AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಸತ್ಯವನ್ನು ಮನೆಯರೆದು ಮುಚ್ಚಿಡುವಿರಿ, ಮುಂದೆ ಕಷ್ಟವಾಗುವುದು

27 ನವೆಂಬರ್​​ 2024: ಬುಧವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು. ಯಾರ ಬಳಿಯೂ ಅಹಂಕಾರವನ್ನು ತೋರಿಸುವುದು ಬೇಡ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಇಂದು ನೀವು ಮಾಡುವಿರಿ. ತಪ್ಪನ್ನು ಸರಿ ಮಾಡಿಕೊಂಡು ಸಾಗಬೇಕಾದೀತು. ಹಾಗಾದರೆ ನವೆಂಬರ್​ 27ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಸತ್ಯವನ್ನು ಮನೆಯರೆದು ಮುಚ್ಚಿಡುವಿರಿ, ಮುಂದೆ ಕಷ್ಟವಾಗುವುದು
ಸತ್ಯವನ್ನು ಮನೆಯರೆದು ಮುಚ್ಚಿಡುವಿರಿ, ಮುಂದೆ ಕಷ್ಟವಾಗುವುದು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 27, 2024 | 12:10 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಆಯುಷ್ಮಾನ್, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:20 ರಿಂದ 03:45ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:06 ರಿಂದ 09:31 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:20 ರವರೆಗೆ.

ಮೇಷ ರಾಶಿ: ಇಕ್ಕಟ್ಟಿನ ಸ್ಥಿತಿಯಿಂದ ಹೊರಬರಲು ಆಗದು. ಇಂದು ಕೌಂಟುಬಿಕ ವ್ಯವಹಾರದಲ್ಲಿ ಮಹತ್ತ್ವದ ತಿರುವು ಸಿಗುವ ಸಂಭವವಿದೆ. ಕಠಿಣ ಪರಿಶ್ರಮದಿಂದ ನಿಮ್ಮ ವೃತ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ತಪ್ಪಿನ ಮೂಲವನ್ನು ಹುಡುಕಿ ಸಮಯವನ್ನು ವ್ಯರ್ಥಮಾಡುವಿರಿ. ಪಾಲುದಾರಿಕೆಯಲ್ಲಿ ಉಂಟಾದ ಗೊಂದಲ್ಲವನ್ನು ಸರಿ ಮಾಡಿಕೊಂಡೂ ಮೈತ್ರಿ ಮಾಡಿಕೊಂಡಲ್ಲಿ ಇಬ್ಬರಿಗೂ ಅನುಕೂಲವಿದೆ. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಇಂದು ಮಾಡಿಕೊಳ್ಳಿ. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾದೀತು. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುವಿರಿ. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ಸೌಲಭ್ಯಗಳನ್ನು ಸದುಪಯೋಗವಾಗುವಂತೆ ನೋಡಿಕೊಳ್ಳಿ. ದೇವತಾರಾಧನೆಯಿಂದ ನೆಮ್ಮದಿ ಸಿಕ್ಕಂತಾಗುವುದು. ನಿಮ್ಮ ಮಾತೇ ನಿಮಗೆ ಹಿಂದಿರುಗಿ ಬರಬಹುದು.

ವೃಷಭ ರಾಶಿ: ಒಳ್ಳೆಯ ಮಾತುಗಳು ನಿಮ್ಮ ಕಿವಿಯ ಮೇಲೆ ಬೀಳಬಹುದು. ನ್ಯಾಯಸಮ್ಮತವಾದ ದಾರಿಯಲ್ಲಿ ಇದ್ದರೂ ನಿಮಗೆ ನೋವು ತಪ್ಪದು. ಆಶಾವಾದದಲ್ಲಿಯೇ ನಿಮ್ಮ ಇಂದಿನ ದಿನವನ್ನು ಕಳೆಯುವಿರಿ. ಯೋಜಿತ ಉದ್ಯಮದಲ್ಲಿ ಪಾಲುದಾರರನ್ನು ಸೇರಿಸಿಕೊಂಡು ಮುಂದುವರಿಯಿರಿ. ಸಾಮಾಜಿಕ ಕಾರ್ಯಗಳಿಗೆ ಒತ್ತಡಗಳು ಇರಲಿದೆ. ಉಪಕಾರವನ್ನು ಮರೆಯುವುದು ಬೇಡ. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಕಾರ್ಯರೂಪಕ್ಕೆ ತೆಗೆದುಕೊಂಡು ಬನ್ನಿ. ಕಡಿಮೆ ಖರ್ಚಿನಲ್ಲಿ ಇಂದಿನ ಕಾರ್ಯವು ನೋಡಿಕೊಳ್ಳಿ. ಉತ್ಸಾಹವನ್ನು ನಿಮ್ಮವರ ಚುಚ್ಚು ಮಾತು ಕಡಿಮೆ ಮಾಡಬಹುದು. ಮಾತನಾಡಿ ತಪ್ಪಿನಲ್ಲಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಅಪರಿಚಿತ ಸ್ಥಳಗಳಿಗೆ ಹೋಗುವ ಸಂದರ್ಭವು ಬರಬಹುದು. ಯಾರ ಮಾತನ್ನೂ ನಿರ್ಲಕ್ಷ್ಯ ಮಾಡಬೇಡಿ. ಮಾತಿನಿಂದ ಸಿಕ್ಕಿಬೀಳುವ ಸಾಧ್ಯತೆ ಇದೆ.

ಮಿಥುನ ರಾಶಿ: ಸತ್ಯವನ್ನು ಮನೆಯರೆದು ಮುಚ್ಚಿಡುವಿರಿ. ಯಾರನ್ನಾದರೂ ಹಿಡಿದುಕೊಂಡು ನಿಮಗೆ ಆಗಬೇಕಾದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ಪ್ರತಿಕೂಲವನ್ನು ಎದುರಿಸುವುದು ಕಷ್ಟವಾಗುವುದು. ನಿಮ್ಮ ಆಸಕ್ತಿಯು ಹೊಸ ಕ್ರಮದ ಹಾದಿಯಲ್ಲಿ ತೋರಿಸಬಹುದು, ನಿಮ್ಮ ಆಲೋಚನೆಗಳನ್ನು ಸರಿಯಾದ ಕಡೆ ವ್ಯಕ್ತಪಡಿಸಿ. ಹೊಸ ವ್ಯವಹಾರಕ್ಕೆ ಹಿಂದೇಟು ಹಾಕುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ರಾಜಕೀಯ ವ್ಯಕ್ತಿಗಳಿಂದ ಕೆಲಸಮಾಡಿಸಿಕೊಳ್ಳಲಿದ್ದೀರಿ. ಭವಿಷ್ಯದ ಕನಸು ಸಾಕಾರಗೊಳ್ಳುವುದು ಸುಲಭವಲ್ಲ. ತಾಳ್ಮೆಯಿಂದ ಸಾಧಿಸಿ. ಸ್ನೇಹಿತನ ಸಹವಾಸದಿಂದ ದುರಭ್ಯಾಸಕ್ಕೆ ಬೀಳುವಿರಿ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ಅಲ್ಲಗಳೆಯಲಾರಿರಿ. ಒಂದೇ ರೀತಿಯ ಕೆಲಸದಲ್ಲಿ ನಿಮಗೆ ನಿರುತ್ಸಾಹವಿರಲಿದೆ. ನೆರೆ-ಹೊರೆಯವರ ಜೊತೆ ಮಾತು ಮಿತವಾಗಿರಲಿ.

ಕರ್ಕಾಟಕ ರಾಶಿ: ಸುಲಭದ ತುತ್ತನ್ನು ಸಂಕಷ್ಟದಿಂದ ಜೀರ್ಣಿಸಿಕೊಳ್ಳುವಿರಿ. ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು. ಇಂದು ಸಾಲಬಾಧೆಯು ನಿಮಗೆ ಅತಿಯಾದಂತೆ ಭಾಸವಾಗುವುದು. ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಲು ನಿಮಗೆ ಕಷ್ಟವೆನಿಸುವುದು. ಉದ್ವೇಗಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಕೃತಜ್ಞತೆಯಿಂದ ಏನನ್ನಾದರೂ ಕೊಡುವಿರಿ. ನಿಮ್ಮ ನಡವಳಿಕೆಯು ಅಹಂಕಾರವಾಗಿ ಬದಲಾಗಬಹುದು. ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು. ಉದ್ಯೋಗದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ಮುಖಂಡರಿಗೆ ಮಾತಿನ‌ ಕಾರಣದಿಂದ ಮುಖಭಂಗವಾಗಬಹುದು. ಹಣಕಾಸಿನ‌ ವಿಚಾರದಲ್ಲಿ ಜಾಗರೂಕತೆ ಮುಖ್ಯ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ.

ಸಿಂಹ ರಾಶಿ: ಹೊಸ ಬಯಕೆಯನ್ನು ಇಟ್ಟು ಕಾರ್ಯವನ್ನು ಮಾಡುವಿರಿ. ಬೇಗ ಸಾಲವನ್ನು ತೀರಿಸಲು ನಿಮ್ಮ ಯೋಜನೆ ಕಾರ್ಯರೂಪಕ್ಕೆ ಬರುವುದು. ನಿಮ್ಮ ಗುರಿಯನ್ನು ತಲುಪಲು ಸಮಯ ಹಿಡಿಯುವುದು. ಎಂದುಕೊಂಡ ಕಾರ್ಯವು ಮುಗಿದು ಸಂಭ್ರಮದಲ್ಲಿ ಇರುವಿರಿ. ಕ್ರಿಯಾತ್ಮಕ ಚಟುವಟಿಕೆಯಲ್ಲಿ ಸಫಲತೆಯನ್ನು ಕಾಣುವಿರಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಪರೋಕ್ಷವಾಗಿ ನಿಮ್ಮಿಂದ ಶತ್ರುಗಳಿಗೆ ಸಹಾಯವಾಗುವುದು. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಎಲ್ಲರ ಜೊತೆ ಬೆರೆಯುವುದನ್ನು ಇಷ್ಟಪಡುವಿರಿ. ಮಕ್ಕಳ ಕಲಿಕೆಗೆ ಬೇಕಾದ ಸಹಕಾರವನ್ನು ನೀಡುವಿರಿ. ತಾಯಿಯ ಪ್ರೀತಿಗೆ ಸೋಲುವಿರಿ. ನೂತನ ಗೃಹವನ್ನು ಖರೀದಿ ಮಾಡುವ ಅವಕಾಶವು ಬರಬಹುದು. ಇಂದು ಸಿಕ್ಕ ಅವಕಾಶಗಳನ್ನು ಹಾಗೆಯೇ ಬಿಟ್ಟುಬಿಡುವಿರಿ. ಮಾನಸಿಕ ಒತ್ತಡದಿಂದ ಇಂದಿನ ಕೆಲಸವು ಬೇಗನೆ ಮುಗಿಸುವಿರಿ. ನಿಮಗೆ ಯಾರಮೇಲಾದರೂ ಇರುವ ನಂಬಿಕೆ ಮಿತಿಯಲ್ಲಿ ಇರಲಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ.

ಕನ್ಯಾ ರಾಶಿ: ಇಂದಿನ ದುಡಿಮೆಯಲ್ಲಿ ಸಿಕ್ಕಷ್ಟು ಅಲ್ಲ, ದಕ್ಕಿದಷ್ಟು ನಿಮ್ಮದೇ. ಸಂಘರ್ಷಗಳಿಗೆ ಸುಖಾಂತ್ಯವನ್ನು ಮಾಡಿದ್ದರೆ ಮತ್ತೇನಾದರೂ ಆದೀತು. ಮಾನಸಿಕ ವಿಶ್ರಾಂತಿ ಇಲ್ಲ ಎಂದು ಅನ್ನಿಸಬಹುದು. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು. ಯಾರ ಬಳಿಯೂ ಅಹಂಕಾರವನ್ನು ತೋರಿಸುವುದು ಬೇಡ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಇಂದು ನೀವು ಮಾಡುವಿರಿ. ತಪ್ಪನ್ನು ಸರಿ ಮಾಡಿಕೊಂಡು ಸಾಗಬೇಕಾದೀತು. ವಾಹನದಲ್ಲಿ ಓಡಾಡುವುದನ್ನು ಕಡಿಮೆ ಮಾಡಬೇಕಾದೀತು. ನೆಮ್ಮದಿಯನ್ನು ಬಹಳ ಶ್ರಮದಿಂದ‌ ಪಡೆಯಬೇಕಾಗುವುದು. ವಾಹನದಲ್ಲಿ ಓಡಾಟವನ್ನು ಕಡಿಮೆಗೊಳಿಸಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು.

ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ