AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ

16 ಫೆಬ್ರವರಿ​ 2025: ಭಾನುವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿಮಗೆ ಸಿಕ್ಕ ಅಶುಭ ಸೂಚನೆಯಿಂದ ಭಯವಾಗಬಹುದು.‌ ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಹಾಗಾದರೆ ಫೆಬ್ರವರಿ 16 ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ
ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ
TV9 Web
| Edited By: |

Updated on: Feb 16, 2025 | 12:10 AM

Share

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ಸುಕರ್ಮ, ಕರಣ : ಭದ್ರ ಸೂರ್ಯೋದಯ – 06 – 57 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:09 – 18:36, ಯಮಘಂಡ ಕಾಲ 12:47 – 14:14, ಗುಳಿಕ ಕಾಲ 15:42 – 17:09.

ಮೇಷ ರಾಶಿ: ಒಳ್ಳೆಯ ಕಾರ್ಯಕ್ಕೆ ನಿಮ್ಮವರನ್ನು ಮನವೊಲಿಸುವುದು ನಿಮ್ಮಿಂದ ಕಷ್ಟವಾದೀತು. ಸ್ನೇಹಿತರ ಜೊತೆಗಿನ ಸಂಪರ್ಕವನ್ನು ಕಡಿಮೆ ಮಾಡಿಕೊಳ್ಳುವಿರಿ. ನೌಕರರ ತಪ್ಪಿನಿಂದ ನೀವು ಹಣವನ್ನು ಖರ್ಚು ಮಾಡಬೇಕಾದೀತು. ಕೃಷಿಯಲ್ಲಿ ನಿಮಗೆ ದೂರದೃಷ್ಟಿಯ ಕಾರಣ ಆಸಕ್ತಿ ಬೆಳೆಯುವುದು. ಮಕ್ಕಳು ನಿಮ್ಮಿಂದ ಪ್ರೀತಿಯನ್ನು ಬಯಸುವರು. ನಿಮ್ಮ ತಾಳ್ಮೆ ಮತ್ತು ಶ್ರಮದಿಂದ ನಿರೀಕ್ಷಿತ ಫಲಿತಾಂಶವೇ ಇರಲಿದೆ. ಆರ್ಥಿಕ ಪ್ರಗತಿಯ ಪರಿಗಣನೆ ಮಾಡುವ ಸಮಯ. ಕುಟುಂಬದಲ್ಲಿ ಹೊಸ ಶುಭ ಸಂದರ್ಭಗಳಿಗೆ ಮುನ್ಸೂಚನೆ. ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಯೋಗ್ಯ ಸಮಯ. ಅಪರಿಚಿತರು ಆಪ್ತರಾಗುವ ಸಾಧ್ಯತೆ ಇದೆ.‌ ದುರಭ್ಯಾಸಕ್ಕೆ ಅವಕಾಶಗಳು ಬರಲಿದ್ದು ಆಲೋಚಿಸಿ ಮುಂದುವರಿಯಿರಿ. ನಿಮ್ಮ ವರ್ತನೆಯನ್ನು ಕಂಡು ಯಾರಾದರೂ ನಕ್ಕಾರು. ನಿಮ್ಮ‌ ವೇಷಭೂಷಣದ ಬಗ್ಗೆ ಟೀಕಿಸುವರು.ಹೂಡಿಕೆಯ ಬಗ್ಗೆ ಸಂಗಾತಿಯ ನಿಲುವಿಗೆ ಬದ್ಧರಾಗಬೇಲಾದೀತು. ಯಾವುದನ್ನೂ ನೀವು ಮನಸ್ಸಿಗೆ ತೆಗೆದುಕೊಳ್ಳದೇ ನಿಶ್ಚಿಂತೆಯಿಂದ ಇರುವಿರಿ. ಆರ್ಥಿಕತೆಯನ್ನು ಬಲಪಡಿಸಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ.

ವೃಷಭ ರಾಶಿ: ಅನವಶ್ಯಕ ಚರ್ಚೆಯಿಂಸ ನಿಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡಿಕೊಳ್ಳುವಿರಿ. ನಿಂದನೆಗಳು ಸಹಜವೆಂಬಂತೆ ಆಗಲಿದೆ.‌ ಆರ್ಥಿಕ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಮಗ್ರ ಪರಿಶೀಲನೆ ಮಾಡಿ. ಯಶಸ್ಸನ್ನು ಗಳಿಸದಂತೆ ಹಿತಶತ್ರುಗಳು ಅಡ್ಡಗಾಲು ಹಾಕುವಿರಿ. ಆಭರಣದ ವಿಚಾರದಲ್ಲಿ ಜಾಗರೂಕತೆ ಇರಲಿ. ಸಹೋದ್ಯೋಗಿಗಳ ಜೊತೆ ಪ್ರೇಮಾಂಕುರ, ಮನೆಯವರ ಅಭಿಪ್ರಾಯದ ಬಗ್ಗೆ ಆತಂಕ. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಮನಸ್ಸಿನ ಚಾಂಚಲ್ಯವನ್ನು ನಿಲ್ಲಿಸಲಾಗದು. ಇಂದು ನೀವು ಖುಷಿ ಕೊಡುವ ಕಾರ್ಯವನ್ನು ಮಾತ್ರ ಮಾಡುವಿರಿ.‌ ನಿಮ್ಮ ಸ್ವಭಾವವು ಕೆಲವರಿಗೆ ಇಷ್ಟವಾಗದೇ ಹೋಗುವುದು. ಸ್ವತಂತ್ರವಾಗಿರಲು ನೀವು ಹೆಚ್ಚು ಇಷ್ಟಪಡುವಿರಿ. ಯಾರ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ಸಾಗುವಿರಿ. ವೃತ್ತಿಯಲ್ಲಿ ಬದಲಾವಣೆ ಬೇಕು ಎನಿಸುವುದು. ಅಜ್ಞಾತವಾಸದಂತೆ ಇರುವ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಕ್ಕೀತು. ಅಪರಿಚಿತರು ನಿಮಗೆ ಕೆಲವು ತೊಂದರೆಯನ್ನು ಕೊಡಬಹುದು.

ಮಿಥುನ ರಾಶಿ: ಸೋಲಾದ ಸ್ಥಳದಲ್ಲಿಯೇ ಮೇಲೆ ಬರುವ ಛಲ ನಿಮಗೆ. ಧರ್ಮಾಚರಣೆಯ ಕಡೆ ಒಲವಿದ್ದರೂ ಸಮಯವು ಸರಿಯಾಗಿ ಸಿಗದೇ ಇದ್ದೀತು. ಸಂಗಾತಿಯ ಮೇಲೆ ಎಲ್ಲಿಲ್ಲದ ಅನುಮಾನ. ಉದ್ಯೋಗದಲ್ಲಿ ಮೇಲಧಿಕಾರಿಗಳು ನಿಮಗೆ ಪೂರಕವಾಗಿ ಸಹಕಾರ ನೀಡುವರು. ಮೂರನೇ ವ್ಯಕ್ತಿಯ ಮಾತುಗೆ ಪ್ರಾಮುಖ್ಯ ಬೇಡ. ನ್ಯಾಯಾಲಯದ ವಿಚಾರವನ್ನು ಬೇಗ ಮುಗಿಸಿಕೊಳ್ಳಲು ಪ್ರಯತ್ನಿಸುವಿರಿ. ಭೋಗವಸ್ತುಗಳ ಖರೀದಿಯನ್ನು ಹೆಚ್ಚು ಮಾಡುವಿರಿ. ಕಛೇರಿಯಲ್ಲಿ ಅನಿರೀಕ್ಷಿತ ಒತ್ತಡವು ಬಂದು ಮುತ್ತಿಕೊಂಡು ದಿಕ್ಕು ತೋಚದಂತೆ ಆಗುವುದು. ದಾಂಪತ್ಯ ಕಲಹವು ಸುಖಾಂತವಾಗಲಿದೆ. ಸ್ಥಳದ ವ್ಯತ್ಯಾಸದಿಂದ ಆರೋಗ್ಯದ ಮೇಲೆ‌ ದುಷ್ಪರಿಣಾಮವಾಗಲಿದೆ. ಉದ್ಯೋಗದ ಕಾರಣ ಪ್ರಯಾಣ ಮಾಡುವ ಸನ್ನಿವೇಶವು ಬರಲಿದೆ. ನಿಷ್ಠುರ ಮಾತುಗಳನ್ನು ಆಡುವುದು ಬೇಡ. ಕುಟುಂಬದ ಜೊತೆ ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ.

ಕರ್ಕಾಟಕ ರಾಶಿ: ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲನ್ನು ಕೇಳುವ ಸ್ಥಿತಿ ಬರಬಹುದು. ವಿದ್ಯಾಭ್ಯಾಸವನ್ನು ಪೂರ್ಣ ಮಾಡಿದ ಸಂತೋಷವು ಸಿಗುವುದು. ಎಷ್ಟೋ ದಿನಗಳ ಹಿಂದೆಯೇ ಆಲೋಚಿಸಿದ್ದ ಕಾರ್ಯಗಳನ್ನು ನೀವು ಮತ್ತೆ ಆರಂಭಿಸಲು ಮನಸ್ಸು ಮಾಡುವಿರಿ. ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ ನಡೆಯಲಿದೆ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗೆ ಅವಕಾಶ. ಸೋಲನ್ನೂ ಆನಂದಿಸುವ ಮನೋಭಾವವಿರಲಿದೆ. ಹೊಸ ಜವಾಬ್ದಾರಿ ಬರಬಹುದು. ಇಂದಿನ ನಿಮ್ಮ ಕಾರ್ಯಕ್ಕೆ ಸಮಯದ ಮಿತಿಯನ್ನು ಅವಶ್ಯಕ. ನಿಮ್ಮ ಮಾತಿನಿಂದ ಇತರರಿಗೆ ನೋವಾಗುವುದು. ಪ್ರೇಮವು ಅಪಾಯಕ್ಕೆ ಸಿಕ್ಕಿಕೊಳ್ಳಬಹುದು. ವೇತನವನ್ನು ಹೆಚ್ಚಿಸಲು ಅಧಿಕಾರಿಗಳನ್ನು ಕೇಳಿಕೊಳ್ಳುವಿರಿ. ದೂರದ ಬಂಧುಗಳ ಭೇಟಿಯಿಂಸ ನಿಮಗೆ ಸಂತೋಷವಾಗುವುದು. ಸಹೋದ್ಯೋಗಿಗಳ ಜೊತೆ ವಾದವನ್ನು ಮಾಡುವಿರಿ. ವ್ಯವಹಾರದಲ್ಲಿ ಮಾತನಾಡುವಾಗ ನಿಮ್ಮನ್ನು ಅಳೆಯಬಹುದು. ಶತ್ರುಗಳನ್ನು ತಿಳಿದುಕೊಳ್ಳುವ ಅಸಕ್ತಿಯು ಇರಲಿದೆ.

ಸಿಂಹ ರಾಶಿ: ಇಂದು ಮತ್ತೊಬ್ಬರಿಗೆ ನಿಮ್ಮಿಂದಾದ ನೋವನ್ನು ಸರಿ‌ ಮಾಡಿಕೊಳ್ಳುವಿರಿ. ಸಾಂತ್ವನದಿಂದ ಸ್ನೇಹವು ಮೊದಲಿನಂತಾಗುವುದು.‌ ನಿಮ್ಮ ಅತಿಯಾದ ನಂಬುಗೆಯು ಇಂದು ಹುಸಿಯಾಗಬಹುದು. ಸಂತಾನಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಟೀಕೆಗಳು ನಡೆಯುವುದು. ನಿಮ್ಮ ನಿರ್ಧಾರ ಶಕ್ತಿಯು ಮುಂದಿನ ಯಶಸ್ಸಿನ ಕೀಲಿಕೈ. ವಿದೇಶಿ ವ್ಯವಹಾರಗಳಿಗೆ ಅನುಕೂಲಕರ ಸಮಯ. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಮಾರ್ಗದರ್ಶನವಾಗಲಿದೆ. ನಿಮ್ಮ ಇಷ್ಟದವರನ್ನು ಭೇಟಿಯಾಗಿ ಕೆಲವು ಸಮಯ ಸಂತೋಷದಿಂದ ಕಳೆಯುವಿರಿ. ಯಾರಂದಲೋ ಪ್ರೇರಿತರಾದ ನಿಮಗೆ ಸಾಮಾಜಿಕ ಕಾರ್ಯವು ಹಿಡಿಸುವುದು. ಉದ್ಯಮದ ವಿಷಯದಲ್ಲಿ ಸಲ್ಲದ ಮಾತುಗಳು ಕೇಳಿಬರಬಹುದು.‌ ಸಂಪತ್ತಿನ ಮೇಲೆ ನಿಮಗೆ ಮೋಹವು ಕಡಿಮೆ ಇರುವುದು. ವಂಚಿಸಿದವರಿಗೆ ಪ್ರತಿವಂಚನೆಯನ್ನು ಮಾಡಲು ಸಮಯವನ್ನು ನಿರೀಕ್ಷಿಸುತ್ತಿರುವಿರಿ. ಆಶಿಸ್ತಿನ ಕೆಲಸಕ್ಕೆ ಹಿರಿಯರು ನಿಂದಿಸಬಹುದು. ಅಪರಿಚಿತ ವ್ಯಕ್ತಿಗಳಿಂದ ಸಾಲಕ್ಕಾಗಿ ದೂರವಾಣಿಯ ಮೂಲಕ ಪೀಡೆ.

ಕನ್ಯಾ ರಾಶಿ: ಸ್ಥಿರವಾದ ಮನಃಸ್ಥಿತಿಯಿದ್ದರೆ ಹೊಸದೇನನ್ನಾದರೂ ಆರಂಭಿಸಬಹುದು.‌ ಜನರ ಜೊತೆ ಸೌಹಾರ್ದವಾದ ಮಾತುಕತೆಗಳಿಂದ ಪ್ರೀತಿಯು ಹುಟ್ಟುವುದು. ಸಾಹಸ ಮನೋಭಾವದಿಂದ ಯಶಸ್ಸು. ಆರ್ಥಿಕ ನಿರ್ಧಾರಗಳಲ್ಲಿ ತಾಳ್ಮೆ ಮತ್ತು ಪರಿಶೀಲನೆ ಅಗತ್ಯ. ಸಂಬಂಧಗಳಲ್ಲಿ ಗೊಂದಲಗಳು ತಲೆದೋರಬಹುದು, ಸೂಕ್ಷ್ಮವಾಗಿ ನಡೆದುಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ. ಕುಟುಂಬದವರ ಮಾತುಗಳು ಕಿರಿಕಿರಿ ಎನಿಸಬಹುದು. ನಿಮ್ಮ ತಾಳ್ಮೆಯು ಇಂದು ಕಡಿಮೆಯಾಗಿ ಏನಾದರೂ ಹೇಳುವಿರಿ. ಹಣದ ಉಳಿತಾಯದಲ್ಲಿ ಜಿಪುಣರಂತೆ ತೋರುವುದು. ನಿಮಗೆ ನಿರೀಕ್ಷಿತ ಉದ್ಯೋಗವು ಸಿಕ್ಕುವ ಸೂಚನೆ ಬರಲಿದೆ. ಸಾಲವು ಮುಗಿಯುತು ಎಂದುಕೊಳ್ಳುತ್ತಿದ್ದಂತೆ ಇನ್ನೊಂದು ಆರಂಭವಾಗಬಹುದು. ಬಂಧುಗಳಿಂದ ನೀವು ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ನಿಮಗೆ ಸಿಕ್ಕ ಅಶುಭ ಸೂಚನೆಯಿಂದ ಭಯವಾಗಬಹುದು.‌ ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇಂದು ನಿರ್ವಹಿಸಲು ಕಷ್ಟವಾದೀತು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ