Daily Horoscope: ಈ ರಾಶಿಯವರು ಅಧಿಕಾರದ ವಿಚಾರದಲ್ಲಿ ಮೋಸ ಹೋಗಬಹುದು
27 ಫೆಬ್ರವರಿ 2025: ಗುರುವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿಮ್ಮ ಆರೋಗ್ಯವು ಉತ್ತಮವಾಗುವ ನಿರೀಕ್ಷೆಯಲ್ಲಿ ಇರುವಿರಿ. ಈ ದಿನ ಪೂರ್ತಿ ಹಣಕಾಸಿನ ಚಿಂತೆಯಲ್ಲಿ ಇರುವಿರಿ. ಹಾಗಾದರೆ ಫೆಬ್ರವರಿ 27 ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ಬೆಂಗಳೂರು, ಫೆಬ್ರವರಿ 26: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಪರಿಘ, ಕರಣ : ಶಕುನಿ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:14 – 15:42, ಯಮಘಂಡ ಕಾಲ 06:52 – 08:20, ಗುಳಿಕ ಕಾಲ 09:49 – 11:17.
ಮೇಷ ರಾಶಿ: ಸಣ್ಣ ಪರಿಹಾರಕ್ಕೆ ಬಹು ಖರ್ಚು ಮಾಡುವಿರಿ. ನಿಮ್ಮ ಆರ್ಥಿಕ ಸಮಸ್ಯೆಯು ಆರೋಗ್ಯದ ಮೇಲೆ ವಿಪರೀತ ಪರಿಣಾಮ ಬೀರಬಹುದು. ಹೊಸ ಉದ್ಯಮಕ್ಕೆ ಸೇರಿಕೊಳ್ಳುವ ಆಸೆಯು ಬರಬಹುದು. ದೂರದಿಂದ ನೋಡಲು ಎಲ್ಲವೂ ಸುಂದರವೇ. ಹತ್ತಿರವಿದ್ದಾಗ ಮಾತ್ರ ಗೊತ್ತಾಗುತ್ತದೆ. ನಿಮ್ಮ ಯೋಗ್ಯತೆ ತಕ್ಕ ಕೆಲಸವು ಸಿಗಲಿದ್ದು ಇನ್ನೊಬ್ಬರನ್ನು ಹೋಲಿಕೆ ಮಾಡುತ್ತ ನಿಮ್ಮ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸುವಿರಿ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಇಂದು ನಿಮ್ಮ ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ.
ವೃಷಭ ರಾಶಿ: ಅದೃಷ್ಟವು ತಿರುಗಿಬರುವ ತನಕ ತಾಳ್ಮೆ ಬೇಕು. ನಿಮಗೆ ಪ್ರೀತಿಕೊಟ್ಟವರ ಬಗ್ಗೆ ಕಾಳಜಿ ಇರಲಿ. ಹಠದ ಸ್ವಭಾವವು ನಿಮಗಷ್ಟೇ ಸಂತೋಷವನ್ನು ಕೊಟ್ಟೀತು. ಇಂದಿನ ನಿಮ್ಮ ವ್ಯವಹಾರವು ಗೌಪ್ಯತೆಯಿಂದ ಇರುವುದು. ಆರ್ಥಿಕ ಸಂಕಷ್ಟವನ್ನು ಯಾರ ಸಮೀಪವೂ ಹೇಳಿಕೊಳ್ಳುವುದು ಬೇಡ. ಏನೂ ಗೊತ್ತಿಲ್ಲದಂತೆ ಇರುವುದೂ ಅಪಾಯಕಾರಿಯೇ. ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ ಭೀತಿಯು ಇರಲಿದೆ. ಮನಸ್ಸು ನಕಾರಾತ್ಮಕವಾಗಿ ಹರಡಬಹುದು. ನಿಮ್ಮ ಕ್ರಿಯಾಶೀಲ ಕಾರ್ಯಕ್ಕೆ ಪ್ರಶಂಸೆ ಸಿಗಲಿದೆ. ಕಳ್ಳರ ಭೀತಿಯು ಕಾಡಬಹುದು. ಸಿಟ್ಟನ್ನು ಅಲ್ಪ ಸಮಯದಲ್ಲಿ ಶಮನ ಮಾಡಿಕೊಂಡು ಯಥಾಸ್ಥಿತಿಗೆ ಬರುವಿರಿ. ಅಧಿಕಾರವನ್ನು ಬಳಸಬೇಕಾದಲ್ಲಿ ಬಳಸಿದರೆ ಉತ್ತಮ. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಬರಬಹುದು. ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಶಂಸೆ ಲಭ್ಯವಾಗುವುದು.
ಮಿಥುನ ರಾಶಿ: ಅತಿಯಾದ ಸಂತೋಷವೂ ನಿಮಗೆ ಅಪಾಯಕಾರಿ. ಇಂದು ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಆತ್ಮವಿಶ್ವಾಸದಿಂದ ಇರಬೇಕಾಗುವುದು. ಸಹೋದರರು ನಿಮ್ಮಿಂದ ಹಣವನ್ನು ಸಾಲವಾಗಿ ಪಡೆಯಬಹುದು. ಕೆಲವು ವಿಚಾರಗಳಲ್ಲಿ ಕುತೂಹಲವು ಇರಲಿದೆ. ಪ್ರತಿಸ್ಪರ್ಧಿ ಇಲ್ಲದೇ ಗೆಲವು ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ತಲೆದೋರಬಹುದು. ಹಿರಿಯರಿಂದ ಸಮಾಧಾನ ಸಿಗಲಿದೆ. ಬೇಡದ ವ್ಯಕ್ತಿಗಳ ಮಾತುಗಳನ್ನು ಕೇಳಲು ನಿಮಗೆ ಇಷ್ಟವಾಗದು. ಸಾವಧಾನದ ಚಿಂತನೆಗಳು ಪ್ರಯೋಜನಕ್ಕೆ ಬಾರದು. ಅನಿರೀಕ್ಷಿತವಾಗಿ ಅಮೂಲ್ಯವಾದ ವಸ್ತುವು ಸಿಗಲಿದ್ದು ರಹಸ್ಯವಾಗಿ ಇಟ್ಟುಕೊಳ್ಳುವಿರಿ. ಧಾರ್ಮಿಕ ಕಾರ್ಯವನ್ನು ನಿರ್ಮಲ ಮನಸ್ಸಿನಿಂದ ಮಾಡುವಿರಿ. ಯಾರ ಜೊತೆಯೂ ಮಿತಿಮೀರಿದ ಸಲುಗೆ ಬೇಡ. ಆಪ್ತರು ನಿಮ್ಮನ್ನು ಬಿಡಬಹುದು. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ.
ಕರ್ಕಾಟಕ ರಾಶಿ: ನಿಮ್ಮ ಹಿನ್ನಡೆಯನ್ನು ಯಾರ ಬಳಿಯೂ ಪ್ರಸ್ತಾಪಿಸಲಾರಿರಿ. ಆತ್ಮವಿಶ್ವಾಸದ ಕೊರತೆಯು ಅತಿಯಾಗಿ ಕಾಡುವುದು. ನಿಮ್ಮ ಸಂಕಟವನ್ನು ಯಾರ ಬಳಿಯೂ ಹೇಳಿಕೊಲ್ಳದೇ ಸುಮ್ಮನಾಗುವಿರಿ. ಎಂತಹ ತಾಯಿಯಾದರೂ ಮಗು ಅತ್ತರಷ್ಟೇ ಹಾಲುಣಿಸುವುದು. ತಂದೆಯ ಕಡೆಯಿಂದ ಸಂಪತ್ತು ಬರಬಹುದು ಎಂಬ ನಿರೀಕ್ಷೆಯಲ್ಲಿ ಇರುವಿರಿ ಮಕ್ಕಳ ಆಸೆಗಳನ್ನು ಪೂರೈಸುವತ್ತ ನಿಮ್ಮ ಗಮನ ಇರಲಿದೆ. ಆಗಂತುಕರು ಮನೆಯ ಕಡೆ ದೃಷ್ಟಿ ಇಡಬಹುದು. ಯಾರದೋ ಮಾತನ್ನು ಕೇಳಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ನೀವು ಅಧಿಕವಾಗಿ ಮಾತನಾಡದೇ ಮೌನವಾಗಿರುವುದು ಉತ್ತಮ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಚರ್ಚಿಸುವಿರಿ. ಮನೋಹರವಾದ ತಾಣಗಳಿಗೆ ಹೋಗುವ ಬಯಕೆಯಾಗುವುದು. ಸ್ಥಿರಾಸ್ತಿಯ ಭಾಗವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ನಿಮ್ಮ ಅನುಕರಣೆಯಿಂದ ಸಿಟ್ಟಾಗುವಿರಿ. ರಾಜಕೀಯ ವ್ಯಕ್ತಿಗಳು ಜನಮನ್ನಣೆಯನ್ನು ಅಧಿಕ ಗಳಿಸುವರು. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು.
ಸಿಂಹ ರಾಶಿ: ಮಾನಸಿಕ ನಿರ್ಮಲತೆಯನ್ನು ಪಡೆಯಲು ನಿಮಗೆ ಆಪ್ತರೇ ಬೇಕಾಗುವುದು. ನಿಮ್ಮ ಸಹಾಯದ ಮನೋಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ಧಾರ್ಮಿಕ ಕಾರ್ಯಗಳಿಗೆ ಹಣವನ್ನು ಕೊಡುವಿರಿ. ನಿಮ್ಮಿಂದಾಗದ ಕೆಲಸಕ್ಕೆ ಕೈಹಾಕಿ ತೊಂದರೆಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಎಲ್ಲವನ್ನೂ ಕಳೆಕೊಂಡಂತಹ ಸ್ಥಿತಿಯ ರೀತಿ ಇರುವುದು ಬೇಡ. ಹೊಸ ವಾಹನದ ಖರೀದಿಯಿಂದ ಸಂತೋಷವಾಗುವುದು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸ್ವಂತ ಉದ್ಯೋಗವು ಸಣ್ಣ ಪ್ರಮಾಣದ ಹಿನ್ನಡೆಯನ್ನು ಕಾಣಬಹುದು. ಔಷಧ ವ್ಯಾಪಾರಿಗಳು ಹೆಚ್ಚಿನ ಲಾಭ ಗಳಿಸುವರು. ನಿಮ್ಮ ಉತ್ಸಾಹವನ್ನು ನೀವೇ ಸಂಪಾದಿಸಿಕೊಳ್ಳುವಿರಿ. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು, ಅದಕ್ಕೆ ಹೆಚ್ಚಿನ ಮೌಲ್ಯವು ಸಿಗದೇಹೋಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು.
ಕನ್ಯಾ ರಾಶಿ: ನಿಮಗೆ ಆಗಬೇಕಾದುದನ್ನು ಮಾಡಿಯೇ ತೃಪ್ತಿ. ನಿಮ್ಮ ಆರೋಗ್ಯವು ಉತ್ತಮವಾಗುವ ನಿರೀಕ್ಷೆಯಲ್ಲಿ ಇರುವಿರಿ. ಈ ದಿನ ಪೂರ್ತಿ ಹಣಕಾಸಿನ ಚಿಂತೆಯಲ್ಲಿ ಇರುವಿರಿ. ನಿಮ್ಮ ನೇರ ನುಡಿಯಿಂದ ಕೆಲವರಿಗೆ ಇಷ್ಟವಾಗದೇ ಹೋಗಬಹುದು. ಸತ್ಯವನ್ನು ಹಿಂಜರಿಕೆಯಾಗಬಹುದು. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಪರೋಪಕಾರದಿಂದ ಕೆಲವೊಮ್ಮೆ ನೀವೇ ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು. ಹೊಸ ಯೋಜನೆಗಳನ್ನು ಹುಡುಕುವಿರಿ. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ ಕಾರಣ ನೀವು ಒಂಟಿಯಾಗಬೇಕಾದೀತು. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು.




