Daily Horoscope: ಈ ರಾಶಿಯವರಿಗೆ ಉದ್ಯೋಗ ಕ್ಷೇತ್ರದಲ್ಲಿ ಶತ್ರುಗಳ ಕಾಟ ಹೆಚ್ಚಾಗಲಿದೆ
13 ಡಿಸೆಂಬರ್ 2024: ಶುಕ್ರವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಉಪಕಾರಕ್ಕೆ ಅಲ್ಪವಾದರೂ ಪ್ರತ್ಯುಪಕಾರವಿರಲಿ. ಕೃತಜ್ಞತೆಯನ್ನು ಬಿಡುವುದು ಬೇಡ. ಇಂದು ನಿಮ್ಮ ಮೇಲೆ ಎಲ್ಲರಿಂದ ಆಕ್ರಮಣವಾಗಬಹುದು. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ. ಹಾಗಾದರೆ ಡಿಸೆಂಬರ್ 13ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಭರಣೀ/ಕೃತ್ತಿಕಾ, ಯೋಗ: ಶಿವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:03 ರಿಂದ ಮಧ್ಯಾಹ್ನ 12:27ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:16 ರಿಂದ 04:40 ರವರೆಗೆ, ಗುಳಿಕ ಕಾಲ ರಾತ್ರಿ 08:14 ರಿಂದ 09:39 ರವರೆಗೆ.
ಮೇಷ ರಾಶಿ: ಇಂದು ಶಾಂತವಾದ ಮನಸ್ಸನ್ನು ಯಾರಾದರೂ ಕದಡಬಹುದು. ಕಾರ್ಯವನ್ನು ಚೆನ್ನಾಗಿ ನಿರ್ವಹಿಸಿದರೂ ಕೊನೆಯಲ್ಲಿ ಏನಾದರೂ ಮಾಡಿಕೊಳ್ಳುವಿರಿ. ಓಡಾಡಕ್ಕೆ ನಿಮಗೆ ವಾಹನದ ಅನುಕೂಲತೆಯೂ ಆಗುವುದು. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭವನ್ನು ಕಾಣುವಿರಿ. ಪ್ರೇಮವು ನಿಮಗೆ ನಿಮ್ಮನ್ನು ಉತ್ಸಾಹದಿಂದ ಇಡುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದೇ ಮೇಲಧಿಕಾರಿಗಳು ಏನಾದರೂ ಹೇಳಿಯಾರು. ವಾಹನವನ್ನು ಚಲಾಯಿಸುವಾಗ ಎಚ್ಚರ. ಅಪಘಾತವಾಗುವ ಸಾಧ್ಯತೆ ಇದೆ. ನೀವು ಅತಿಯಾದ ಆತ್ಮವಿಶ್ವಾಸದಲ್ಲಿ ಕೆಲವೊಂದನ್ನು ಕಳೆದುಕೊಳ್ಳುವಿರಿ. ಮುನ್ನುಗ್ಗುವ ಮನಃಸ್ಥಿತಿಯು ಇಲ್ಲವಾದೀತು. ನಿಮ್ಮ ನಿರೀಕ್ಷೆಗೆ ಕೆಲವು ನಕಾರಾತ್ಮಕ ಮಾತುಗಳನ್ನು ಕೇಳಿಸಿಕೊಳ್ಳುವಿರಿ. ಬೇಡ ಅಭ್ಯಾಸವು ರೂಡಿಯಾಗುವ ಸಂಭವವಿದೆ.
ವೃಷಭ ರಾಶಿ: ಇಟ್ಟ ನಂಬಿಕೆಗೆ ದ್ರೋಹವನ್ನು ನೀವೇ ಮಾಡಿಕೊಳ್ಳುವಿರಿ. ನಿಮ್ಮನ್ನು ನಂಬಿ ಬಂದವರಿಗೆ ಬೇಸರಕೊಡುವುದು ಮಾಡುವುದು ಬೇಡ. ಹಳೆಯ ಮನೆಯ ದುರಸ್ತಿಗೆ ಹಣವನ್ನು ಖರ್ಚು ಮಾಡುವಿರಿ. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಬಂಧುಗಳ ಸಹಕಾರ ಇಂದು ಲಭ್ಯವಾಗುವುದು. ಯಾರಾದರೂ ನಿಮ್ಮ ಭವಿಷ್ಯದ ಬಗ್ಗೆ ಹೇಳಿ ಅವಮಾನಿಸಬಹುದು. ಕೆಲಸದಲ್ಲಿ ಮತ್ತೆ ಮತ್ತೆ ತೊಂದರೆ ಎದುರಾದರೆ ಅದನ್ನು ಕೈ ಬಿಡುವುದು ಸೂಕ್ತ. ಮನೆಯ ಕಾರ್ಯದಲ್ಲಿ ಮಂದಗತಿ, ಆಮೇಲೆ ಮಾಡಿದರಾಯಿತು ಎಂಬ ಭಾವ ಇರಲಿದೆ. ರಾಜಕೀಯ ನಾಯಕರಿಂದ ಒತ್ತಾಯ ಪೂರ್ವಕ ಬೆಂಬಲವನ್ನು ಪಡೆಯುವಿರಿ. ಹೊಸ ವಸ್ತುವು ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು.
ಮಿಥುನ ರಾಶಿ: ಹಳೆಯ ದ್ವೇಷವನ್ನು ಮರೆಯಲಾರಿರಿ. ಮೊದಲು ನೀವು ಗಟ್ಟಿಯಾಗಿ ನಿಂತು, ಮತ್ತೊಬ್ಬರನ್ನು ನಿಲ್ಲಿಸಬೇಕು. ನೀವು ಯಾರನ್ನೂ ನಿರ್ಲಕ್ಷ್ಯದಿಂದ ನೋಡುವುದು ಬೇಡ. ಸಾಲ ಕೊಟ್ಟವರು ನಿಮ್ಮನ್ನು ಶತ್ರುಗಳಂತೆ ಕಾಡುವರು. ನಿಮ್ಮನ್ನು ಕೆಲವು ಸಹೋದ್ಯೋಗಿಗಳು ಟೀಕಿಸಬಹುದು. ಕುಹಕ ಮಾತುಗಳನ್ನೂ ಆಡಬಹುದು. ಸಂಗಾತಿಯು ನಿಮ್ಮ ಮಾತನ್ನು ಅಲ್ಲಗಳೆಯಬಹುದು. ಸ್ವಪ್ರತಿಷ್ಠೆಯನ್ನು ಎಲ್ಲರೆದುರು ತೋರಿಸಿದರೆ ಪ್ರಯೋಜನವಾಗದು. ನಿಮ್ಮ ವ್ಯವಹಾರದಲ್ಲಿ ಯಾರ ಹಸ್ತಕ್ಷೇಪವೂ ಇಷ್ಟವಾಗದು. ತಂದೆಯ ಕೆಲವು ವ್ಯವಹಾರವು ನಿಮಗೆ ಇಷ್ಟವಾಗದೇ ಅವರ ಮೇಲೆ ಮುನಿಸಿಕೊಳ್ಳುವಿರಿ. ರಾಜಕೀಯದಲ್ಲಿ ನಿಮ್ಮ ವರ್ಚಸ್ಸನ್ನು ಜೊತೆಗಿರುವವರು ಹೆಚ್ಚಿಸುವರು. ಕೆಲಸದ ಒತ್ತಡವು ಇಂದು ಅಧಿಕವಾಗಿ ಇರಲಿದೆ. ಭೂಮಿಯ ವ್ಯವಹಾರದಲ್ಲಿ ಸ್ವಲ್ಪ ನಷ್ಟವಾಗುವುದು. ತಂತ್ರಜ್ಞರು ಲಾಭವನ್ನು ಗಳಿಸುವರು. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ.
ಕರ್ಕಾಟಕ ರಾಶಿ: ಟೀಕಾಸ್ತ್ರಗಳು ನಿಮ್ಮ ಮೇಲೆ ಪ್ರಹಾರವಾಗಬಹುದು. ನಿಮ್ಮ ಅನನುಕೂಲವನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಕೂಡಿ ಇಡುವಿರಿ. ಸಾಲ ಕೊಟ್ಟವರು ನಿಮ್ಮನ್ನು ಇಂದು ಏನೂ ಕೇಳುವುದಿಲ್ಲ. ಹಾಗಾಗಿ ನಿಶ್ಚಿಂತೆಯಿಂದ ಇದ್ದುಬಿಡುವಿರಿ. ಸಿಕ್ಕಿದ್ದರಲ್ಲಿ ಸಂತೋಷ ಪಡುವುದನ್ನ ನೀವು ಬೆಳೆಸಿಕೊಳ್ಳಬೇಕಾಗುವುದು. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ಕಛೇರಿಯಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ಇಷ್ಟವಿಲ್ಲದ ಕಡೆ ನೀವು ಎಂದೂ ಹೋಗಲಾರಿರಿ. ನಿಮ್ಮ ಉತ್ಸಾಹದ ಕೆಲಸವು ಇನ್ನೊಬ್ಬರಿಗೆ ಮಾದರಿಯಾದೀತು. ನಿಮ್ಮ ನಿರ್ಲಕ್ಷ್ಯದ ಸ್ವಭಾವದಿಂದ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಬೇಸರದ ಸನ್ನಿವೇಶದಲ್ಲಿ ಕುಟುಂಬದ ಬಗ್ಗೆ ಗೊತ್ತಾಗುವುದು. ಆತ್ಮಾಭಿಮಾನ ಹೆಚ್ಚಿರುವಂತೆ ತೋರುತ್ತದೆ. ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಹೊಸ ಯೋಜನೆಯು ನಿಮಗೆ ಬರಲಿದೆ.
ಸಿಂಹ ರಾಶಿ: ಉದ್ಯೋಗದ ಕ್ಷೇತ್ರದಲ್ಲಿ ಶತ್ರುಗಳ ಕಾಟ. ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಿಕ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ಧಾರ್ಮಿಕ ಸೇವೆಯಲ್ಲಿ ನೀವು ಭಾಗಿಗಳಾಗುವಿರಿ. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಮಕ್ಕಳ ವರ್ತನೆಯು ಹಿಡಸದೇ ಇರುವುದು. ಆದರೂ ಏನನ್ನೂ ಹೇಳದೇ ಇರುವಿರಿ. ಹಿತಶತ್ರುಗಳನ್ನು ಸರಿಯಾಗಿ ಗಮನಿಸುತ್ತಿರಿ. ಕಾರ್ಯದ ಬಗ್ಗೆ ಅತಿಯಾದ ಆಲೋಚನೆಯಿಂದ ತಲೆನೋವು ಬರಬಹುದು. ಪ್ರೀತಿಗಾಗಿ ಇಂದು ಹೆಚ್ಚು ಸಮಯವನ್ನು ಕೊಡುವಿರಿ. ಹೊಸ ಆದಾಯದ ದಾರಿ ಸಿಕ್ಕಿ ಅಲ್ಪ ನೆಮ್ಮದಿ ಕಾಣುವಿರಿ. ರಾಜಕಾರಣಿಗಳು ಸಮಾಜದಿಂದ ಗೌರವವನ್ನು ಪಡೆಯುವರು. ಬಂಧುಗಳ ಜೊತೆ ವಿನಾಕಾರಣ ಮನಸ್ತಾಪ ಆಗಬಹುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು.
ಕನ್ಯಾ ರಾಶಿ: ಉಪಕಾರಕ್ಕೆ ಅಲ್ಪವಾದರೂ ಪ್ರತ್ಯುಪಕಾರವಿರಲಿ. ಕೃತಜ್ಞತೆಯನ್ನು ಬಿಡುವುದು ಬೇಡ. ಇಂದು ನಿಮ್ಮ ಮೇಲೆ ಎಲ್ಲರಿಂದ ಆಕ್ರಮಣವಾಗಬಹುದು. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ. ನಿಮಗಮ ಸ್ಥಿರಾಸ್ತಿಯ ಮಾರಾಟದಲ್ಲಿ ಏಕಮುಖವಾದ ಅಭಿಪ್ರಾಯ ಬೇಡ. ನಿಮ್ಮ ಕೆಲವು ಆಸೆಗಳನ್ನು ಪೂರೈಸಿಕೊಳ್ಳುವಿರಿ. ಸಮಾಜವು ನಿಮ್ಮ ಸಾಧನೆಯನ್ನು ಗುರುತಿಸೀತು. ನಿಮ್ಮ ಬಗ್ಗೆ ಬಂದ ಆರೋಪವನ್ನು ಜಾಣ್ಮೆಯಿಂದ ಪರಿಹಿರಿಸಿಕೊಳ್ಳುವಿರಿ. ನಿಮ್ಮ ಉದ್ಯಮಕ್ಕೆ ಹೆಚ್ಚಿನ ಸಮಯವನ್ನು ಕೊಡುವುದು ಅಗತ್ಯ. ಪ್ರಭಾವೀ ಜನರ ನಡುವೆ ಅಂತರವನ್ನು ಕಾಯ್ದುಕೊಳ್ಳಿ. ನಿಮ್ಮ ಬಗ್ಗೆಯೇ ನೀವು ಅತಿಯಾಗಿ ಹೇಳಿಕೊಳ್ಳುವುದು ಸರಿ ಕಾಣದು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ.