Daily Horoscope: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಲೆಕ್ಕಿಸದೇ ಮುನ್ನಡೆಯುವಿರಿ
14 ಜನವರಿ 2025: ಮಂಗಳವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಬಂಧುಗಳು ನಿಮ್ಮಿಂದ ಏನಾದರು ಸಣ್ಣ ಸಹಾಯದ ನಿರೀಕ್ಷೆ ಮಾಡುವರು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ಹಾಗಾದರೆ ಜನವರಿ 14ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಉತ್ತರಾಷಾಢ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪುಷ್ಯಾ, ಯೋಗ: ವಿಷ್ಕಂಭ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 21 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:32 ರಿಂದ ಸಂಜೆ 04:56ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:52ರಿಂದ 11:17 ರವರೆಗೆ, ಗುಳಿಕ ಮಧ್ಯಹ್ನಾ 12:42 ರಿಂದ 02: 07 ರವರೆಗೆ.
ಮೇಷ ರಾಶಿ: ಎಲ್ಲದಕ್ಕೂ ಒಂದು ಅಂತ್ಯವೆನ್ನುವುದು ಇರಬೇಕು. ಆದರೆ ಅದು ಕಾಲಬಂದಾಗ ಗೊತ್ತಾಗುತ್ತದೆ. ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ನಿಮ್ಮ ರಕ್ಷಣೆಯನ್ನು ನೀವೇ ಮಾಡಿಕೊಳ್ಳಬೇಕು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಎಲ್ಲದಕ್ಕೂ ಕೂಡಲೇ ಉತ್ತರವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರದ ಮಾತಾಗುವುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ನಿಂದನೆಯನ್ನು ಸಹಜದಂತೆ ಸ್ವೀಕರಿಸುವಿರಿ. ವೈರತ್ವವು ನಿಮ್ಮ ಉನ್ನತಿಗೆ ಪ್ರತಿಬಂಧಕವಾಗಬಹುದು.
ವೃಷಭ ರಾಶಿ; ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗಲಿದೆ. ಹಳೆಯ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ನಿಮ್ಮಷ್ಟಿದ ಸ್ಥಳಕ್ಕೆ ಹೋದರೆ ಮನಸ್ಸು ಹಗುರಾಗುವುದು. ಒಳ್ಳೆಯ ಹವ್ಯಾಸಗಳನ್ನು ಕೊಲ್ಲುವುದು ಬೇಡ. ಸಂಗಾತಿಯ ಅನಪೇಕ್ಷಿತ ಆಸೆಗಳನ್ನು ದೂರ ಮಾಡುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ನಿಮ್ಮ ಕನಸನ್ನು ಸಕಾರ ಮಾಡಿಕೊಳ್ಳಲು ಪ್ರಗತಿಯಲ್ಲಿ ಇರುವಿರಿ. ಸಹೋದರನ ಜೊತೆ ಸಣ್ಣ ವಿಷಯಕ್ಕೆ ವಿವಾದವಾಗಬಹುದು. ನೇರ ನುಡಿಗಳು ನಿಮಗೆ ಮುಜುಗರವನ್ನು ಉಂಟುಮಾಡಬಹುದು. ವಿದೇಶಕ್ಕೆ ಹೋಗಲುಬೇಕಾದ ಸಿದ್ಧತೆ ನಡೆಸುವಿರಿ. ಮನೆಯಿಂದ ದೂರ ಇದ್ದವರಿಗೆ ತೊಂದರೆ ಬರಬಹುದು.
ಮಿಥುನ ರಾಶಿ; ನಿಮ್ಮ ಸ್ವೇಚ್ಛಾಚಾರವು ತಂದೆಗೆ ಇಷ್ಟವಾಗದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಆರ್ಥಿಕತೆಯ ಯೋಜನೆಯನ್ನು ಹೆಣೆಯಬಹುದು. ಹೊಸ ಉದ್ಯೋಗದ ಅಭಿವೃದ್ಧಿಗೆ ದೇವರಲ್ಲಿ ಶರಣಾಗುವಿದರಿ. ಪ್ರಯತ್ನಗಳು ಆರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಇಂದು ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥವಾಗುವುದು. ಸ್ವತಂತ್ರವಾಗಿ ನಿಮ್ಮನ್ನು ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಇಂದು ನೀವು ಹೊಸ ಕೆಲಸಗಳನ್ನು ಪ್ರಾರಂಭಿಸಬಹುದು. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಇರುವುದು ಇನ್ನಷ್ಟು ದುರ್ಬಲವಾಗಲು ಕಾರಣ. ಕೆಲವು ವಿಚಾರದಲ್ಲಿ ನಿಮಗೆ ನಿರ್ದಿಷ್ಟತೆ ಇರದು.
ಕರ್ಕಾಟಕ ರಾಶಿ: ಯಾವ ಕೆಲಸವನ್ನು ಪ್ರೀತಿಸುವಿರೋ ಅದು ಅಶ್ರಮದಿಂದ ತಾನಾಗಿಯೇ ಮುಕ್ತಾವಾಗುತ್ತದೆ. ಭಾವುಕರಾಗುವ ಸಂದರ್ಭವು ಬರಬಹುದು. ಹಳೆಯ ಬಯಕೆಯನ್ನು ಇಡೇರಿಸಿಕೊಂಡು ಖುಷಿಪಡುವಿರಿ. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಕಾನೂನಿಗೆ ಶರಣಾಗುವಿರಿ. ಉದ್ಧಟತನದ ಮಾತುಗಳಿಂದ ನಿಮ್ಮ ಸ್ವಭಾವವು ಸ್ಪಷ್ಟವಾಗುವುದು. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ಬಂದುಬಿಡುವುದು. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಭಾವನೆಗಳು ಹೇರಿದರೆ ಅದು ಸ್ಫೋಟವಾಗುವ ಸಾಧ್ಯತೆ ಇದೆ. ಸುಲಭ ದಾರಿಯನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ನಂಬಿಕೆಯನ್ನು ಕಳೆದುಕೊಳ್ಳುವವ ಪ್ರಸಂಗವು ಬರಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ನಿಮ್ಮ ತಪ್ಪನ್ನು ಯಾರಿಂದಲೂ ಕೇಳಲು ಇಚ್ಛಿಸುವುದಿಲ್ಲ. ಸಂಗಾತಿಯ ಇಂಗಿತವು ಅರ್ಥವಾಗದೇ ಸೋಲುವಿರಿ.
ಸಿಂಹ ರಾಶಿ: ಪ್ರತಿಫಲದ ಅಪೇಕ್ಷೆ ಇಲ್ಲದೇ ನೌಕರನಿಗೆ ಸಹಾಯ ಮಾಡುವಿರಿ. ಅಪಾತ್ರರಿಗೆ ನಿಮ್ಮ ವಸ್ತುವನ್ನು ಗೊತ್ತಿಲ್ಲದೇ ಕೊಡುವಿರಿ. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ನಿಮ್ಮ ಸಮತೋಲನ ಮನಃಸ್ಥಿತಿಯು ಕ್ಲಿಷ್ಟ ಸಂದರ್ಭವನ್ನು ಲೀಲಾಜಾಲವಾಗಿ ದಾಟಿಸುವುದು. ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವು ಇರಲಿದೆ. ಅಹಂಕಾರದ ಮಾತುಗಳು ನಿಮಗೇ ಬರಬಹುದು.
ಕನ್ಯಾ ರಾಶಿ; ಬಂಧುಗಳು ನಿಮ್ಮಿಂದ ಏನಾದರು ಸಣ್ಣ ಸಹಾಯದ ನಿರೀಕ್ಷೆ ಮಾಡುವರು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ನಿಮ್ಮಿಂದ ಆಕರ್ಷಿತರಾಗಿ ಮೋಹಗೊಳ್ಳಬಹುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ. ಬಂಧುಗಳಿಂದ ನಿಮಗೆ ಪ್ರಶಂಸೆ ಸಿಕ್ಕರೂ ಒಳಗೇ ಆತಂಕ. ತಂದೆಯ ಮೇಲೆ ನಿಮ್ಮ ಗೌರವವು ಅಧಿಕಾಗಿದ್ದು ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಯಾರ ವಸ್ತುವನ್ನು ಕಸಿದುಕೊಳ್ಳುವ ಹಂತಕ್ಕೆ ಹೋಗುವುದು ಬೇಡ. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಬಂಧಿವಿನಿಂದ ನೀವು ಧನವನ್ನು ಅಪೇಕ್ಷಿಸುವಿರಿ.