Daily Horoscope: ವಾಹನ ಖರೀದಿಸುವ ಯೋಜನೆ ಮುಂದೂಡುವುದು ಉತ್ತಮ
28 ಫೆಬ್ರವರಿ 2025: ಶುಕ್ರವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ತಾಯಿಯಿಂದ ಆರ್ಥಿಕ ಸಹಾಯವನ್ನೂ ಸಿಗಲಿದ್ದು ತೃಪ್ತಿದಾಯಕವಾಗಲಿದೆ. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಹಾಗಾದರೆ ಫೆಬ್ರವರಿ 28 ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ಬೆಂಗಳೂರು, ಫೆಬ್ರವರಿ 28: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಶತಭಿಷಾ, ಯೋಗ : ಶಿವ, ಕರಣ : ನಾಗವಾನ್ ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 11:17 – 12:45, ಯಮಘಂಡ ಕಾಲ 15:42 – 17:11, ಗುಳಿಕ ಕಾಲ 08:20 – 09:48.
ಮೇಷ ರಾಶಿ: ಮಹಿಳೆಯರಿಗೆ ಬಹಳ ದಿನಗಳ ಅನಂತರ ಬಂದ ಶುಭ ಸುದ್ದಿ ನಿರಾಳ ಸಿಕ್ಕಂತೆ ಆಗುವುದು. ಉತ್ಪಾದಕರಿಗೆ ನೌಕರರ ಕೊರತೆ ಕಾಣಿಸಬಹುದು. ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಗುರು ಹಿರಿಯರಿಂದ ಸಿಕ್ಕ ಉಪದೇಶವು ಪ್ರಯೋಜನಕಾರಿಯಾಗುವುದು. ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಬಹುದು. ಮನೆಯಲ್ಲಿ ಸಂತೋಷ ಹೆಚ್ಚಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ. ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ.
ವೃಷಭ ರಾಶಿ: ಉದ್ಯೋಗದಲ್ಲಿ ಗೊತ್ತಾಗದೇ ನಿಮ್ಮ ಮೇಲೆ ಅಪವಾದಗಳು ಬರಬಹುದು. ಅದನ್ನು ತಾಳ್ಮೆ ತಿಳಿಸಿ, ಸರಿ ಮಾಡಿಕೊಳ್ಳುವಿರಿ. ಆರೋಗ್ಯದ ವ್ಯತ್ಯಾಸದಿಂದ ನಿಮ್ಮ ಮುಖ್ಯ ಕಾರ್ಯಗಳನ್ನು ಮಾಡಲು ಆಗದು. ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸಿ. ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ. ನಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ಆರೋಗ್ಯವು ಸಾಮಾನ್ಯವಾಗಿ ಇರಲಿದೆ. ವ್ಯವಹಾರದ ಬಗ್ಗೆ ಹೆಚ್ಚಿನ ಗಮನ ಹರಿಸಿದ ಅನಂತರವೂ ಕೆಲಸ ತಡವಾಗಿ ಪೂರ್ಣಗೊಳ್ಳುತ್ತದೆ. ಅನೇಕ ಲಾಭದ ಅವಕಾಶಗಳು ಸಿಗುತ್ತವೆ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಹೊಸ ಸಂಬಂಧದ ಮೂಲಕ ಅದೃಷ್ಟ ಬರಬಹುದು. ಸಾಮಾಜಿಕ ಗೌರವವನ್ನು ಪಡೆಯುತ್ತೀರಿ. ನಿಮ್ಮ ಆಜ್ಞೆಯಂತೆ ಎಲ್ಲವೂ ನಡೆಯುವುದು ಕಷ್ಟವಾದೀತು.
ಮಿಥುನ ರಾಶಿ: ಉನ್ನತ ವಿದ್ಯಾಭ್ಯಾಸಕ್ಕೆ ಹಿರಿಯರಿಂದ ಆಶೀರ್ವಾದವನ್ನು ಪಡೆದುಕೊಳ್ಳುವಿರಿ. ಇನ್ನೊಬ್ಬರಲ್ಲಿ ಪ್ರೀತಿ ಮೂಡುವ ಸಾಧ್ಯತೆ ಇದೆ. ಹಳೆಯ ಗೆಳೆಯರು ನಿಮಗೆ ಆಕಸ್ಮಿಕವಾಗಿ ಸಿಕ್ಕಾರು. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ಇನ್ನೊಬ್ಬರ ಭಾವಕ್ಕೆ ಸ್ಪಂದಿಸುವ ಗುಣವಿರುವುದು. ಯಾವುದೇ ಕಾರಣವಿಲ್ಲದೆ ನಿಮ್ಮ ಮನಸ್ಸು ವಿಚಲಿತವಾಗಬಹುದು. ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಬದಲಾವಣೆ ಆಗಬಹುದು. ಆಗುವುದೆಲ್ಲ ಒಳ್ಳೆಯದಕ್ಕೆ ಎನ್ನುವುದನ್ನು ಮರೆಯಬೇಡಿ. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಮಕ್ಕಳನ್ನು ಹಿಡೆತಕ್ಕೆ ತರಲು ಪ್ರಯತ್ನಿಸುವಿರಿ. ಪ್ರಮುಖ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದು ಬೇಡ. ಅಧ್ಯಾತ್ಮದ ಬಗ್ಗೆ ಆಸಕ್ತಿ ಇರುತ್ತದೆ. ಸಹೋದರಿಯರು ಮತ್ತು ಸಂಗಾತಿಯ ಬೆಂಬಲ ಪಡೆಯುವಿರಿ.
ಕರ್ಕಾಟಕ ರಾಶಿ: ನಿಮ್ಮ ಕಾರ್ಯಗಳಲ್ಲಿ ಉತ್ಸಾಹವಿದ್ದರೂ ಹಿತಶತ್ರುಗಳು ನಿಮ್ಮ ಕಾರ್ಯವನ್ನು ಕಾಳು ಮಾಡಿಯಾರು. ಅಧಿಕಾರಿ ವರ್ಗದಿಂದ ನಿಮ್ಮ ಮೇಲೆ ಒತ್ತಡವು ಬರಬಹುದು. ಮಾತಿನಲ್ಲಿ ಮೋಡಿ ಮಾಡುವ ನಿಮ್ಮ ಗುಣ ಎಲ್ಲರಿಗೂ ಇಷ್ಟವಾಗಲಿದೆ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಉದ್ಯೋಗದಲ್ಲಿ ಪ್ರಗತಿಗೆ ಅವಕಾಶಗಳೂ ಇರುತ್ತವೆ. ಹಣವು ಒಮ್ಮೆ ಕೈಗೆ ಬಂದರೆ, ಸಾಹಸ ಕಾರ್ಯಗಳಲ್ಲಿ ತೊಡಗುವಿರಿ. ಸ್ವಲ್ಪ ಕುಟುಂಬದ ಸಮಸ್ಯೆಗಳಿಂದಾಗಿ, ಮನಸ್ಸು ಚಂಚಲವಾಗಿರುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ಅಪರಿಚಿತರ ವ್ಯವಹಾರವನ್ನು ಕಡಿಮೆ ಮಾಡಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ದೈನಂದಿನ ವ್ಯಾಪಾರಿಗಳು ಹೆಚ್ಚು ಶ್ರಮಿಸಬೇಕು. ನಿಮ್ಮ ಮನೋವಿಕಾರದಿಂದ ಇತರರಿಗೂ ಕಷ್ಟವಾದೀತು.
ಸಿಂಹ ರಾಶಿ: ನೀವು ಗೊತ್ತಿಲ್ಲ, ಅನುಭವವಿಲ್ಲದ ಕೆಲಸಗಳನ್ನು ಮಾಡಲು ಹೋಗಬೇಕಾಗುವುದು. ಇದರಿಂದ ನಿಮಗೆ ಆತಂಕವು ಉಂಟಾಗಬಹುದು. ಮನಸ್ಸು ಅನೈತಿಕ ಚಟುವಟಿಕೆಗಳಿಂದ ವಿಮುಖವಾಗಬಹುದು. ನಿಮಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ಯಾರು ಏನೇ ಅಂದರೂ ಚಿಂತೆ ಬೇಡ. ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು. ಸಮಯಕ್ಕಾಗಿ ನೀವು ಕಾಯುವುದು ಅನಿವಾರ್ಯವಾದೀತು. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾದೀತು. ಸ್ವಯಂಕೃತ ಅಪರಾಧದಿಂದ ನಿಮಗೆ ಕಿಂಚಿತ್ತೂ ಬೇಸರವಾಗದು. ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ. ಒಂಟಿತನದ ಆಲೋಚನೆಯು ಪೂರ್ಣವಾಗದು. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆಗುವುದು. ಆರ್ಥಿಕತೆಯು ನಿಮಗೆ ತೃಪ್ತಿ ಕೊಡುವುದು. ವ್ಯಕ್ತಿತ್ವದ ಬೆಳವಣಿಗೆಯ ಜೊತೆಗೆ ಸಾಮಾಜಿಕ ಚಿತ್ರಣವನ್ನು ಬದಲಿಸುವಿರಿ.
ಕನ್ಯಾ ರಾಶಿ: ಇಷ್ಟವಿಲ್ಲದಿದ್ದರೂ ಜವಾಬ್ದಾರಿಗಳು ಹೋಗಿ ಬೇರೆ ಜವಾಬ್ದಾರಿಯನ್ನು ನಿರ್ವಹಿಸಬೇಕಾದೀತು. ನಿಮ್ಮ ಮಾತುಗಳನ್ನು ಉಳಿಸಿಕೊಳ್ಳಲು ಶ್ರಮದ ಅಗತ್ಯವಿದೆ. ತಾಯಿಯಿಂದ ಆರ್ಥಿಕ ಸಹಾಯವನ್ನೂ ಸಿಗಲಿದ್ದು ತೃಪ್ತಿದಾಯಕವಾಗಲಿದೆ. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಚಿಂತನಶೀಲವಾಗಿ ಕೆಲಸ ಮಾಡಿ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಆದರೆ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಇಂದಿನ ಉದ್ಯಮವು ನಿಮ್ಮ ಹಿಡಿತದಲ್ಲಿ ಇರುತ್ತದೆ. ಲಾಭವೂ ಹೆಚ್ಚಾಗುವುದು. ಸ್ವಲ್ಪ ಎಚ್ಚರ ತಪ್ಪಿದರೆ ಇರುವುದನ್ನು ಕಣ್ಮರೆಯಾಗುವ ಸಾಧ್ಯತೆ. ವಿದ್ಯಾಭ್ಯಾಸದಲ್ಲಿ ಅಸ್ಥಿರತೆ ಕಾಡಬಹುದು. ನಿಮ್ಮ ಮಾತಿಗೆ ಆಕ್ಷೇಪಗಳು ಬರಬಹುದು. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಎಲ್ಲ ಕೆಲಸಗಳನ್ನು ಮಾಡಿದರೂ ಯಶಸ್ಸಿನಲ್ಲಿ ವಿಳಂಬವಾಗಬಹುದು. ಮನಸ್ಸಿನ ನಕಾರಾತ್ಮಕ ಭಾವನೆಗಳು ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಚಲಿತರನ್ನಾಗಿ ಮಾಡುತ್ತವೆ.




