Daily Horoscope: ಈ ರಾಶಿಯವರಿಗೆ ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ
7 ಮಾರ್ಚ್ 2025: ಶುಕ್ರವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಹಣಕ್ಕಾಗಿ ಕಾದು ಸಮಯವೂ ಹಾಳು. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಮಾರ್ಚ್ 7ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ಬೆಂಗಳೂರು, ಮಾರ್ಚ್ 06: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ವಣಿಜ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭಕಾಲ : ರಾಹು ಕಾಲ 11:14 – 12:44, ಯಮಘಂಡ ಕಾಲ 15:42 – 17:11, ಗುಳಿಕ ಕಾಲ 08:16 – 09:45.
ಮೇಷ ರಾಶಿ: ಮನಸ್ಸು ಎಲ್ಲೆಯನ್ನು ಮೀರದಂತೆ ಅರಿವಿಗೆ ಬರಲಿದೆ. ಧಾರ್ಮಿಕ ಕರ್ಮವು ನಿಮ್ಮ ಇಷ್ಟಾರ್ಥದ ಸಿದ್ಧಿಗಾಗಿ ಮಾಡುವಿರಿ. ದೇಹಕ್ಕೆ ವಿಶ್ರಾಂತಿಯ ಅವಶ್ಯಕತೆ ಇದ್ದರೂ ಸಮಯವು ಮಾತ್ರ ಸಿಗದೇಹೋದೀತು. ಹಣಕಾಸಿನ ವ್ಯವಹಾರದಲ್ಲಿ ಅಪರಿಚಿತರ ಆಗಮನವಾಗಬಹುದು. ಅಧಿಕ ವಿಶ್ವಾಸದಿಂದ ಕಾರ್ಯದ ಹಾನಿಯಾಗಬಹುದು. ಆಪ್ತರನ್ನು ಅಸೂಯೆಯಿಂದ ಕಾಣುವುದು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ. ಅನಿರೀಕ್ಷಿತ ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ. ಇಂದು ವಾಸದ ಮನೆಯನ್ನು ಬದಲಿಸುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ಎಲ್ಲವನ್ನೂ ತಿಳಿದು ಸುಮ್ಮನಿರುವುದೇ ಲೇಸು ಎಂದೆನಿಸುವುದು.
ವೃಷಭ ರಾಶಿ: ಒಂದರಮೇಲೆ ಒಂದರಂತೆ ಆನಾರೋಗ್ಯವು ನಿಮ್ಮನ್ನು ಪೀಡಿಸಬಹುದು. ಸಂಗಾತಿಯ ಮಾತಿಗೆ ವಿರೋಧವನ್ನು ವ್ಯಕ್ತಪಡಿಸುವಿರಿ. ಆದಾಯಕ್ಕೆ ಅನ್ಯ ಮಾರ್ಗಗಳನ್ನು ಹುಡುಕಬೇಕು ಎಂದೆನಿಸುವುದು. ಇನ್ನೊಬ್ಬರ ಮಾತುಗಳನ್ನು ನೀವು ಸಹನೆಯಿಂದ ಆಲಿಸುವಿರಿ. ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ. ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಆರೋಗ್ಯದ ಬಗ್ಗೆ ಆತಂಕ ಬೇಡ. ವಿನೀತಭಾವವು ನಿಮ್ಮನ್ನು ಇಷ್ಟಪಡುವಂತೆ ಮಾಡಬಹುದು. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ. ಪಶ್ಚಾತ್ತಾಪವು ನಿಮ್ಮ ನೋವನ್ನು ಪರಿಹರಿಸೀತು. ನಿಮ್ಮ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು. ಬದುಕು ಬಂಧನದಂತೆ ಅನ್ನಿಸಬಹುದು. ಮನಸ್ಸೂ ಸಂಕುಚಿತವಾಗಬಹುದು.
ಮಿಥುನ ರಾಶಿ: ವಿವಾಹದ ನಿಶ್ಚಯಕ್ಕೆ ಇಂದು ನೀವು ತೆರಳುವಿರಿ. ಸಾಲದ ಮರುಪಾವತಿಗೆ ಸ್ನೇಹಿತರ ಸಹಕಾರವನ್ನು ಪಡೆಯುವಿರಿ. ದೂರ ಪ್ರಯಾಣ ಹೊರಟ ನಿಮಗೆ ಅಡೆತಡೆಗಳು ಬರಬಹುದು. ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ಮಿತವಾದ ಮಾತಿನಿಂದ ನಿಮಗೇ ಒಳ್ಳೆಯದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಸ್ತ್ರೀಯರಲ್ಲಿ ಸಹಾಯವನ್ನು ಕೇಳಲು ಹಿಂಜರಿಯುವಿರಿ. ನಿಮಗೆ ಇಷ್ಟವಾದದನ್ನು ಪಡೆಯುವ ಕಡೆಗೆ ಗಮನ ಇರಲಿ. ನೀವು ವೃತ್ತಿಯನ್ನು ಮಾಡುತ್ತಲೇ ಉನ್ನತ ಪದವಿಯನ್ನು ಪಡೆಯುವಿರಿ. ಯಶಸ್ಸು ನಿಮ್ಮ ಹಿಂದೆ ತಾನಾಗಿಯೇ ಬರುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಬೇಡ ವಿಚಾರಗಳನ್ನು ಅತಿಯಾಗಿ ಆಲೋಚಿಸಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ.
ಕರ್ಕಾಟಕ ರಾಶಿ: ಸಂಸ್ಥೆಯ ಮುಖ್ಯಸ್ಥರಾಗಿ ನಿಮ್ಮನ್ನು ಆಯ್ಕೆ ಮಾಡಬಹುದು. ಆಕಸ್ಮಿಕ ಸುದ್ದಿಯಿಂದ ವಿಚಲಿತರಾಗುವಿರಿ. ಹೂಡಿಕೆಯ ಬಗ್ಗೆ ನಿಮಗೆ ಸರಿಯಾದ ಮಾಹಿತಿಯ ಕೊರತೆ ಇರುವುದು. ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಸ್ವಾವಲಂಬನೆಯ ಕಾರಣಕ್ಕೆ ನಿಮ್ಮಲ್ಲೊಂದು ಹೊಸ ಆತ್ಮವಿಶ್ವಾಸ ಮೂಡಲಿದೆ. ಉದ್ಯೋಗದಾತರು ನಿಮ್ಮಿಂದ ನಿರೀಕ್ಷೆ ಮಾಡುವ ಬೆಂಬಲ ನೀಡುವಲ್ಲಿ ಸಫಲರಾಗುತ್ತೀರಿ. ಇದರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತವೆ. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ನಿಮ್ಮ ಸಂತೋಷವನ್ನು ವ್ಯಕ್ತಪಡಿಸುವ ವಿಧಾನವು ವಿಭಿನ್ನವಾಗಿರಲಿದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ನಿಮ್ಮ ಮನಸ್ಸಿನಲ್ಲಿ ತಳಮಳವಾಗುವುದು. ಅಧಿಕಾರಿಗಳಾಗಿದ್ದರೆ ನೀವೇ ಇಂದು ಆಗಬೇಕಾದ ಕಾರ್ಯಗಳ ಪರಿಶೀಲನೆ ಮಾಡುವಿರಿ. ಉತ್ತಮ ಸ್ನೇಹವನ್ನು ನೀವು ಕಳೆದುಕೊಳ್ಳುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು.
ಸಿಂಹ ರಾಶಿ: ಹಿತಶತ್ರುಗಳ ಬಗ್ಗೆ ಪೂರ್ಣ ನಂಬಿಕೆಯನ್ನು ಇಟ್ಟು ಅವರ ಬಳಿಯಲ್ಲಿಯೇ ಆಪ್ತ ಕಾರ್ಯಗಳನ್ನು ಮಾಡಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಸಹಜ ಕುತೂಹಲವಿರುವುದು. ನಿಮ್ಮನ್ನು ಮೆಚ್ಚಿಸಿ ಕೆಲಸಗಳನ್ನು ಇಂದು ಮಾಡಿಸಿಕೊಳ್ಳುವರು. ನಿಮಗೆ ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ಕೂಡಿಟ್ಟ ಹಣವನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಿದ್ದೀರಿ. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮದಾದ ಜೀವನಕ್ರಮವು ನಿಮಗೆ ಹಿಡಿಸದೇ ಇರಬಹುದು. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ. ಯಾರ ಮಾತನ್ನು ನಂಬುವುದು ಎಂಬ ಗೊಂದಲದಲ್ಲಿ ನೀವು ಇರುವಿರಿ.
ಕನ್ಯಾ ರಾಶಿ: ಸಹೋದರನಿಂದ ನಿಮಗೆ ಉತ್ತಮ ಪಾರಿತೋಷಕದ ನಿರೀಕ್ಷೆ. ಹೂಡಿಕೆಯಿಂದ ಅಧಿಕ ಲಾಭವನ್ನು ಮತ್ತೆ ಹೂಡಿಕೆ ಮಾಡುವಿರಿ. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವುದು ಸರಿಯಾಗದು. ಕೈಗೆ ಸಿಗದ ಹಣ್ಣಿನ ಆಸೆಯನ್ನು ಬಿಟ್ಟು ಬೇರೆಯದಲ್ಲಿ ಪ್ರಯತ್ನಿಸಿ. ಹಣಕ್ಕಾಗಿ ಕಾದು ಸಮಯವೂ ಹಾಳು. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಸಹೋದ್ಯೋಗಿಗಳ ಜತೆಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗುತ್ತದೆ. ನಿಮ್ಮ ವಿರುದ್ಧ ದೂರು ಹೇಳುವ ಸಾಧ್ಯತೆ ಕೂಡ ಇದೆ. ಸಿಟ್ಟಿನ ಕೈಗೆ ಬುದ್ಧಿ ಕೊಡಬೇಡಿ. ನೂತನ ಗೃಹ ನಿರ್ಮಾಣದ ಬಗ್ಗೆ ನುರಿತವರ ಜೊತೆ ಚರ್ಚೆಯನ್ನು ನಡೆಸುವು ಯೋಚನೆ ಇರುವುದು. ವಾಹನ ಓಡಾಡವು ಸುಖಕರವಲ್ಲ. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು.




