AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಆಪ್ತರಿಂದ ಧನ ಸಹಾಯವ ಪಡೆಯುವಿರಿ

25 ನವೆಂಬರ್​​ 2024: ಸೋಮವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿಮ್ಮ ಹಲವು ದಿನಗಳ ಮನಸ್ಸಿನ ಗೊಂದಲವು ಪರಿಹಾರವಾಗುವುದು. ದುಡುಕಿನ‌‌ ಕೆಲವು ಸಂದರ್ಭಗಳನ್ನು ನಿಭಾಯಿಸುವುದು ನಿಮಗೆ ಕಷ್ಟವಾದೀತು. ವ್ಯವಹಾರಕ್ಕೆ ದೂರ ಪ್ರಯಾಣ ಬರುವುದು. ಹಾಗಾದರೆ ನವೆಂಬರ್​ 25ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರು ಆಪ್ತರಿಂದ ಧನ ಸಹಾಯವ ಪಡೆಯುವಿರಿ
ಈ ರಾಶಿಯವರು ಆಪ್ತರಿಂದ ಧನ ಸಹಾಯವ ಪಡೆಯುವಿರಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 25, 2024 | 12:10 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವಿಷ್ಕಂಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ರಾತ್ರಿ 08:05 ರಿಂದ 09:30ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:55 ರಿಂದ ಮಧ್ಯಾಹ್ನ 12:20 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:45 ರಿಂದ 03:10 ರವರೆಗೆ.

ಮೇಷ ರಾಶಿ: ನಿಮ್ಮ ಯೋಜನೆಯು ಇಂದು ಬೇರೆ ಸ್ವರೂಪವನ್ನು ಪಡೆಯಬಹುದು. ಸಿಟ್ಟು ಮಾತ್ರ ತೋರಿಸಿದರೆ ನಿಮ್ಮ ಕೆಲಸವಾಗದು. ನಿಮ್ಮ ಹಲವು ದಿನಗಳ ಮನಸ್ಸಿನ ಗೊಂದಲವು ಪರಿಹಾರವಾಗುವುದು. ದುಡುಕಿನ‌‌ ಕೆಲವು ಸಂದರ್ಭಗಳನ್ನು ನಿಭಾಯಿಸುವುದು ನಿಮಗೆ ಕಷ್ಟವಾದೀತು. ವ್ಯವಹಾರಕ್ಕೆ ದೂರ ಪ್ರಯಾಣ ಬರುವುದು. ಇಂದು ನಿಮ್ಮ ಅನೇಕ‌ ದಿನಗಳ ಬಯಕೆಯನ್ನು ಪೂರ್ಣ ಮಾಡಿಕೊಳ್ಳುವ ಸಂದರ್ಭವು ಬರಬಹುದು. ರಕ್ಷಣೆಯ ವ್ಯವಸ್ಥೆಯಲ್ಲಿ ಇರುವವರಿಗೆ ಉನ್ನತ ಸ್ಥಾನವು ಸಿಗುವ ಸಾಧ್ಯತೆ ಇದೆ. ತಪ್ಪುಗಳಿಂದ ನಿಮಗೆ ಸರಿಯಾದ ತಿಳಿವಳಿಕೆ ಬರಲಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಓದಿಗಾಗಿ ಮನೆಯಿಂದ ದೂರವಿರಬೇಕಾಗಿ ಬರಬಹುದು. ಆರ್ಥಿಕತೆಯ ಕಾರಣದಿಂದ ಕಾರ್ಯಗಳು ಹಿಂದುಳಿಯುವ ಸಾಧ್ಯತೆ ಇದೆ. ಇದಕ್ಕಾಗಿ ಆಪ್ತರಿಂದ ಧನಸಹಾಯವನ್ನೂ ಬಯಸುವಿರಿ. ವಿವಾಹಕ್ಕೆ ತೊಂದರೆಯಾದ ವಿಷಯವನ್ನು ತಿಳಿದುಕೊಂಡು ಪರಿಹಾರ ಮಾಡಿಕೊಳ್ಳುವುದು ಉತ್ತಮ.

ವೃಷಭ ರಾಶಿ: ಪರರ ಸಂಪತ್ತಿಗೆ ಕಣ್ಣು ಹಾಕುವಿರಿ. ಯಾರದೋ ಒತ್ತಾಯಕ್ಕಾಗಿ ಮಾಡುವ ಕಾರ್ಯಗಳು ಹಾಳಾಗುವುದು. ಇಂದು ಮಹಿಳೆಯರ ಸಂಘವು ವ್ಯವಹಾರದಲ್ಲಿ ಲಾಭವನ್ನು ಪಡೆದುಕೊಳ್ಳುವುದು. ಆದಾಯದ ಮೂಲವು ತಪ್ಪಬಹುದು. ಇನ್ನೊಬ್ಬರ ಅಪ್ರಯೋಜಕ ಸಲಹೆಗೆ ಕಿವಿಗೊಟ್ಟು ಒಳ್ಳೆಯ ವೃತ್ತಿಜೀವನವನ್ನು ಹಾಳು ಮಾಡಿಕೊಳ್ಳುವಿರಿ. ಸ್ತ್ರೀಯರ ಬಳಿ ವಿನಂತಿ ಮಾಡಿಕೊಂಡು ಸಹಾಯವನ್ನು ಪಡೆಯುವಿರಿ. ಮಾನಸಿಕ ಒತ್ತಡವನ್ನು ನಿವಾರಿಸಿಕೊಳ್ಳಲು ಒಂಟಿಯಾಗಿ ಸುತ್ತಾಡುವಿರಿ. ತಂದೆ ಹಾಗೂ ಮಕ್ಕಳ ಮಧ್ಯ ಕೆಲವು ವಿಚಾರಗಳಿವೆ ಭಿನ್ನಾಭಿಪ್ರಾಯಗಳು ಬಂದು ವಾಗ್ವಾದವೂ ಆಗಬಹುದು. ಉನ್ನತಮಟ್ಟದಲ್ಲಿ ಅಧಿಕಾರಿಗಳ ಸಂಪರ್ಕವನ್ನು ಬೆಳೆಸಿಕೊಳ್ಳುವಿರಿ. ಉದ್ವೇಗಕ್ಕೆ ಒಳಗಾಗಿ ನಿಮ್ಮನ್ನೇ ನೀವು ಮರೆಯಬಹುದು. ಹೊಸಬರ ಗೆಳೆತನವಾಗುವುದು. ಕೃತಜ್ಞತೆಯಿಂದ ವ್ಯವಹರಿಸಿದರೆ ವಿಶ್ವಾಸ ಉಳೊಯುವುದು.

ಮಿಥುನ ರಾಶಿ: ಆಗಬೇಕಾದ ಕಾರ್ಯವನ್ನು ತುರ್ತಾಗಿ ಮಾಡಿ. ಅಕಾರಣ ಸಂತೋಷದಿಂದ ನಿಮಗೆ ಉತ್ಸಾಹದಿಂದ ಇರುವಿರಿ. ಇಂದು ನಿಮಗೆ ಯಾರಿಂದಲಾದರೂ ಹೊಗಳಿಕೆ ಸಿಗಲಿದೆ. ಸಂಗಾತಿಯ ಸ್ಪಂದನೆಯಿಂದ ಉತ್ಸಾಹವು ಅಧಿಕವಾಗುವುದು.‌ ಹಲವು ಅವಕಾಶಗಳಲ್ಲಿ ನಿಮಗೆ ಎಲ್ಲ ರೀತಿಯಿಂದ ಉಪಯೋಗವಾಗುವುದನ್ನು ಆರಿಸಿಕೊಳ್ಳಿ. ಯಾರನ್ನಾದರೂ ದ್ವೇಷಿಸುವ ಮನೋಭಾವವು ಬರುವ ಸಾಧ್ಯತೆ ಇದೆ. ನಿಮ್ಮ ವೈಯಕ್ತಿಕ ಕಾರ್ಯಗಳನ್ನು ಇಂದು ಮಾಡಿಕೊಳ್ಳಲಾಗದು. ಆರ್ಥಿಕ ಹಾಗೂ ಸಮಯದ ನಷ್ಟದಿಂದಾಗಿ ಬೇಸರಿಸುವಿರಿ. ಆಪ್ತರು ನೀಡುವ ಹಣಕ್ಕಾಗಿ ನೀವು ಕಾಯುತ್ತಿರಬೇಕಾದೀತು. ಇನ್ನೊಬ್ಬರ ವಸ್ತುವನ್ನು ಮರಳಿಕೊಡಲು ನೀವು ಮರೆಯುವಿರಿ. ಸಾಮಾಜಿಕ ಗೌರವವನ್ನು ನೀವಿಂದು ಹೇಳಿಸಿಕೊಂಡು ಪಡೆಯುವಿರಿ. ಮೌಲ್ಯಯುತವಾದ ಏನನ್ನಾದರೂ ಪಡೆಯುವ ಬಯಕೆಯನ್ನು ಇಂದು ಪೂರೈಸಬಹುದು.

ಕರ್ಕಾಟಕ ರಾಶಿ: ಏರು ದನಿಯಲ್ಲಿ ಮಾತನಾಡುವುದು ಬೇಡ. ಇಂದು ನಿಮ್ಮ ಕಛೇರಿಯ ಕಾರ್ಯಗಳು ಬೇಗನೆ ಮುಕ್ತಾಯವಾಗುವುದು. ಸಮಾರಂಭಗಳಿಗೆ ಭೇಟಿ ಕೊಡುವ ಸಂದರ್ಭವು ಬರಬಹುದು. ನಿಮ್ಮ ದಿನಚರಿಯು ಬದಲಾಗಿದ್ದು ಇದರಿಂದ ಆರೋಗ್ಯದ ಮೇಲೆ ಪರಿಣಾಮವು ಉಂಟಾಗಬಹುದು. ವಿದೇಶದ ಸ್ನೇಹಿತರ ಬಾಂಧವ್ಯ ಬೆಳೆಯುವುದು. ನೀವು ಇಂದು ಆರಂಭಿಸಿದ ಕೆಲಸವು ಪೂರ್ಣ ಆಗುವವರೆಗೂ ವಿಶ್ರಾಂತಿಯನ್ನು ಪಡೆಯುವುದಿಲ್ಲ. ಸಂಗಾತಿಯ ಜೊತೆ ಸ್ವಲ್ಪ ಹೊತ್ತು ಕಳೆಯಬೇಕು ಎಂಬ ಮನಸ್ಸಾದೀತು. ಮಕ್ಕಳಿಂದ ಶುಭ ವಾರ್ತೆಯನ್ನು ನಿರೀಕ್ಷಿಸುವಿರಿ. ಯಾರ ಮೇಲೂ ದೋಷಾರೋಪವನ್ನು ಮಾಡುವಿರಿ. ನೀವು ಇಂದು ಕೆಲವರಿಗೆ ಅಪ್ರಾಮಾಣಿಕರಂತೆ ಕಾಣುವಿರಿ. ನಿಮ್ಮ ಗೆಳೆತನದಿಂದ ಸಂಗಾತಿಗೆ ಅಸೂಯೆ ಉಂಟಾಗುವುದು. ಅಲ್ಪ ಸಾಲವನ್ನು ಇಟ್ಟುಕೊಳ್ಳದೇ ಪೂರ್ಣ ಮರುಪಾವತಿಸುವಿರಿ. ನೀವು ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ದುರ್ಬಲವಾಗಿರುವುದು.

ಸಿಂಹ ರಾಶಿ: ಪರಿಚಿತರ ಸ್ನೇಹವನ್ನು ನೀವೇ ಬಯಸಿ ಹೋಗುವಿರಿ. ವಿದ್ಯಾರ್ಥಿಗಳ ಕನಸು ನನಸಾಗುವುದು. ಯಾರ ವ್ಯಕ್ತಿತ್ವವನ್ನೂ ನೋಡಿದ ಮಾತ್ರಕ್ಕೆ ಅಳೆಯುವಲ್ಲಿ ಸೋಲುವಿರಿ. ಇನ್ನೊಬ್ಬರ ವಿಚಾರಗಳಿಗೆ ಮೂಗುತೂರಿಸಲಿದ್ದೀರಿ. ನಿಮ್ಮ ಬಳಿ ಇರುವುದು ಮಾತ್ರ ಶ್ರೇಷ್ಠ ಎಂಬ ಭಾವನೆ ಬೇಡ. ಯಾರನ್ನೋ ಉತ್ತೇಜಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಮನಸ್ಸು ಚಂಚಲವಾದ್ದರಿಂದ ಕ್ಷಣಕ್ಕೊಂದು ಆಲೋಚನೆ ಬರಬಹುದು. ನೂತನ ವಸ್ತುವಿನ ಖರೀದಿಯಿಂದ ಮೋಸ ಹೋಗುವಿರಿ. ಅನಗತ್ಯ ವಸ್ತುಗಳನ್ನು ಖರೀದಿಸಿ ಧನವ್ಯಯವಾಗುವುದು. ಮಕ್ಕಳಿಗೆ ಬೇಕಾದುದನ್ನು ಕೊಡಿಸಬೇಕಾದೀತು. ರಾಜಕಾರಣದಲ್ಲಿ ಅನಿರೀಕ್ಷಿತ ತಿರುವು ಕಾಣಿಸುವುದು. ಮನೆಯ ಬಗ್ಗೆಯೇ ಆಲೋಚನೆ ಇರುವ ಕಾರಣ ಕಛೇರಿಯಲ್ಲಿ ಕೆಲಸದ ಮನಃಸ್ಥಿತಿ ಇರದು. ನೌಕರರಿಗೆ ಖುಷಿ ಆಗಿವಂತೆ ವರ್ತಿಸುವಿರಿ. ವಿವಾಹವಾಗಲು ನಿಮಗೆ ಮನಸ್ಸು ಬಾರದು. ಬೇರೆಯವರ ಕಾರ್ಯಕ್ಕಾಗಿ ಓಡಾಟಮಾಡುವಿರಿ. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ.

ಕನ್ಯಾ ರಾಶಿ: ಕೈಯಲ್ಲಿ ಹಣವಿಲ್ಲದೇ ವ್ಯವಹಾರ ಮಾಡಿ ಮುಜುಗರವಾಗಲಿದೆ. ಕಲ್ಪನಾಲೋಕದಿಂದ ಕೆಳಗಿಳಿದು ವಾಸ್ತವದಲ್ಲಿ ಇರುವುದು ಮುಖ್ಯ. ಇದ್ದಕ್ಕಿದ್ದಂತೆ ಇನ್ನೊಬ್ಬರ ಹಂಗಿನಲ್ಲಿ ಬದುಕಿದಂತೆ ಭಾಸವಾಗುವುದು. ನೆರೆಯರ ಜೊತೆ ನಿಮ್ಮ ಭಾವನೆಗಳನ್ನು ಹೇಳಿಕೊಳ್ಳುವಿರಿ. ಬರಬೇಕಾದ ಹಣವು ಸಕಾಲಕ್ಕೆ ಸಿಗದೇ ವ್ಯವಹಾರದಲ್ಲಿ ಅಡೆತಡೆಯಾಗಬಹುದು. ನೂತನ ಮನೆಯಲ್ಲಿ ಹಲವು ದಿನಗಳ ಅನಂತರ ವಾಸ ಮಾಡುವಿರಿ. ನೀವು ಅಂದುಕೊಂಡಂತೆ ನಿಮ್ಮ ಬದುಕು ಸಾಗುತ್ತಿದೆಯೇ ಎಂದು ಅವಲೋಕಿಸಿ. ಹಿರಿಯರಿಂದ ನಿಮ್ಮ ಕೆಲಸಕ್ಕೆ ಕೆಲವು ನಿಂದನೆಯ ಮಾತುಗಳು ಕೇಳಿಸಬಹುದು. ಬಾಲಿಶ ಮಾತುಗಳನ್ನು ಕಡಿಮೆ ಮಾಡಿಕೊಳ್ಳಿ.‌ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ವೃದ್ಧಿಯಾಗುವುದು. ‌ದಿನದ ಕಾರ್ಯವನ್ನು ಬದಲಾಯಿಸಿಕೊಳ್ಳುವಿರಿ. ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ. ನಿಮ್ಮ ಕಾರ್ಯಭಾರವನ್ನು ವರ್ಗಾಯಿಸಲು ಪ್ರಯತ್ನಿಸುವಿರಿ. ನಿಮ್ಮ ನೇರ ಮಾತುಗಳು ಆಪ್ತರಿಗೂ ಇಂದು ಇಷ್ಟವಾಗದು.

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು