ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಪ್ರೀತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:10 ರಿಂದ ಸಂಜೆ 04:35ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:30 ರಿಂದ 10:55 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:20 ರಿಂದ 01:45 ರವರೆಗೆ.
ಮೇಷ ರಾಶಿ: ವಿಧಿಯನ್ನು ಸಮಯವನ್ನು ಮೀರದೇ ಕಾರ್ಯವನ್ನು ಮಾಡಲು ಪ್ರಯತ್ನಿಸಿ, ಸಾಧ್ಯವಾದರೆ ಸಾಧಿಸಿ. ನಿಮ್ಮ ನಿಜವಾದ ಪ್ರಯತ್ನಕ್ಕೆ ದೈವವೂ ಸಹಾಯ ಮಾಡುವುದು. ಇಂದು ಕಷ್ಟವಾದರೂ ಸಂತೋಷದಿಂದ ಕೆಲಸವನ್ನು ಮಾಡುವಿರಿ. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ಪ್ರಯಾಣದಲ್ಲಿ ಜಾಗರೂಕತೆ ಇರಲಿ. ಗೊಂದಲ ವಾತಾವರಣವನ್ನು ನೀವು ಸೃಷ್ಟಿಮಾಡಿಕೊಳ್ಳುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ನಿಮ್ಮ ಮಾತಿನಿಂದ ತಾಯಿಗೆ ಬೇಸರವಾಗಲಿದೆ. ನಿಮ್ಮನ್ನು ನೀವು ಬದಲಿಸಿಕೊಳ್ಳುವಿರಿ. ಕಾನೂನಿನ ಸಮರದಲ್ಲಿ ರೋಚಕತೆ ಇರುವುದು. ಸಂಗಾತಿಯ ಕಿರಿಕಿರಿಯಿಂದ ನಿಮಗೆ ಕಷ್ಟವಾದೀತು. ಗಗನ ಕುಸುಮವು ನೋಡಲಷ್ಟೇ ಚಂದ. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶಗಳು ಸಿಗುವುದು. ಸಾಹಿತ್ಯಕ್ಷೇತ್ರದವರು ಗೌರವವನ್ನು ಪಡೆಯುವರು.
ವೃಷಭ ರಾಶಿ: ಸಾಹಸಕ್ಕೆ ಒಂದು ಮಿತಿ ಇರಲಿ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾರಿಂದಲೂ ಆರ್ಥಿಕ ಸಹಾಯವು ಸಿಗದೇ ಕಷ್ಟವಾದೀತು. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದು. ಗೌಣವಾದುದನ್ನು ಪ್ರಾಮುಖ್ಯ ಮಾಡುವುದು ಬೇಡ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಸ್ತಿಕೆ ಬೇಡ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭೀತಿಯು ಇರಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ. ಅಶುಭಾವಾರ್ತೆಯಿಂದ ಇಂದಿನ ಕಾರ್ಯವೆಲ್ಲ ಹಾಳಾಗಬಹುದು. ದೂರದಲ್ಲಿರುವ ಮಕ್ಕಳನ್ನು ಕಾಣಲು ಹೋಗುವಿರಿ. ಸಂಗಾತಿಯ ವ್ಯವಹಾರದ ವಿಷಯದಲ್ಲಿ ಭಿನ್ನಾಭಿಪ್ರಾಯ ಬರಬಹುದು. ನಿಮಗಾದ ನೋವಿನಿಂದ ಇತರರಿಗೂ ನೋವು ಕೊಡುವಿರಿ.
ಮಿಥುನ ರಾಶಿ: ಒಳ್ಳೆಯವರನ್ನೇ ಅನುಮಾನಿಸುವಂತೆ ಮಾಡಬಹುದು. ಇಂದು ಆಪ್ತರು ನಿಮಗೆ ಬರುವ ಸಂಕಟದಲ್ಲಿ ಜೊತೆಯಾಗುವರು. ಸಮಯೋಚಿತ ಸಲಹೆಯಿಂದ ಬರುವ ತೊಂದರೆಯು ದೂರಾಗುವುದು. ಸ್ಪರ್ಧಾತ್ಮಕ ಮನೋಭಾವವು ನಿಮ್ಮ ದಾರಿಯನ್ನು ತಪ್ಪಿಸಬಹುದು. ಪಾಲುದಾರಿಕೆಯಲ್ಲಿ ಕಲಹವಾಗುವ ಸಾಧ್ಯತೆ ಇದೆ. ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ನೀವು ಇಂದು ವಿಶೇಷ ಲಕ್ಷ್ಯವನ್ನು ಇಟ್ಟುಕೊಂಡು ಕೆಲಸವನ್ನು ಮಾಡಬೇಕಾದೀತು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಇನ್ನೊಬ್ಬರನ್ನು ಗೌರವಿಸಿದರೆ ನೀವೂ ದೊಡ್ಡವರಾಗುವಿರಿ.
ಕರ್ಕಾಟಕ ರಾಶಿ: ನಿಮ್ಮ ಬಳಿ ಇರುವ ವಸ್ತುವು ಅನೇಕ ಉಪಯೋಗಕ್ಕೆ ಬರಬಹುದು. ನಿಮಗೆ ಗೊತ್ತಿರುವುದನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ವೀಕ್ಷಿಸಬಹುದು. ಇಂದು ನಿಮಗೆ ಬರಬೇಕಾದ ಹಣವು ಅನಿರೀಕ್ಷಿತ ರೀತಿಯಲ್ಲಿ ಬಂದರೂ ಅದು ಇನ್ನೊಂದು ಮಾರ್ಗದಲ್ಲಿ ಖಾಲಿಯಾಗುವುದು. ನಿಮಗೆ ಇಷ್ಟವಿಲ್ಲದವರನ್ನು ಮನಸ್ಸಿನಿಂದ ಹೊರಹಾಕಿ. ಮನೆಯ ನಿರ್ಮಾಣಕ್ಕೆ ಅಧಿಕ ಖರ್ಚು ಮಾಡಬೇಕಾಗುವುದು. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ರೀತಿಯ ಪರೀಕ್ಷೆಗಳು ಬರಬಹುದು. ಸ್ವತಂತ್ರವಾದ ಆಲೋಚನೆಯನ್ನು ಬೆಳೆಸಿಕೊಳ್ಳಿ. ಸದುದ್ದೇಶದ ಸಂಬಂಧಗಳು ನಿಮಗೆ ಯಶಸ್ಸು ಕೊಡುವುದು. ಇಂದು ಹೆಚ್ಚು ಶ್ರಮವಹಿಸಿ ಕೆಲಸವನ್ನು ಮಾಡಬೇಕಾದೀತು. ನಿಮ್ಮ ಮನವನ್ನು ಸಂಗಾತಿಯು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವರು. ಹಿರಿಯರ ಹಿತವಚನವನ್ನು ಕೇಳುವ ವ್ಯವಧಾನ ಇರದು.
ಸಿಂಹ ರಾಶಿ: ನಿಮ್ಮ ಸಿಟ್ಟು ಹತೋಟಿ ತಪ್ಪಬಹುದು. ನಿಮಗೆ ಇಂದು ಏನಾದರೂ ಹೊಸತನ್ನು ಮಾಡುವ ಉದ್ದೇಶವಿರುವುದು. ಮೇಲಿಂದ ಮೇಲೆ ಬೀಳವ ಘಾತದಿಂದ ಬಲವಾದ ಘಾಸಿಯಾಗಲಿದೆ. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಗಾಯದ ಮೇಲೆ ಬರೆ ಬೀಳಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ಬಂಧುಗಳ ಮಾತಿಂದ ಸಿಟ್ಟಾಗುವಿರಿ. ಆದರೆ ತೋರಿಸಲು ಹೋಗುವುದಿಲ್ಲ. ಅತಂತ್ರವಾದುದನ್ನು ಸ್ವತಂತ್ರ ಮಾಡಿಕೊಳ್ಳುವಿರಿ. ಕೃಷಿ ಚಟುವಟಿಕೆಯಲ್ಲಿ ಉತ್ಸಾಹವು ಸ್ವಲ್ಪ ಇರುವುದು. ಸಂತಾನಕ್ಕೆ ಸಂಬಂಧಿಸಿದಂತೆ ವೈದ್ಯರನ್ನು ಭೇಟಿ ಮಾಡಿ. ನಿಮ್ಮ ಸ್ಥಾನವನ್ನು ನೀವು ಬಿಟ್ಟಕೊಡುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ.
ಕನ್ಯಾ ರಾಶಿ: ಎಲ್ಲವೂ ನಿಮಗೆ ಸಂಕೀರ್ಣಗೊಂಡಂತೆ ಭಾಸವಾಗಬಹುದು. ಇಂದು ನೀವು ನಿಮ್ಮ ಪ್ರತಿಬಂಧವನ್ನು ಮೀರಿ ತೊಂದರೆ ಪಡುವಿರಿ. ನಿಮಗೆ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಪಾಲುದಾರಿಕೆ ಸಿಗಬಹುದು. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಓಡಾಡಲಟದ ಗೀಳನ್ನು ತಪ್ಪಿಸಿಕೊಳ್ಳಬೇಕು. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಸಿಗಲಿದೆ. ಮನೆ ಕೆಲಸಕ್ಕೆ ಆಲಸ್ಯವು ಇರುವುದು. ಸಮಾರಂಭದಲ್ಲಿ ಅನಿರೀಕ್ಷಿತ ಗೌರವವು ನಿಮಗೆ ಪ್ರಾಪ್ತವಾಗುವುದು. ದಾಂಪತ್ಯದಲ್ಲಿ ಅಸಹಜ ಮಾತುಕತೆಗಳು ಕಿರಿಕಿರಿಯನ್ನು ಉಂಟುಮಾಡೀತು. ಇಂದಿನ ಕರ್ತವ್ಯದಲ್ಲಿ ನೀವು ನಿರತರು.