AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಪರಿಚಿತರ ಮಾತು ನಿಮಗೆ ನಿರುತ್ಸಾಹ ತರಿಸುವುದು

29 ಡಿಸೆಂಬರ್​​ 2024: ಭಾನುವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಮನೆಯಿಂದ ಹೊರಗೆ ಹೋಗಿ‌ ಇಡೀ ದಿನವನ್ನು ಕಳೆದುಬರುವಿರಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಹಾಗಾದರೆ ಡಿಸೆಂಬರ್ 29ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಪರಿಚಿತರ ಮಾತು ನಿಮಗೆ ನಿರುತ್ಸಾಹ ತರಿಸುವುದು
ಪರಿಚಿತರ ಮಾತು ನಿಮಗೆ ನಿರುತ್ಸಾಹ ತರಿಸುವುದು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 29, 2024 | 12:10 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶಿರ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಗಂಡ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 57 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಸಂಜೆ 04:48 ರಿಂದ 06:12ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:35 ರಿಂದ 01:59 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:24 ರಿಂದ 04:48 ರವರೆಗೆ.

ಮೇಷ ರಾಶಿ: ಇಂದು ಪ್ರಭಾವೀ ವ್ಯಕ್ತಿಗಳಿಗೆ ನಿಮ್ಮಿಂದ ಸಹಾಯವಾಗಲಿದೆ. ಶ್ರಮಪಟ್ಟು ಮಾಡಿದ ಕೆಲಸವು ಕೊನೆಯ ಕ್ಷಣದಲ್ಲಿ ಹಾಳಾಗಬಹುದು. ಯಾರ ಮೇಲೂ ಸುಮ್ಮನೇ ಸಂಶಯಪಟ್ಟು ಸಂಬಂಧವನ್ನು ದೂರ ಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸಾಮಾಜಿಕ‌ ಕಾರ್ಯದಿಂದ ಸಮ್ಮಾನವನ್ನು ನಿರೀಕ್ಷಿಸುವಿರಿ. ಎಲ್ಲರನ್ನೂ ತೃಪ್ತಿಪಡಿಸುವ ಸಂಕಲ್ಪವು ಸುಮ್ಮನೇ ವ್ಯರ್ಥವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆಯು ಇಲ್ಲವಾಗುವುದು. ನಿಮ್ಮ ಮೇಲೆ‌ ಹಿತಶತ್ರುಗಳು‌ ಬೇಕಂತಲೇ ಆರೋಪವನ್ನು ಮಾಡಬಹುದು. ನಿಮ್ಮ ತಿಳಿವಳಿಕೆಯನ್ನು ಇನ್ನೊಬ್ಬರ‌ ಮುಂದೆ ತೋರಿಸಿಕೊಳ್ಳುವುದಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಅನಿರೀಕ್ಷಿತ ಸಂದರ್ಭವನ್ನು ಜಾಣ್ಮೆಯಿಂದ ಎದುರಿಸುವಿರಿ.

ವೃಷಭ ರಾಶಿ: ಪರಿಚಿತರ ಮಾತು ನಿಮಗೆ ನಿರುತ್ಸಾಹವನ್ನು ತರಿಸುವುದು. ಮಕ್ಕಳ‌ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಮನೆಯಿಂದ ಹೊರಗೆ ಹೋಗಿ‌ ಇಡೀ ದಿನವನ್ನು ಕಳೆದುಬರುವಿರಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ. ನಿಮ್ಮ ಒರಟಾದ ಮಾತು ನೌಕರರು ಸಿಟ್ಟಾಗುವಂತೆ ಮಾಡುವುದಹ. ನಿಯಮದ ತಪ್ಪಿಗೆ ದಂಡವನ್ನು ಕೊಡಬೇಕಾದೀತು. ನಿಮ್ಮ ಅವಕಾಶಗಳನ್ನು ಅನ್ಯರು ಬಳಸಿಕೊಂಡಾರು. ಅತಿಯಾದ ಉತ್ಸಾಹದಲ್ಲಿರುವ ನಿಮಗೆ ಸಂಗಾತಿಯ ಮಾತು ಉತ್ಸಾಹವನ್ನು ಕೊಟ್ಟಿತು. ಹಳೆಯ ಸ್ನೇಹಿತರು ಉಪಕಾರ ಸ್ಮರಣೆಯಿಂದ ಸಹಾಯ ಮಾಡುವರು. ನಿಮ್ಮ ಹೆಜ್ಜೆಗಳೆಲ್ಲ ಗುರುತಾಗಬೇಕು ಎಂದರೆ ಸಾಧ್ಯವಾಗದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ.

ಮಿಥುನ ರಾಶಿ: ನೀವು ಕೊಟ್ಟ ಭರವಸೆಯನ್ನು ಸುಳ್ಳುಮಾಡುವಿರಿ. ಯೋಚನೆಯ ದಿಕ್ಕನ್ನು ಬದಲಿಸದರೆ ತೊಂದರೆಗಳಿಗೆ ಉತ್ತರವೂ ಸಿಗಲಿದೆ. ಅಪರಿಚಿತರ ಸಹಾಯದಿಂದ ಪೂರ್ಣ ನಂಬಿಕೆ ಬರದು. ಹೊಸಬರನ್ನು ಸಾಮಾಜಿಕ ತಾಣದಲ್ಲಿ ಪರಿಚಯ ಮಾಡಿಕೊಳ್ಳುವಿರಿ. ತಂದೆಯ ಮಾತು ನಿಮಗೆ ಬೇಸರ ತರಿಸಬಹುದು. ಕಲಾವಿದರು ಉತ್ತಮ ಅವಕಾಶದ ನಿರೀಕ್ಷೆಯಲ್ಲಿ ಇರುವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು. ಸ್ವಂತ ಶ್ರಮದಿಂದ ಗಳಿಸಿದ್ದು ನಿಮಗೆ ಆಪ್ತವೆನಿಸಲಿದೆ. ಮಾಡಬೇಕೆಂದುಕೊಂಡ ಕಾರ್ಯಕ್ಕೆ ತೊಂದರೆ ಬಂದರೂ ಬಿಡದೇ ಮುಂದುವರಿಸುವಿರಿ. ಆದಾಯದ ಹೆಚ್ಚಿಸಿಕೊಳ್ಳು ವಿಚಾರದಲ್ಲಿ ನೀವು ಬಹಳ ಹಿಂದೆ. ಕುಟುಂಬದ ಜೊತೆ ಸುಖವಾದ ಪ್ರಯಾಣವನ್ನು ಮಾಡುವಿರಿ. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ.

ಕರ್ಕಾಟಕ ರಾಶಿ: ಅಧಿಕಾರವನ್ನು ಅನುಭವಿಸುವ ಆಸೆ ಇದ್ದರೂ ಭಯದಿಂದ ಕಷ್ಟವಾದೀತು. ನಿರೀಕ್ಷಿತ ಸಂದರ್ಭವು ಇಂದು ಬರಲಿದ್ದು ಅದನ್ನು ಬಳಸಿಕೊಳ್ಳುವಿರಿ. ಆಕಸ್ಮಿಕವಾಗಿ ಧನಲಾಭದಿಂದ ನಿಮಗೆ ಆಶ್ಚರ್ಯವಾಗಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಜಾಣ್ಮಯಿಂದ ನಿಮ್ಮ ಕಾರ್ಯವನ್ನು ಸಾಧಿಸಿ. ನಿಮ್ಮವರನ್ನು ಕಳೆದುಕೊಳ್ಳುವ ಸಂದರ್ಭ ಬರುವುದು. ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ. ಇಂದು ಖುಷಿಯಿಂದ ಹಣವನ್ನು ಖರ್ಚು ಮಾಡುವಿರಿ. ಇಂದು ನೀವಾಡವ ಮಾತು ತೂಕದ್ದಾಗಿರಲಿದೆ. ನಿಮ್ಮ ಕೆಲಸಗಳನ್ನು ಮೇಲಧಿಕಾರಿಗಳು ಪರಿಶೀಲಿಸುವರು. ವ್ಯಾಪಾರದಲ್ಲಿ ನೀವು ತಜ್ಞರಾಗಿದ್ದು ಅಧಿಕ ಲಾಭವನ್ನು ಗಳಿಸುವಿರಿ. ಸಂತೋಷದ ವಿಚಾರವನ್ನು ಹೇಳಲು ಸಂಕೋಚವಾಗುವುದು. ಯಾವುದನ್ನೇ ಆದರೂ ಮಿತಿಯಲ್ಲಿ ಬಳಸಿದರೆ ಉತ್ತಮ.

ಸಿಂಹ ರಾಶಿ: ಅಪರಿಚಿತರಾದರೂ ನಿಮ್ಮ ಬಳಿ ದುಃಖವನ್ನು ಹೇಳಿಕೊಳ್ಳುವರು. ಕಷ್ಟಕ್ಕೆ ಸುಮ್ಮನೆ ಕಿವಿಯಾಗಿ‌ ಸಾಕು. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡುವುದು. ವ್ಯವಹಾರವು ಅಧಿಕ ಲಾಭವನ್ನು ತಂದುಕೊಡದು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು. ಮನೆಯಲ್ಲಿ ಜಗಳವಾಡಿ ನೀವು ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಸ್ಥಳದಲ್ಲಿ ಉದ್ಯೋಗವು ಸಿಗದು. ಮಕ್ಕಳ ತಪ್ಪನ್ನು ನೀವು ಸಮರ್ಥಿಸಿಕೊಳ್ಳಬೇಕಾದೀತು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಇಂದು ಸಾಧ್ಯವಾಗದು. ಕೊಟ್ಟ ಹಣವನ್ನು ವಾಪಾಸು ಪಡೆಯಲು ಓಡಾಟ ಮಾಡುವಿರಿ. ತಂದೆಯ ಜೊತೆ ಹಠ ಮಾಡಿ ನಿಮಗೆ ಬೇಕಾದುದನ್ನು ಪಡೆಯುವಿರಿ.

ಕನ್ಯಾ ರಾಶಿ: ವಿದೇಶದಲ್ಲಿ ಇರುವ ಪಾಲುದಾರರ ಜೊತೆ ಹೂಡಿಕೆ ಮಾಡುವ ಯೋಜನೆ ಮಾಡಬಹುದು. ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ಬಂಧುಗಳ ಒಡನಾಟವು ಹೆಚ್ಚಿರಲಿದೆ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಇಂದು ನೀವು ಅಂದುಕೊಂಡ ವಿಚಾರದಲ್ಲಿ ಜಯವು ಸಿಗುವುದು. ಕೆಟ್ಟವರ ಸಹವಾಸದಿಂದ ಅಪಕೀರ್ತಿ ಬರಬಹುದು. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ಕೃಷಿಯ ಉತ್ಪನ್ನಗಳನ್ನು ಮಾರಾಟ ಮಾಡುವಿರಿ. ಅವಕಾಶಗಳನ್ನು ಕಳೆದುಕೊಂಡು ಮನಸ್ಸಿನಲ್ಲಿಯೇ ದುಃಖಿಸುವಿರಿ. ಕೋಪವನ್ನು ತಾನಾಗಿಯೇ ಕಡಿಮೆ ಆಗಿದ್ದು ನಿಮಗೆ ಆಶ್ಚರ್ಯವಾಗಬಹುದು. ನಿಮ್ಮ‌ ಮನಸ್ಸಿಗೆ ಬಾರದೇ ಯಾರಿಗೂ ಏನನ್ನೂ ಕೊಡುವುದು ಬೇಡ. ನೀವು ಕಷ್ಟವನ್ನೂ ಸಂತೋಷದಿಂದ ಕಳೆಯುವಿರಿ. ನಿಮ್ಮ ಹೊಸ ವಸ್ತುಗಳನ್ನು ಬಳಸಲು ಮನಸ್ಸು ಹಿಂಜರಿಯುವುದು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!