Daily Horoscope: ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು

06 ಜನವರಿ​ 2025: ಸೋಮವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ವಿಭಿನ್ನವಾಗಿ ಯಾವುದನ್ನಾದರೂ ಮಾಡಬಹುದು. ಬೇರೆಯವರ ಮನಸ್ತಾಪವನ್ನು ಸರಿ ಮಾಡಲು ನಿಮಗೆ ಉತ್ಸಾಹವು ಇರಲಿದೆ‌. ಹಾಗಾದರೆ ಜನವರಿ 06ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು
ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2025 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 16 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:25 ರಿಂದ 09:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:14 ರಿಂದ ಮಧ್ಯಾಹ್ನ 12:39 ರವರೆಗೆ, ಗುಳಿಕ ಮಧ್ಯಾಹ್ನ 02:03 ರಿಂದ 03:28 ರವರೆಗೆ.

ಮೇಷ ರಾಶಿ: ಅಲ್ಪ ಕರುಣೆಯಾದರೂ ನಿಮ್ಮಿಂದ ಮಕ್ಕಳಿಗೆ ಸಿಗಲಿ. ಅಪಕ್ವವಾದ ಮಾತುಗಳಿಗೆ ಅವಕಾಶ ಕೊಡಬೇಡಿ. ಸಹವಾಸದಿಂದ ದಾರಿಯು ಬದಲಾಗುವುದು ಸಾಧ್ಯತೆ ಇದೆ. ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ಒತ್ತಾಯದಿಂದ ನಿಮಗೆ ಗೌರವ ಪ್ರಾಪ್ತವಾಗಬಹುದು. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ ಇರಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಿ. ಮಕ್ಕಳು ನಿಮ್ಮ ಬಳಿ ಹೊಸತನ್ನು ತಿಳಿದುಕೊಳ್ಳಲು ಬಯಸುವರು. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ. ಸಿಕ್ಕ ಅಧಿಕಾರದ ಬಗ್ಗೆ ಕೀಳರಿಮೆ ಬೇಡ.

ವೃಷಭ ರಾಶಿ; ವಿಭಿನ್ನವಾಗಿ ಯಾವುದನ್ನಾದರೂ ಮಾಡಬಹುದು. ಬೇರೆಯವರ ಮನಸ್ತಾಪವನ್ನು ಸರಿ ಮಾಡಲು ನಿಮಗೆ ಉತ್ಸಾಹವು ಇರಲಿದೆ‌. ಬಾಡಿಗೆ ಮನೆಯಲ್ಲಿ ಇರುವವರು ಬದಲಾವಣೆ ಮಾಡಬೇಕಾದ ಸ್ಥಿತಿಯು ಬರಬಹುದು. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಮಿತ್ರರ ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದು ಮಾಡುವ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು. ನಿಮ್ಮ ಎಲ್ಲ ವಿವರಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವುದು ಬೇಡ. ಯಾರನ್ನೂ ಉಪಯೋಗಿಸಿಕೊಳ್ಳಲು ಹೋಗಬೇಡಿ. ಉದ್ಯೋಗದಲ್ಲಿ ಯಾವುದಾದರೊಂದು ರೀತಿಯಲ್ಲಿ ಪ್ರಗತಿಯನ್ನು ಸಾಧಿಸಲು ಹೆಜ್ಜೆ ಇಡಿ.

ಮಿಥುನ ರಾಶಿ; ಇಂದು ಮಾಡುವ ಕಾರ್ಯವನ್ನು ಮುಂದೂಡುವುದು ಬೇಡ. ಇಂದು ನಿಮಗೆ ಮಹಿಳೆಯರಿಂದು ಅವಮಾನವು ಆಗಬಹುದು. ಆಪ್ತರಿಗಾಗಿ ಕೊಟ್ಟ ಸಮಯವೂ ವ್ಯರ್ಥವಾದೀತು. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅಪರಿಚಿತರಿಗೆ ನೀವು ಹಣವನ್ನು ಕೊಡುವಿರಿ. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮನೆಯ ಹಿರಿಯರನ್ನು ಅನಾದರದಿಂದ ನೋಡುವುದು ಯೋಗ್ಯವಾಗದು. ಅಧಿಕಾರದಿಂದ ಅಹಂಕಾರವು ಹೆಚ್ಚಾದೀತು. ಇಂದು ನೀವು ಬಹಳ ಸಿಟ್ಟಗೊಂಡರೂ ಬೇಗ ಶಾಂತರಾಗುವಿರಿ. ಸ್ವಾವಲಂಬನೆ ನಿಮಗೆ ಇಷ್ಟವಾಗುವುದು. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು.

ಕರ್ಕಾಟಕ ರಾಶಿ: ಒಳ್ಳೆಯ ಗುಣಗಳೇ ನಿಮಗೆ ಸತ್ಫಲವನ್ನು ಕೊಡುವುದು. ಎಂದೋ ಮಾಡಿದ ಕೆಲಸವು ಇಂದು ನಿಮ್ಮ ಕಾಲಿಗೆ ಸುತ್ತಿಕೊಳ್ಳುವುದು. ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು. ಭೂಮಿಯ ಲಾಭದ ವಿಚಾರದಲ್ಲಿ ಸರಿಯಾದ ಮಾತುಕತೆಗಳು ಆಗಲಿ. ಆರೋಪ ಪ್ರತ್ಯಾರೋಪಗಳಿಂದ ಪರಸ್ಪರ ಕಲಹವೂ ಆಗುವುದು. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ‌ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ವಿದ್ಯಾಭ್ಯಾಸದ ಸಾಲವನ್ನು ನೀವು ತೀರಿಸುವಿರಿ. ಹಿರಿಯರ ಬಳಿ ಮಾತನಾಡುವಾಗ ವಿನಯವಿರಲಿ.

ಸಿಂಹ ರಾಶಿ: ನಿಮ್ಮ ಮೇಲೆ ಅಪನಂಬಿಕೆಗೆ ಪ್ರಯತ್ನ ನಡೆಯಲಿದೆ. ಇಂದು ಯಾರ ಮಾತನ್ನೂ ಎದುರಿಸುವ ಸಾಮರ್ಥ ಇರದು. ಕುಟುಂಬದಲ್ಲಿ ಎಲ್ಲರೂ ಸುಖದಿಂದ ಜೀವಿಸುವ ಕಾರಣ ನಿಮ್ಮಲ್ಲಿಯೂ ನೆಮ್ಮದಿಯು ಕಾಣಿಸುವುದು. ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಇನ್ನೊಬ್ಬರ ಗೊತ್ತಿಲ್ಲದ ವಿಚಾರವನ್ನು ಹೇಳುವುದು ಬೇಡ. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯಲ್ಲಿ ಬೇಸರ ಉಂಟಾಗಿದ್ದು ಹೊರಗೆ ಸುತ್ತಾಡುವ, ವಿರಾಮವನ್ನು ಪಡೆಯುವ ಮನಸ್ಸು ಇರಲಿದೆ. ನಿಮ್ಮ ಮಾತಿಗೆ ಬೆಲೆ ಇಲ್ಲವಾದೀತು. ಅಪರಿಚಿತರ ಹಸಿವನ್ನು ನೀಗಿಸುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡಲಾಗದು.

ಕನ್ಯಾ ರಾಶಿ; ಇಂದು ದೈವಾನುಗ್ರಹಕ್ಕೆ ಬೇಕಾದ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ವ್ಯಾಪಾರದಲ್ಲಿ ಹಿತಶತ್ರುಗಳ ಕಾಟದಿಂದ ನಿಮಗೆ ತೊಂದರೆಗಳು ಆಡಬಹುದು. ಇದರಿಂದ ನಿಮ್ಮ ನೆಮ್ಮದಿಯೂ ದೂರವಾದೀತು. ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ನಿಮ್ಮನ್ನು ಬಳಸಿಕೊಳ್ಳಬಹುದು, ಯಾರನ್ನೂ ಅತಿಯಾಗಿ ನಂಬಿ ನೀವು ಮೋಸಹೋಗಬಹುದು.‌ ನ್ಯಾಯಾಲಯದ ವಿಚಾರವನ್ನು ಯಾರ ಬಳಿಯೂ ಹೇಳಲು ಇಚ್ಛಿಸುವುದಿಲ್ಲ. ವಿವಾಹಕ್ಕೆ ಸಂಬಂಧಿಸಿದಂತೆ ತುರ್ತಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದು ಸೂಕ್ತ. ನಿಮ್ಮವರ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯವನ್ನು ಕೊಡಿ. ಭೂಮಿಯ ವ್ಯವಹಾರದಿಂದ ಅಲ್ಪ ಅಭಿವೃದ್ಧಿಯು ಆಗಲಿದೆ. ಆರ್ಥಿಕ ಒತ್ತಡದಿಂದ ಮನೆಯ ನೆಮ್ಮದಿಯು ಕದಡಬಹುದು. ಸಂಗಾತಿಯ ಬಗ್ಗೆ ಹೆಚ್ಚು ಕರುಣೆ ಬರಬಹುದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ.

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ