Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿ ಸಿಗದು

3 ಫೆಬ್ರವರಿ​ 2025: ಸೋಮವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನೀವು ಹೊಂದಿರುವ ಅಪಾರ ಧೈರ್ಯವು ಎಂತಹ ನಕಾರಾತ್ಮಕ ಸಂದರ್ಭವನ್ನೂ ತಡೆದುನಿಲ್ಲಿಸಬಹುದು. ಹಾಗಾದರೆ ಫೆಬ್ರವರಿ 3 ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿ ಸಿಗದು
ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿ ಸಿಗದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 03, 2025 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಸಿದ್ಧ, ಕರಣ : ಬಾಲವ, ಸೂರ್ಯೋದಯ – 07 – 01 am, ಸೂರ್ಯಾಸ್ತ – 06 – 31 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:28 – 09:54, ಯಮಘಂಡ ಕಾಲ 11:20 – 12:47, ಗುಳಿಕ ಕಾಲ14:13 – 15:39

ಮೇಷ ರಾಶಿ: ದೇಹದಂಡನೆಯನ್ನು ಮಾಡದೇ ಕೆಲಸವನ್ನು ಮಾಡುವಿರಿ. ಇದರಿಂದ ಆಲಸ್ಯದ ಹಣೆಪಟ್ಟಿ ಬೀಳುವುದು. ನಿಮ್ಮ ಮನಸ್ಸನ್ನು ಒಂದು ಕಡೆ ಕೇಂದ್ರೀಕರಿಸಲು ಆಗದು. ನಿಮ್ಮ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ಪ್ರತ್ಯುತ್ತರ ನೀಡಲು ಯಾರು ಎದುರಿನವರು ಎಂದು ತಿಳಿಯಿರಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ. ಬೇಡದ ಕಡೆಗಳಲ್ಲಿ ಹಣವನ್ನು ವ್ಯಯಿಸುವಷ್ಟು ಒಳ್ಳೆಯ ಕಡೆ ಮಾಡಲಾರಿರಿ.

ವೃಷಭ ರಾಶಿ: ನಿಮ್ಮ ತಿಳಿವಳಿಕೆಯ ಮಟ್ಟವನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮಗೆ ಹೊಸ ಅವಕಾಶಗಳು ಉದ್ಭವಿಸಲಿದ್ದು, ನೀವು ಅವುಗಳನ್ನು ವೇಗವಾಗಿ ವಶಪಡಿಸಿಕೊಳ್ಳಿ. ಆ ವೇಗವನ್ನು ಮುಂದುವರಿಸಲು ಫಲದ ಅಪೇಕ್ಷೆಯೂ ಇರಲಿದೆ. ನೀವು ಖರ್ಚು ಮಾಡುವುದಕ್ಕಿಂತ ಹೆಚ್ಚಿನದನ್ನು ಉಳಿಸುವುದು ಮತ್ತು ನೀವು ಹೂಡಿಕೆ ಮಾಡಿದರೆ ಸುರಕ್ಷತೆ ಬಗ್ಗೆ ಲಕ್ಷ್ಯವಿರಲಿ. ನಿಮಗೆ ಸಿಗುವ ಆಸ್ತಿಯ ಬಗ್ಗೆ ಕುತೂಹಲವಿರಲಿದೆ. ನೀವು ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಸ್ವತಃ ಉದ್ಯೋಗವನ್ನು ಮಾಡುವ ಆಲೋಚನೆಯು ಬರಬಹುದು. ಅಪರಿಚಿತರ ಜೊತೆ ಸಲುಗೆಯಿಂದ ಇರುವಿರಿ. ಉತ್ತಮ‌ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗುವುದು. ಸಂಗಾತಿಯ ಜೊತೆ ವಾಗ್ವಾದ ಮಾಡುವಿರಿ. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಸಾಲದು.

ಮಿಥುನ ರಾಶಿ: ವಿಶೇಷ ವ್ಯಕ್ತಿ ಇಂದು ನಿಮ್ಮ ಜೀವನಕ್ಕೆ ಉತ್ಸಾಹವನ್ನು ಕೊಡುವರು. ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಉತ್ತಮ ಸಮಯವನ್ನು ಕಳೆಯಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು. ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ನೀವು ಮಾಡಿದ ಕಠಿಣ ಪರಿಶ್ರಮ ಅಂತಿಮವಾಗಿ ಫಲ ನೀಡುತ್ತದೆ. ನಿಮ್ಮ ಹಣದ ಮೇಲೆ ನಿಗಾ ಇರಿಸಿ, ಯಾವುದೇ ಅಪಾಯಗಳನ್ನು ತೆಗೆದುಕೊಳ್ಳದಂತೆ ದೂರವಿರಿ. ಪ್ರೋತ್ಸಾಹವಿಲ್ಲದೇ ಏನನ್ನು ಮಾಡಲು ಮನಸ್ಸಾಗದು. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ತಮ್ಮ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಿಯಾರು. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು.

ಕರ್ಕಾಟಕ ರಾಶಿ: ಇಂದು ಉತ್ತಮ ಅಭ್ಯಾಸಗಳ ಮೇಲೆ ನಿಮ್ಮ ಶಕ್ತಿಯನ್ನು ಕೇಂದ್ರೀಕರಿಸಿ. ಒತ್ತಡದ ಮಟ್ಟವನ್ನು ಕಡಿಮೆ ಮಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಸಂದೇಹಪಡಬಹುದು. ಅವಕಾಶಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಏಕೆಂದರೆ ನಿಮ್ಮ ಕನಸುಗಳನ್ನು ನನಸಾಗಿಸಲು ಒಂದು ಮಾರ್ಗವನ್ನು ಹೊಂದಿರುತ್ತೀರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ‌ ತಿಳಿದುಕೊಳ್ಳದೇ ಹೋಗಬಹುದು. ನಿಮಗೆ ಕೆಲವು ವಿಚಾರದಲ್ಲಿ ಕಾನೂನಿನ ತೊಂದರೆ ಕಾಡಬಹುದು. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು. ಇಂದಿನ ಕಾರ್ಯವನ್ನು ಸರಿಯಾಗಿ ಯೋಜಿಸಿಕೊಳ್ಳಿ.

ಸಿಂಹ ರಾಶಿ: ನೀವು ಇಂದು ಇಡಿ ದಿನದಲ್ಲಿ ಸವಾಲಿನ ಸವಾಲಾಗಿ ಕಾಣಬೇಕಾಗುವುದು. ತಪ್ಪುಗ್ರಹಿಕೆಗಳು ಮತ್ತು ಭಿನ್ನಾಭಿಪ್ರಾಯಗಳ ಸಂದರ್ಭದಲ್ಲಿ, ತಪ್ಪುಗಳನ್ನು ಒಪ್ಪಿಕೊಳ್ಳಿ. ಮುಕ್ತವಾಗಿ ಸಂವಹನ ಮಾಡಿ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಮಯ ತೆಗೆದುಕೊಳ್ಳಿ. ಇಂದು ಕೆಲವು ಹೆಜ್ಜೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ಪ್ರಯೋಜನವಾಗಲಿದೆ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡೀತು. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಾರ್ಯದಲ್ಲಿ ಸಕ್ರಿಯರಾಗಿ. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ‌ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ.

ಕನ್ಯಾ ರಾಶಿ: ನಿಮ್ಮ ಉದ್ಯಮವು ಬೇರೆ ದೃಷ್ಟಿಯಿಂದ ಲಾಭದಾಯಕವಾಗಿದೆ. ನಿಮ್ಮನ್ನು ನೀವು ಧನಾತ್ಮಕವಾಗಿ ಪ್ರಸ್ತುತಪಡಿಸುವತ್ತ ಗಮನಹರಿಸಿ. ಅಂತಸ್ಸಾಕ್ಷಿಯನ್ನು ಬಿಟ್ಟು ನೀವು ದೂರಾಗಬಹುದು. ಇಂದು ಹೆಚ್ಚಿದ ಭಾವನೆಗಳಿಂದ ನೀವು ನಿಮ್ಮವರ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳುವಿರಿ. ನೀವು ಹೊಂದಿರುವ ಅಪಾರ ಧೈರ್ಯವು ಎಂತಹ ನಕಾರಾತ್ಮಕ ಸಂದರ್ಭವನ್ನೂ ತಡೆದುನಿಲ್ಲಿಸಬಹುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ಯಶಸ್ಸು ಹುಡುಕಿ ಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ, ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ನಿಮ್ಮ ಸ್ವಾಭಿಮಾನ ಹೆಚ್ಚಾದಂತೆ ನಿಮ್ಮ ಎಲ್ಲ ಕಾರ್ಯದಲ್ಲಿ ಯಾವುದೇ ಹಿಂಜರಿಯದೇ ಮುನ್ನಡೆಯುವಿರಿ. ಕೆಲವರ ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ.

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ