AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ

16 ಜನವರಿ​ 2025: ಗುರುವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಸಕಾರಾತ್ಮಕ ವಿಷಯಗಳಿಗೆ ಅನ್ಯರನ್ನು ಹೋಲಿಸಿಕೊಂಡು ಕಷ್ಟವಾಗಲಿದೆ. ಅನವಶ್ಯಕ ವಸ್ತುಗಳನ್ನು ದೂರ ಮಾಡುವಿರಿ. ಸಂಯಮದಿಂದ ವರ್ತಿಸುವುದು ಅವಶ್ಯಕ. ಹಾಗಾದರೆ ಜನವರಿ 16ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ
ಈ ರಾಶಿಯವರ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 16, 2025 | 12:10 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಉತ್ತರಾಷಾಢ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮಾಘ, ಯೋಗ: ಆಯುಷ್ಮಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:33ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:03ರಿಂದ 08:28 ರವರೆಗೆ, ಗುಳಿಕ ಬೆಳಿಗ್ಗೆ 09:53 ರಿಂದ 11: 18 ರವರೆಗೆ.

ಮೇಷ ರಾಶಿ: ನಿಮಗಿರುವ ಅತಿಯಾದ ಆಯ್ಕೆಗಳೇ ಮುಳುವಗಬಹುದು. ನಿಮ್ಮ ಬಗ್ಗೆ ಕೆಲವು ಅಪಸ್ವರಗಳು ಬಂದರೂ ಆ ಬಗ್ಗೆ ಕಿವಿಗೊಡದೆ ಸ್ಥೈರ್ಯವನ್ನು ಕಾಪಾಡಿಕೊಳ್ಳಿ. ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ಅತಿಥಿಗಳ ಬಗ್ಗೆ ತೋರುವ ಗೌರವ ಇರಲಿ. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಕೆಲವು ಸಮಸ್ಯೆಯು ನಿಮ್ಮ ಮಾನಸಿಕತೆಯಿಂದಾಗಿಯೇ ಇರುವುದು. ಇದು ಶಾಶ್ವತವಾಗಿ ಇರದು ಎಂಬುದನ್ನು ಮರೆಯಬಾರದು. ಕೆಲವನ್ನು ಸಮಯ ಮಾಡಿಕೊಂಡು ನೋಡಬೇಕಾಗುತ್ತದೆ.

ವೃಷಭ ರಾಶಿ: ಯಾರಿಗೂ ಅರ್ಥವಾಗದ ರೀತಿಯಲ್ಲಿ ಮಾತನಾಡುವಿರಿ. ಭವಿಷ್ಯದ ಬಗ್ಗೆ ಇರಬೇಕಾದ ಕಾಳಜಿಯು ಕಡಿಮೆ ಆಗುವುದು. ಸ್ನೇಹಿತರ ಬೆಂಬಲವನ್ನು ನೀವು ಪೂರ್ಣವಾಗಿ ಒಪ್ಪಲಾರಿರಿ. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ತಾಯಿ ಪಡುವ ಕಷ್ಟಕ್ಕೆ ಪೂರ್ಣವಿರಾಮ ಹಾಕುವಿರಿ. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ಹಿತಶತ್ರುಗಳ ನಡುವೆ ಹಿತಚಿಂತಕರನ್ನು ಗುರುತಿಸುವುದು ಕಷ್ಟ. ವಿದೇಶಪ್ರಯಾಣದ ಗುಂಗಿನಿಂದ ಹೊರಬನ್ನಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಬಹುದು. ಸಂಗಾತಿಯ ಜೊತೆ ಸಮಯವನ್ನು ಕಳೆಯಬೇಕು ಎನಿಸಬಹುದು. ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು.

ಮಿಥುನ ರಾಶಿ: ಇಂದು ನಿಮ್ಮಲ್ಲಿ ಹೂಡಿಕೆಯ ವಿಚಾರ‌ ಬಂದಾಗ ಆಮೂಲಾಗ್ರ ದೃಷ್ಟಿಯು ಇರಲಿ. ಸಮಯ ಕೊಡಲಾಗದಿದ್ದರೆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದು ಬೇಡ. ಮಾನಸಿಕ ನೋವನ್ನು ಆಪ್ತರ ಜೊತೆ ಹಂಚಿಕೊಳ್ಳಿ. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು. ಬಂಧುಗಳ ಕಿರಿಕಿರಿ ಇಷ್ಟವಾಗದು. ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಯಲ್ಲಿ ಹಣವಿದ್ದಷ್ಟು ಖರ್ಚು ತಾನಾಗಿಯೇ ಹುಡುಕಿಕೊಂಡು ಬರಬಹುದು. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಹೆಚ್ಚಿರುವುದು. ಅನನುಕೂಲತೆಯನ್ನು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ.

ಕರ್ಕಾಟಕ ರಾಶಿ: ಸಕಾರಾತ್ಮಕ ವಿಷಯಗಳಿಗೆ ಅನ್ಯರನ್ನು ಹೋಲಿಸಿಕೊಂಡು ಕಷ್ಟವಾಗಲಿದೆ. ಅನವಶ್ಯಕ ವಸ್ತುಗಳನ್ನು ದೂರ ಮಾಡುವಿರಿ. ಸಂಯಮದಿಂದ ವರ್ತಿಸುವುದು ಅವಶ್ಯಕ. ಇಂದು ನಿಮ್ಮ ಜೇಬು ತುಂಬಿದಂತೆ ಕಂಡರೂ ಒಳಗೆ ರಂಧ್ರವಿರುವುದು ಗೊತ್ತಾಗದೇ ಹೋಗುವುದು. ಅತಿಯಾದ ಮುತುವರ್ಜಿಯಿಂದ ದುಃಖ ಬರುವ ಸಾಧ್ಯತೆ ಇದೆ. ಆಹಾರ ವಿವಾಹರ ಸರಿಯಾಗಿ ಆಗದ ಕಾರಣ ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರಬಹುದು. ವೃತ್ತಿಯಲ್ಲಿದ್ದರೆ ನಿಮ್ಮ ಕಾರ್ಯವೇ ಉತ್ತರವಾಗಿರಲಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು.

ಸಿಂಹ ರಾಶಿ: ನೀವು ಹಾಕಿಕೊಂಡ ಹೊಸ ಯೋಜನೆಗೆ ಸರಿಯಾದ ರೂಪವಿರಲಿ. ಅನುಭವಿಗಳ ಸಲಹೆಯನ್ನೂ ಪಡೆಯಬಹುದು. ಯಾರನ್ನೋ ತಪ್ಪಿತಸ್ಥರನ್ನಾಗಿ ಮಾಡುವುದು ಬೇಡ. ವಿಳಂಬವಾದರೂ ತೀರ್ಮಾನ ಸರಿಯಾಗಿ ಬರಲಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಹಣದ ಹೊಂದಾಣಿಕೆಗೆ ಭೂಮಾರಾಟ ಮಾಡಬೇಕಾಗುವುದು. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಇಂದು ನೀವು ಒತ್ತಡದ ಕೆಲಸದಿಂದ ವಿರಾಮ ಪಡೆದುಕೊಳ್ಳಲು ಬಯಸುವಿರಿ. ನಕ್ಷತ್ರಗಳ ಸೌಂದರ್ಯವನ್ನು ಹತ್ತಿರ ಹೋಗಿ ನೋಡಲಾಗದು. ದೂರದಿಂದಲೇ ಸುಂದರ.

ಕನ್ಯಾ ರಾಶಿ: ಸಾಹಸ ಪ್ರವೃತ್ತಿ ನಿಮಗೆ ಇಷ್ಟವಾಗುವುದು. ನಿಮ್ಮ ಯಶಸ್ಸಿಗೆ ವಿರೋಧಿಗಳು ಅಡ್ಡಗಾಲು ಹಾಕಬಹುದು. ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವವಿರಲಿದೆ. ಇಷ್ಟದೇವರ ಕ್ಷೇತ್ರಕ್ಕೆ ತೆರಳುವಿರಿ. ವರ ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ತಾಯಿಯ ಆಸೆಯನ್ನು ಈಡೇರಿಸಲಾಗದು. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ನೀವು ತಲುಪುವ ಸ್ಥಾನಕ್ಕೆ ವಿಳಂಬವಾಗಿ ಹೋಗುವಿರಿ. ಸಂಗಾತಿಯು ನಿಮಗೆ ಬೇಸರವಾಗುವಂತೆ ಮಾತನಾಡಬಹುದು. ಇಂದು ನೀವು ಗಂಭೀರವಾದ ಆಲೋಚನೆಯಲ್ಲಿ ಮುಳುಗುವಿರಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ