AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಕೆಲವರನ್ನು ನೀವು ದೂರ ಇಟ್ಟುಕೊಳ್ಳುವುದೇ ಉತ್ತಮ

29 ಜನವರಿ​ 2025: ಬುಧವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಧಾರ್ಮಿಕ ನಾಯಕರ ಜೊತೆ ವಾಗ್ವಾದ ಮಾಡುವಿರಿ. ಸ್ಪರ್ಧಾತ್ಮಕ ವಿಚಾರಕ್ಕೆ ಸೋಲು‌ಕಂಡು ಹತಾಶ ಭಾವ ನಿಮ್ಮಲ್ಲಿ ಜಾಗರೂಕವಾಗುವುದು. ಹಾಗಾದರೆ ಜನವರಿ 29ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಕೆಲವರನ್ನು ನೀವು ದೂರ ಇಟ್ಟುಕೊಳ್ಳುವುದೇ ಉತ್ತಮ
ಕೆಲವರನ್ನು ನೀವು ದೂರ ಇಟ್ಟುಕೊಳ್ಳುವುದೇ ಉತ್ತಮ
TV9 Web
| Edited By: |

Updated on: Jan 29, 2025 | 12:10 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ: ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಘಾ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಸಿದ್ಧಿ, ಕರಣ : ನಾಗವಾನ್ , ಸೂರ್ಯೋದಯ – 07 – 02 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:46 – 14:12, ಯಮಘಂಡ ಕಾಲ 08:28 – 09:54, ಗುಳಿಕ ಕಾಲ 11:20 – 12:46

ಮೇಷ ರಾಶಿ: ವಿವಾಹಿತರಿಗೆ ಸಣ್ಣ ವಿಚಾರಕ್ಕೆ ಸಂಗಾತಿಯ ನಡುವೆ ಕಲಹ ಘಟಿಸಬಹುದು. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ನಿಮ್ಮ ಸಾಧನೆಗೆ ಸಣ್ಣ ಪ್ರೋತ್ಸಾಹವೂ ದೊಡ್ಡದೇ. ಕಳೆದುಕೊಂಡಿದ್ದು ನಿಮ್ಮ ಕೈಸೇರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಬಾಗುವಿಕೆಯಿಂದ ಏನನ್ನೂ ಕಳೆದುಕೊಳ್ಳುವುದಿಲ್ಲ. ಆ ಭಾವ ನಿಮ್ಮಲ್ಲಿದ್ದರೆ ತೆಗೆದುಹಾಕಿ. ಹಿರಿಯರ ಭೇಟಿಯಿಂದ ಜೀವನಕ್ಕೆ ಹಲವು ಪ್ರಯೋಜನಗಳು ಆಗಲಿವೆ. ಸ್ಥಾನಮಾನವನ್ನು ಪಡೆಯಲು ಏನಾದರೂ ಮಾಡುವಿರಿ. ಸಣ್ಣ ಕಾರಣಕ್ಕೆ ಸ್ನೇಹವನ್ನು ಮುರಿದುಕೊಳ್ಳುವಿರಿ.‌ ಯಾರಿಗೂ ಒತ್ತಾಯ ಪೂರ್ವಕ ಇಟ್ಟುಕೊಳ್ಳುವುದು ಬೇಡ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡಬಹುದು. ಅಪರಿಚಿತರಿಗೆ ನಿಮ್ಮ ಬಗ್ಗೆ ತಿಳಿದುಕೊಳ್ಳುವ ಕುತೂಹಲವು ಬರಬಹುದು.

ವೃಷಭ ರಾಶಿ: ನಿಮ್ಮಿಂದ ಮಾರ್ಗದರ್ಶನವನ್ನು ಪಡೆಯಲು ಬರಬಹುದು. ನಿಮ್ಮ ಜವಾಬ್ದಾರಿಯ ಬಗ್ಗೆ ತಾತ್ಸಾರಭಾವವು ಬರಬಹುದು. ಕೆಲವನ್ನು ನೀವು ದೂರ ಇಟ್ಟುಕೊಳ್ಳುವುದೇ ಉತ್ತಮ. ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ನಿಮ್ಮಷ್ಟಕ್ಕೆ ನೀವು ಇದ್ದುಬಿಡಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ. ಪುಣ್ಯ ಸ್ಥಳದ ದರ್ಶನದಿಂದ ಶಕ್ತಿಸಂಚಯವಾಗಲಿದೆ. ನೀರಿನ ಭೀತಿಯು ಇರಲಿದೆ. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ವ್ಯಾಪಾರಸ್ಥರ ವಿತ್ತಕೋಶ ಭರ್ತಿಯಾಗಿ ಸಂತಸವಾಗಲಿದೆ. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟವಾಗುವುದು. ನೀವು ಇಂದು ಮೌನವನ್ನೇ ಹೆಚ್ಚು ಇಷ್ಟಪಡುವಿರಿ.‌ ಇಬ್ಬಗೆಯ ಮಾನಸಿಕತೆಯು ಬೇಡ.

ಮಿಥುನ ರಾಶಿ; ಯಾರ ಜೊತೆಯೂ ಬೆರೆಯುವ ಮನಸ್ಸಿರದು. ನಿಮ್ಮ ವೈಯಕ್ತಿಕ ವಿಚಾರಗಳನ್ನು ಅಗತ್ಯವಿರುವವರಿಗೆ ತಿಳಿಸಿ.‌ ನಿಮ್ಮ ಕಾರ್ಯನಿರ್ವಹಣೆಯಿಂದ ಉತ್ತಮ ಫಲಿತಾಂಶವು ಸಿಗಬಹುದು. ಪ್ರೀತಿ ಕೊಟ್ಟವರ ನೋವಿಗೆ ಸ್ಪಂದಿಸುವಿರಿ. ಕೈಲಾಗದ ಕಾರ್ಯಕ್ಕೆ ಸೈ ಎನಿಸಿಕೊಳ್ಳುವ ಅಸೆ ನಿಮ್ಮದು. ಆರ್ಥಿಕ ಪರಿಸ್ಥಿತಿ ಸುಧಾರಿಸಿ ನೆಮ್ಮದಿ ಸಿಗುವುದು. ಪ್ರೇಮವು ಸ್ಥಾಯಿಯಾಗಿರಲು ಒಂದಿಷ್ಟು ಪೌಷ್ಟಿಕಾಂಶ ಬೇಕು. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ಬಂಧುಗಳು ನಿಷ್ಠುರದ ಮಾತುಗಳನ್ನಾಡುವರು. ಮನೆಯ ವಾತಾವರಣವು ಸಂತೋಷವನ್ನು ಕೊಟ್ಟೀತು. ಎಲ್ಲ ವಿಚಾರಕ್ಕೂ ಸಿಟ್ಟು ಉಪಯೋಗಕ್ಕೆ ಬಾರದು. ಮಾತಗಳಲ್ಲಿ ವಕ್ರತೆಯನ್ನು ಕಡಿಮೆ ಮಾಡಿ. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆಯಾಗುವುದು. ಅಧ್ಯಾತ್ಮದ ವಿಚಾರವು ಹೆಚ್ಚು ಇಷ್ಟವಾಗುವುದು. ಇನ್ನೊಬ್ಬರ ದುಃಖಕ್ಕೆ ಸ್ಪಂದಿಸುವಿರಿ. ಎಲ್ಲರ ಜೊತೆ ಉತ್ಸಾಹದಿಂದ ಮಾತನಾಡುವಿರಿ.

ಕರ್ಕಾಟಕ ರಾಶಿ: ನೂತನ ಗೃಹದ ಮೇಲೆ ಇತರರ ದೃಷ್ಟಿ ಬೀಳಬಹುದು. ವಿವಾದವಿಲ್ಲದೇ ಇರಲಾರದಷ್ಟು ನಿಮ್ಮ ಮಾನಸಿಕ ಸ್ಥಿತಿ ಬದಲಾಗಿದೆ. ನಿಮ್ಮ ಸಕಾರಾತ್ಮಕ ಆಲೋಚನೆಗಳೂ ನಿಮಗೆ ಸಹಕಾರವನ್ನು ಕೊಡದು. ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ಆತ್ಮೀಯರನ್ನು ನೀವು ಕಳೆದುಕೊಳ್ಳಬೇಕಾಗುವುದು. ಮೇಲಧಿಕಾರಿಗಳ ಮನವೊಲಿಸಿ ನಿಮ್ಮ ಭಡ್ತಿಯನ್ನು ಮಾಡಿಸಿಕೊಳ್ಳುವಿರಿ. ಪ್ರಯತ್ನಕ್ಕೆ ಸರಿಯಾಗಿ ಫಲವು ಸಿಗದು. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು. ನಿಮ್ಮವರ ಬಗ್ಗೆ ಯಾರಾದರೂ ಕಿವಿ ಚುಚ್ಚಬಹುದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಉದ್ವೇಗದಿಂದ ಸೂಕ್ಷ್ಮ ಕಾರ್ಯಗಳು ಹಾಳಾಗುವುದು. ಯಂತ್ರಗಳ ಜೊತೆ ಕೆಲಸ ಮಾಡುವುದು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಸಂಗಾತಿಯ ಮಾತಿನಿಂದ‌ ಕೆಲವು ಮಾರ್ಪಾಡು ಮಾಡಿಕೊಳ್ಳುವಿರಿ. ನಿಮ್ಮದೇ ಆದ ಕಾರ್ಯದಲ್ಲಿ ಮಗ್ನರಾಗಿ ಯಶಸ್ಸು ಸಾಧಿಸುವಿರಿ.

ಸಿಂಹ ರಾಶಿ: ನಿಮಗೆ ಬರಬೇಕಾದ ವ್ಯಾಪಾರದ ಸರಕಿನಲ್ಲಿ ವ್ಯತ್ಯಯ. ಸ್ವಲ್ಪ ಆತಂಕವೂ ಇರಲಿದೆ. ನಿಮ್ಮ ಆದಾಯವು ಇತರರಿಗೆ ಸಮಾನವಾಗಿದ್ದರೂ ಖರ್ಚು ಹಾಗಿರುವುದಿಲ್ಲ. ಏನಾದರೊಂದು ಹುಟ್ಟಿಕೊಳ್ಳುತ್ತದೆ. ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು. ಪ್ರೇಮಪಾಶದಿಂದ ಬಿಡಿಸಿಕೊಳ್ಳುವ ಪ್ರಯತ್ನ ಇರಲಿದೆ. ಉನ್ನತ ವಿದ್ಯಾಭ್ಯಾಸದ ಕನಸು‌‌ ಬಂಧುಗಳ ಸಹಕಾರದಿಂದ ಆಗಲಿದೆ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ ಸೃಷ್ಟಿಯಾಗುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ. ಬೌದ್ಧಿಕ ಆಕ್ರಮಣವನ್ನು ಮೇಲಧಿಕಾರಿಗಳು ಮಾಡಬಹುದು. ಅವಸರವಸರವಾಗಿ ಇಂದಿನ ಕಾರ್ಯಗಳನ್ನು ಮಾಡುವಿರಿ. ಆದರೂ ನಿಮ್ಮ ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳಲು ಆಗದು. ಯಾರದೋ ಒತ್ತಾಯಕ್ಕೆ ಹೂಡಿಕೆಯನ್ನು ಮಾಡು ಕೈಸುಟ್ಟುಕೊಳ್ಳುವುದು ಬೇಡ.

ಕನ್ಯಾ ರಾಶಿ: ಧಾರ್ಮಿಕ ನಾಯಕರ ಜೊತೆ ವಾಗ್ವಾದ ಮಾಡುವಿರಿ. ಸ್ಪರ್ಧಾತ್ಮಕ ವಿಚಾರಕ್ಕೆ ಸೋಲು‌ಕಂಡು ಹತಾಶ ಭಾವ ನಿಮ್ಮಲ್ಲಿ ಜಾಗರೂಕವಾಗುವುದು. ನಿಮ್ಮ ವ್ಯಕ್ತಿತ್ವವು ಸಕಾರಾತ್ಮಕವಾಗಿ ಬೆಳೆಯುತ್ತಿರುವುದು ನಿಮಗೂ ಇತರರಿಗೂ ಸಂತೋಷದ ಸಂಗತಿಯಾಗಿದೆ. ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ. ಕಳೆದುಕೊಳ್ಳಬೇಕಿದ್ದ ಭೂಭಾಗವನ್ನು ನೀವು ಪಡೆಯುವಿರಿ. ಇಂದು ಮಾಡುವ ಸಾಮಾಜಿಕ‌ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ಉದ್ಯಮ ನಿಮಿತ್ತ ಪರ ಊರಿಗೆ ಪ್ರಯಾಣ. ನೌಕರರ ಅಪೇಕ್ಷೆಯನ್ನು ಪೂರೈಸುವುದು ನಿಮಗೆ ಅನಿವಾರ್ಯವಾದೀತು. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಂಡರೂ ಉಳಿಸಿಕೊಳ್ಳುವುದು ಕಷ್ಟವಾದೀತು. ಮನೆಯ ಬಗ್ಗೆ ನಿಮಗೆ ಕಾಳಜಿ ಹೆಚ್ಚು. ಹಿರಿಯರ ಅಸೆಯನ್ನು ಪೂರೈಸುವಿರಿ.