ಒಂದಷ್ಟು ಮಂದಿ ಬೆಳಗ್ಗೆ ಏಳುವ ಮುನ್ನ ಪಕ್ಕದಲ್ಲಿರುವ ಮೊಬೈಲ್ ಕೈಯಲ್ಲಿ ಹಿಡಿದು ತಮ್ಮ ಇಂದಿನ (ಡಿಸೆಂಬರ್ 4) ಭವಿಷ್ಯ ಹೇಗಿದೆ ಎಂಬುದನ್ನು ಹುಡುಕಾಡುತ್ತಾರೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ ನಿಮ್ಮ ಭವಿಷ್ಯ (Horoscope) ಹೇಗಿದೆ? ಶುಭ-ಅಶುಭ ಇದೆಯಾ? ಯಾವ ಫಲ ಸಿಗಲಿದೆ ಎಂಬುದನ್ನು ಇಲ್ಲಿ ತಿಳಿಯಿರಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮಘಾ, ಯೋಗ: ವೈಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 08:09 ರಿಂದ 09:34 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:58 ರಿಂದ ಮಧ್ಯಾಹ್ನ 12:23ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:47 ರಿಂದ 03:12ರ ವರೆಗೆ.
ಸಿಂಹ ರಾಶಿ: ತಂದೆಯು ನಿಮ್ಮ ಬಗ್ಗೆ ಹೆಮ್ಮೆ ಪಟ್ಟುಕೊಳ್ಳಬಹುದು. ಇದು ನಿಮ್ಮ ಸ್ಥೈರ್ಯವನ್ನು ವರ್ಧಿಸೀತು. ವೈವಾಹಿಕ ಜೀವನವನ್ನು ನಡೆಸಲು ನಿಮಗೆ ಕಷ್ಟ ಎನಿಸಬಹುದು. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ನಿಮ್ಮ ಇಂದಿನ ಮುಖ್ಯ ಕೆಲಸವೇ ಗೌಣವಾಗಬಹುದು. ಪ್ರೀತಿಯಲ್ಲಿ ಸಡಿಲಿಕೆ ಬೇಡ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ. ನೀವು ಮಾತನ್ನು ಕಡಿಮೆ ಮಾಡುವುದು ಉತ್ತಮ. ಕೂಡಿಬರುವ ವಿವಾಹಭಾಗ್ಯವನ್ನು ನೀವು ಒಪ್ಪಿಕೊಳ್ಳುವಿರಿ. ಸಂಕೋಚವು ನಿಮ್ಮನ್ನು ಬಂಧಿಸಬಹುದು.
ಕನ್ಯಾ ರಾಶಿ: ವ್ಯರ್ಥ ತಿರುಗಾಟದಿಂದ ನಿಮಗೆ ಕೋಪ ಬಂದೀತು. ಸಂಗಾತಿಯಿಂದ ಒರಟು ಮಾತನ್ನು ಕೇಳುವಿರಿ. ನಿಮಗೆ ಅನಾಥಪ್ರಜ್ಞೆಯು ಕಾಡಲಿದ್ದು ದುಃಖವು ಉಮ್ಮಳಿಸುವುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು. ಕೆಲವು ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು. ನಿಂದನೆಗೆ ಅತಿಯಾದ ಚಿಂತೆ ಬೇಡ. ಕೆಲಸದ ಮೂಲಕ ಉತ್ತರಿಸಲು ಪ್ರಯತ್ನಿಸಿ. ಇಂದು ನೀವು ಕೃತಜ್ಞತೆಯನ್ನು ಮರೆಯುವಿರಿ. ಸಂಬಂಧಗಳ ಮಹತ್ತ್ವವನ್ನು ನೀವು ಅರಿತುಕೊಳ್ಳಲಾರಿರಿ.
ತುಲಾ ರಾಶಿ: ವಿದ್ಯಾಭ್ಯಾಸವನ್ನು ಕೆಲವು ದಿನಗಳವರೆಗೆ ನಿಲ್ಲಿಸಬೇಕಾಗಬಹುದು. ಪ್ರಯತ್ನಿಸಿದ ಕಾರ್ಯದಲ್ಲಿ ಅಲ್ಪ ಜಯವು ಸಿಗವುದು. ಸಮಯದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಮಾನಸಿಕ ಅಶಾಂತಿಗೆ ನಿಮ್ಮಲ್ಲಿಯೇ ಮದ್ದು ಇರುವುದು. ಭೂಮಿಯ ವ್ಯವಹಾರವು ಸಾಕೆನಿಸಬಹುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ. ನಿಮಗೆ ಇನ್ನೊಬ್ಬರ ಬಗ್ಗೆಯೇ ಅಧಿಕ ಆಲೋಚನೆ ಇರುವುದು. ಎಲ್ಲ ವಿಚಾರಕ್ಕೂ ನೀವು ಇನ್ನೊಬ್ಬರನ್ನು ಹಗುರಾಗಿ ಕಾಣುವಿರಿ. ಬಿಡುವಿನ ಸಮಯದಲ್ಲಿ ನಿಮ್ಮ ಕಾರ್ಯವನ್ನು ಮಾಡಿಕೊಳ್ಳುವಿರಿ. ಸ್ವಂತ ಉದ್ಯಮವನ್ನು ಆರಂಭಿಸಲು ಚಿಂತಿಸುವಿರಿ.
ವೃಶ್ಚಿಕ ರಾಶಿ: ಹೊಸ ಯೋಜನೆಗೆ ಬೇಕಾದ ಸಿದ್ಧತೆಯಲ್ಲಿ ಇರುವಿರಿ. ಬಂಧುಗಳನ್ನು ಕಳೆದುಕೊಳ್ಳಬೇಕಾಗಬಹುದು. ಹೊಣೆಗಾರಿಕೆಯು ಅಧಿಕವಾದೀತು. ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು. ಆಹಾರ ಅಭಾವವಾಗಬಹುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡೀತು. ಪಕ್ಷಪಾತ ಮಾಡದೇ ನೀವು ಸಮಾನಭಾವದಿಂದ ನೋಡಿ. ದೇಹವನ್ನು ದಂಡಿಸಿ ಹೆಚ್ಚು ಲಾಭವನ್ನು ಗಳಿಸುವಿರಿ. ನಿಮಗೆ ಇಂದು ಕಾರ್ಯಗಳನ್ನು ಮಾಡಿಸಲು ಆಗದು. ನಿಮ್ಮ ಮಾತನ್ನು ಯಾರೂ ಕೇಳರು. ಗೌಪ್ಯ ಸ್ಥಾನದಲ್ಲಿ ತೊಂದರೆಯಾದೀತು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ