಎಂಬ ಮಹದಾಸೆ ಇದ್ದರೂ ಅದು ಕ್ಷಣಿಕವಾಗುವುದು. ಕಲಾವಿದರು ಪ್ರಶಂಸೆಯಿಂದ ಬೀಗುವರು. ಅಕಾರಣವಾಗಿ ಕೋಪ ಮಾಡಬೇಕಾಗುವುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ