Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರಿಗೆ ಯಂತ್ರದ ವ್ಯಾಪಾರವು ಲಾಭದಾಯಕ

15 ಫೆಬ್ರವರಿ​ 2025: ಶನಿವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿಮ್ಮ ವ್ರತಕ್ಕೆ ಭಂಗ ಬರುವ ಸಾಧ್ಯತೆ ಇದೆ. ಅಪರಿಚಿತರು ನಿಮ್ಮಿಂದ ಹಣವನ್ನು ಕೇಳಬಹುದು. ಕೆಲಸಕ್ಕೆ ಅನುಗುಣವಾಗಿ ಸಮಯವನ್ನು ಹೊಂದಿಸಿಕೊಳ್ಳಿ. ಹಾಗಾದರೆ ಫೆಬ್ರವರಿ 15 ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರಿಗೆ ಯಂತ್ರದ ವ್ಯಾಪಾರವು ಲಾಭದಾಯಕ
ಈ ರಾಶಿಯವರಿಗೆ ಯಂತ್ರದ ವ್ಯಾಪಾರವು ಲಾಭದಾಯಕ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 15, 2025 | 12:10 AM

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಹಸ್ತಾ, ಯೋಗ : ಅತಿಗಂಡ, ಕರಣ : ಗರಜ, ಸೂರ್ಯೋದಯ – 06 – 57 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:52 – 11:20, ಯಮಘಂಡ ಕಾಲ 14:14 – 15:41, ಗುಳಿಕ ಕಾಲ 06:58 – 08:25.

ಮೇಷ ರಾಶಿ: ತಾಳ್ಮೆಗೆ ಒಂದು ಮಾರ್ಯಾದೆ ಇರಲಿದೆ. ಅದು ಮೀರದಂತೆ ಇದ್ದರೆ ಒಳ್ಳೆಯದು. ಅಧಿಕಾರಿಗಳ ವರ್ತನೆಯಿಂದ ಮೇಲೆ ಕೋಪಗೊಳ್ಳುವಿರಿ. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಯಂತ್ರದ ವ್ಯಾಪಾರವು ಲಾಭದಾಯಕವಾಗುವುದು. ಮುಖಂಡದರಾಗಿ ಕರೆದೊಯ್ಯುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಯಾರದೋ ಮಾತು ನಿಮಗೆ ಮನಸ್ಸನ್ನು ಮುಟ್ಟಿ ಪರಿವರ್ತನೆ ಆಗಬಹುದು. ಮನೆಯ ಕಾರ್ಯದಲ್ಲಿ ಇಂದು ಮಗ್ನರಾಗುವಿರಿ. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಾಗದು. ಸಂಗಾತಿಯ ಜೊತೆ ಆಪ್ತಸಮಾಲೋಚನೆಯನ್ನು ಮಾಡುವಿರಿ. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು.

ವೃಷಭ ರಾಶಿ: ಒಂದು ಮಾಡಲು ಹೋದರು ಮತ್ತೊಂದು ತಾನಾಗಿಯೇ ಘಟಿಸುವುದು. ಇಂದು ಧನಾತ್ಮಕ ಶಕ್ತಿಯನ್ನು ಅನುಭವಿಸುವಿರಿ. ಅಂದುಕೊಂಡ ಕಾರ್ಯವು ಆಗಿಲ್ಲವೆಂದು ಒದ್ದಾಡಬಹುದು. ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯಿಂದ ಮನಸ್ಸಿಗೆ ಕಿರಿಕಿರಿ. ಯಾರ ಬಳಿಯೋ ಹಣವನ್ನು ಹೊಂದಿಸಿ ಮಿತ್ರರಿಗೆ ಕೊಡುವಿರಿ. ಒಂದೇರೀತಿಯ ಕೆಲಸವು ನಿಮಗೆ ಬೇಸರ ತರಿಸಬಹುದು. ಯಾರ ಮೇಲೂ ಹಗುರಾದ ಮನೋಭಾವ ಬೇಡ. ಕೆಟ್ಟ ಸನ್ನಿವೇಶವನ್ನು ನೀವು ಅನಿವಾರ್ಯವಾಗಿ ಎದುರಿಸಬೇಕಾಗಬಹುದು. ದೀರ್ಘಕಾಲದ ಗೆಳೆತನವು ಮಾತಿನಿಂದ ಒಡೆದುಹೋಗಬಹುದು. ನಿಮ್ಮ ಬಣ್ಣದ ಮಾತುಗಳು ಕೆಲವು ಅವಧಿಗೆ ಮಾತ್ರ ಸೀಮಿತ. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು. ಸ್ವಂತ ಕೆಲಸಗಳಿಗೆ ಸಮಯ ಹೊಂದಾಣಿಕೆ ಮಾಡುವುದು ಕಷ್ಟ.

ಮಿಥುನ ರಾಶಿ: ಅತಿಯಾದ ಪ್ರೇಮವೇ ನಿಮಗೆ ಮೋಹವಾಗಿ ಮುಳುವಾಗಬಹುದು.‌ ಉದ್ಯೋಗವನ್ನು ಬದಲಾಯಿಸಲು ಬಯಸಿದರೆ, ಅವರಿಗೆ ಇಂದು ಉತ್ತಮ ದಿನವಲ್ಲ. ವ್ಯಾಪಾರದಲ್ಲಿ ನಿಮಗೆ ಋಣಾತ್ಮಕ ಹೇಳಿಕೆಗಳು ಕೇಳಿಬರಬಹದು. ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿಕೊಳ್ಳಿ. ನಿಮಗೆ ಬೇಕಾದ ಹಣವು ಸರಿಯಾದ ಸಮಯಕ್ಕೆ ಸಿಗದೆ ಆಂತಕವಾಗುವುದು. ನಿಮ್ಮ ಪಾವಿತ್ರ್ಯಯನ್ನು ಉಳಿಸಿಕೊಳ್ಳಲಾಹದು.‌ ಅಪರಿಚಿತರು ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವರು. ಹಣಕಾಸಿನ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಿಕೊಳ್ಳಿ. ಸಾಲವನ್ನು ಹಿಂದಿರುಗಿಸಲು ನಿಮ್ಮ ಹೂಡಿಕೆಯನ್ನು ತೆಗೆಯಬೇಕಾಗುವುದು. ಕೆಲವು ವ್ಯವಹಾರದಲ್ಲಿ ನೀವು ಹಿಂದುಳಿದಂತೆ ನಿಮಗೆ ಅರಿವಾಗುವುದು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ನಿಮಗೆ ಯಾರ ಬೆಂಬಲದಿದ್ದರೂ ಕಾರ್ಯವನ್ನು ಮಾಡುವವರು ನೀವೇ. ಬರಬೇಕಾದ ಪೂರ್ಣವಾಗಿ ಬಾರದು. ಇಂದು ನಿಮ್ಮ ವೈಯಕ್ತಿಕ ಕಾರ್ಯಗಳನ್ನು ಮಾಡಿ ಮುಗಿಸಲು ಹೆಚ್ಚು ಗಮನಹರಿಸುವಿರಿ.

ಕರ್ಕಾಟಕ ರಾಶಿ: ಸ್ತ್ರೀಯರ ಜೊತೆ ಹೆಚ್ಚು ಸಮಯ ಕಳೆಯುವಿರಿ. ಇಂದು ಉದ್ಯೋಗದಲ್ಲಿರುವ ನಿಮಗೆ ತಾಳ್ಮೆಯು ಅತ್ಯವಶ್ಯಕ. ಅನ್ಯರ ಪಿತೂರಿಯಿಂದ ನಿಮ್ಮ ಉದ್ಯೋಗವು ಹಾಳಾಗುವುದು. ಮನಸ್ಸಿಗೆ ನೆಮ್ಮದಿಯು ಬೇಕೆಂದು ಅನ್ನಿಸುವುದು. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಿಂದ ಇರುವಿರಿ. ನಿಮ್ಮ ಬಗ್ಗೆ ನಿಮಗೇ ಪೂರ್ಣ ಪ್ರಮಾಣದ ನಂಬಿಕೆ ಸಾಲದು. ನೌಕರರಿಂದ ಕೆಟ್ಟ ಹೆಸರು ಬರಬಹುದು. ಹೂಡಿಕೆಯನ್ನು ಮಾಡಿ ಒತ್ತಡವನ್ನು ಅನುಭವಿಸಬೇಕಾಗುವುದು. ಹಿರಿಯರಿಗೆ ಆರ್ಥಿಕ ವಿಚಾರದಲ್ಲಿ ಮಾನಸಿಕ ಹಿಂಸೆಯನ್ನು ಕೊಡುವಿರಿ. ಪ್ರೀತಿಯಿಂದ ಹೇಳಿ ಕೆಲಸವನ್ನು ಮಾಡಿಸಿಕೊಳ್ಳಿ. ಎಲ್ಲಿಗಾದರೂ ದೂರ ಪ್ರಯಾಣವನ್ನು ಮಾಡುವಿರಿ. ಉನ್ನತವಾದ ವಿದ್ಯಾಭ್ಯಾಸದ ಕನಸನ್ನು ನೀವು ನನಸು ಮಾಡಿಕೊಳ್ಳುವಿರಿ. ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಕೃತಜ್ಞೆಯನ್ನು ಅರ್ಪಿಸುವ ಮನೋಭಾವವಿರದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆ ಕಾಣಿಸುವುದು.

ಸಿಂಹ ರಾಶಿ: ಅನಾರೋಗ್ಯಕ್ಕೆ ವೈದ್ಯರ ಭೇಟಿ. ದಂತಕ್ಕೆ ಚಿಕಿತ್ಸೆ ಮಾಡಿಸಿಕೊಳ್ಳುವಿರಿ. ಅನೇಕ ಕೆಲಸಗಳನ್ನು ಮಾಡದೇ ಒಂದು ಕಡೆ ಗಮನವನ್ನು ಹರಿಸಿದರೆ ಆ ಕೆಲಸವು ಉತ್ತಮವಾಗಿ ಪೂರ್ಣಗೊಳ್ಳುವುದು. ಅಧ್ಯಾತ್ಮದಿಂದ ಏನೋ ಕಲ್ಪನೆಗಳನ್ನು ಮಾಡಿಕೊಳ್ಳುವಿರಿ. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಇಂದು ಹೆಚ್ಚಿನ ಜನರ ಜೊತೆ ಒಡನಾಟ ಮಾಡುವಿರಿ. ಸಂಗಾತಿಯು ಕೆಲವು ವಿಚಾರಗಳನ್ನು ಗೌಪ್ಯವಾಗಿ ಇಡಬೇಕಾಗುವುದು. ಶತ್ರುವಿನ ನಿಗ್ರಹಕ್ಕೆ ಖರ್ಚುಮಾಡುವಿರಿ. ಆಸ್ತಿಯ ಕಲಹವನ್ನು ಸರಿ ಮಾಡಿಕೊಳ್ಳಲು ಹಣವನ್ನು ಖರ್ಚು ಮಾಡುವುದು ಅನಿವಾರ್ಯವಾಗಬಹುದು. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಇಂದು ಸಹೋದರರ ನಡುವೆ ವಾಗ್ವಾದವು ಅಗಲಿದ್ದು ಹಿರಿಯ ಮಧ್ಯಸ್ತಿಕೆಯಿಂದ ಶಾಂತವಾಗುವುದು. ಹೊಸದರ ಆರಂಭವೇ ಹಳೆಯದರ ಅಂತ್ಯ. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ.

ಕನ್ಯಾ ರಾಶಿ: ಮಕ್ಕಳನ್ನು ಮಾನಸಿಕವಾಗಿ ಬಲವಾಗಲು ಹೇಳುವಿರಿ. ಮೇಲಧಿಕಾರಿಗಳು ವಹಿಸಿದ ಕಾರ್ಯವನ್ನು ಪೂರೈಸುವಲ್ಲಿ ಯಶಸ್ವಿಯಾಗುವಿರಿ. ಹೇಳಬೇಕಾದುದನ್ನು ನೇರವಾಗಿ, ಸ್ಪಷ್ಟವಾಗಿ ಹೇಳುವುದು ಉಚಿತ. ನಿಮ್ಮ ಮಾತೇ ಬಂಡವಾಳವಾದೀತು. ಮನೆಯ ವಾತಾವರಣದಿಂದ ನಿಮ್ಮ ವೃತ್ತಿಯೂ ಸರಿಯಾಗಿರದು.‌ ವ್ಯಾಪರದಿಂದ ಆದ ಲಾಭವು ನಿಮಗೆ ಇನ್ನಷ್ಟು ಉತ್ಸಾಹವನ್ನು ವರ್ಧಿಸುವುದು. ಸಹೋದರಿಯ ವಿವಾಹದ ಜವಾಬ್ದಾರಿಯು ಇರಲಿದೆ. ನಿಮ್ಮ ವ್ರತಕ್ಕೆ ಭಂಗ ಬರುವ ಸಾಧ್ಯತೆ ಇದೆ. ಅಪರಿಚಿತರು ನಿಮ್ಮಿಂದ ಹಣವನ್ನು ಕೇಳಬಹುದು. ಕೆಲಸಕ್ಕೆ ಅನುಗುಣವಾಗಿ ಸಮಯವನ್ನು ಹೊಂದಿಸಿಕೊಳ್ಳಿ. ಸಂಗತಿ ಜೊತೆಗಿನ ವಿರಸವನ್ನು ದೂರಮಾಡಿಕೊಳ್ಳುವಿರಿ. ಪ್ರಯಾಣ ಮಾಡಲು ನೀವು ಬಹಳ ಉತ್ಸಾಹದಿಂದ ಇರುವಿರಿ. ಹತ್ತಿರದವರನ್ನು ನೀವು ಕಳೆದುಕೊಳ್ಳಬೇಕಾದೀತು. ಪರರಿಗೆ ನೋವಾಗದಂತೆ ಸ್ಪಂದಿಸುವಿರಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನೆಲ್ಲವನ್ನೂ ಹೇಳುವಿರಿ. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು.

ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ